ಸವದತ್ತಿ: ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ (60) ಮೃತಪಟ್ಟವರು. ಹಳೆಯದಾದ ಮನೆಯ ಛಾವಣಿ ಏಕಾಏಕಿ ಕುಸಿತಕ್ಕೊಳಗಾಯಿತು. ಅದರಡಿಯಲ್ಲೇ ಇದ್ದ ಶಾಂತವ್ವ ಅವರ ಮೇಲೆ ವ್ಯಾಪಕ ಪ್ರಮಾಣದ ಮಣ್ಣು, ಹಲಗೆಗಳು ಬಿದ್ದು ಅದರಲ್ಲಿ ಮುಚ್ಚಿ ಹೋಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು …
Read More »BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ
ಬೆಂಗಳೂರು: ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಸಿ ಕಚೇರಿಯಲ್ಲಿನ ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಪಾಸಣೆ ಅವಧಿಯಲ್ಲಿ ಬಿಬಿಸಿ ಕಚೇರಿ, ಸ್ಟುಡಿಯೋಗಳನ್ನು ಮುಚ್ಚಲಾಗುತ್ತಿದ್ದು, ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ …
Read More »ಬಜೆಟ್ ಅಧಿವೇಶನದ ಭಾಗ 1 ಮುಕ್ತಾಯ : ಮಾರ್ಚ್ 13 ರಿಂದ ಮತ್ತೆ ಲೋಕಸಭೆಯ ಕಲಾಪ
ನವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ …
Read More »ಪುಲ್ವಾಮಾ ದುರಂತಕ್ಕೆ 4 ವರ್ಷ
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇನೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ’ …
Read More »ಸಿದ್ದರಾಮಯ್ಯ ರಾಜಕಾರಣ ಬಿಟ್ಟು ಜ್ಯೋತಿಷಿಯಾಗಲಿ: ನಳಿನ್ ಕುಮಾರ
ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜಕಾರಣ ಬಿಟ್ಟು ಜ್ಯೋತಿಷ್ಯ ಹೇಳಲಿ. ಅವರು ಇನ್ನು ಮುಂದೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಹೇಳಿದರು. ಕೊಪ್ಪಳ ತಾಲೂಕಿನ ಹಲಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ ಅವರು ಹೇಳಿದ ಜ್ಯೋತಿಷ್ಯ ಸುಳ್ಳಾಗಿದೆ. ಅಪ್ಪನಾಣೆಗೂ ನರೇಂದ್ರ ಮೋದಿ ಪ್ರಧಾನಿ ಆಗಲ್ಲ ಎಂದರು, ಮೋದಿ ಅವರು ಎರಡೆರಡು ಬಾರಿ ಪ್ರಧಾನ ಮಂತ್ರಿಯಾದರು. ಕಳೆದ ಬಾರಿಯೂ ನನ್ನಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಎಂದರು. …
Read More »ಕಾಂಗ್ರೆಸ್ ಪಕ್ಷ ಸೇರದ ಕಾರಣ ಸಿಬಿಐ ನನ್ನನ್ನು ಬಂಧಿಸಿತ್ತು ಎಂದು ಹೊಸ ಬಾಂಬ್ ಸಿಡಿಸಿದಜನಾರ್ದನ ರೆಡ್ಡಿ
ಕೊಪ್ಪಳ: ಹೊಸ ರಾಜಕೀಯ ಪಕ್ಷ ಸ್ಥಾಪಿಸಿ ವಿಧಾನಸಭೆ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಈ ಹಿಂದೆ ಸಿಬಿಐ ತಮ್ಮನ್ನು ಬಂಧಿಸಿದ ರಹಸ್ಯ ಬಿಚ್ಚಿಟ್ಟಿದ್ದಾರೆ. ಸಿಬಿಐ ಮೂಲಕ ಕಾಂಗ್ರೆಸ್ ಸೇರಲು ತಮಗೆ ಆಹ್ವಾನ ನೀಡಲಾಗಿತ್ತು ಎಂದು ಹೇಳಿದ್ದಾರೆ. ಗಂಗಾವತಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಸಿಬಿಐ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದು, ಆದರೆ, ಸುಷ್ಮಾ ಸ್ವರಾಜ್ ಅವರು ನನ್ನ ಮೇಲೆ ಇಟ್ಟಿದ್ದ …
Read More »ಪುರುಷ’ರು ಈ ಸಮಯದಲ್ಲಿ ‘ಏಲಕ್ಕಿ’ ಸೇವಿಸುವುದರಿಂದ ಶಕ್ತಿ ಹೆಚ್ಚಾಗುತ್ತೆ, ಈ ಸಮಸ್ಯೆಗಳು ದೂರವಾಗ್ತವೆ!
