ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನ ʼಕಾಂತಾರʼ ಸಿನಿಮಾ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಂಡಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಟ್ವಿಟರ್ ನಲ್ಲಿ ಮಾಹಿತಿಯನ್ನು ಕೊಟ್ಟಿದೆ. ಇತ್ತೀಚೆಗೆ ʼಕಾಂತಾರʼ ಸಿನಿಮಾವನ್ನು ಆಸ್ಕರ್ ಗೆ ಕಳುಹಿಸಲು ಅರ್ಜಿ ಸಲ್ಲಿಸಿದ್ದೇವೆ ಎಂದು ನಿರ್ಮಾಪಕ ವಿಜಯ್ ಕಿರಂದೂರು ಅವರು ಹೇಳಿದ್ದರು. ಟ್ವಟರ್ ನಲ್ಲಿ ಕಾಂತಾರಕ್ಕೆ ಆಸ್ಕರ್ ಸಿಗಬೇಕೆಂದು ಹಲವು ಮಂದಿ ಆಗ್ರಹಿಸಿದ್ದರು. ಪ್ರೇಕ್ಷಕರ ಮನವಿಯಂತೆ ಚಿತ್ರ ತಂಡ ಆಸ್ಕರ್ ಗಾಗಿ ಕಾಂತಾರವನ್ನು ಪರಿಗಣಿಸುವಂತೆ ಅರ್ಜಿ …
Read More »ಡಿ.ಕೆ ಶಿವಕುಮಾರ್ ಭೇಟಿಯಾದ ಶಾಸಕ H.ನಾಗೇಶ್ : ಕಾಂಗ್ರೆಸ್ ಸೇರ್ಪಡೆ ಫಿಕ್ಸ್..?
ಬೆಂಗಳೂರು : ಪಕ್ಷೇತರ ಶಾಸಕ ಹೆಚ್. ನಾಗೇಶ್ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪಕ್ಷೇತರ ಶಾಸಕನಾಗಿದ್ದರೂ ಬಿಜೆಪಿ ಬೆಂಬಲಿಸಿರುವ ನಾಗೇಶ್ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ರನ್ನು ಭೇಟಿಯಾಗಿದ್ದು, ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರಾ ಎಂಬ ಕುತೂಹಲ ಮೂಡಿದೆ. ಕೆಲವು ತಿಂಗಳುಗಳ ಹಿಂದೆಯೇ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಗುಸುಗುಸು ಕೇಳಿಬಂದಿತ್ತು, ಆದರೆ ಕಾಂಗ್ರೆಸ್ ಸೇರ್ಪಡೆಯಾಗಿರಲಿಲ್ಲ. ಮಹತ್ತರದ …
Read More »ಮತಾಂತರ ಗಂಭೀರ ಸಮಸ್ಯೆ, ರಾಜಕೀಯ ಮಾಡಬೇಡಿ: ಸುಪ್ರೀಂ
ನವದೆಹಲಿ, ಜನವರಿ 9: ಧಾರ್ಮಿಕ ಮತಾಂತರಕ್ಕೆ ರಾಜಕೀಯ ಬಣ್ಣ ನೀಡಬಾರದು ಎಂದಿರುದ ಸುಪ್ರೀಂ ಕೋರ್ಟ್, ಮೋಸದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ಕೋರಿ ಸಲ್ಲಿಸಿರುವ ಮನವಿಯ ಕುರಿತು ಸೋಮವಾರ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರ ನೆರವು ಕೋರಿದೆ. ಬೆದರಿಕೆ, ಉಡುಗೊರೆಗಳು ಮತ್ತು ಹಣದ ಪ್ರಯೋಜನಗಳ ಮೂಲಕ ವಂಚನೆಯಿಂದ ಆಮಿಷ ಒಡ್ಡಿ ಸಹಾಯ ಮಾಡುವ ಮೂಲಕ ಧಾರ್ಮಿಕ ಮತಾಂತರವನ್ನು ಪರಿಶೀಲಿಸುವಂತೆ …
Read More »ಸಚಿವ ‘ಸುನಿಲ್ ಕುಮಾರ್’ ವಿರುದ್ಧ ಅವಹೇಳನಕಾರಿ ಪೋಸ್ಟ್ : ಇಬ್ಬರಿಗೆ 25 ಸಾವಿರ ದಂಡ
ಮಂಗಳೂರು: ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರು ಸ್ಥಳೀಯ ಮುಖಂಡರಿಗೆ ಕೋರ್ಟ್ ದಂಢ ವಿಧಿಸಿದೆ. ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ಕೋರ್ಟ್ 25,000 ದಂಡ ವಿಧಿಸಿ ಕ್ಷಮೆಯಾಚನೆಗೆ ಸೂಚನೆ ನೀಡಿದೆ. ಕೆಲವು ತಿಂಗಳ ಹಿಂದೆ ಕಾರ್ಕಳದ ಯೋಗೇಶ್ ನಯನಾ ಇನ್ನಾ …
Read More »ಜ.12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ ಆಗಮನ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ
ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ಭಾಗವಹಿಸಿ ಹಿಂದಿರುಗಲಿದ್ದಾರೆ ಎಂದರು. ಜನವರಿ 19 ರಂದು ಪ್ರಧಾನಿ …
Read More »ಬಿಜೆಪಿ ವಿರುದ್ಧ ‘ಕೈ’ ಹೋರಾಟ: ಕಾಂಗ್ರೆಸ್ ನಾಯಕರಿಂದ ರಾಜ್ಯ ಪ್ರವಾಸ
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಇದೇ 11ರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಆರಂಭಿಸಲಿದ್ದು, ಅದಕ್ಕೆ ಸಂಬಂಧಿಸಿ ಕಾಂಗ್ರೆಸ್ ಪ್ರವಾಸ ಸಮಿತಿಯ ಸಭೆ ನಗರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆಯಿತು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವೆಂದು ವಿಭಾಗ ಮಾಡಿಕೊಂಡು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಯಾತ್ರೆ ಕೈಗೊಳ್ಳಲಿದ್ದಾರೆ. ರಾಜ್ಯದ ವಿವಿಧ ಕಡೆ …
Read More »ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಸಾಗರ ಟೌನ್ ಬಂದ್
ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ. ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ …
Read More »ಸ್ಯಾಂಟ್ರೋ ರವಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠವನ್ನು ಕಲಿಸುತ್ತೇವೆ: B.S.Y
ಶಿವಮೊಗ್ಗ: ಸ್ಯಾಂಟ್ರೋ ರವಿ ವಿಷಯದಲ್ಲಿ ಸಿಎಂ ಕ್ರಮ ಕೈಗೊಳ್ಳಲು ಹೇಳಿದ್ದಾರೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಯಾರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಸಚಿವರ ಹೆಸರು ಕೇಳಿ ಬಂದ ವಿಚಾರ ತನಿಖೆ ನಂತರ ಸತ್ಯಾಸತ್ಯತೆ ತಿಳಿಯಲಿದೆ. ಸ್ಯಾಂಟ್ರೋ ರವಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾತಾನಾಡಿದ ಅವರು, ಸಂಪುಟದ ವಿಸ್ತರಣೆ ವಿಷಯ ಚರ್ಚೆಯಾಗುತ್ತಿದೆ. ಕೇಂದ್ರದ ನಾಯಕರ …
Read More »ಹತ್ತಿ ನೆಲದ ನೆತ್ಯಾಗ ತೆಲಿ ಎತ್ತಿತ್ರಪಾ ಕನ್ನಡಾ
ಹಾವೇರಿ: ಏ ಮಗನಾ ನಿನ್ನ ಜಿಲ್ಲಾ ಅಷ್ಟ … ದೊಡ್ಡದನ ನಮ್ಮ ಜಿಲ್ಲಾದಾಗನೂ ಗಂಡಸೂರ ಅದೇವಿ. ನಾವು ನಮ್ಮ ಸ್ವಂತ ರೊಕ್ಕಾ ಖರ್ಚ ಮಾಡಿ ಸಮ್ಮೇಳಾನಾ ಮಾಡುವಂಗ ಅದೇವಿ. ಮಾಡಿ ತೋರಸ್ತೇವಿ, ಹೊಳ್ಳಾಮಳ್ಳಾ ಮಾತಾಡ್‌ಬ್ಯಾಡ್. ಯಾನೋ ಎಲ್ಲಿಂದ ಬಂದಿ ನಮ್ಮ ಜಿಲ್ಲಾ ಏನ ಕಡಿಮೇಯೇನ್? ಓಯ್ ಮಾರಾಯಾ ಸ್ವಲ್ಪ ಸುಮ್ಮನಿರಿ ಎಷ್ಟು ಜಗಳ ಮಾರಾಯಾ ನಿಮ್ಮದು. ಮಂಡೆ ಬಿಸಿಯಾಗಿ ಹೋಯ್ತು. ಏ ಅದೆಲ್ಲ ಗೊತ್ತಿಲ್ರಪ್ಪಾ ನಮ್ಗೆ, ಈ ಸಲಾ ಕೊಡ್ತಿವಿ …
Read More »ಸ್ಯಾಂಟ್ರೊ ರವಿ ವಿಚಾರ: ಹೆಚ್ ಡಿಕೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ; ಆರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ …
Read More »
Laxmi News 24×7