ಶಿವಮೊಗ್ಗ, ಏಪ್ರಿಲ್ 17: ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ವಿದ್ಯಾರ್ಥಿಗಳ (Students) ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಬ್ರಾಹ್ಮಣ ಸಂಘಗಳ ಒಕ್ಕೂಟದ ಮುಖಂಡರು ಖಂಡಿಸಿದ್ದಾರೆ. ನಗರದ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕಾಲೇಜಿನ ಒಳಗೆ ತೆರಳುವ ಸಮಯದಲ್ಲಿ ಅಲ್ಲಿನ ಸಿಬ್ಬಂದಿಗಳು ಬ್ರಾಹ್ಮಣ ವಿದ್ಯಾರ್ಥಿಗಳು ಕೈಯಲ್ಲಿ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಗಾಯಿತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆಸಿದ್ದಾರೆ. …
Read More »ರಾಯಚೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು, ಏಪ್ರಿಲ್ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ (accident) ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ …
Read More »ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದೇ ಆದರೆ ಅತಿರೇಕ, ಕಠಿಣ ಕ್ರಮ ಕೈಗೊಳ್ಳುತ್ತೇವೆ: ಸಚಿವ ಎಂಸಿ ಸುಧಾಕರ್
ಬೆಂಗಳೂರು, ಏಪ್ರಿಲ್ 18: ಶಿವಮೊಗ್ಗ ನಗರದ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ (CET Exam) ಬರೆಯಲು ಬಂದ ಬ್ರಾಹ್ಮಣ (Brahmin) ಸಮುದಾಯದ ವಿದ್ಯಾರ್ಥಿಯ ಜನಿವಾರ (Sacred Thread) ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಕರ್ನಾಟಕದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಇದೀಗ ಆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ …
Read More »ಶೂಟಿಂಗ್ ಮುಗಿಸಿ ರಿಲೀಸ್ ಗೆ ರೆಡಿಯಾದ ʼಎಲ್ಟು ಮುತ್ತಾʼ
ಶೂಟಿಂಗ್ ಮುಗಿಸಿ ರಿಲೀಸ್ ಗೆ ರೆಡಿಯಾದ ʼಎಲ್ಟು ಮುತ್ತಾʼ ಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್ಟು ಮುತ್ತಾ ಟೈಟಲ್ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಚಿತ್ರತಂಡ ಇತ್ತೀಚೆಗಷ್ಟೇ ಮಾಧ್ಯಮದರ ಮುಂದೆ ಬಂದಿದ್ದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಲ್ಟಾ ಮುತ್ತಾ ಚಿತ್ರತಂಡದ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು, ಶೂಟಿಂಗ್ ಮುಗಿಸಿ ರಿಲೀಸ್ ಗೆ ರೆಡಿಯಾಗಿರುವ ಚಿತ್ರದ ಬಗ್ಗೆ ನಿರ್ದೇಶಕರು, ನಿರ್ಮಾಪಕ ಹಾಗೂ ಇಡೀ ತಂಡ ಮಾಹಿತಿ ಹಂಚಿಕೊಂಡಿದೆ. ನಿರ್ಮಾಪಕ …
Read More »ಮಗಳನ್ನು ಹುಡುಕಿಕೊಡುವಂತೆ ಠಾಣೆ ಮುಂದೆ ಪೋಷಕರಿಂದ ಅರೆಬೆತ್ತಲೆ ಪ್ರತಿಭಟನೆ (
ತುಮಕೂರು: ಹಾಡಹಗಲೇ ಮಗಳ ಅಪಹರಣವಾಗಿದ್ದು ಹುಡುಕಿಕೊಡುವಂತೆ ಪೊಲೀಸರ ಬಳಿ ಬಂದರೂ ನ್ಯಾಯ ಸಿಗಲಿಲ್ಲ ಎಂದು ಆರೋಪಿಸಿ ಮಗಳನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆ ಎದುರೇ ಪೋಷಕರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರ ಪೊಲೀಸ್ ಠಾಣೆ ಎದುರು ನಡೆದಿದೆ. ತಿಪಟೂರು ನಗರದ ಕಂಚಾಘಟ್ಟ ನಿವಾಸಿ ರಂಗಸ್ವಾಮಿ ಕುಟುಂಬದಿಂದ ಪ್ರತಿಭಟನೆ ನಡೆದಿದೆ. ಹಿರೆಬಿದರೆ ಗ್ರಾಮದ ಯುವಕನೊಬ್ಬ ಮಗಳನ್ನು ಪ್ರೀತಿಸುತ್ತಿದ್ದ, ಯುವಕನ ತಾಯಿ ಆಟೋದಲ್ಲಿ ಬಂದು ತಮ್ಮ ಮಗಳನ್ನು ಕರೆದೊಯ್ದಿದ್ದಾರೆ. ಯುವತಿ …
Read More »30 ವರ್ಷ ಸೇವೆ ಸಲ್ಲಿಸಿದ ಅರಣ್ಯ ವೀಕ್ಷಕನ ಸೇವೆ ಖಾಯಂಗೊಳಿಸಲು ಆದೇಶಿಸಿದ ಹೈಕೋರ್ಟ್