ಮನೆಗಳಲ್ಲಿ ಸಿಗುವ ಸಾಂಬಾರ ಪದಾರ್ಥಗಳು ಔಷಧೀಯವಾಗಿಯೂ ತುಂಬಾ ಪರಿಣಾಮಕಾರಿ. ಅರಿಶಿನ, ಲವಂಗ ಮತ್ತು ಕರಿಮೆಣಸು, ರುಚಿಯ ಜೊತೆಗೆ ಆರೋಗ್ಯದ ಬಗ್ಗೆಯೂ ವಿಶೇಷ ಕಾಳಜಿ ವಹಿಸುತ್ತವೆ. ಈ ಮಸಾಲೆಗಳಲ್ಲಿ ಒಂದು ಏಲಕ್ಕಿ. ಇದನ್ನು ನಿತ್ಯ ಸೇವಿಸುವುದರಿಂದ ಗ್ಯಾಸ್, ಅಸಿಡಿಟಿ, ಮಲಬದ್ಧತೆ, ಹೊಟ್ಟೆ ಸೆಳೆತ ಸಮಸ್ಯೆ ದೂರವಾಗುತ್ತದೆ. ಪುರುಷರ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವಲ್ಲಿ ಈ ಸಣ್ಣ ಏಲಕ್ಕಿ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು, ಆಹಾರದ ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮೆಗ್ನೀಸಿಯಮ್, ಕಬ್ಬಿಣ …
Read More »ಜೈನ್ ವಿಶ್ವವಿದ್ಯಾಲಯದಲ್ಲಿ ಅಂಬೇಡ್ಕರ್‌ಗೆ ಅವಮಾನ ಪ್ರಕರಣ:7 ಜನ ವಿದ್ಯಾರ್ಥಿಗಳು ಅರೆಸ್ಟ್
ಬೆಂಗಳೂರು:ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.ವಿದ್ಯಾರ್ಥಿಗಳೆಲ್ಲ ಬಿಬಿಎ 5 ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ. ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ …
Read More »ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೈಲುಶಿಕ್ಷೆ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ. ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ …
Read More »ಸಿದ್ದರಾಮಯ್ಯ ಹೊಸ ಪ್ಲಾನ್: ‘ಬಂಡೆ’ ಬುಡಕ್ಕೆ ಡೈನಾಮೇಟ್- ಕುಮಾರಸ್ವಾಮಿಗೆ ಲಾಕ್; ಚನ್ನಪಟ್ಟಣದಿಂದ ಸ್ಯಾಂಡಲ್ ವುಡ್ ಕ್ವೀನ್?
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ ಕೂಡ ಹಣಾಹಣಿ ನಡೆಸುತ್ತಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಮೂರು ಪಕ್ಷಗಳು ಬಹುಮತ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತಿದ್ದಾರೆ. ಒಕ್ಕಲಿಗರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಹೆಚ್ಚು ಸ್ಥಾನ ಪಡೆಯಲು ಕಾಂಗ್ರೆಸ್, ಜೆಡಿಎಸ್ ಜೊತೆ ಬಿಜೆಪಿ …
Read More »