Breaking News

ರಾಷ್ಟ್ರೀಯ

2024ರ ಲೋಕಸಭೆ ಚುನಾವಣೆ: ಕಾಂಗ್ರೆಸ್ ನೇತೃತ್ವದ ಸರ್ಕಾರವೇ ಅಧಿಕಾರಕ್ಕೆ- ಖರ್ಗೆ

ಕೊಹಿಮಾ: ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಅವರಂತಹ ನೂರು ಮಂದಿ ಬಂದರೂ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ಚುನಾವಣೆ ರ್‍ಯಾಲಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.   ದೇಶವನ್ನು ಉತ್ತಮವಾಗಿ ಮುನ್ನಡೆಸುವ ವ್ಯಕ್ತಿ ತಾನೊಬ್ಬನೇ, ಬೇರೆ ಯಾರು ಇಲ್ಲ ಎಂದುಕೊಂಡಿದ್ದಾರೆ. ನಿಮ್ಮ ಈ ಎಲ್ಲಾ ನಂಬಿಕೆಗಳು ಮುಂದಿನ ಚುನಾವಣೆಯಲ್ಲಿ ಹುಸಿಯಾಗಲಿವೆ ಎಂದರು. ನೀವು ಸರ್ವಾಧಿಕಾರಿ ಅಲ್ಲ, ಜನರಿಂದ ಆಯ್ಕೆಯಾದ ನಿಮಗೆ …

Read More »

ಬಿಜೆಪಿಗೆ ಸಿದ್ದಾಂತವಿಲ್ಲ, ಜೆ.ಪಿ.ನಡ್ಡಾಗೆ ರಾಜಕೀಯ ಜ್ಞಾನವೂ ಇಲ್ಲ: ಸಿದ್ದರಾಮಯ್ಯ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟಿಲ್‌ಗೆ ರಾಜಕೀಯ ಪರಿಜ್ಞಾನ ಇಲ್ಲ ಅಂದುಕೊಂಡಿದ್ದೆ. ಆದರೆ ಈಗ ಅರ್ಥವಾಗುತ್ತಿದೆ ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ರಾಜಕೀಯ ಜ್ಞಾನ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದರು.   ‘ಕಾಂಗ್ರೆಸ್ ಪಕ್ಷಕ್ಕೆ ಸಿದ್ಧಾಂತ ಇಲ್ಲ. ಸಿದ್ದರಾಮಯ್ಯ ಕಡು ಭ್ರಷ್ಟ’ ಎಂಬ ಜೆ.ಪಿ.ನಡ್ಡಾ ಅವರ ಆರೋಪಕ್ಕೆ ಇಲ್ಲಿನ ಖಾಸಗಿ ಹೆಲಿಪ್ಯಾಡ್‌ನಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಬಿಜೆಪಿಗೆ ಸಿದ್ದಾಂತ …

Read More »

ಮಾಂಸದೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ.ರವಿ,

ಭಟ್ಕಳ: ಫೆ.19ರಂದು ಪಟ್ಟಣಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಮನೆಯಲ್ಲಿ ಮಾಂಸದೂಟ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಭೇಟಿ ನೀಡಿ ನಾಗದೇವರ ದರ್ಶನ ಪಡೆದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.   ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ದರ್ಶನ ಮಾಡಿರುವ ದೃಶ್ಯ ರಾಜ್ಯಾದ್ಯಂತ ವ್ಯಾಪಕ …

Read More »

ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ: ಮಾಜಿ ಸಿಎಂ ಎಚ್.ಡಿ.ಕೆ

ಶಿವಮೊಗ್ಗ: ಇಂದು ಕಾಂಗ್ರೆಸ್‌ ನಾಯಕರಿಗೆ ನಿದ್ದೆಯಲ್ಲೂ ಮೋದಿಯೇ ಕಾಣುತ್ತಾರೆ. ಅವರಿಗೆ ಮೋದಿ ಮುಖ ಬಿಟ್ಟರೆ ಮತ್ತೇನು ಕಾಣಲು ಸಾಧ್ಯ? ಎಂದು ಹೇಳುವ ಮೂಲಕ ಜೆಡಿಎಸ್ ಮುಖವಾಡ ಕಳಚಿದರೆ ಮೋದಿ ಮುಖ ಕಾಣುತ್ತದೆ ಎಂಬ ಸುರ್ಜೆವಾಲ ಹೇಳಿಕೆಗೆ ಮಾಜಿ ಸಿಎಂ ಎಚ್.ಕುಮಾರಸ್ವಾಮಿ ತಿರುಗೇಟು ನೀಡಿದರು.   ನಗರದಲ್ಲಿ ಮಾತನಾಡಿದ ಅವರು, ನಾನು ಆಪರೇಷನ್ ಕಮಲದ ಬಳಿಕದ ಮೊದಲ ಚುನಾವಣೆಯಲ್ಲಿ ನಿಮ್ಮ ಪ್ರತಿಪಕ್ಷ ನಾಯಕ ಎಷ್ಟಕ್ಕೆ ಸುಪಾರಿ ಪಡೆದಿದ್ದರು ಎಂಬ ಬಗ್ಗೆ ಸುರ್ಜೆವಾಲ ಬಹಿರಂಗ …

