Breaking News

ರಾಷ್ಟ್ರೀಯ

ಹಾಸನ ರಾಜಕೀಯ ಅಖಾಡಕ್ಕಿಳಿದ ದೇವೇಗೌಡ್ರು

ಹಾಸನ: ಕಳೆದ ಎರಡು ಮೂರು ದಿನಗಳಿಂದ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿಚಾರ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದರು. ಆದರೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಸನದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ, ಅಲ್ಲಿಗೆ ಭವಾನಿ ರೇವಣ್ಣರನ್ನು ಅಭ್ಯರ್ಥಿಯನ್ನಾಗಿ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದರು. ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಹಾಸನ ಸಂಸದ …

Read More »

ಬೆಳಗಾವಿಯಲ್ಲಿ ಅಮಿತ್‌ ಶಾ ಗೋಪ್ಯ ಸಭೆ

ಬೆಳಗಾವಿ: ‘ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು. ಬೆಂಗಳೂರನ್ನು ಹೊರತುಡಿಸಿದರೆ ಬೆಳಗಾವಿಯಲ್ಲೇ ಹೆಚ್ಚು ಕ್ಷೇತ್ರಗಳು ಇವೆ. ಎಲ್ಲ 18 ಕ್ಷೇತ್ರಗಳನ್ನೂ ನಾವು ಗೆಲ್ಲಬೇಕು. ಇದು ಎಲ್ಲರೂ ಒಂದಾಗಿದ್ದರೆ ಮಾತ್ರ ಸಾಧ್ಯ. ಗೆಲುವಿಗೆ ಏನು ಬೇಕೋ ಆ ತಂತ್ರ ರೂಪಿಸೋಣ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಿಲ್ಲೆಯ ನಾಯಕರಿಗೆ ಕಟ್ಟಪ್ಪಣೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಗರದ ಯುಕೆ-27 ಹೋಟೆಲ್‌ನಲ್ಲಿ ಶನಿವಾರ ರಾತ್ರಿ ನಡೆದ …

Read More »

ಭದ್ರತಾ ಲೋಪ; ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಖರ್ಗೆ ಕೋರಿಕೆ

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಗುತ್ತಿರುವ ಭಾರತ್ ಜೋಡೊ ಯಾತ್ರೆಗೆ ಸೂಕ್ತ ಭದ್ರತೆಯನ್ನು ನೀಡುವಂತೆ ಕೋರಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.   ಯಾತ್ರೆಗೆ ಸೂಕ್ತ ಭದ್ರತೆ ಒದಗಿಸುವಲ್ಲಿ ಜಮ್ಮು ಮತ್ತು ಕಾಶ್ಮೀರದ ಆಡಳಿತ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯಪ್ರವೇಶಿಸುವಂತೆ ಕೋರಿದೆ. ಭದ್ರತಾ ಲೋಪದ ಹಿನ್ನೆಲೆಯಲ್ಲಿ …

Read More »

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಗೆ ಲೋಕಾಯುಕ್ತ ನೋಟಿಸ್

ಮಂಗಳೂರು: ಉಳ್ಳಾಲ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಂದೀಪ್ ಮತ್ತು ಸಬ್ ಇನ್ಸ್ ಪೆಕ್ಟರ್ ಪ್ರದೀಪ್ ವಿರುದ್ಧ ಸಾಮಾಜಿ ಕಾರ್ಯಕರ್ತರೊಬ್ಬರು ದಾಖಲಿಸಿರುವ ದೂರಿಗೆ ಸ್ಪಂದಿಸದ ಹಾಗೂ ಮಾಹಿತಿ ಹಕ್ಕಿನಡಿ ಕೇಳಿದ ದಾಖಲೆಗಳನ್ನು ಒದಗಿಸದಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರಿಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ಉಳ್ಳಾಲ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಂಜಾ ಮಾಫಿಯಾ, ಮರಳು, ಹೋಟೆಲ್ ಮಾಲಕರಿಗೆ ಹೀಗೆ ಪ್ರತಿಯೊಂದರಲ್ಲೂ ಹಣದ ಬೇಡಿಕೆ ಇಡುತ್ತಿದ್ದಾರೆ. ಠಾಣೆಯಲ್ಲಿ …

Read More »

ಯುವಕರು ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು: ಅಮಿತ್ ಶಾ

ಹುಬ್ಬಳ್ಳಿ: ಯುವಕರು ವೈಯಕ್ತಿಕ ಅಭಿವೃದ್ಧಿ ಜತೆಗೆ ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು. ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.   ಭಾರತ ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದರು. ಕಳೆದ ಎಂಟುವರೆ ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ, ಬದಲಾವಣೆ …

