Breaking News

ರಾಷ್ಟ್ರೀಯ

ರಸ್ತೆಗೆ ಇಳಿದು ಸಂಚಾರ ಸೇವೆ ಸಲ್ಲಿಸಬೇಕಿದ್ದ ಬಸ್ಸುಗಳು ಈಗ ಡಿಪೋದಲ್ಲಿಯೇ ನಿಂತು ಪ್ರಯಾಣಿಕ ಪರದಾಡುತ್ತಿದ್ದಾರೆ.

ಅದು ಉತ್ತರ ಕರ್ನಾಟಕದ ಜನರಿಗೆ ಜೀವನಾಡಿ ಆಗಬೇಕಿದ್ದ ಸಾರಿಗೆ ಸಂಸ್ಥೆ. ಆದರೆ ಒಂದಿಲ್ಲೊಂದು ರೀತಿಯಲ್ಲಿ ಜನರ ಜೀವ ಹಿಂಡಲು ಮುಂದಾಗಿದೆ. ದಿನದಿಂದ ದಿನಕ್ಕೆ ಜನದಟ್ಟಣೆ, ಜನರ ಸಂಚಾರ ಹೆಚ್ಚಾಗುತ್ತಿದೆ. ಜನರಿಗೆ ಅವಶ್ಯಕ ಇರುವ ಸಂದರ್ಭದಲ್ಲಿಯೇ ಸಾರಿಗೆ ಸಂಸ್ಥೆ ಬೇರೆ ಬೇರೆ ನೆಪವೊಡ್ಡಿ ಆಟ ಆಡುತ್ತಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನದಿಂದ ದಿನಕ್ಕೆ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆ ಸುಳಿಯಲ್ಲಿ ಸಿಲುಕಿಕೊಳ್ಳುವುದು ಮಾತ್ರವಲ್ಲದೆ ಜನಜೀವನದ ಜೊತೆಗೆ ಆಟವಾಡುತ್ತಿದೆ. ರಸ್ತೆಗೆ ಇಳಿದು …

Read More »

ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಯಡವಟ್ಟು, ಬಿಕಾಂ ವಿದ್ಯಾರ್ಥಿಗಳಿಗೆ ಆಪತ್ತು

ಧಾರವಾಡ, ಡಿಸೆಂಬರ್‌, 09: ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸದಾ ಒಂದಿಲ್ಲೊಂದು ಯಡವಟ್ಟು ಆಗುತ್ತಲೇ ಇರುತ್ತದೆ. ಇದೀಗ ಯುಜಿ ಪರೀಕ್ಷೆಯ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ದೊಡ್ಡ ಯಡವಟ್ಟು ಮಾಡಿಕೊಂಡಿದೆ. ಬಿಕಾಂ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷಾ ಫಲಿತಾಂಶದ ಅಂಕಪಟ್ಟಿಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಯಡವಟ್ಟು ಮಾಡಿಕೊಂಡಿದ್ದು, ಇದೀಗ ಅದನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.   ಕೋರ್ಸ್‌ ವಿಷಯ ಅಲ್ಲದ ಅಂಕಗಳ ಸೇರ್ಪಡೆ ಬಿಕಾಂ ವಿದ್ಯಾರ್ಥಿಗಳ ಅಂತಿಮ ವರ್ಷದ ಒಟ್ಟಾರೆ ಪರೀಕ್ಷಾ ಫಲಿತಾಂಶಕ್ಕೆ ಕೋರ್ಸ್‌ …

Read More »

ಬೆಟ್ಟ ಕುರುಬರಿಗೆ ಎಸ್‌ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್‌ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ.   ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್‌ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. …

Read More »

ಕೇಂದ್ರದಿಂದ ಸಿಹಿ ಸುದ್ದಿ: 50 ಸಾವಿರ ರೂ. ಸಾಲ ಸೌಲಭ್ಯದ ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು 2024ರ ಡಿಸೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರೊಬ್ಬರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ ಸಚಿವರು, ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಎರಡು ವರ್ಷ ವಿಸ್ತರಿಸಲಾಗಿದೆ ಎಂದರು.   ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗೊಳಿಸುವ …

Read More »

ವಿಜಯ್ ದೇವರಕೊಂಡ ಮನೆಯಲ್ಲಿ ಜಾಹ್ನವಿ..!

