ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಶತಮಾನಕ್ಕೂ ಹಳೆಯದಾದ ಮೇಗರವಳ್ಳಿ ಸಮೀಪದ ಅಣ್ಣುವಳ್ಳಿಗೆ ಸಂಪರ್ಕ ಕಲ್ಪಿಸುವ ದಾರಿ ಮತ್ತು ಹಳ್ಳದ ಕಾಲುಸೇತುವೆಯನ್ನು ಕಳೆದ ನಾಲೈದು ವರ್ಷಗಳಿಂದ ಬಂದ್ ಮಾಡಲಾಗಿದೆ. ಪ್ರಸ್ತುತ ಸುಮಾರು 3-4 ಕಿ.ಮೀ. ದೂರ ಕ್ರಮಿಸಿ ಮೇಗರವಳ್ಳಿ ತಲುಪಬೇಕಾಗಿದೆ. ಇದರಿಂದ ಶಾಲಾ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ …
Read More »ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ ಸರ್ಕಾರ
ಬೆಂಗಳೂರು: ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಸರ್ಕಾರ ಆದೇಶ ಹೊರಡಿಸಿದೆ ಈ ಬಗ್ಗೆ ಮುಖ್ಯಮಂತ್ರಿ ಬಸವವಾರಜ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದು, ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದಿದ್ದರು. ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ …
Read More »ರಾಜ್ಯದಿಂದ 102 ಎಐಸಿಸಿ ಸದಸ್ಯರ ಪಟ್ಟಿ ಬಿಡುಗಡೆ
ಬೆಂಗಳೂರು: ರಾಜ್ಯದಿಂದ 102 ಮಂದಿ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಕಮಿಟಿ) ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಕಾಂಗ್ರೆಸ್ ಶಿಫಾರಸು ಮಾಡಿದ್ದ 150 ಮಂದಿಯ ಪಟ್ಟಿಯಲ್ಲಿ 102 ಮಂದಿಗೆ ಮಾತ್ರ ಮನ್ನಣೆ ನೀಡಿದೆ. ಕೆಲವು ಹೆಸರುಗಳು ದಿಲ್ಲಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಪಕ್ಷದೊಳಗೆ ಅಸಮಾಧಾನದ ಹೊಗೆ ಕಾಣುತ್ತಿದೆ. ಎಐಸಿಸಿ ಅಧಿವೇಶನವು ಇದೇ 24ರಿಂದ ಛತ್ತೀಸ್‌ಗಢದ ರಾಯಪುರದಲ್ಲಿ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ನಡೆಯತ್ತಿರುವ ಮೊದಲ ಅಧಿವೇಶನ …
Read More »ಇಷ್ಟಪಟ್ಟಿದ್ದರೆ ಇಬ್ಬರೂ ಮದುವೆ ಆಗಬಹುದಿತ್ತು; ರೋಹಿಣಿ ಬಗ್ಗೆ ಡಿಕೆ ರವಿ ತಾಯಿ ಹೇಳಿದ್ದೇನು?
ರಾಮನಗರ: ಡಿ.ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಇಬ್ಬರೂ ಕೂಡ ತಮ್ಮ ಜಗಳದಲ್ಲಿ ನನ್ನ ಮಗ ಹೆಸರು ತರಬೇಡಿ. ನನ್ನ ಮಗ ಮೃತಪಟ್ಟ 8 ವರ್ಷ ಕಳೆದಿದೆ. ಆತನ ಹೆಸರಿಗೆ ಕಳಂಕ ಹಚ್ಚಬೇಡಿ ಎಂದು ದಿವಂಗತ ಐಪಿಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ ಮನವಿ ಮಾಡಿದ್ದಾರೆ. ಜಿಲ್ಲೆಯ ಕದರಮಂಗಲ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೌರಮ್ಮ, ನನ್ನ ಮಗ ಡಿ.ಕೆ.ರವಿ ಸಾವಿಗೆ ರೋಹಿಣಿ ಸಿಂಧೂರಿ ಹೊಣೆಯಲ್ಲ, ಅವರಿಬ್ಬರು ಸ್ನೇಹಿತರು, ಅವರಿಬ್ಬರು …
Read More »ಬಸ್ ನಿಲ್ದಾಣದಲ್ಲಿದ್ದ KSRTC ಬಸ್ಸನ್ನೇ ಕದ್ದ ಕಿಲಾಡಿಗಳು!
ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ! ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ. ಬೀದರ್ನ ಬಸ್ ಡಿಪೋ ನಂಬರ್ 2ಗೆ ಸೇರಿದ ಸರ್ಕಾರಿ ಬಸ್ಸನ್ನು ಕಳ್ಳರು ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಿಂದ ಕದ್ದೊಯ್ದಿದ್ದಾರೆ. ಇವರು ಕದ್ದೊಯ್ದ ಬಸ್ನ ಸಂಖ್ಯೆ KA38 F 971 ಆಗಿದೆ. ನಸುಕಿನ ಜಾವ 3:30 ರ ಸುಮಾರಿಗೆ ಚಾಲಕ …
Read More »ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬೇಡಿಕೆ ಮಾತುಕತೆ
ಬೆಂಗಳೂರು: ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪರಿಷ್ಕರಣೆ ನಡೆಸುವಂತೆ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ಹಣಕಾಸಿನ ಇತಿಮಿತಿಯೊಳಗೆ ಅನುಕೂಲ ಮಾಡಿಕೊಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದ ಮಹಾದ್ವಾರದ ಬಳಿ ವೋಲ್ವೋ ಮಲ್ಟಿ ಆಕ್ಸಲ್ ಬಸ್ ಗಳ ಲೋಕಾರ್ಪಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ ಈ ವರ್ಷ ಒಂದು ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ. ಬಜೆಟ್ ನಲ್ಲಿ ಘೋಷಿಸಿರುವ ದುಡಿಯುವ ಮಹಿಳೆಯರಿಗೆ …
Read More »ತಂದೆಗೆ ಜೀವದಾನ ಮಾಡಿದ ಮಗಳು!
