ಬೆಂಗಳೂರು: ಅಧಿಕಾರದಲ್ಲಿದ್ದಾಗ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸಂಪರ್ಕ ನೀಡದೆ ಸತಾಯಿಸಿದವರು ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿರುವುದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಇಂಧನ ಹಾಗೂ ಕನ್ನಡ ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲಾ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ …
Read More »ಇದೇ 29ಕ್ಕೆ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ
ಬೆಂಗಳೂರು: ಚಲನಚಿತ್ರ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಇದೇ 29 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ. ಮೈಸೂರಿನ ಎಚ್.ಡಿ.ಕೋಟೆ ರಸ್ತೆಯಲ್ಲಿರುವ ಅಲ್ಲಾಳು ಗ್ರಾಮದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆಪ್ಟೆಂಬರ್‌ನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿತ್ತು. ಚಾಮುಂಡಿಪುರಂನ ವಾಸಿಯಾಗಿದ್ದ ವಿಷ್ಣುವರ್ಧನ್ ಅವರು ತಮ್ಮ ಶಾಲಾ ಶಿಕ್ಷಣವನ್ನು ಮೈಸೂರಿನಲ್ಲೇ ಪೂರ್ಣಗೊಳಿಸಿದ್ದರು. ಮೈಸೂರಿನ ಜತೆ ಉತ್ತಮ ಒಡನಾಟ ಹೊಂದಿದ್ದ ಅವರು ತಮ್ಮ ಹೆಚ್ಚಿನ ಚಲನಚಿತ್ರಗಳ …
Read More »ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ: ಬಂಧಿತರ ಸಂಖ್ಯೆ ಅರ್ಧ ಶತಕ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಲಿಖಿತ ಪರೀಕ್ಷೆಯಲ್ಲಿ ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ತೆಗೆದುಕೊಂಡು ಪರೀಕ್ಷೆ ಬರೆದಿದ್ದ ಮತ್ತೊಬ್ಬ ಅಭ್ಯರ್ಥಿಯನ್ನು ಗುರುವಾರ ಬಂಧಿಸುವ ಮೂಲಕ ಬಂಧಿತರ ಸಂಖ್ಯೆ ಅರ್ಧ ಶತಕವಾಗಿದೆ. ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದರ್ಗಾಶಿರೂರ ಗ್ರಾಮದ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸ್ ಪಾಟೀಲ್ (28) ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಈವರೆಗೆ ಒಟ್ಟು 50 ಜನರನ್ನು ಬಂಧಿಸಿದಂತಾಗಿದೆ. 7 ಆಗಸ್ಟ್ 2022ರಂದು ನಡೆದಿದ್ದ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆ …
Read More »ಪಂಚಮಸಾಲಿ, ಒಕ್ಕಲಿಗ ಮೀಸಲಾತಿ ಓಟಕ್ಕೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಿ ಮೀಸಲಾತಿ ನೀಡುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಹೈಕೋರ್ಟ್ ಆದೇಶಿಸಿದೆ. ಪಂಚಮಸಾಲಿ ಸಮುದಾಯವನ್ನು 2-ಎ ಪ್ರವರ್ಗಕ್ಕೆ ಸೇರಿಸಬಾರದು ಎಂದು ಕೋರಿ ಬೆಂಗಳೂರು ನಿವಾಸಿ ಡಿ.ಜಿ. ರಾಘವೇಂದ್ರ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ಪಟ್ಟಿಯಾಗಿತ್ತು. ಆದರೆ ದಿನದ ಕಲಾಪದ ಸಮಯ ಮುಗಿದದ್ದರಿಂದ ಅರ್ಜಿ ವಿಚಾರಣೆಗೆ ಬರಲಿಲ್ಲ. ಮುಖ್ಯ ನ್ಯಾಯಮೂರ್ತಿಯವರು …
Read More »ಇದು ಬರೀ ಮಾದಕ ಲೋಕವಲ್ಲ, ಲಿವಿಂಗ್ ಟುಗೆದರ್, ಸೆಕ್ಸ್ ಬೆರೆತ ವೈದ್ಯ ವಿದ್ಯಾರ್ಥಿಗಳ ಕರಾಳ ಲೋಕ
ಮಂಗಳೂರು: ಮಂಗಳೂರಿನ ಮೆಡಿಕಲ್ ಕಾಲೇಜುಗಳಲ್ಲಿ ಬೆಳಕಿಗೆ ಬಂದಿರುವ ಗಾಂಜಾ ಡ್ರಗ್ಸ್ ದಂಧೆಯಲ್ಲಿ (Drugs Mafia) ಕೇವಲ ಮಾದಕ ಲೋಕ ಮಾತ್ರವಲ್ಲ, ಲಿವಿಂಗ್ ಟುಗೆದರ್, ಸೆಕ್ಸ್ ಮತ್ತು ಗರ್ಲ್‌ಫ್ರೆಂಡ್‌ಗಳನ್ನು ನಶೆಗೆ ಎಳೆಯುವ ಕರಾಳ ಲೋಕವೂ ಬೆಳಕಿಗೆ ಬಂದಿದೆ. ಮಂಗಳೂರು ಪೊಲೀಸರು ಗಾಂಜಾ ಬಲೆಯಲ್ಲಿ ಬಿದ್ದಿದ್ದ, ಪೆಡ್ಲರ್‌ಗಳಾಗಿ ಕೆಲಸ ಮಾಡುತ್ತಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವಿದ್ಯಾರ್ಥಿಗಳು ಮತ್ತು ಇಬ್ಬರು ವೈದ್ಯರು ಸೇರಿದಂತೆ ೧೦ ಜನರನ್ನು ಬಂಧಿಸಿದ್ದಾರೆ. ಇವರು ಕೆಎಂಸಿ ಅತ್ತಾವರ, ಕೆ.ಎಂ.ಸಿ …
