Breaking News

ರಾಷ್ಟ್ರೀಯ

ಮಗಳನ್ನು ಕೊಂದು ರಾತ್ರೋರಾತ್ರಿ ಸುಟ್ಟು ಹಾಕಿದ ತಂದೆ-ತಾಯಿ

ತಂದೆ ಮತ್ತು ಮಲ ತಾಯಿ ಸೇರಿಕೊಂಡು 17 ವರ್ಷದ ಮಗಳನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಗೋಪ್​ ಪ್ರದೇಶದಲ್ಲಿ ನಿನ್ನೆ (ಜ.9) ರಾತ್ರಿ ನಡೆದಿದೆ. ಸಾಕ್ಷಿಯನ್ನು ನಾಶ ಮಾಡಲು ಮಗಳ ಶವವನ್ನು ಸುಟ್ಟು ಹಾಕಿರುವುದಾಗಿ ವರದಿಯಾಗಿದೆ.   ಮೃತಳನ್ನು ಸೊನಾಲಿ ಮೊಹರಾಣ ಎಂದು ಗುರುತಿಸಲಾಗಿದೆ. ಹಿರಿಯ ಸಹೋದರಿ ರಂಜಿತಾ ಮೊಹರಾಣ ನೀಡಿದ ದೂರಿನ ಆಧಾರದ ಮೇಲೆ ಗೋಪ್​ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಾಚರಣ …

Read More »

ರಾಜ್ಯದಲ್ಲಿ ಆಲಿಬಾಬಾ, 40 ಕಳ್ಳರ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಆಲಿಬಾಬಾ ಮತ್ತು 40 ಕಳ್ಳರ ಸರ್ಕಾರ ಅಧಿಕಾರದಲ್ಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಸವರಾಜ ಬೊಮ್ಮಾಯಿ ರಾಜ್ಯ ಕಂಡ ಭ್ರಷ್ಟ ಮುಖ್ಯಮಂತ್ರಿಯಷ್ಟೇ ಅಲ್ಲ, ಅತ್ಯಂತ ದುರ್ಬಲ ಮುಖ್ಯಮಂತ್ರಿ. ಇವರಿಂದ ರಾಜ್ಯದ ಘನತೆಗೆ ಕಳಂಕ ಬಂದಿದೆ ಎಂದು ದೂರಿದರು. ಬಿಜೆಪಿ ಸರ್ಕಾರ ಅನೈತಿಕ ಮಾರ್ಗದ ಮೂಲಕ ರಚನೆಯಾದ ಸರ್ಕಾರ. 2018ರಲ್ಲಿ ಇವರಿಗೆ ಜನ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಿರಲಿಲ್ಲ, 104 ಸ್ಥಾನಗಳಲ್ಲಿ …

Read More »

ಅತಿಥಿಗೃಹ ಶುಲ್ಕ ಏರಿಕೆ; ಟಿಟಿಡಿ ವಿರುದ್ಧ ಆಕ್ಷೇಪ

ಹೈದರಾಬಾದ್‌: ತಿರುಪತಿ ತಿರುಮಲ ದೇಗುಲಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ, ದೇವಸ್ಥಾನ ಮಂಡಳಿ ದೇಗುಲದ ಅತಿಥಿಗೃಹ ಹಾಗೂ ಕಾಟೇಜ್‌ಗಳ ಶುಲ್ಕ ಏರಿಕೆ ಮಾಡಿರುವ ಕುರಿತು ತೀವ್ರ ಆಕ್ಷೇಪ ವ್ಯಕ್ತವಾಗಿದೆ. 750ರೂ. ಶುಲ್ಕವಿದ್ದ ನಾರಾಯಣ ಗಿರಿಯಲ್ಲಿರುವ ಅತಿಥಿಗೃಹಗಳಿಗೆ ಇನ್ನು ಮುಂದೆ 1,700 ರೂ. ಪಾವತಿಸಬೇಕಿದ್ದು, ಕಾಟೇಜ್‌ ಶುಲ್ಕ 2 ಸಾವಿರ ರೂ.ಗಳಿಗೆ ಟಿಟಿಡಿ ಏರಿಕೆ ಮಾಡಿದೆ. ತಿರುಪತಿ ಅತಿ ಹೆಚ್ಚು ಭಕ್ತಾದಿಗಳು ಭೇಟಿ ನೀಡುವ ಧಾರ್ಮಿಕ ಕ್ಷೇತ್ರವಾಗಿದ್ದು, ಶುಲ್ಕ ಹೆಚ್ಚಳ ಭಕ್ತರಿಗೆ …