Read More »

ಮಾ. 1ರಿಂದ ಮುಷ್ಕರ: ಸರಕಾರಿ ನೌಕರರ ಎಚ್ಚರಿಕೆ

ಬೆಂಗಳೂರು: ಹಳೆಯ ಪಿಂಚಣಿ ಯೋಜನೆ ಜಾರಿ ಸಹಿತ 2 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಿ ನೌಕರರ ಸಂಘ ಸರಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಫೆ. 28ರ ಒಳಗೆ ಬೇಡಿಕೆ ಈಡೇರಿಸದೆ ಇದ್ದರೆ ಮಾ. 1ರಿಂದ ಸರಕಾರಿ ನೌಕರರು ರಾಜ್ಯ ವ್ಯಾಪಿಯಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಕ್ಷರಿ ಎಚ್ಚರಿಸಿದ್ದಾರೆ. ಕಬ್ಬನ್‌ ಪಾರ್ಕ್‌ನ ಸರಕಾರಿ ನೌಕರರ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಕಾರಿ …

Read More »

ಮಗುವಿನ ಚಿಕಿತ್ಸೆಗೆ ₹11.6 ಕೋಟಿ ನೀಡಿ, ಹೆಸರು ಬಹಿರಂಗಪಡಿಸಬೇಡಿ ಎಂದ ಪುಣ್ಯಾತ್ಮ!

ಮುಂಬೈ: ಬೆನ್ನುಮೂಳೆಯ ಸ್ನಾಯು ಕ್ಷೀಣತೆ (Spinal Muscular Atrophy) ರೋಗದಿಂದ ಬಳಲುತ್ತಿರುವ 15 ತಿಂಗಳ ಮಗುವಿನ ಚಿಕಿತ್ಸೆ 17.5 ಕೋಟಿ ರೂಪಾಯಿಗಳು ಅವಶ್ಯಕತೆಯಿದೆ. ಅದಕ್ಕಾಗಿ ಕುಟುಂಬ ಸರ್ಕಾರ ಹಾಗೂ ಕ್ರೌಡ್​ ಫಂಡಿಂಗ್ (Crowd Funding) ಮೂಲಕ ನೆರವು ಕೋರಿದ್ದರು. ಇದೀಗ ಮಾನವೀಯ ಮನೋಭಾವನೆಯುಳ್ಳ (Humanitarian Spirit) ಅನಾಮಧೇಯ ವ್ಯಕ್ತಿಯೊಬ್ಬರು ಬರೋಬ್ಬರಿ 11.6 ಕೋಟಿ (1.4 ಮಿಲಿಯನ್ ಡಾಲರ್) ರೂಪಾಯಿಗಳನ್ನು ದೇಣಿಗೆ ನೀಡಿ ಔದಾರ್ಯ ಮೆರೆದಿದ್ದಾರೆ. ಮಗುವಿನ ಜೀವ ಉಳಿಸಿಕೊಳ್ಳಲು ಹಣ …

Read More »

ರೋಹಿಣಿ, ರೂಪಾ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ : ಮತ್ತೊಂದು ‘ವಾಟ್ಸಾಪ್ ಚಾಟ್’ ಲಿಸ್ಟ್ ಫೋಟೋ ವೈರಲ್