Read More »ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ
ನವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್ ಇನ್ಫೋರ್ಮೇಷನ್ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್ ಚಾನೆಲ್‌ಗಳು 51 ಕೋಟಿ ವೀಕ್ಷಕರನ್ನು ಹೊಂದಿವೆ. ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ …
Read More »ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ
ಬೆಂಗಳೂರು: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ (ಜ. 26) ಪೆರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ. ಕರ್ನಾಟಕ ಮಂಡಿಸಿದ್ದ ‘ನಾರಿ ಶಕ್ತಿ’ ವಿಷಯದ ಸ್ತಬ್ಧಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈಬಿಟ್ಟಿತ್ತು. ಇದು ಭಾರೀ ಟೀಕೆಗೆ ಕಾರಣವಾಗಿತ್ತು. ದೇಶದ ಇತರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ಅವಕಾಶ ಕಲ್ಪಿಸಬೇಕೆಂಬ ಉದ್ದೇಶದಿಂದ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರವನ್ನು ಪರಿಗಣಿಸಿಲ್ಲ ಎಂದು ಹೇಳಲಾಗಿತ್ತು. ರಕ್ಷಣಾ ಸಚಿವಾಲಯ ಸೆ.1ರಂದು ದೇಶದ ಎಲ್ಲ ರಾಜ್ಯ ಮತ್ತು …
Read More »ನಿನ್ನನ್ನು ನಕಲಿ ಎನ್ಕೌಂಟರ್ನಲ್ಲಿ ಮುಗಿಸುತ್ತಾರೆ, ನ್ಯಾಯಾಲಯಕ್ಕೆ ಶರಣಾಗು’ ಎಂದು ಸ್ಯಾಂಟ್ರೋ ರವಿಗೆ ಬಹಿರಂಗ ಪತ್ರ..!
ಬೆಂಗಳೂರು: ಸ್ಯಾಂಟ್ರೋ ರವಿ ಪ್ರಕರಣ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದ್ದು ಪೊಲೀಸರು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಆತನನ್ನು ಹುಡುಕುತ್ತಿದ್ದಾರೆ. ಇದೀಗ ಕೃಷ್ಣ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಬೇಗನೇ ಶರಣಾಗುವಂತೆ ಸ್ಯಾಂಟ್ರೋ ರವಿಗೆ ಸಲಹೆ ನೀಡಿ ಪತ್ರ ಬರೆದಿದ್ದಾರೆ. ಈ ಪತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು ಒಳಗಡೆ ತಮ್ಮ ಪರಿಚಯ ಹೇಳಿಕೊಂಡ ಕೃಷ್ಣ, ಸ್ಯಾಂಟ್ರೋ ರವಿಗೆ ಯಾರೆಲ್ಲ ಏನೇನು ಮಾಡಲಿದ್ದಾರೆ ಎನ್ನುವ ಬಗ್ಗೆ ಎಚ್ಚರಿಸಿದ್ದಾರೆ. ಅದಲ್ಲದೇ ನ್ಯಾಯಾಲಯಕ್ಕೆ ಶರಣಾಗುವಂತೆ ಕೂಡ ಸಲಹೆ ನೀಡಿದ್ದಾರೆ. …
Read More »ಮುಸ್ಲಿಮರು ಭಾರತದಲ್ಲಿ ವಾಸಿಸಲಿಕ್ಕೆ ಅನುಮತಿ ನೀಡಲು ಭಾಗವತ್ ಯಾರು? ಒವೈಸಿ
ನವದೆಹಲಿ: ಭಾರತದಲ್ಲಿ ವಾಸವಾಗಿರುವ ಮುಸ್ಲಿಮರು ಭಯಪಡಬೇಕಾಗಿಲ್ಲ. ಆದರೆ ಅವರು ತಾವೇ ಶ್ರೇಷ್ಠರು ಎಂಬ ಅಬ್ಬರದ ಶ್ರೇಷ್ಠತೆಯ ಪ್ರತಿಪಾದನೆ ತ್ಯಜಿಸಬೇಕು ಎಂದು ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಅವರ ಸಲಹೆಗೆ ಪ್ರತಿಕ್ರಿಯೆ ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಭಾರತದಲ್ಲಿ ಮುಸ್ಲಿಮರು ವಾಸ್ತವ್ಯ ಹೂಡಲು ಅನುಮತಿ ನೀಡಲು ಅವರು (ಭಾಗವತ್) ಯಾರು ಎಂದು ಪ್ರಶ್ನಿಸಿದ್ದಾರೆ. “ಭಾರತದಲ್ಲಿ ಮುಸ್ಲಿಮರು ವಾಸಿಸಲು ಅಥವಾ ನಮ್ಮ ನಂಬಿಕಯನ್ನು ಅನುಸರಿಸಲು ಅನುಮತಿ ನೀಡಲು …
Read More »ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ,ಯಾರಪ್ಪನ ಮನೆಯಿಂದ ತಂದು ಅಲ್ಲ: ಸಿದ್ದರಾಮಯ್ಯ
ಬೆಳಗಾವಿ, ಜನವರಿ 11: ನಮ್ಮ ಸರ್ಕಾರ ಇದ್ದಾಗ ಬಡಜನರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆವು, ಈಗ ಅದನ್ನು 4 ಕೆ.ಜಿ ಗೆ ಇಳಿಸಿದ್ದಾರೆ. ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ, ಯಾರಪ್ಪನ ಮನೆಯಿಂದ ತಂದು ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು. ಈ ಕುರಿತು ಬೆಳಗಾವಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. …
Read More »