Read More »

ಕಿತ್ತೂರು, ಕಲ್ಯಾಣ, ಕರಾವಳಿ ಮಂತ್ರ: ಸಾಂಪ್ರದಾಯಿಕ ಮತದಾರರತ್ತ ಬಿಜೆಪಿ ನೋಟ

ಮೂರೂ ಪಕ್ಷಗಳಿಗೆ ಚುನಾವಣೆಯಲ್ಲಿ ತಮ್ಮ ಗೆಲುವು ಖಚಿತ ಎಂಬ ಸ್ಥಿತಿ ಸದ್ಯ ಇಲ್ಲ. ಗುಪ್ತಚರ ವರದಿಯೂ ಇದನ್ನೇ ಹೇಳುತ್ತಿದೆ. ಹೀಗಾಗಿ ಫ‌ಲಿತಾಂಶ ಪ್ರಕಟವಾಗುವವರೆಗೆ ಮೂರೂ ಪಕ್ಷಗಳಿಗೆ ಪ್ರತೀ ಕಣವೂ ಚಿಂತೆಯೇ! ಬೆಂಗಳೂರು: ಹಳೆ ಮೈಸೂರು ಭಾಗದಲ್ಲಿ ಕೇಸರಿ ಅಲೆ ಸೃಷ್ಟಿಸುವ ಲೆಕ್ಕಾಚಾರ ನಿರೀಕ್ಷಿತ ಫ‌ಲ ನೀಡುವ ಸಾಧ್ಯತೆ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಗೆಲ್ಲುವುದ ಕ್ಕಾಗಿ ಹಳೆಯ ಸೂತ್ರವನ್ನೇ ಮತ್ತಷ್ಟು ಬಲಪಡಿಸುವುದಕ್ಕೆ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜಾಗಿದೆ.   ಕೇಂದ್ರ ಗೃಹ ಸಚಿವ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

  ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಬೆನಚಿನಮರಡಿ (ಉ) ಗ್ರಾಮದಲ್ಲಿ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ …

Read More »

ತಡರಾತ್ರಿ ಹುಬ್ಬಳ್ಳಿಗೆ ಅಮಿತ್ ಶಾ ಆಗಮನ.. ಸಿಎಂ, ಬಿಜೆಪಿ ನಾಯಕರಿಂದ ಸ್ವಾಗತ

ಹುಬ್ಬಳ್ಳಿ/ಧಾರವಾಡ/ಬೆಳಗಾವಿ: ವಿಶೇಷ ವಿಮಾನದ ಮೂಲಕ ದೆಹಲಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದರು. ತಡರಾತ್ರಿ ನಗರಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಾಗತ ಕೋರಿದರು. ಇಲ್ಲಿನ ಡೆನಿಸನ್ ಹೋಟೆಲ್​ನಲ್ಲಿ ಅಮಿತ್ ಶಾ ಅವರು ವಾಸ್ತವ್ಯ ಹೂಡಿದ್ದು ಹುಬ್ಬಳ್ಳಿ, ಧಾರವಾಡ, ಕುಂದಗೋಳ ಮತ್ತು ಬೆಳಗಾವಿಯಲ್ಲಿ …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ:* ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು. ಕಲ್ಲೋಳಿ ಪಟ್ಟಣದ ನಾಗರೀಕರಿಗೆ …

Read More »

ವಸತಿ ಯೋಜನೆಗೆ ನೀಡಿದ್ದ ₹ 300 ಕೋಟಿ ವಾಪಸ್

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದಲ್ಲಿನ (ಎಸ್‌ಟಿ) ಅಲೆಮಾರಿ ಸಮುದಾಯಗಳ ಜನರ ವಸತಿ ಯೋಜನೆಗೆ ಮೀಸಲಿಟ್ಟಿದ್ದ ₹ 300 ಕೋಟಿ ಅನುದಾನವನ್ನು ಇತರ ವಸತಿ ಯೋಜನೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದೇ ಯೋಜನೆಯಡಿ 2021- 22ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹ 250 ಕೋಟಿಯನ್ನು ಈ ಹಿಂದೆಯೂ ಸರ್ಕಾರ ವಾಪಸ್ ಪಡೆದಿತ್ತು. ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಆದ್ಯತೆ ಮೇರೆಗೆ ಮನೆ ನಿರ್ಮಿಸಿ ಕೊಡುವುದಾಗಿ 2022-23ನೇ …

Read More »