ಬೆಳಗಾವಿ: ಮರಾಠಿಗರ ಓಲೈಕೆ ರಾಜಕಾರಣಕ್ಕೆ ಬಿದ್ದ ರಾಜ್ಯ ಸರಕಾರ ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಇತ್ತೀಚೆಗೆ ಎಂಇಎಸ್ ಮುಖಂಡ ದೀಪಕ ದಳವಿ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರಾದ ಸಂಪತ್ ಕುಮಾರ್ ದೇಸಾಯಿ ಹಾಗೂ ಅನಿಲ ದಡ್ಡಿಮನಿ ಅವರ ವಿರುದ್ಧ ಪೊಲೀಸರು ರೌಡಿಶೀಟ್ ತೆರೆದಿದ್ದಾರೆ. ಇತ್ತೀಚೆಗಷ್ಟೇ ನಡೆದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕನ್ನಡಿಗರಿಗೆ …
Read More »ಸಚಿವ ಸುಧಾಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸುಧಾಕರ್ ಪರ …
Read More »ಪಂಚರತ್ನ ಯಾತ್ರೆ ಯಶಸ್ಸಿನಿಂದ ಬಿಜೆಪಿ, ಕಾಂಗ್ರೆಸ್ ಗೆ ಭಯ:H.D.K.
ಬೆಳಗಾವಿ: ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ನೇ ಹಂತದಲ್ಲಿ 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಖಾನಾಪುರ ತಾಲೂಕಿನ ಜೆಡಿಎಸ್ ಅಭ್ಯರ್ಥಿಯಾಗಲಿದ್ದ ವ್ಯಕ್ತಿ 3 ವರ್ಷಗಳ ಹಿಂದೆಯೇ ಪಕ್ಷ ಬಿಡುವ ಆಲೋಚನೆ ಮಾಡಿದ್ದು ನಾಳೆ ಹೊಸ ಅಭ್ಯರ್ಥಿ ಘೋಷಿಸಲಾಗುವುದು ಎಂದರು. ನಾಳೆ ಅರಸಿಕೇರೆಗೆ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲು ತಾವು …
Read More »ಕೇಂದ್ರಕ್ಕೆ ರಾಜ್ಯತೆರಿಗೆ ದುಡ್ಡು , ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲ: ದಿನೇಶ್
ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಒಂದೇ ಒಂದು ರೂಪಾಯಿ ವಿಶೇಷ ಅನುದಾನ ಕೊಟ್ಟಿಲ್ಲ. ಇದೇ ವೇಳೆ ಉತ್ತರದ ರಾಜ್ಯಗಳಿಗೆ ಅನುದಾನದ ಹೊಳೆಯನ್ನೇ ಹರಿಸಿದೆ. ಕೇಂದ್ರಕ್ಕೆ ರಾಜ್ಯದಿಂದ ತೆರಿಗೆ ದುಡ್ಡು ಬೇಕು, ಜನರ ಓಟು ಬೇಕು. ಆದರೆ, ಅನುದಾನ ಕೊಡಲು ಆಗುವುದಿಲ್ಲವೇ. ಉತ್ತರದ ರಾಜ್ಯಗಳ ಉದ್ಧಾರ ಮಾಡಲು ನಮ್ಮ ರಾಜ್ಯದ ತೆರಿಗೆ ಹಣವೇ’ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ‘ಪ್ರಜಾವಾಣಿ’ ವರದಿ ಸಹಿತ ಟ್ವೀಟ್ ಮಾಡಿರುವ ಅವರು, …
Read More »ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ
ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್ ಇದೇ 13ರಂದು ವಿಚಾರಣೆ ನಡೆಸಲಿದೆ. ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್ 15ರಂದು …
Read More »ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ
ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಅಧಿವೇಶನ ಕುರಿತು ಇಂದು …
Read More »ಅದೃಷ್ಟದ ಮೊರೆ ಹೋದ್ರಾ ಕಾಂಗ್ರೆಸ್ ನಾಯಕ; ಹಸ್ತದ ರೇಖೆಯನ್ನೇ ಬದಲಿಸಿದ್ರಾ ಡಿಕೆಶಿ?
ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅದೃಷ್ಟಕ್ಕಾಗಿ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 1980ರಲ್ಲಿ ಕಾಂಗ್ರೆಸ್ ಸಿಂಬಲ್ ಹುಟ್ಟಿಕೊಂಡಿತ್ತು. ಹಸ್ತದ ಗುರುತು ಕಾಂಗ್ರೆಸ್ ಸಿಂಬಲ್ ಆಗಿತ್ತು. ಆ ಹಸ್ತದ ಗುರುತಿನಲ್ಲಿ ಮೂರು ಗೆರೆಗಳಿದ್ದವು. ಮೂರು ಗೆರೆಗಳು ಸರಿಯಲ್ಲ ಎಂದು ಸಂಖ್ಯಾಶಾಸ್ತ್ರಜ್ಞರು ಸಲಹೆ ನೀಡಿದ್ದರಂತೆ. ಇದೇ ಸಮ ಸಂಖ್ಯೆ ಗೆರೆಗಳನ್ನ ಬಳಕೆ ಮಾಡಿ ಎಂದು ಸಲಹೆ ನೀಡಿಲಾಗಿತ್ತು ಎನ್ನಲಾಗಿದೆ. ಹೀಗಾಗಿ ಸಂಖ್ಯಾಶಾಸ್ತ್ರಜ್ಙರ ಸಲಹೆಯ ಮೇರೆಗೆ ಗೆರೆಗಳಲ್ಲಿ ಕೊಂಚ …
Read More »ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ.:H.D.K.
ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ. ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ …
Read More »ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ: ಸಿಎಂ ಬೊಮ್ಮಾಯಿ
ಶಿವಮೊಗ್ಗ:ವಿಐಎಸ್‌ಎಲ್ ವಿಚಾರದಲ್ಲಿ ರಾಜಕೀಯ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಯಿ ಅವರು ಬುಧವಾರ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ ದಲ್ಲಿ ವಿವಿಧ ಕಾರ್ಯಕ್ರಮ ಉದ್ಘಾಟನೆ ಗೆ ಬಂದಿದ್ದೇನೆ,ವಿಐಎಸ್‌ಎಲ್ ಅವರ ನಿಯೋಗ ನನ್ನ ಬಳಿ ಬಂದಿತ್ತು. ಕೇಂದ್ರದ ಸಚಿವರಿಗೂ ಕೂಡ ಮಾಹಿತಿ ರವಾನೆ ಮಾಡಲಾಗಿದೆ. ಇದೇ ವಾರದಲ್ಲಿ ಸಭೆ ಕರೆಯುತ್ತೇನೆ. ಖಾಸಗಿ ಯವರ ಜೊತೆ ಕೂಡ ಮಾತನಾಡುತ್ತೇನೆ. ಪರಿಹಾರ ಕೊಡುವಂತಹ ಕೆಲಸವನ್ನು ಮಾಡುತ್ತೇವೆ. …
Read More »ಬೊಮ್ಮಾಯಿ ಬಸವ ಚಿಂತಕರಲ್ಲ, ಮೋಸಗಾರ ಸಿಎಂ : ರೇವುನಾಯಕ ಬೆಳಮಗಿ
ವಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನ ಚಿಂತನೆ ಹೊಂದಿದ್ದಾರೆ. ಎಲ್ಲರಿಗೂ ನ್ಯಾಯ ಕೊಟ್ಟು ಸಮಾನತೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ಇತರರಂತೆ ಮೋಸಗಾರ ಸಿಎಂ ಆಗಿದ್ದಾರೆ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಆರೋಪಿಸಿದರು. ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ಕಾಂಗ್ರೆಸ್ ಪಕ್ಷದಿಂದ ಏರ್ಪಡಿಸಲಾಗಿದ್ದ ಪ್ರಜಾಧ್ವನಿ ಕಾರ್ಯಕ್ರಮದ ಬಹಿರಂಗ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ತಾಂಡಾಗಳಲ್ಲಿ ವಾಸಿಸುವ ಬಂಜಾರಾ ಸಮುದಾಯದ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ನಾಟಕ ಇತ್ತೀಚೆಗೆ …
Read More »