ವಿಜಯ್ ದೇವರಕೊಂಡ ಹೆಸರಿನ ಜೊತೆ ಯಾವಾಗಲೂ ಒಂದಲ್ಲ ಒಂದು ನಟಿಯರ ಹೆಸರು ತಳುಕು ಹಾಕಿಕೊಂಡೇ ಇರುತ್ತದೆ. ಅದ್ಯಾಕೋ ಗೊತ್ತಿಲ್ಲ. ಯಾವುದೇ ಹೊಸ ನಟಿಯ ಜೊತೆ ಸಿನಿಮಾ ಮಾಡಿದರೂ ಇಬ್ಬರು ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬಂದೇ ಬರುತ್ತದೆ. ಇತ್ತೀಚೆಗಷ್ಟೆ ರಶ್ಮಿಕಾ ಮಂದಣ್ಣ ಜೊತೆ ಡೇಟಿಂಗ್ ನಲ್ಲಿ ಇದ್ದಾರಾ ಅನ್ನೋ ಗಾಸಿಪ್ ಬೆನ್ನಲ್ಲೇ ಮತ್ತೊಂದು ಬೆಳವಣಿಗೆ ಇದೀಗ ಆಗಿದೆ.   ಹೌದು, ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ …

Read More »

ಹೆಚ್. ವಿಶ್ವನಾಥ್ – ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ‘ಬಾಂಬೆ ಬಾಯ್ಸ್’ ನಡೆ.!

ಜೆಡಿಎಸ್ – ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳಲು ಕಾರಣರಾಗಿದ್ದ ‘ಬಾಂಬೆ ಬಾಯ್ಸ್’ ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಪೈಕಿ ಬಹುತೇಕರು ಮಂತ್ರಿಯಾಗಿದ್ದು, ಹೆಚ್. ವಿಶ್ವನಾಥ್ ಅವರಿಗೆ ಅವಕಾಶ ಸಿಕ್ಕಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನು ಐದಾರು ತಿಂಗಳು ಬಾಕಿ ಇದ್ದು, ರಾಜ್ಯ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ.   ಇದರ ಮಧ್ಯೆ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅಚ್ಚರಿ …

Read More »

ಗುಜರಾತ್ ಫಲಿತಾಂಶ ಕರ್ನಾಟಕಕ್ಕೆ ಅನ್ವಯಿಸಲ್ಲ, ಸಿಎಂ ಹಗಲುಗನಸು:H.D.K.

ದೇವನಹಳ್ಳಿ: ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕಕ್ಕೆ ಅನ್ವಯವಾಗಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣಾ ಫಲಿತಾಂಶದ ಬಗ್ಗೆ ಮೊದಲೇ ಗೊತ್ತಿರುವುದೇ… ಗುಜರಾತ್​ ಫಲಿತಾಂಶದ ಬಗ್ಗೆ ವಿಶೇಷ ವಾಖ್ಯಾನ ಮಾಡುವಂತಹದ್ದಿಲ್ಲ. 5 ವರ್ಷದಿಂದ ಗುಜರಾತ್​ನಲ್ಲಿ ವಿರೋಧ ಪಕ್ಷವೇ ಇರಲಿಲ್ಲ. ಆದ್ದರಿಂದ ಗುಜರಾತ್ ಫಲಿತಾಂಶ ಏನು ಬರಲಿದೆ ಎಂದು ಮೊದಲೇ ಎಲ್ಲರಿಗೂ …

Read More »

