ಬೆಳಗಾವಿ: ‘ರಾಮನಗರದಲ್ಲಿರುವ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ’ ಎಂಬ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ‘ರಾಮಮಂದಿರ ಜೀರ್ಣೋದ್ಧಾರಕ್ಕೆ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸುತ್ತೇವೆ. ಹಿಂದೂ ಧಾರ್ಮಿಕ ಕೇಂದ್ರವಾನ್ನಾಗಿ ಮಾಡುತ್ತೇವೆ’ ಎಂದು ಅಶ್ವತ್ಥನಾರಾಯಣ ಹೇಳಿದ್ದರು. ಇದಕ್ಕೆ …
Read More »ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್ ವಾರ್ನಿಂಗ್ ರವಾನೆ..!
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ರಾಜ್ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿಪುನೀತ್ ರಾಜಕುಮಾರ್ಅವರ ಕುರಿತು ಇಲ್ಲ ಸಲ್ಲದ ಆರೋಪಗಳು ಹಾಗೂ ಅವಹೇಳನಕಾರಿ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಕೋಪಗೊಂಡಿರುವ ಅವರ ಫ್ಯಾನ್ಸ್ ಬೃಹತ್ ಬಹಿರಂಗ ಸಭೆ ಮತ್ತು ಪ್ರತಿಭಟನೆಯನ್ನು ಹಮ್ಮಿಹೊಂಡಿದ್ದಾರೆ. ಕರ್ನಾಟಕ ಚಲನಚಿತ್ರ …
Read More »ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರರವರು ಹಿಂಡಲಗಾ ಕಾರಾಗೃಹಕ್ಕೆ, ದಿಡೀರ್ ಭೇಟಿ ನೀಡಿದ್ದು, ಅಲ್ಲಿನ ರಕ್ಷಣಾ ವ್ಯವಸ್ಥೆ, ಖೈದಿಗಳ ಜತೆ, ಸಂವಾದ ನಡೆಸಿದರು. ಜೈಲಿನೊಳಗೆ, ಮೊಬೈಲ್, ಗಾಂಜಾ ಹಾಗೂ ಮಾದಕ ವಸ್ತುಗಳ ಅಕ್ರಮ ಸರಬರಾಜು ತಡೆಯಲು ಜೈಲು ಸಿಬ್ಬಂದಿಗಳು, ಕೈಗೊಂಡ ಕ್ರಮಗಳ ಬಗ್ಗೆ ಖುದ್ದು ಪರಿಶೀಲನೆ ನಡೆಸಿದರು.
Read More »ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ.: ಮಹೇಶ ಕುಮಟಳ್ಳಿ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡುವದು ಬಿಡುವದು ವರಿಷ್ಟರಿಗೆ ಬಿಟ್ಟ ವಿಚಾರ ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದರು. ಅವರು ಇಂದು ಸುವರ್ಣಸೌಧ ಮುಂಭಾಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಅಧಿಕಾರಕ್ಕೆ ಬಂದಿಲ್ಲ, ಸಚಿವ ಸ್ಥಾನ ಕೊಡ್ತೇವೆಂಬ ಭರವಸೆ ಕೊಟ್ಟಿದ್ದಾರೆ. ವರಿಷ್ಠರು ಭರವಸೆ ಈಡೇರಿಸ್ತಾರೆ ಎಂಬ ನಂಬಿಕೆ ಇದೆ ನಾನು ಸೈಲೆಂಟಾಗಿಲ್ಲ ಕ್ಷೇತ್ರದಲ್ಲಿ ಪಕ್ಷದ ಕೆಲಸ ಮಾಡ್ತಿದ್ದೇನೆ. ಸವದಿಗೆ ಮುಂದೆ ಟಿಕೆಟ್ ಎಂಬ ಪ್ರಶ್ನೆಗೆ ಅವರು ಎಂಎಲ್ಸಿ, ನಾನು …
Read More »ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ
ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ವಿಚಾರ ಇಂದು ಸಂಜೆ ಐದು ಗಂಟೆಗೆ ಸಚಿವ ಸಂಪುಟ ಸಭೆ ಇದ್ದು, ಎಲ್ಲರ ಚಿತ್ತ ಸಿಎಂ ಸಚಿವ ಸಂಪುಟದತ್ತ ಇದೆ ಎಂದು ಕೂಡಲ ಸಂಗಮ ಪಂಚಮಸಾಲಿ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ಗುರುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗಾಗಿ ಕಳೆದ ಎರಡೂ ವರ್ಷಗಳಿಂದ ನಿರಂತರವಾಗಿ ನಡೆದ ಹೋರಾಟ ಬೆಳಗಾವಿಯಲ್ಲಿ ಬಂದು ನಿಂತಿದೆ. ನಮ್ಮ ಸಮಾಜದ …
Read More »ಮುಂಬಯಿ ಯಾರಪ್ಪನದ್ದೂ ಅಲ್ಲ, ಮಹಾರಾಷ್ಟ್ರದ್ದು.; ಫಡ್ನವಿಸ್ ಕಿಡಿ
