ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರವನ್ನು ಖಂಡಿಸಿ ಅಗಸ್ಟ್ 17 ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹು-ಧಾ ಬಂಟರ ಸಂಘದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೂತ್ತಿಟ್ಟ ಶವಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಯುತ್ತಿದೆ, ತನಿಖೆ ಪೂರ್ಣಗೊಂಡಿಲ್ಲ, ಆಗಲೇ ಕೆಲ ಯೂಟ್ಯೂಬರ್’ಗಳು ಧರ್ಮಸ್ಥಳದ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಇದು ಖಂಡನೀಯ …
Read More »ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ
ಶುಧ್ದ ನೀರಿನ ಘಟಕಗಳನ್ನು ಉದ್ಘಾಟಿಸಿದ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ: ನಗರದ ಇಂದಿರಾ ನಗರದಲ್ಲಿ 2 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಗಣೇಶ ಹುಕ್ಕೇರಿ ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 10 ಕೋಟಿ ರೂಪಾಯಿಗಳು ತಂದು ಚಿಕ್ಕೋಡಿ ನಗರದ ಪ್ರತಿಯೊಂದು ವಾರ್ಡನಲ್ಲಿ ಡಾಂಬರೀಕರಣ ಕಾರ್ಯ ಕೈಗೊಳ್ಳಲಾಗುವುದು. ಇಂದಿರಾ ನಗರದಲ್ಲಿ ಜನರಿಗೆ ಶುಧ್ಧ ಕುಡಿಯುವ ದೃಷ್ಟಿಯಿಂದ ಆರ್ ಓ ಪ್ಲಾಂಟ್ ಅಳವಡಿಸಿಲಾಗಿದೆ. ಈ ತರಹ …
Read More »ಶವ ಸಂಸ್ಕಾರಕ್ಕೆ ಬಳಸುವ ವಸ್ತುಗಳನ್ನು ಕದ್ದ ಖದೀಮರು
ಬಂಟ್ವಾಳ (ದಕ್ಷಿಣ ಕನ್ನಡ): ಮನೆ, ದೇವಸ್ಥಾನ, ಅಂಗಡಿ, ವಾಣಿಜ್ಯ ಕೇಂದ್ರಗಳಿಗೆ ಖದೀಮರು ಕನ್ನ ಹಾಕೋದನ್ನು ಕೇಳಿದ್ದೇವೆ. ಆದರೆ, ಇಲ್ಲಿ ರುದ್ರಭೂಮಿ (ಸ್ಮಶಾನ) ಯನ್ನು ಕಳ್ಳರು ಬಿಡದೇ, ಕೃತ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದಲ್ಲಿ ನಡೆದಿದೆ. ಸ್ಮಶಾನದಲ್ಲಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಕಳ್ಳತನ ಆಗಿರುವ ಬಗ್ಗೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ವಿಜಯ್ ತಿಳಿಸಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ …
Read More »‘ನನ್ನನ್ನು ಜೈಲಿಗೆ ಹಾಕಿ, ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ’: ಜನಾರ್ದನ ಪೂಜಾರಿ
ಮಂಗಳೂರು: “ಧರ್ಮಸ್ಥಳದ ವಠಾರವನ್ನು ಎಸ್ಐಟಿ ಅಗೆಯುತ್ತಿದೆ. ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಮೋದಿಯವರು ಏನು ಮಾಡುತ್ತಿದ್ದಾರೆ? ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಮುಖ್ಯಮಂತ್ರಿಯವರೇ ನಾಚಿಕೆಯಾಗುತ್ತಿದೆ ನನಗೆ, ಒಂದು ದೇವಸ್ಥಾನವನ್ನು ಹಾಳುಗೆಡವುತ್ತಿರುವಾಗ ಮಾತನಾಡುವ ಧೈರ್ಯ ಇಲ್ಲವೇ ನಿಮಗೆ? ನಾನು ಇದರ ವಿರುದ್ಧ ಧ್ವನಿ ಎತ್ತುತ್ತೇನೆ. ನನ್ನನ್ನು ಬೇಕಾದರೆ ಜೈಲಿಗೆ ಹಾಕಿ. ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಸರ್ಕಾರದ ವಿರುದ್ಧ ದೋಸ್ತಿಗಳ ಪ್ರತಿಭಟನೆ
ಬೆಂಗಳೂರು: ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ …
Read More »ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 25 ವರ್ಷದ ಭೀಮನೇ ಬಲಾಢ್ಯ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ. ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ …
Read More »ಧರ್ಮಸ್ಥಳ ಘರ್ಷಣೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 6 ಮಂದಿ ಬಂಧನ
ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು. ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್‌ಗಳ …
Read More »ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಮಾತೋಶ್ರೀ ಭೀಮಾಬಾಯಿ ಲಿಂಬಾವಳಿ (80) ಅವರು ಬಾಗಲಕೋಟೆಯಲ್ಲಿ ನಿಧನರಾದರು. ಮೃತರು ಮಹಾದೇವಪುರ ಶಾಸಕಿ ಮಂಜುಳಾ ಅವರ ಅತ್ತೆಯಾಗಿದ್ದು, ಮೃತರು ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »ಮೆಜೆಸ್ಟಿಕ್ ರೈಲು ನಿಲ್ದಾಣ ಸುತ್ತಮುತ್ತ ಸಂಚಾರ ನಿರ್ಬಂಧ
ಬೆಂಗಳೂರು: ಬೆಂಗಳೂರು – ಬೆಳಗಾವಿ ಮಾರ್ಗದ ವಂದೇ ಭಾರತ್ ರೈಲಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದ ಹೃದಯ ಪ್ರದೇಶವಾಗಿರುವ ನಗರ ರೈಲು ಹಾಗೂ ಮೆಜೆಸ್ಟಿಕ್ ಬಸ್ ನಿಲ್ದಾಣಗಳು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಟ್ರಾಫಿಕ್ ಪೊಲೀಸರು ವಾಹನ ಸಂಚಾರ ನಿರ್ಬಂಧಿಸಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಂಗಳೂರು – ಬೆಳಗಾವಿ ನಡುವಿನ …
Read More »ಧರ್ಮಸ್ಥಳದ ಬಗ್ಗೆ ಅಪಪ್ರಚಾರ, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿದೆ: ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ
ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದರು. ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ ವಿಚಾರಕ್ಕೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಥಮಿಕ ಸಾಕ್ಷ್ಯಗಳು ಇಲ್ಲದೇ ಎಸ್ಐಟಿ ರಚನೆ ಮಾಡಿದರು. ಸರಿ ತಪ್ಪು ಎಂಬುದು ತನಿಖೆ ಆಗಲಿ. 13 ಸ್ಥಳಗಳಲ್ಲಿ …
Read More »