ನವದೆಹಲಿ : 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈ ವರ್ಷ ನಡೆಯಲಿರುವ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳು ಸೆಮಿಫೈನಲ್ ಎಂದು ಪರಿಗಣಿಸಲಾಗಿದೆ. ಪ್ರಮುಖ ರಾಜ್ಯಗಳಾದ ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಈಶಾನ್ಯ ರಾಜ್ಯಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದೆ. ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯದಲ್ಲಿ ಮೊದಲಿಗೆ ವಿಧಾನಸಭೆ ಚುನಾವಣೆ ನಡೆಯಲಿದ್ದು, ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಶಾಸಕಾಂಗ ಸಭೆಗಳ ಅವಧಿಯು ಮಾರ್ಚ್‌ನಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತಿದೆ. …
Read More »ಹೊಸ ವರ್ಷಕ್ಕೆ ಬಂತು ಮಾತೃ ಭೂಮಿ ಫೌಂಡೇಶನ್, ಲಖನ ಜಾರಕಿಹೊಳಿ ಅವರ್ ಸಹಕಾರ ದೊಂದಿಗೆ ಸಮಾಜ ಸೇವೆಗೆ ಸಿದ್ಧ್
ಗೋಕಾಕ : ಗೋಕಾಕ ನಗರದ ಯುವಕರ ತಂಡ ಸಮಾಜ ಸೇವೆ, ಯುವಕರ ಹಲವಾರು ಕಾರ್ಯಕ್ಕೆ ಪ್ರೋತ್ಸಾಹ. ದಿನ ದಲಿತರ, ಬಡ ಬಂದುಗಳ ಸೇವೆಯನ್ನು ಮಾಡುತ್ತೇವೆ ಎಂದು ಲಖನ ಜಾರಕಿಹೊಳಿ ಅವರ ಸಹಕಾರದೊಂದಿಗೆ ಒಂದು ಯುವಕರ ತಂಡ ಹೊಸ ವರ್ಷಕ್ಕೆ ಈ ಒಂದು ಫೌಂಡೇಶನ್ ಅನ್ನು ಪ್ರಾರಂಭ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಲಖನ ಜಾರಕಿಹೊಳಿ ಅವರು ಹಾಗೂ ಯುವನಾಯಕ ಪತ್ರ ಕರ್ತರ ಸಂಘದ ಗೌರವಾಧ್ಯಕ್ಷ ರಾದ ಶ್ರೀ ಸರ್ವೋತ್ತಮ ಭೀಮಶಿ …
Read More »ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ
ಮದುವೆಗೆ ಹೆಣ್ಣು ಸಿಗಲಿಲ್ಲವೆಂದು ವ್ಯಕ್ತಿಯೋರ್ವ ಮನನೊಂದು ಸ್ಮಶಾನದಲ್ಲಿಯೇ ಬೆಂಕಿ ಹಚ್ಚಿಕೊಂಡ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ನಡೆದಿದೆ. ಸಂತೋಷ ಕೊರಡಿ (೩೦) ಎಂಬಾತನೇ ಬೆಂಕಿಹಚ್ಚಿಕೊಂಡಾತ. ತನಗೆ ವಯಸ್ಸಾದರೂ ಮದುವೆಗೆ ಕನ್ಯೆ ಸಿಗಲಿಲ್ಲವೆಂದು ಮನನೊಂದಿದ್ದು, ಅಲ್ಲದೇ ಮಾನಸಿಕ ಅಸ್ವಸ್ಥನಾಗಿದ್ದ ಯುವಕ ಅಮ್ಮಿನಬಾವಿ ಗ್ರಾಮದ ಸ್ಮಶಾನದಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದೆನ್ನಲಾಗಿದೆ. ಸಂತೋಷನಿಗೆ ದೇಹದ ಶೇಕಡಾ ಅರ್ಧದಷ್ಟು ಭಾಗ ಬೆಂಕಿಗೆ ಆಹುತಿಯಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದು, ತೀವ್ರ ಗಾಯಗೊಂಡ ಹಿನ್ನಲೆ ಹುಬ್ಬಳ್ಳಿ ಕಿಮ್ಸ್ …
