Breaking News

ರಾಷ್ಟ್ರೀಯ

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ.

ಹುಬ್ಬಳ್ಳಿ: ಹುಬ್ಬಳ್ಳಿಯ ಖ್ಯಾತ ಉದ್ಯಮಿಯೊಬ್ಬರ ಪುತ್ರನ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಉದ್ಯಮಿಯ ತೋಟದ ಮನೆಯಲ್ಲೇ ಮಗನ ಶವ ಪತ್ತೆಯಾಗಿದೆ. ‘ಮಗ ನಾಪತ್ತೆಯಾಗಿದ್ದಾನೆ. ದಯವಿಟ್ಟು ಆತನನ್ನು ಹುಡುಕಿಕೊಡಿ’ ಎಂದು ಪೊಲೀಸ್​ ಠಾಣೆಯಲ್ಲಿ ಹೈಡ್ರಾಮ ಮಾಡಿದ್ದ ತಂದೆಯೇ ಇಡೀ ಪ್ರಕರಣ ರೂವಾರಿ ಎಂಬ ಆಘಾತಕಾರಿ ರಹಸ್ಯ ಬಯಲಾಗಿದೆ.   ಉದ್ಯಮಿ ಭರತ್ ಜೈನ್​ರ ಪುತ್ರ ಅಖಿಲ್ ಜೈನ್(30) ಮೃತ ದುರ್ದೈವಿ. ಅಖಿಲ್​ ಕಾಣೆಯಾಗಿದ್ದಾನೆ ಎಂದು ಡಿ.3ರಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ …

Read More »

BREAKING NEWS : ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.

ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.   ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ …

Read More »

ಪ್ರೀತಿಸಿ ಮದುವೆಯಾಗಿ ದಾರಿ ತಪ್ಪಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಪತಿ ಕೊಲೆ ರಹಸ್ಯ.

ಕೋಲಾರ: ದಾರಿ ತಪ್ಪಿದ ಪತ್ನಿ ಅಕ್ರಮ ಸಂಬಂಧ ಬೆಳೆಸಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ನಡೆದಿದೆ. ಪೊಲೀಸರ ತನಿಖೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನ. 28 ರಂದು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆನಂದ್ ನಾಪತ್ತೆಯಾಗಿರುವುದಾಗಿ ಆತನ ಅಣ್ಣ ವೆಂಕಟೇಶ್ ದೂರು ನೀಡಿದ್ದರು. ನಂತರ ಎರಡು ದಿನಗಳ ಬಳಿಕ ಮತ್ತೊಂದು ದೂರು ನೀಡಿ ತಮ್ಮನ ಪತ್ನಿ …

Read More »

ಮಹಾರಾಷ್ಟ್ರದ ಇಬ್ಬರು ಸಚಿವರು, ಓರ್ವ ಸಂಸದ ಗಡಿ ಪ್ರವೇಶಕ್ಕೆ ನಿಷೇಧ : ಬೆಳಗಾವಿ ಡಿಸಿ ಆದೇಶ

ಬೆಂಗಳೂರು- ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದದ ಸಂಘರ್ಷ ತಾರಕ್ಕೇರಿರುವ ಬೆನ್ನಲ್ಲೇ, ಇಂದು ಬೆಳಗಾವಿ ಜಿಲ್ಲೆಯ ಗಡಿ ಪ್ರವೇಶಿಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಜೊತೆಗೆ ಜಿಲ್ಲೆಯಲ್ಲಿ 14,   ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಕರ್ನಾಟಕ-ಮಹಾರಾಷ್ಟ್ರ ಉಲ್ಬಣಿಸಿದೆ. ಈ ಹಿಂದೆ ಕರ್ನಾಟಕಕ್ಕೆ ಬರಲಿರುವ ಮಹಾರಾಷ್ಟ್ರ ಸಚಿವರಿಗೆ ಇಲ್ಲಿಗೆ ಆಗಮಿಸಲು ಬಿಡಬಾರದು ಎಂದು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನಲೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ …

Read More »

ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು

ಮಹಾರಾಷ್ಟ್ರ ಗಡಿ ಸಮನ್ವಯ ಸಚಿವದ್ವಯರ ಬೆಳಗಾವಿ ಭೇಟಿ ರದ್ದು ಬಗ್ಗೆ ಮಹಾರಾಷ್ಟ್ರ ಡಿಸಿಎಂ ಪರೋಕ್ಷ ಸುಳಿವು ನೀಡಿದ್ದಾರೆ ಮಹಾರಾಷ್ಟ್ರ ಸಚಿವರ ಬೆಳಗಾವಿ ಭೇಟಿ ಬಗ್ಗೆ ಸಿಎಂ ನಿರ್ಧರಿಸುತ್ತಾರೆ. ಮುಂಬೈನಲ್ಲಿ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದಾರೆ. ಗಡಿ ವಿವಾದ ಪ್ರಕರಣ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಆಗಲಿ ಮಹಾರಾಷ್ಟ್ರ ಆಗಲಿ ನಿರ್ಣಯ ಕೈಗೊಳ್ಳಲಾಗಲ್ಲ. ಏನೇ ನಿರ್ಣಯ ಕೈಗೊಳ್ಳಬೇಕಿದ್ದರೂ ಸುಪ್ರೀಂಕೋರ್ಟ್ ತಗೆದುಕೊಳ್ಳುತ್ತೆ. ಈ ಸಂದರ್ಭದಲ್ಲಿ ಯಾವುದೇ ಹೊಸ …

Read More »

ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಬೆಳಗ್ಗೆ 8 ಗಂಟೆಯಿಂದ 2ನೇ ಹಂತದ ಮತದಾನ

ಗುಜರಾತ್ : ಇಂದು ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly polls)ಯ 2ನೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಗುಜರಾತ್‌ನ ಅಹಮದಾಬಾದ್, ಗಾಂಧಿನಗರ, ಮೆಹಸಾನಾ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅರಾವಳಿ, ಮಹಿಸಾಗರ, ಪಂಚಮಹಲ್, ದಾಹೋದ್, ವಡೋದರಾ, ಆನಂದ್, ಖೇಡಾ ಮತ್ತು ಛೋಟಾ ಉದಯ್‌ಪುರ ಜಿಲ್ಲೆಗಳ 93 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 833 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.   ಕಚ್, ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನಲ್ಲಿ …

Read More »

ಮೀಸಲಾತಿ: ಕೇಂದ್ರದಿಂದ ಒಪ್ಪಿಗೆ ಸಿಗುವವರೆಗೂ ಹೋರಾಟ: ಪ್ರಸನ್ನಾನಂದ ಸ್ವಾಮೀಜಿ

ಚನ್ನಗಿರಿ: ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.   ‘ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಶೇ 17 ಹಾಗೂ ಪಂಗಡದವರಿಗೆ ಶೇ 7 ಮೀಸಲಾತಿ ನೀಡಿರುವುದು ಸ್ವಾಗತಾರ್ಹ. ಆದರೆ ಇಷ್ಟಕ್ಕೆ ವಿಜಯೋತ್ಸವ ಆಚರಣೆ ಮಾಡಲು ಆಗುವುದಿಲ್ಲ. ಸದ್ಯ ಸರ್ಕಾರ ಕೇವಲ ಹೊರಗುತ್ತಿಗೆ ಆಧಾರದಲ್ಲಿ ನೇಮಕ ಆಗುವವರಿಗೆ ಮಾತ್ರ ಮೀಸಲಾತಿಯನ್ನು ಕಲ್ಪಿಸುತ್ತಿದೆ. ಆದರೆ …

Read More »

ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು

ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.   ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ. ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ …

Read More »

ಬದಲಾದೀತೇ ಗುಜರಾತ್‌ ಗಾದಿ? ನಾಳೆ ಮೋದಿ ತವರಿನಲ್ಲಿ 2ನೇ ಹಂತದ ಮತದಾನ

ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಗುಜರಾತ್‌ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಒಂದು ತಿಂಗಳಿನಿಂದ ಬಿಜೆಪಿ, ಕಾಂಗ್ರೆಸ್‌ ಮತ್ತು ಆಮ್‌ ಆದ್ಮಿ ಪಕ್ಷಗಳು ಜನಮನ್ನಣೆ ಗಳಿಸಿಕೊಳ್ಳುವುದಕ್ಕಾಗಿ ಇನ್ನಿಲ್ಲದ ಶ್ರಮ ಪಟ್ಟಿವೆ. ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ಮೋದಿಯವರೇ ನೇತೃತ್ವ ವಹಿಸಿಕೊಂಡಿದ್ದರೆ, ಎಎಪಿಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮುಂದಾಳತ್ವ ವಹಿಸಿದ್ದರು. ಕಾಂಗ್ರೆಸ್‌ ಮಾತ್ರ ದಿಲ್ಲಿ ನಾಯಕರನ್ನು ನಂಬಿಕೊಳ್ಳದೆ ಸಾಮೂಹಿಕ ನಾಯಕತ್ವದಡಿ ಪ್ರಚಾರ ನಡೆಸಿದೆ. ಹಿಂದಿನ ಸಂಖ್ಯೆ ಹೆಚ್ಚು ಮಾಡಿಕೊಂಡೀತೇ ಬಿಜೆಪಿ? …

Read More »

ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್

ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,‌ ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು …

Read More »