ಬೆಳಗಾವಿ – ಸಂಕೇಶ್ವರ ಹತ್ತಿರದ ಟೋಲ್ ಬಳಿ ಬಸ್ಸಿಗೆ – ಬೆಂಕಿ ತಗಲಿ ಬಸ್ಸು ಬೆಂಕಿಗಾಹುತಿಯಾದರೂ ಸಹ ಚಾಲಕ ಮತ್ತು ನಿರ್ವಾಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದೆ. ಇಂದು ಸಮಾರು ನಾಲ್ಕು ಗಂಟೆಗೆ ಸಾತಾರಾದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ಸಿಗೆ ಹತ್ತರಕಿ ಟೋಲ್ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿದೆ,ಇದನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ಸು ನಿಲ್ಲಿಸಿ, ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಭಾರೀ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾನೆ. ಬಸ್ ಚಾಲಕ ಮತ್ತು …
Read More »ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
*ಗೋಕಾಕ* : ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ ಇನ್ನೀತರ ಧಾರ್ಮಿಕ ಕಾರ್ಯಕ್ರಮಗಳಿಗೆ ಸದ್ಭಳಕೆ ಮಾಡಿಕೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಮಹಾಂತಲಿಂಗೇಶ್ವರ ಮಠದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಮಹಾಂತಲಿಂಗೇಶ್ವರ ಸಭಾ …
Read More »86ನೇ ನುಡಿ ಜಾತ್ರೆಗೆ ಏಲಕ್ಕಿ ನಗರಿ ಝಗಮಗ
ಹಾವೇರಿ: 86ನೇ ನುಡಿ ಜಾತ್ರೆಗೆ ಸಿದ್ಧಗೊಂಡಿರುವ ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಹಳದಿ, ಕೆಂಪು ಬಾವುಟಗಳು ರಾರಾಜಿಸುತ್ತಿವೆ. ನಗರದಾದ್ಯಂತ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಿದ್ದು, ಪ್ರಮುಖ ವೃತ್ತ, ರಸ್ತೆ ಮತ್ತು ಕಟ್ಟಡಗಳು ವಿವಿಧ ಬಣ್ಣಗಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ನಗರದ ಹೊಸಮನಿ ಸಿದ್ದಪ್ಪ ವೃತ್ತ, ರಾಣಿ ಚನ್ನಮ್ಮ ವೃತ್ತ, ವಾಲ್ಮೀಕಿ ವೃತ್ತ, ಸುಭಾಷ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ಗಾಂ ಧಿ ಸರ್ಕಲ್, ಬಸವೇಶ್ವರ ಸರ್ಕಲ್, ಜೆ.ಎಚ್.ಪಟೇಲ್ ವೃತ್ತ, ಎಂಎಂ ಸರ್ಕಲ್, …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ
ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. 90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, …
Read More »2.95 ಲಕ್ಷ ಜನ್-ಧನ್ ಖಾತೆ ಸ್ತಬ್ಧ:
ಮಂಗಳೂರು: ಬಹುನಿರೀಕ್ಷಿತ ಪ್ರಧಾನಮಂತ್ರಿ ಜನ್-ಧನ್ ಯೋಜನೆ (ಪಿಎಂಜೆಡಿವೈ)ಯಲ್ಲಿ ಕರಾವಳಿಯಲ್ಲಿ ತೆರೆದ ಖಾತೆಗಳ ಪೈಕಿ 2.95 ಲಕ್ಷ ಖಾತೆಗಳು ಸ್ತಬ್ಧವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ 5,18,496 ಖಾತೆ ಗಳಲ್ಲಿ 2,08,602 ಹಾಗೂ ಉಡುಪಿ ಜಿಲ್ಲೆಯ 2,64,704ರಲ್ಲಿ 86,487 ಬಳಕೆ ಯಾಗದೇ ನಿಷ್ಕ್ರಿಯವಾಗಿವೆ. ಈ ಖಾತೆ ಆರಂಭಿಸಿ 18 ತಿಂಗಳ ವರೆಗೆ ಬಳಸದಿದ್ದರೆ ಅದು ನಿಷ್ಕ್ರಿಯವಾಗುತ್ತದೆ. ಬಹುತೇಕರು ಖಾತೆ ತೆರೆದ ಬಳಿಕ ಸಕ್ರಿಯಗೊಳಿಸಿಲ್ಲ. ಅಲ್ಲದೆ ಸರಕಾರದ ವಿವಿಧ ಯೋಜನೆಗಳ ಹಣ ಪಡೆಯಲು ಬಹುತೇಕರು ಪ್ರತ್ಯೇಕ …
Read More »ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ರಾಜಿ ಮಾಡಿಕೊಳ್ಳಲ್ಲ: ಗೋವಾ ಸಿಎಂ
ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್‍ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …
Read More »ಡಬಲ್ ಎಂಜಿನ್ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ
ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು. ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …
Read More »‘ಕೈ’ ಟಿಕೆಟ್: ಡಿಕೆಶಿ ಇಂದು ದೆಹಲಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು …
Read More »ನನ್ನಂತೆ ರಾಜಕೀಯಕ್ಕೆ ಕುಟುಂಬದವರನ್ನು ಕರೆತರದಿರಲು ನಿಮ್ಮಿಂದ ಸಾಧ್ಯವೇ?: ಎಚ್ಡಿಕೆಗೆ ಪ್ರಹ್ಲಾದ್ ಜೋಶಿ ಸವಾಲು
ಗದಗ, ಜ.3: ‘ನಾನು ರಾಜಕೀಯಕ್ಕೆ ಬಂದು 25 ವರ್ಷವಾಯಿತು. ನಾನು ನನ್ನ ಕುಟುಂಬದಿಂದ ಯಾರನ್ನೂ ರಾಜಕೀಯಕ್ಕೆ ಕರೆ ತರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಅದರಂತೆಯೇ ಕುಮಾರಸ್ವಾಮಿ ಅವರು ಹೇಳಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಯಾರ ಗುಂಡಿ ಯಾರು ತೋಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್ ಅಂತ ಬಂದಾಗ ಕುಮಾರಸ್ವಾಮಿ, ದೇವೇಗೌಡ್ರು, ರೇವಣ್ಣ, …
Read More »ಬೆಳಗಾವಿ ಜಿಲ್ಲೆಯ ಭಕ್ತರೊಂದಿಗೆ ಸಿದ್ಧೇಶ್ವರ ಸ್ವಾಮೀಜಿ ದಶಕಗಳ ಆಪ್ತತೆ
ಬೆಳಗಾವಿ: ವಿಶ್ವಸಂತ, ನಡೆದಾಡುವ ದೇವರು ಎಂದೇ ಹೆಸರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರಿಗೂ ಬೆಳಗಾವಿ ಜಿಲ್ಲೆಗೂ ಎರಡು ದಶಕಗಳ ನಂಟಿದೆ. ಅವರ ಅತಿ ಹೆಚ್ಚು ಪ್ರವಚನಗಳು ಬೆಳಗಾವಿ ಜಿಲ್ಲೆಯಲ್ಲೇ ನಡೆದಿವೆ. ಇಂದೋ ನಿನ್ನೆಯೋ ಶ್ರೀಗಳು ಕಣ್ಣ ಮುಂದೆ ತಮ್ಮ ಜ್ಞಾನ ಬಿತ್ತಿದ್ದಾರೆ ಎನ್ನುವಷ್ಟು ಆಪ್ತತೆ ಜಿಲ್ಲೆಯ ಜನರಲ್ಲಿದೆ. ಶ್ರೀಗಳು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಜಿಲ್ಲೆಯ ಭಕ್ತರೂ ದಿಗಿಲುಗೊಂಡಿದ್ದಾರೆ. ಕಳೆದೊಂದು ವಾರದಿಂದ ಅಪಾರ ಸಂಖ್ಯೆಯ ಜನ ಶ್ರೀಗಳನ್ನು ನೋಡಲು …
Read More »