ಬೆಳಗಾವಿ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಲವತ್ತು ಪರ್ಸೆಂಟ್ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು …
Read More »ಸಾವರ್ಕರ್ ಫೋಟೋ ವಿವಾದ: ವಿಧಾನಸಭೆ ಆವರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಳಗಾವಿ, ಡಿ. 19: ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ವಿಡಿ ಸಾವರ್ಕರ್ ಭಾವಚಿತ್ರ ವಿವಾದ ಪ್ರತಿಭಟನೆಯ ಕಿಡಿ ಹೊತ್ತಿಸಿದೆ. ಮೊದಲ ದಿನವೇ ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಲು ಪ್ರಯತ್ನಿಸಿದೆ. ವಿಧಾನಸಭೆ ಸಭಾಂಗಣದಲ್ಲಿ ವಿಡಿ ಸಾವರ್ಕರ್ ಅವರ ಭಾವಚಿತ್ರವನ್ನು ಅನಾವರಣಗೊಳಿಸಿರುವುದನ್ನು ವಿರೋಧಿಸಿ ವಿಧಾನಸಭೆಯ ಹೊರಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ಶಾಸಕರು ಸುವರ್ಣಸೌಧದ ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜವಾಹರ್ …
Read More »ದರ್ಶನ್ ಮೇಲೆ ಚಪ್ಪಲಿ ಎಸೆತ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಚಿತಾ ರಾಮ್ ನಟನೆಯ ಕ್ರಾಂತಿ ಚಿತ್ರದ ಎರಡನೇ ಹಾಡು ‘ಬೊಂಬೆ ಬೊಂಬೆ’ಯನ್ನು ಬಳ್ಳಾರಿಯ ಹೊಸಪೇಟೆ ಪಟ್ಟಣದಲ್ಲಿ ಬಿಡುಗಡೆ ಮಾಡಲಾಯಿತು. ಅಲ್ಲಿನ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಆರಂಭವಾಗುವ ಮುನ್ನವೇ ಹೊಸಪೇಟೆಯಲ್ಲಿ ಪುನೀತ್ ರಾಜ್ ಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ವಾರ್ ಶುರುವಾಗಿತ್ತು. ಕ್ರಾಂತಿ ಹಾಡು ಬಿಡುಗಡೆ ಸಮಾರಂಭದಲ್ಲಿ ಜಮಾಯಿಸಿದ್ದ ಪುನೀತ್ ಫ್ಯಾನ್ಸ್ ಅಪ್ಪು ಕಟ್ …
Read More »21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ
ಜಾರ್ಖಾಂಡ ರಾಜ್ಯದ ಗಿರಡಿ ಜಿಲ್ಲೆಯಲ್ಲಿರುವ ಜೈನರ ಪರಮೋಚ್ಚ ತೀರ್ಥ ಕ್ಷೇತ್ರ ಶ್ರೀ ಸಮ್ಮೇದಗಿರಿ ಉಳಿಸಿ, ಪ್ರವಾಸಿ ತಾಣವೆಂದು ಘೋಷಣೆ ರದ್ದುಪಡಿಸಿ ಜೈನ ಪವಿತ್ರ ಕ್ಷೇತ್ರವಾಗಿ ಘೋಷಿಸುವಂತೆ ಒತ್ತಾಯಿಸಿ ಡಿ. 21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಜೈನ ಮುಖಂಡರಾದ ಮಹೇಂದ್ರ ಸಿಂಘಿ ಹೇಳಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ಪಾರಸನಾಥ ಪರ್ವತ ಶ್ರೀ ಸಮ್ಮೇದಗಿರಿಯನ್ನು ಮತ್ತು ಸುತ್ತಲಿನ ಮಧುಬನ ಪ್ರದೇಶವನ್ನು …
Read More »ನಗರದಲ್ಲಿ ಹೆಚ್ಚಾಯ್ತು ರೌಡಿಗಳ ಅಟ್ಟಹಾಸ; ಹಫ್ತಾ ನೀಡಿಲ್ಲವೆಂದು ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿದ ಪುಡಿ ರೌಡಿ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೌಡಿಗಳ ಹಾವಳಿ ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ಪುಡಿ ರೌಡಿಗಳು ವರ್ತಿಸುತ್ತಿದ್ದಾರೆ. ಸಣ್ಣ ಪುಟ್ಟ ಅಂಗಡಿಗಳಿಗೆ ನುಗ್ಗಿ, ಅಲ್ಲಿದ್ದ ವ್ಯಾಪಾರಸ್ಥರನ್ನು ಬೆದರಿಸಿ ಹಫ್ತಾ ವಸೂಲಿ ಮಾಡುತ್ತಿರುವ ಪ್ರಕರಣಗಳು ಹೆಚ್ಚೆಚ್ಚು ವರದಿಯಾಗುತ್ತಿವೆ. ಇದಕ್ಕೆ ಸಾಕ್ಷಿಯೆಂಬಂತೆ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗೆ ಸಿಗರೇಟ್ ಹಣ ಕೇಳಿದಕ್ಕೆ ಬೈಂದೂರಿನ ಅಂಗಡಿ ಹುಡುಗರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿ 1.90 ಲಕ್ಷ ರೂ. ಎಗರಿಸಿ, ಪ್ರಾಣಬೆದರಿಕೆ ಹಾಕಿರುವ …