ಮೋದಿ ಹವಾ ದೆಹಲಿಯಲ್ಲೇ ಇಲ್ಲ, ನಮ್ಮ ರಾಜ್ಯದಲ್ಲಿ ಇರುತ್ತಾ?: ಸಿದ್ದರಾಮಯ್ಯ

ಮೈಸೂರು: ಗುಜರಾತ್​ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಎಷ್ಟರ ಮಟ್ಟಿಗೆ ಕರ್ನಾಟಕದ ಚುನಾವಣೆಯಲ್ಲಿ ಪ್ರಭಾವ ಬೀರಲಿದೆ ಎನ್ನುವ ಚರ್ಚೆ ರಾಜಕೀಯ ಪಕ್ಷಗಳ ಒಳಗೆ ನಡೆಯುತ್ತಿದೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮದೇ ರೀತಿಯಲ್ಲಿ ಚುನಾವಣೇಯ ವಿಶ್ಲೇಷಣೆ ಮಾಡಿದ್ದಾರೆ. ಇದೇ ಸಂದರ್ಭ ಮೋದಿ ಅಲೆಯ ಬಗ್ಗೆಯೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ‘ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಇತ್ತು. ಬಿಜೆಪಿ ಸರ್ಕಾರದ ವಿರುದ್ಧ ಜನಾಕ್ರೋಶ ಇತ್ತು. ಹಾಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ …

Read More »

ಇವಿಎಂ ತಿರುಚಿದ್ದಾರೆಂದು ಆರೋಪಿಸಿ ಕುತ್ತಿಗೆ ಬಿಗಿದುಕೊಂಡು ಕಾಂಗ್ರೆಸ್​ ಅಭ್ಯರ್ಥಿಯಿಂದ ಹೈಡ್ರಾಮ!

ಅಹಮಾದಾಬಾದ್​: ಇವಿಎಂ ತಿರುಚಿದ್ದಾರೆ ಎಂದು ಆರೋಪಿಸಿ ಗುಜರಾತಿನ ಕಾಂಗ್ರೆಸ್​ ಅಭ್ಯರ್ಥಿಯೊಬ್ಬ ಶಾಲಿನಿಂದ ಕುತ್ತಿಗೆ ಬಿಗಿದುಕೊಂಡು ಪ್ರತಿಭಟಿಸಿದ್ದಾರೆ. ಮತಎಣಿಕೆಯ ಮಧ್ಯೆಯೇ ಈ ಹೈಡ್ರಾಮ ಸೃಷ್ಟಿಸುವ ಮೂಲಕ ಕೆಲ ಕಾಲ ಮತಎಣಿಕೆ ಕೇಂದ್ರದಲ್ಲಿ ಗೊಂದಲದ ವಾತವರಣವನ್ನು ನಿರ್ಮಿಸಿದರು.   ಗಾಂಧಿಧಾಮ್​ ಅಭ್ಯರ್ಥಿ ವೆಲ್ಜಿಭಾಯ್​ ಸೊಲಂಕಿ ಎಂಬುವರಿಂದ ಈ ಹೈಡ್ರಾಮ ನಡೆದಿದೆ. ಬಿಜೆಪಿ ಅಭ್ಯರ್ಥಿ ಮಾಲ್ತಿ ಕಿಶೋರ್​ ಮಹೇಶ್ವರಿ ಎದುರು 12 ಸಾವಿರ ಮತಗಳ ಅಂತರದಲ್ಲಿ ಸೋಲಂಕಿ ಅವರು ಹಿನ್ನಡೆ ಅನುಭವಿಸಿದ್ದಾರೆ. ಕೆಲವೊಂದು ಇವಿಎಂಗಳನ್ನು ಸರಿಯಾಗಿ …

Read More »

ಬೆಳಗಾವಿಯಲ್ಲಿ ಗುಜರಾತಿನ ಗೆಲುವು ಸಂಭ್ರಮಿಸಿದ ಕಾರ್ಯಕರ್ತರು

ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಬಿಜೆಪಿ ಮಹಾನಗರ ಕಾರ್ಯಕರ್ತರು ಸಂಭ್ರಮಿಸಿದರು. ಇಂದು ನಗರದ ಚನ್ನಮ್ಮ ಸರ್ಕಲ್ ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ , ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅದಕ್ಕಿಂತ ಮುಂಚೆ ಚನ್ನಮ್ಮ ಸರ್ಕಲ್ ನಲ್ಲಿ ಇರುವ ಗಣೇಶ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ಜೊತೆ ಮಾತನಾಡಿದ ಬಿಜೆಪಿ ಮಹಾನಗರ ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಅವರು. ರಾಜೀವ ಗಾಂಧಿ ಸಮಯದಲ್ಲಿ …

Read More »