ಬೆಂಗಳೂರು : ದಿನಗೂಲಿ ಆಧಾರದಲ್ಲಿ ಬರೋಬ್ಬರಿ 30 ವರ್ಷಗಳ ಕಾಲ ಅರಣ್ಯ ವೀಕ್ಷಕ/ಚಾಲಕ ಉದ್ಯೋಗದಲ್ಲಿ ಕಾರ್ಯನಿರ್ವಹಿಸಿದ ದಿನಗೂಲಿ ನೌಕರನೋರ್ವನ ಸೇವೆ ಖಾಯಂಗೊಳಿಸಲು ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಮಂಜೂರಾತಿ ಹುದ್ದೆಯಲ್ಲಿ 10 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ ಉದ್ಯೋಗಿಯ ಸೇವೆ ಖಾಯಮಾತಿಗೆ ಅರ್ಹನಾಗುತ್ತಾನೆ ಎಂದು ಮತ್ತೊಮ್ಮೆ ಪೀಠ ಸ್ಪಷ್ಟಪಡಿಸಿ ಆದೇಶ ಹೊರಡಿಸಿದೆ. ತಮ್ಮ ಸೇವೆ ಖಾಯಂಗೊಳಿಸಲು ನಿರಾಕರಿಸಿ ಅರಣ್ಯ ಇಲಾಖೆ ನೀಡಿದ್ದ ಹಿಂಬರಹವನ್ನು ಪುರಸ್ಕರಿಸಿದ …
Read More »ಮನೆ ಬಾಗಿಲಿಗೆ ಬಂದ ಕಾಡಾನೆ
ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ಬೇಸತ್ತಿರುವ ಮಲೆನಾಡು ಜನರಿಗೆ ಪ್ರತಿನಿತ್ಯ ಕಾಡು ಪ್ರಾಣಿಗಳ ಜೊತೆ ಹೋರಾಟ ಮಾಡಿ ಬದುಕುವುದೇ ಒಂದು ಸಾಹಸವಾಗಿದೆ. ಪ್ರತಿನಿತ್ಯ ಕಾಡಾನೆಗಳು ಕಾಫಿ ತೋಟ, ಅಡಿಕೆ ತೋಟ, ಬಾಳೆ ತೋಟಗಳಿಗೆ ನುಗ್ಗಿ ದಾಂಧಲೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನು ನಾಶ ಮಾಡಿ ಹೋಗುತ್ತಿವೆ. ಪರಿಣಾಮ ರೈತರು ಪ್ರತಿನಿತ್ಯ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಇದಕ್ಕೆ ಇಂದಿನ ಘಟನೆ ಕೂಡ ಹೊರತಾಗಿಲ್ಲ. ಕಾಡಾನೆಯೊಂದು ಮನೆಯೊಳಗೆ ನುಗ್ಗಲು ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ …
Read More »ಜೋಡಿ ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನೊಬ್ಬ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ.
ಚಿಕ್ಕೋಡಿ(ಬೆಳಗಾವಿ): ಕಳೆದ ಭಾನುವಾರ ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ತಾಯಿ-ಮಗನನ್ನು ಕತ್ತು ಹಿಸುಕಿ, ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳಲ್ಲಿ ಓರ್ವ ಪೊಲೀಸರನ್ನು ಕಂಡು ಹೆದರಿ ಓಡಿಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ನೋರ್ವ ಆತ್ಮಹತ್ಯೆಯಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯ ವಿವರ: ಏಪ್ರಿಲ್ 13ರಂದು ಕೊಡಗಾನೂರು ಗ್ರಾಮದಲ್ಲಿನ ತೋಟದ ವಸತಿ ಪ್ರದೇಶದಲ್ಲಿ ಚಂದ್ರವ್ವ ಅಪ್ಪಾರಾಯ ಇಚೇರಿ (62) ಹಾಗೂ ವಿಠ್ಠಲ್ ಅಪ್ಪರಾಯ ಇಚೇರಿ (42) ಎಂಬ ತಾಯಿ ಮತ್ತು ಮಗನನ್ನು ಕೊಲೆಗೈದ ದುಷ್ಕರ್ಮಿಗಳು ಶವಗಳನ್ನು ಕಬ್ಬಿನ …
Read More »ಕೇಂದ್ರ ಸರ್ಕಾದಿಂದ ಬಡವರ ರಕ್ತ ಕುಡಿಯುವ ಕೆಲಸ ಆಗುತ್ತಿದೆ.
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿಯ ಜನಾಕ್ರೋಶ ಪ್ರತಿಭಟನೆಗೆ ಪ್ರತಿಯಾಗಿ, ನಗರದ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ನಿಂದ ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ನಿರಂತರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಎಲ್ಪಿಜಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಕೇಂದ್ರದಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದರು. ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ …
Read More »ಮಲೆ ಮಹದೇಶ್ವರ ದೇಗುಲದಲ್ಲಿ ₹3.26 ಕೋಟಿ ರೂಪಾಯಿ ಕಾಣಿಕೆ ಸಂಗ್ರಹ
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಹಣ ಎಣಿಕೆ ನಡೆದಿದ್ದು, 3.26 ಕೋಟಿ ರೂ. ಸಂಗ್ರಹವಾಗಿದೆ. ಇದು ಕಳೆದ 35 ದಿನಗಳಲ್ಲಿ ಸಂಗ್ರಹವಾದ ಕಾಣಿಕೆ ಎಂಬುದು ಗಮನಾರ್ಹ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ರಾತ್ರಿ 10ರ ತನಕವೂ ಹುಂಡಿ ಎಣಿಕೆ ನಡೆದಿತ್ತು. ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, “ಅಮಾವಾಸ್ಯೆ, ಸರ್ಕಾರಿ ರಜಾ ದಿನ, ಯುಗಾದಿ ಜಾತ್ರೆ, ವಿವಿಧ …
Read More »
Laxmi News 24×7