Breaking News

ರಾಷ್ಟ್ರೀಯ

ಹಳ್ಳಕ್ಕೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತ್ಯು. ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಕುರುಗೋಡು: ಕುರುಗೋಡು: ಗುತ್ತಿಗನೂರು ಗ್ರಾಮದಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗುತ್ತಿಗನೂರು ಗ್ರಾಮದ ಕುರುಬ ಸಮುದಾಯದ ತಂದೆ ಮಲ್ಲಿಕಾರ್ಜುನ ತಾಯಿ ಲಕ್ಷ್ಮಿ ಅವರ ಮೊದಲನೇ ಮಗ ಮತ್ತು ಕೊನೆಯ ಮಗ ಬೇರೆ ಗ್ರಾಮಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ಮಂಗಳವಾರ ಗ್ರಾಮದಲ್ಲಿ ಅಂಬಾದೇವಿ ಜಾತ್ರಾ ಮಹೋತ್ಸವ ಇದ್ದ ಕಾರಣಕ್ಕೆ ಗ್ರಾಮಕ್ಕೆ ಬಂದಿದ್ದಾರೆ, ಗುರುವಾರ ಮಧ್ಯಾಹ್ನ ಗ್ರಾಮದ ಹಳ್ಳದ ತೀರಕ್ಕೆ …

Read More »

ಕುಷ್ಠರೋಗಕ್ಕೆ ಔಷಧೋಪಚಾರವಿದೆ, ಪಡುವ ಅಗತ್ಯವಿಲ್ಲ : ಡಾ.ಮಹೇಶ ಕೋಣಿ

ಬೆಳಗಾವಿ: ಕುಷ್ಠರೋಗಕ್ಕೆ ಈಗ ಸೂಕ್ತ ಔಷಧೋಪಚಾರವಿದೆ. ಜನರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಕೋಣಿ ಹೆಳಿದರು. ಸ್ಪರ್ಶ ಕುಷ್ಠರೋಗ ಜಾಗೃತಿ ಅರಿವು ಆಂದೋಲನ- 2023ರ ಅಂಗವಾಗಿ ಆಯೋಜಿಸಿದ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದ ಅವರು, ‘ಕುಷ್ಠರೋಗದ ವಿರುದ್ಧ ಹೋರಾಡೋಣ ಮತ್ತು ಕುಷ್ಠರೋಗವನ್ನು ಇತಿಹಾಸವಾಗಿಸೋಣ’ ಎಂಬುದು ಈ ಬಾರಿಯ ಘೋಷಣೆಯಾಗಿದೆ’ ಎಂದರು.   ಕುಷ್ಠರೋಗಕ್ಕೆ ಎಲ್ಲ ಸರ್ಕಾರಿ …

Read More »

ಮನಸೂರೆಗೊಂಡ ರಾಣಿ ಚನ್ನಮ್ಮ ನಾಟಕ

ಚಿಕ್ಕೋಡಿ: ಮಬ್ಬುಗತ್ತಲು ಆವರಿಸುತ್ತಿದ್ದಂತೆಯೇ ಅ‍ಪಾರ ಸಂಖ್ಯೆಯಲ್ಲಿ ಜಮಾಯಿಸಿದ ಜನ. ಸ್ವತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ, ವೀರರಾಣಿ ಕಿತ್ತೂರು ಚನ್ನಮ್ಮನ ಹೋರಾಟದ ಮರುಸೃಷ್ಟಿಯ ಮೆಗಾ ನಾಟಕ ಕಣ್ತುಂಬಿಕೊಳ್ಳುವ ಕಾತರ. ನೂರಾರು ಕಲಾವಿದರು, ಆನೆ, ಒಂಟೆ, ಕುದುರೆಗಳನ್ನು ಒಳಗೊಂಡ ಅದ್ಧೂರಿ ರಂಗಸಜ್ಜಿಕೆ. ಆಕರ್ಷಕ ಧ್ವನಿ ಮತ್ತು ಬೆಳಕಿನ ಸಂಯೋಜನೆಯಲ್ಲಿ ಮೂಡಿ ಬಂದ ನಾಟಕವನ್ನು ವೀಕ್ಷಿಸಿ, ಪುಳಕಿತಗೊಂಡ ಪ್ರೇಕ್ಷಕ ಗಣ… ಪಟ್ಟಣದ ಆರ್.ಡಿ. ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಹಾಗೂ ಸೋಮವಾರ ‘ವೀರರಾಣಿ ಕಿತ್ತೂರು ಚನ್ನಮ್ಮ’ ನಾಟಕ …