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇಬ್ಬರ ವರ್ಗಾವಣೆ ನಡುವೆಯೇ ಮತ್ತೊಂದು ‘ವಾಟ್ಸಾಪ್ ಚಾಟ್’ ವೈರಲ್ ಆಗಿದೆ. ಈಗಾಗಲೇ ರೋಹಿಣಿ ಸಿಂಧೂರಿಯ ಹಲವು ವಾಟ್ಸಾಪ್ ಚಾಟ್ ಲಿಸ್ಟ್ ಗಳನ್ನ ಐಪಿಎಸ್ ಅಧಿಕಾರಿ ಡಿ ರೂಪ ಬಿಡುಗಡೆ ಮಾಡಿದ್ದರು. ಇದೀಗ ಇಬ್ಬರು ಅಧಿಕಾರಿಗಳ ವರ್ಗಾವಣೆಗೂ ಮುನ್ನ ಡಿ ರೂಪ-ಸಿ ಎಸ್ ವಂದಿತಾ ಶರ್ಮಾ ಜೊತೆ ನಡೆಸಿದ್ದರು ಎನ್ನಲಾದ …

Read More »

ಮತದಾನ ಸಮಯ ಕಾಯ್ದಿರಿಸಿ!- ಮೊಬೈಲ್‌ ಆಯಪ್‌ ಅಭಿವೃದ್ಧಿಪಡಿಸಿದ ಚು. ಆಯೋಗ

ಬೆಂಗಳೂರು: ಸಿನೆಮಾ, ರೈಲ್ವೇ ಟಿಕೆಟ್‌ಗಳನ್ನು ಮುಂಚಿತವಾಗಿಯೇ ಕಾಯ್ದಿರಿಸುವಂತೆ ಈಗ ನೀವು ಮತದಾನ ಮಾಡುವ ಸಮಯವನ್ನೂ ಮೊದಲೇ ನಿಗದಿ ಮಾಡಿಕೊಳ್ಳಬಹುದು! ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣ ವಿಭಾಗ ನೂತನ ಮೊಬೈಲ್‌ ಅಪ್ಲಿಕೇಷನ್‌ ಸಿದ್ಧಪಡಿಸುತ್ತಿದೆ. ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿಯಿದ್ದು, ಆಯೋಗ ಈಗಿನಿಂದಲೇ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸುವ ಆಲೋಚನೆ ಆಯೋಗಕ್ಕಿದೆ. ಮತದಾನ ಮಾಡಲು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ …

Read More »

ಮೂವರು ಅಂತರರಾಜ್ಯ ಕಳ್ಳರ ಬಂಧನ

ಕಾಗವಾಡ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೃಷ್ಣಾನದಿ ಹಾಗೂ ಬಾವಿಗಳಲ್ಲಿ ಅಳವಡಿಸಿದ್ದ ನೀರೆತ್ತುವ ಪಂಪ್‌ಸೆಟ್‌, ಮೋಟಾರುಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಸ್ಥಳೀಯ ಪೋಲಿಸರು ಸೋಮವಾರ ಬಂಧಿಸಿದ್ದಾರೆ.   ಯೋಗೇಶ ಕರೋಲಿ, ಸತೀಶ್‌ ಸೂರ್ಯವಂಶಿ, ವಿಜಯ ಬಿಷೆ ಬಂಧಿತರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸಂಜೀವ್‌ ಪಾಟೀಲ, ‘ಅಥಣಿ ಡಿವೈಎಸ್ಪಿ‌ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೋಡಿ ಮತ್ತು ಕಾಗವಾಡ ಪಿಎಸ್‌ಐ ಎಚ್.ಕೆ. …

Read More »

ರೂಪಾ-ಸಿಂಧೂರಿ ಜಗಳ: ಇಬ್ಬರನ್ನೂ ಎತ್ತಂಗಡಿ ಮಾಡಿದ ಸರ್ಕಾರ

ಬೆಂಗಳೂರು: ಕಳೆದೆರಡು ದಿನಗಳಿಂದ ಪ್ರಮುಖ ಸುದ್ದಿಯಾಗುತ್ತಿರುವ ರೂಪಾ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿ ನಡುವಿನ ಜಗಳ ಇದೀಗ ಮತ್ತೊಂದು ರೂಪ ಪಡೆದಿದೆ. ಮಧ್ಯಪ್ರವೇಶ ಮಾಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ಯಾವುದೇ ಸ್ಥಳ ತೋರಿಸದೆ ಎತ್ತಂಗಡಿ ಮಾಡಿದ್ದು, ರೂಪಾ ಪರಿ ಮೌನೀಶ್ ಮೌದ್ಗಿಲ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.   ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಮೌದ್ಗಿಲ್ …

Read More »