Read More »ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ;
ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ …
Read More »ಗರ್ಭಿಣಿ, ಬಾಣಂತಿ’ಯರಿಗೆ ನರೇಗಾದಲ್ಲಿ ಶೇ. 50 ರಷ್ಟು ಕೆಲಸ ರಿಯಾಯಿತಿ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಮಹಾತ್ಮಾಗಾಂಧಿ ನರೇಂಗಾ ಯೋಜನೆಯಡಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿಯನ್ನು ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಮಹಾತ್ಮಾಗಾಂಧಇ ನರೇಗಾ ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರೀಕರಿಗೆ ದಿನ ಒಂದಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50ರಷ್ಟು ರಿಯಾಯಿತಿ ಇರುತ್ತದೆ ಎಂದಿದ್ದಾರೆ. ಇನ್ನೂ ಪ್ರಸ್ತುತ ಯೋಜನೆಯಡಿ ಮಹಿಳೆಯರ …
Read More »ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಿರುದ್ಯೋಗಿ ಯುವಕರು, ಯುವತಿಯರಿಗೆ ಸಾಲ ಸೌಲಭ್ಯ
ಪ್ರಸಕ್ತ(2022-23) ಸಾಲಿನ ಭಾರತ ಸರ್ಕಾರದ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ(ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಎಲ್ಲಾ ವರ್ಗದ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ, ನಗರ, ಗ್ರಾಮೀಣ ಪ್ರದೇಶದಲ್ಲಿ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50. ಲಕ್ಷ ರೂ.ವರೆಗೆ ಸಾಲವನ್ನು ನೀಡಿ ಗರಿಷ್ಟ ಶೇ.25 ರಿಂದ 35 ವರೆಗೆ ಸಹಾಯಧನವನ್ನು ನೀಡಲಾಗುವುದು. ಈ ವರ್ಷದಲ್ಲಿ …
Read More »ಸನ್‍ಬರ್ನ್ ಫೆಸ್ಟಿವಲ್’ಗೆ ಕೊನೆಗೂ ಅನುಮತಿ ನೀಡಿದ ಗೋವಾ ಸರಕಾರ
ಪಣಜಿ: ಗೋವಾದಲ್ಲಿ ನಡೆಯಲಿರುವ ವಿಶ್ವ ಪ್ರಸಿದ್ಧ ‘ಸನ್‍ಬರ್ನ್ ಫೆಸ್ಟಿವಲ್’ಗೆ ಗೋವಾದ ಪ್ರವಾಸೋದ್ಯಮ ಇಲಾಖೆ ಅಂತಿಮವಾಗಿ ಅನುಮತಿ ನೀಡಿದೆ. ಸಂಗೀತೋತ್ಸವವು ಡಿಸೆಂಬರ್ 28 ರಿಂದ 30 ರವರೆಗೆ ಗೋವಾದ ವಾಗಾತೋರ್‍ನಲ್ಲಿ ನಡೆಯಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಈ ಉತ್ಸವವನ್ನು ನಡೆಸಲು ಸಾಧ್ಯವಾಗಲಿಲ್ಲ. ಪ್ರಸಕ್ತ ವರ್ಷ ಈ ಸಂಗೀತ ಮಹೋತ್ಸವದಲ್ಲಿ ದೇಶ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೊಳ್ಳುವ ಇರೀಕ್ಷೆಯಿದೆ ಎಂದೇ ಹೇಳಲಾಗಿದೆ. ಗೋವಾ ಪ್ರವಾಸೋದ್ಯಮ ಇಲಾಖೆಯು ಸನ್‍ಬರ್ನ್ ಉತ್ಸವಕ್ಕೆ …
Read More »ಗೋವಾದ ಬೆಸಿಲಿಕಾ, ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ಕೇಂದ್ರದಿಂದ 41 ಕೋಟಿ ರೂ.ಅನುದಾನ
ಪಣಜಿ: ಓಲ್ಡ್ ಗೋವಾದ ಬೆಸಿಲಿಕಾ ಆಫ್ ಜೀಸಸ್ ಕ್ರೈಸ್ಟ್ ಮತ್ತು ಇತರ ಕೆಲವು ಚರ್ಚ್‍ಗಳ ಜೀರ್ಣೋದ್ಧಾರಕ್ಕಾಗಿ ತೀರ್ಥಯಾತ್ರೆ ಮತ್ತು ಆಧ್ಯಾತ್ಮಿಕ ಮಿಷನ್ ಯೋಜನೆಯಡಿ ಕೇಂದ್ರದಿಂದ 41.49 ಕೋಟಿ ರೂ.ಗಳ ನಿಧಿಯನ್ನು ಮಂಜೂರು ಮಾಡಲಾಗಿದೆ. ದೇಶದಲ್ಲಿ ಮಾತ್ರವಲ್ಲದೆ ವಿಶ್ವದಲ್ಲಿಯೇ ಪ್ರಸಿದ್ಧವಾಗಿರುವ ಓಲ್ಡ್ ಗೋವಾ ಚರ್ಚ್‍ಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಾರೆ. 2024ರಲ್ಲಿ ಓಲ್ಡ್ ಗೋವಾದಲ್ಲಿ ಸೇಂಟ್ ಫ್ರಾನ್ಸಿಸ್ ಕ್ಸೇವಿಯರ್ ಅವರ ದೇಹವನ್ನು ಪ್ರದರ್ಶಿಸಲಾಗುವುದು ಮತ್ತು ಅದಕ್ಕೂ ಮೊದಲು ಸಂಬಂಧಿತ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು …
Read More »