Read More »

ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ*

    *ಮೂಡಲಗಿ* : ನರೇಗಾ ಯೋಜನೆಯಡಿ ಮಂಜೂರಾಗಿರುವ 16 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಗೃಹದಲ್ಲಿ ಬುಧವಾರದಂದು ಜರುಗಿದ ಅರಭಾವಿ ಕ್ಷೇತ್ರದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರುವರಿ ತಿಂಗಳ ಅಂತ್ಯದೊಳಗೆ ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು …

Read More »

ಕೇಂದ್ರ ಸರ್ಕಾರದ ಬಜೆಟ್ ದೂರದೃಷ್ಟಿಯ ಬಜೆಟ್ ಆಗಿದೆ : ವಿನಯ ಜವಳಿ

ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡನೆ ಮಾಡಿರುವ ಕೇಂದ್ರ ಬಜೆಟ್ ನಿಜಕ್ಕೂ ದೂರದೃಷ್ಟಿಯ ಬಜೆಟ್ ಆಗಿದೆ. ಕರ್ನಾಟಕಕ್ಕೆ ಭದ್ರಾ ಪ್ರೊಜೆಕ್ಟ್ ಮೂಲಕ ಬಹುದೊಡ್ಡ ಕೊಡುಗೆಯನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷರಾದ ವಿನಯ ಜವಳಿ ಹೇಳಿದರು. ನಗರದಲ್ಲಿಂದು ಬಜೆಟ್ ವೀಕ್ಷಣೆ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಚುನಾವಣೆಯನ್ನು ಮುಂದಿಟ್ಟುಕೊಂಡು ಮಾಡಿರುವ ಬಜೆಟ್ ಅಲ್ಲ. ಇಂದು …

Read More »

ಸಿಎಂಗೆ ರಕ್ತದಲ್ಲಿ ಮನವಿ ಪತ್ರ ಬರೆದ ಬಸವರಾಜ್ ಪೂಜಾರ್

ನಿವೃತ್ತ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಸಿಎಂಗೆ ರಕ್ತದಲ್ಲಿ ಮನವಿ ಪತ್ರ ಬರೆದಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಹಾಳ ತಾಲ್ಲೂಕಿನ ಸಿದ್ದಾಪುರ ಪಿ.ಟಿ.ಗ್ರಾಮದ ಬಸವರಾಜ್ ಪೂಜಾರ್ ಇವರು ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ. ಇಂದು ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಪತ್ರ ನೀಡಲಿದ್ದಾರೆ‌. ಪತ್ರದಲ್ಲಿ ವರದಿಯನ್ನ ಕೇಂದ್ರ ಸರ್ಕಾರಕ್ಕೆ ಕಳುಹಿಸುತ್ತಿಲ್ಲ ಎಂದು …

Read More »

ಅತ್ಯಾಚಾರ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಅಹಮದಾಬಾದ್‌: ಸೂರತ್‌ ಮೂಲದ ಮಹಿಳೆ, ತಮ್ಮ ಮಾಜಿ ಶಿಷ್ಯೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಆಸಾರಾಂ ಬಾಪು ಅವರಿಗೆ ಗಾಂಧಿನಗರದ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಡಿ.ಕೆ. ಸೋನಿ ಅವರು ವಾದ- ಪ್ರತಿವಾದ ಆಲಿಸಿದ ನಂತರ, ಆರೋಪಿಗೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು. ಅಹಮದಾಬಾದ್ ಬಳಿಯ ಮೊಟೆರಾದಲ್ಲಿರುವ ಆಶ್ರಮದಲ್ಲಿ 2001ರಿಂದ 2006ರವರೆಗೆ ಆಸಾರಾಂ ಬಾಪು ಹಲವು ಸಂದರ್ಭಗಳಲ್ಲಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದರೆಂದು …

Read More »

2023: ಯಾವುದು ದುಬಾರಿ? ಯಾವುದು ಅಗ್ಗ?