ನಾಗಪುರ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈ ರಾಜ್ಯಕ್ಕೆ ಸೇರಿದ್ದು ಮತ್ತು ಯಾರಪ್ಪನದ್ದೂ ಅಲ್ಲ ಎಂದು ಬುಧವಾರ ಹೇಳಿ, ಎರಡು ರಾಜ್ಯಗಳ ನಡುವಿನ ಗಡಿ ವಿವಾದದ ನಡುವೆ ಕರ್ನಾಟಕದ ಕೆಲ ನಾಯಕರ ಟೀಕೆಗಳನ್ನು ಬಲವಾಗಿ ಖಂಡಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವಿಸ್, ರಾಜ್ಯದ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದರು. ಸದನದಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ …
Read More »ಕರ್ನಾಟಕದ ವಿರುದ್ಧ ಮಹಾರಾಷ್ಟ್ರದ ನಿರ್ಣಯಕ್ಕೆ ರಾಜ್ಯದಲ್ಲಿ ರೋಷಾಗ್ನಿ
ನಾಗ್ಪುರ/ಬೆಳಗಾವಿ: ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ, ಈಗ “ನಿರ್ಣಯ’ದ ಮೂಲಕ ಕರ್ನಾಟಕವನ್ನು ಕೆಣಕಿದೆ. ಮಂಗಳವಾರ ಮಹಾರಾಷ್ಟ್ರ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಕರ್ನಾಟಕದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಇದಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜತೆಗೆ, ಗಡಿ ತಂಟೆ ಕುರಿತು ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ವಿಧಾನ ಪರಿಷತ್‌ನಲ್ಲಿ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿದೆ. ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಇತ್ತೀಚೆಗೆ ವಿಧಾನಸಭೆಯಲ್ಲಿ ನಿರ್ಣಯ …
Read More »ಹಳೇ ಪಿಂಚಣಿ ವ್ಯವಸ್ಥೆ ಜಾರಿ ಇಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್‌ಬಿಐ …
Read More »ಈಗಾಗಲೇ ಮಹಾಜನ ವರದಿ ಇತ್ಯರ್ಥ : ಸಿದ್ದರಾಮಯ್ಯ
ಮಹಾರಾಷ್ಟ್ರ ರಾಜ್ಯ ಸರ್ಕಾರದ ನಿರ್ಣಯವನ್ನು ಖಂಡಿಸಿ ಕಾಂಗ್ರೆಸ್ ಸಿ ಎಲ್ ಪಿ ಅದ್ಯಕ್ಷ ಸಿದ್ದರಾಮಯ್ಯ ಮಾದ್ಯಮಗಳೊಂದಿಗೆ ಮಾತನಾಡುತ್ತಾ ಈಗಾಗಲೇ ಮಹಾಜನ್ ಆಯೋಗ ವರದಿ ಇತ್ಯರ್ಥ ಆಗಿದೆ ಆದರೆ ಮಹಾರಾಷ್ಟ್ರ ಸರ್ಕಾರ ನಮಗೆ ಸೇರಬೇಕು ಎಂದು ನಿರ್ಣಯ ಮಾಡಿದರೆ ಅದಕ್ಕೆ ಕಾನೂನು ಬಲ ಇಲ್ಲಾ, ನಾವು ನಮ್ಮ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಮಹಾರಾಷ್ಟ್ರ ವಿಧಾನಸಭೆ ನಿರ್ಣಯಕ್ಕೆ ಕವಡೆ ಕಾಸಿನಕಿಮ್ಮತ್ತು ಇಲ್ಲ ಎಂದರು.
Read More »ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕ
ಪಣಜಿ: ರಜೆ ಇದ್ದ ಕಾರಣಕ್ಕೆ ಗೋವಾಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಚಾಲಕನನ್ನು ಬಂಧಿಸಲಾಗಿದೆ. ಗೋವಾದಲ್ಲಿ ವಿಹಾರಕ್ಕೆ ಬಂದಿದ್ದ ಮುಂಬೈ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 35 ವರ್ಷದ ಬಸ್ ಚಾಲಕನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಶಂಕಿತ ಆರೋಪಿಯನ್ನು ದಕ್ಷಿಣ ಗೋವಾದ ಮೊರ್ಮುಗಾವೊದ ಜುವಾರಿನಗರ ಪ್ರದೇಶದ ನಿವಾಸಿ ಚಂದ್ರಶೇಖರ್ ವಾಸು ಲಮಾಣಿ ಎಂದು ಪೊಲೀಸರು ಗುರುತಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಬಸ್ …
Read More »
Laxmi News 24×7