Read More »ಗೋವಾ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿನಿ ಮೇಲೆ ಚಾಲಕನಿಂದ ಅತ್ಯಾಚಾರ
ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ …
Read More »ಕುಷ್ಟಗಿ ಕ್ಷೇತ್ರಕ್ಕೆ ಬಸವರಾಜ್ ಹಳ್ಳೂರಗೆ ಗಾಳ ಹಾಕಿದ ಜನಾರ್ದನ ರೆಡ್ಡಿ
ಕುಷ್ಟಗಿ:ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ದನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷಕ್ಕೆ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಗಾಳ ಹಾಕಿದ್ದು,ಕುಷ್ಟಗಿ ಕ್ಷೇತ್ರದಲ್ಲಿ ರೆಡ್ಡಿ ಪಕ್ಷ ಇದೀಗ ಮುನ್ನೆಲೆಗೆ ಬಂದಿದೆ. ಈಗಾಗಲೇ ಜೆಡಿಎಸ್ ತುಕಾರಾಮ್ ಸುರ್ವೆ ತನ್ನ ಅಭ್ಯರ್ಥಿ ಎಂದು ಪ್ರಕಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ, ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅಭ್ಯರ್ಥಿಗಳೆಂದು ಪ್ರಕಟಿಸುವುದು ಬಾಕಿ ಇದೆ. …
Read More »ಮೆಜೆಸ್ಟಿಕ್ ‘ಅಕ್ರಮ’ ವ್ಯಾಪಾರ: ಪ್ರಶ್ನಿಸಿದರೆಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆ
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಕ್ಕೆ ಹೊಂದಿಕೊಂಡಿರುವ ಸುರಂಗ ಮಾರ್ಗದಲ್ಲಿ ‘ಅಕ್ರಮ’ ವ್ಯಾಪಾರ ಜೋರಾಗಿದ್ದು, ಇದನ್ನು ಪ್ರಶ್ನಿಸುವ ಜನರ ಮೇಲೆ ವ್ಯಾಪಾರಿಗಳು ಹಲ್ಲೆ ಮಾಡುತ್ತಿದ್ದಾರೆ. ತಮ್ಮದೇ ಗುಂಪು ಕಟ್ಟಿಕೊಂಡು ಚಾಕು- ಚೂರಿ ತೋರಿಸಿ ಕೊಲೆ ಬೆದರಿಕೆಯೊಡ್ಡುತ್ತಿರುವ ದೂರುಗಳು ಹೆಚ್ಚಾಗಿವೆ. ನಿಲ್ದಾಣಕ್ಕೆ ಬಂದು ಹೋಗುವ ಜನರ ಸಂಚಾರಕ್ಕೆ ಅನುಕೂಲವಾಗಲೆಂದು ಸುರಂಗ ಮಾರ್ಗ ನಿರ್ಮಿಸಲಾಗಿದ್ದು, ‘ಕಡ್ಡಾಯವಾಗಿ ಸುರಂಗ ಮಾರ್ಗ ಬಳಸಿ’ ಎಂಬ ನಾಮಫಲಕಗಳನ್ನು ನೇತುಹಾಕಲಾಗಿದೆ. ಆದರೆ, ಜನರು ಓಡಾಡುವ …
Read More »ಐಪಿಎಸ್ ಅಧಿಕಾರಿ ಆರ್. ದಿಲೀಪ್ ನಿಧನ
ಬೆಂಗಳೂರು: ರಾಜ್ಯದ ಐಪಿಎಸ್ ಅಧಿಕಾರಿ ಆರ್. ದಿಲೀಪ್ (53) ಅವರು ಅನಾರೋಗ್ಯದಿಂದಾಗಿ ನಗರದ ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಸಿಐಡಿ ಆರ್ಥಿಕ ವಿಭಾಗದ ಡಿಐಜಿಪಿ ಆಗಿ ಕೆಲಸ ಮಾಡುತ್ತಿದ್ದ ಇವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ ಹಾಗೂ ಹಲವು ಜಿಲ್ಲೆಗಳ ಎಸ್ಪಿ ಆಗಿದ್ದರು. ಹುಬ್ಬಳ್ಳಿ-ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು
Read More »ಪ್ರಧಾನಿ ಮೋದಿ ಹೋಲುತ್ತಿದೆ ಕೊಚ್ಚಿನ್ ಕಾರ್ನಿವಲ್ ನಲ್ಲಿ ಸುಡಲು ಸಿದ್ಧವಾದ ಪ್ರತಿಕೃತಿ: ಬಿಜೆಪಿ ಆಕ್ರೋಶ
ಕೊಚ್ಚಿ: ಕೊಚ್ಚಿನ್ ಕಾರ್ನೀವಲ್ ಗಾಗಿ ನಿರ್ಮಿಸಲಾದ ಪ್ರತಿಕೃತಿ ಮುಖ ಪ್ರಧಾನಿ ನರೇಂದ್ರ ಮೋದಿ ಅವರ ಮುಖವನ್ನು ಹೋಲುತ್ತದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಬಿಜೆಪಿ ಎರ್ನಾಕುಲಂ ಜಿಲ್ಲಾಧ್ಯಕ್ಷ ಕೆ.ಎಸ್. ಶೈಜು, ಪ್ರತಿಕೃತಿ ಮುಖ ಮತ್ತು ವೇಷಭೂಷಣ ಮೋದಿಯನ್ನು ಹೋಲುತ್ತದೆ ಮತ್ತು ಅದು ದೇಶದ ಪ್ರಧಾನಿಯನ್ನು ಅವಮಾನಿಸುವ ಯತ್ನ. ಕೊಚ್ಚಿನ್ ಕಾರ್ನಿವಲ್‌ಗೆ ಅಡ್ಡಿಪಡಿಸಲು ಇದನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಪ್ರತಿಭಟನೆಯ ನಂತರ ಪ್ರತಿಕೃತಿ ರೂಪ ಬದಲಾಯಿಸಲಾಗುವುದು ಎಂದು ಸಂಘಟಕರು ತಿಳಿಸಿದರು. …
Read More »ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಾರ್ಟಿ
ಮಂಡ್ಯ : ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಷ್ಟಾಚಾರದಿಂದ ಕೂಡಿದ ಪಾರ್ಟಿ ಹಾಗೂ ಕುಟುಂಬ ರಾಜಕಾರಣ ಮಾಡುವ ಪಾರ್ಟಿ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಗುಡುಗಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಭಾಷಣ ಮಾಡಿದ್ದಾರೆ. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ. ಡಬನ್ ಎಂಜಿನ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. 2018 ರಲ್ಲಿ …
Read More »ತಾಯಿಯನ್ನು ಕಳೆದುಕೊಳ್ಳುವುದಕ್ಕಿಂತ ದೊಡ್ಡ ನಷ್ಟ ಇನ್ನೊಂದಿಲ್ಲ
ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿ ಶುಕ್ರವಾರ (ಡಿಸೆಂಬರ್ 30) ನಸುಕಿನ ವೇಳೆ ಅಹಮದಾಬಾದ್ ಮೆಹ್ತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಹೀರಾಬೆನ್ ಮೋದಿ ಅವರ ನಿಧನಕ್ಕೆ ನೇಪಾಳ ಪ್ರಧಾನಿ ಪುಷ್ಪ ಕಮಾಲ್ ದಹಾಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಮೋದಿ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಪ್ರೀತಿಯ ತಾಯಿಯ ನಿಧನಕ್ಕೆ ಹೃದಯಾಂತರಾಳದ ಸಂತಾಪ …
Read More »