ಕೇರಳದ 17 ವರ್ಷದ ಬಾಲಕಿಯೊಬ್ಬಳು ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡಿ ತಂದೆಯ ಪ್ರಾಣ ಉಳಿಸಲು ನೆರವಾದ ಪ್ರಕರಣವೊಂದು ನಡೆದಿದೆ. ಈ ಮೂಲಕ, 17 ವರ್ಷದ ದೇವನಂದ ಎಂಬ 12ನೇ ತರಗತಿಯ ಬಾಲಕಿ ಅಂಗಾಂಗ ದಾನ ಮಾಡಿದ ಭಾರತದ ಅತ್ಯಂತ ಕಿರಿಯ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಕಾನೂನು ಪ್ರಕಾರ ಅಪ್ರಾಪ್ತರು ಅಂಗಾಂಗ ದಾನ ಮಾಡುವಂತಿಲ್ಲ. ಆದರೆ ಅದರಿಂದ ವಿನಾಯಿತಿ ನೀಡುವಂತೆ ಕೋರಿ ದೇವನಂದ ಕೇರಳ ಹೈಕೋರ್ಟ್ಗೆ ಮೊರೆ …
Read More »ರೋಹಿಣಿ ವಿರುದ್ಧ 3 ಪುಟಗಳ ದೂರು ನೀಡಿದ ಡಿ.ರೂಪಾ; ತನಿಖೆಗೆ ಆಗ್ರಹಿಸಿದ ಆ ಏಳು ಪ್ರಕರಣಗಳು ಇಂತಿವೆ.
ಬೆಂಗಳೂರು: ಐಪಿಎಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ವಿಧಾನ ಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮೂರು ಪುಟಗಳ ದೂರು ನೀಡಿದ್ದಾರೆ. ಇದಕ್ಕೂ ಮೊದಲು ರೋಹಿಣಿ ಸಿಂಧೂರಿ, ರೂಪಾ ಮೌದ್ಗಿಲ್ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿ, ನನ್ನ ಮೇಲೆ ಡಿ.ರೂಪ ಮೌದ್ಗಿಲ್ ಅವರು ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಹೆಚ್ಚಾಗಿ ನನ್ನ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ದರು. …
Read More »ರೂಪಾ-ರೋಹಿಣಿ ಕಿತ್ತಾಟದಲ್ಲಿ ಪ್ರತಾಪ ಸಿಂಹ ಎಂಟ್ರಿ.. IPS ಅಧಿಕಾರಿ ಪರ ಬ್ಯಾಟ್..!
ಮೈಸೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಸಂಬಂಧ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ನ್ಯೂಸ್ಫಸ್ಟ್ ಜೊತೆ ಮಾತನಾಡಿದ ಅವರು ಐಪಿಎಸ್ ಅಧಿಕಾರಿ ರೂಪಾ ಅವರು ಎತ್ತಿರುವ ಪ್ರಶ್ನೆಗಳನ್ನು ಕೂಲಂಕುಶವಾಗಿ ನೋಡಿದೆ. ಎಲ್ಲಾ ಪ್ರಶ್ನೆಗಳು ವಾಸ್ತವಕ್ಕೆ ಹತ್ತಿರವಾಗಿವೆ ಎಂದಿದ್ದಾರೆ. ಅದಕ್ಕೆ ಸಂಬಂಧಪಟ್ಟವರು ಉತ್ತರ ನೀಡಬೇಕು. ರಾಜಕಾರಣಿಗಳ ವಿರುದ್ಧ ಬಂದಾಗ ಪ್ರಶ್ನೆ ಮಾಡುತ್ತಾರೆ. ಆದರೆ ಇವಾಗ ಆ ವಿಚಾರಕ್ಕೆ ಸಂಬಂಧಿಸಿದಂತೆ ರೋಹಿಣಿ ಅವರು ಪ್ರತಿಕ್ರಿಯೆ …
Read More »ಎಪ್ರಿಲ್ 1 ರಿಂದ ಅಂಗಡಿಗಳಲ್ಲಿ ಮದ್ಯ ಸೇವನೆ ನಿಷೇಧ
ಭೋಪಾಲ್: ರಾಜ್ಯದ ಹೊಸ ಅಬಕಾರಿ ನೀತಿಯ ಅಡಿಯಲ್ಲಿ ಮದ್ಯ ಸೇವನೆಯನ್ನು ಕಡಿಮೆಗೊಳಿಸುವ ಪ್ರಯತ್ನದ ಭಾಗವಾಗಿ ಎಪ್ರಿಲ್ 1 ರಿಂದ ಮಧ್ಯಪ್ರದೇಶದಲ್ಲಿ ಮದ್ಯದ ಅಂಗಡಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಯನ್ನು ಅನುಮತಿಸಲಾಗುವುದಿಲ್ಲ. ರಾಜ್ಯ ಸಚಿವ ಸಂಪುಟವು ರವಿವಾರ ಈ ನೀತಿಗೆ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ 2010 ರಿಂದ ಯಾವುದೇ ಮದ್ಯದ ಅಂಗಡಿಯನ್ನು ತೆರೆದಿಲ್ಲ ಎಂದು ಅವರು ಹೇಳಿದರು. ‘ಈಗ, ಮದ್ಯದ ಅಂಗಡಿಗಳಲ್ಲಿ ಮದ್ಯ ಸೇವನೆಗಾಗಿ ಯಾವುದೇ …
Read More »
Laxmi News 24×7