Read More »

ಭ್ರಷ್ಟ ಬಿಜೆಪಿ ಸರ್ಕಾರ ತೊಲಗಿಸಲು ಪ್ರಜಾಧ್ವನಿ ಯಾತ್ರೆ: ಡಿಕೆ ಶಿವಕುಮಾರ್

ಬೆಂಗಳೂರು: ಹೊಸ ವರ್ಷ, ಹೊಸ ಪರ್ವ. ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ವಿಜಯ ಪರ್ವ ಆರಂಭವಾಗಿದೆ. ಈ ಪವಿತ್ರವಾದ ಗಳಿಗೆಯಲ್ಲಿ ಜನರಿಗಾಗಿ ಪ್ರಜಾಧ್ವನಿ ಯಾತ್ರೆ ವಿಚಾರ ತಿಳಿಸುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.   ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಜನರ ಭಾವನೆ ತಿಳಿಸಲು ಕಳೆದ ಎರಡು ಮೂರು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಸತತವಾಗಿ ಪ್ರಯತ್ನಿಸಿದೆ. ಈ ಪ್ರಜಾಧ್ವನಿ ಯಾತ್ರೆ ಪ್ರಜೆಗಳ ಧ್ವನಿ, …

Read More »

ವಿಷನ್ 2047: ಅಯೋಧ್ಯೆಗೆ ಹೊಸ ಸ್ಪರ್ಶ; ಇಲ್ಲಿದೆ ಮಾಹಿತಿ.

ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ವರ್ಷ ಜ. 1ರಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಲಿದೆ. ನಂತರದಲ್ಲಿ ದಿನಕ್ಕೆ ಕನಿಷ್ಠ 1 ಲಕ್ಷ ಮಂದಿಯಾ ದರೂ ಶ್ರೀರಾಮನ ದರ್ಶನ ಪಡೆಯಲಿದ್ದಾರೆ. ಇದನ್ನು ಗಮನದಲ್ಲಿಟ್ಟು ಕೊಂಡು, ಅಯೋಧ್ಯೆಯನ್ನು ಜಾಗತಿಕ ಪ್ರವಾಸೋದ್ಯಮ ಮತ್ತು ಆಧ್ಯಾತ್ಮಿಕ ಕೇಂದ್ರವನ್ನಾಗಿ ಮಾರ್ಪಾಡು ಮಾಡುವ ಉದ್ದೇಶದಿಂದ ಉತ್ತರಪ್ರದೇಶ ಸರಕಾರವು ಬರೊಬ್ಬರಿ 32 ಸಾವಿರ ಕೋಟಿ ರೂ.ಗಳ ಮೆಗಾ ಯೋಜನೆಯನ್ನು ರೂಪಿಸಿದೆ. ಆ ಯೋಜನೆ ಕುರಿತು ಒಂದಿಷ್ಟು ಮಾಹಿತಿ …

Read More »

ಬಿಜೆಪಿಯವರದ್ದು ಬೆನ್ನು ಮೂಳೆ ಇಲ್ಲದ ರಾಜಕೀಯ: ಹಿಂದಿ ದಿವಸ್ ವಿರುದ್ಧ ಜೆಡಿಎಸ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಹಿಂದಿ ದಿವಸ ಆಚರಣೆಯ ವಿರುದ್ಧ ಜೆಡಿಎಸ್ ಕಿಡಿಕಾರಿದ್ದು, ಒಕ್ಕೂಟ ಸರ್ಕಾರದ ಅಣತಿಯಂತೆ, ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ‘ಬೆನ್ನು ಮೂಳೆ’ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಟ್ವೀಟ್ ಮಾಡಿದೆ. ಬಹು ಭಾಷೆಯ, ಬಹುಸಂಸ್ಕ್ರತಿಯ ದೇಶ ನಮ್ಮ ಭಾರತ. ಕೇವಲ‌ ಒಂದು ಭಾಷೆಯನ್ನು …

Read More »

ಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್‌ ರೇಸ್‌ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಅಧಿಕೃತವಾಗಿ ಟ್ವಿಟರ್‌ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್‌ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್‌ ಕಿರಂದೂರು ಅವರು ಹೇಳಿದ್ದರು. ಟ್ವಟರ್‌ ನಲ್ಲಿ ಕಾಂತಾರಕ್ಕೆ ಆಸ್ಕರ್‌ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್‌ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …

Read More »

ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?

ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ. ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ …

Read More »

ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ

ನವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ.   ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ …

Read More »

ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ

ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ.   ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …

Read More »