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಬುಧವಾರ) ಮಂಡಿಸಿದರು. ಎನ್‌ಡಿಎ ಸರ್ಕಾರದ ಎರಡನೇ ಅವಧಿಯ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಜನಸಾಮಾನ್ಯರು ಬಳಸುವ ಕೆಲವು ಸರಕುಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿದ್ದರೆ, ಇನ್ನು ಹಲವು ಸರಕುಗಳ ಮೇಲಿನ ಸುಂಕವನ್ನು ಕಡಿಮೆ ಮಾಡಲಾಗಿದೆ. ಬೆಲೆ ಏರಿಕೆಯಾದ ಸರಕುಗಳ ವಿವರ: ಸಿಗರೇಟ್, ಎಲೆಕ್ಟ್ರಿಕ್ ಚಿಮಣಿ, ಆಮದು ಮಾಡಿಕೊಂಡ …

Read More »

2023: ಧೂಮಪಾನಿಗಳ ಜೇಬಿಗೆ ಬಿಸಿ ಮುಟ್ಟಿಸಿದ ‘ಅಮೃತಕಾಲದ ಬಜೆಟ್’

ನವದೆಹಲಿ: ‌2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬುಧವಾರ ಮಂಡಿಸಿದ್ದಾರೆ. ಸಿಗರೇಟ್ ಮೇಲಿನ ತೆರಿಗೆಯನ್ನು ಶೇಕಡ 16ಕ್ಕೆ ಹೆಚ್ಚಳ ಮಾಡಿರುವುದಾಗಿ ನಿರ್ಮಲಾ ಘೋಷಿಸಿದರು.   ಕೇಂದ್ರ ಬಜೆಟ್‌ನಲ್ಲಿ ಸಿಗರೇಟ್ ಮೇಲಿನ ತೆರಿಗೆಯನ್ನು ಹೆಚ್ಚಿಸುವುದಾಗಿ ಘೋಷಿಸಿದ ಬೆನ್ನಲ್ಲೇ ಗಾಡ್‌ಫ್ರೇ ಫಿಲಿಪ್ಸ್ ಇಂಡಿಯಾ ಮತ್ತು ಐಟಿಸಿ ಲಿಮಿಟೆಡ್ ಸೇರಿದಂತೆ ಸಿಗರೇಟ್ ಕಂಪನಿಗಳ ಷೇರುಗಳು ಷೇರುಪೇಟೆ ಸಂವೇದಿ ಸೂಚ್ಯಂಕದಲ್ಲಿ (ಬಿಎಸ್‌ಇ) ಶೇಕಡ 5 ರಷ್ಟು ಕುಸಿತ …

Read More »

ಕೇಂದ್ರ ಬಜೆಟ್‌ ವಿಚಾರ ದೂರದೃಷ್ಟಿ ಇಲ್ಲದ ಬಜೆಟ್‌: ಮಲ್ಲಿಕಾರ್ಜುನ ಖರ್ಗೆ ಟೀಕೆ

ನವದೆಹಲಿ: ಬಿಜೆಪಿ ಮೇಲಿನ ಜನರ ನಂಬಿಕೆ ನಿರಂತರವಾಗಿ ಕುಸಿಯುತ್ತಿದೆ ಎಂಬುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಂಡಿಸಿರುವ ಇಂದಿನ ಬಜೆಟ್ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.   ಕೇಂದ್ರ ಬಜೆಟ್‌ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ‘ಇದು ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡನೆ ಮಾಡಿರುವ ಬಜೆಟ್ ಇದಾಗಿದ್ದು, ದೇಶವನ್ನು ಗಮನದಲ್ಲಿರಿಸಿಕೊಂಡಿಲ್ಲ. ಮುಖ್ಯವಾಗಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇದು ದೂರದೃಷ್ಟಿ …

Read More »