Breaking News

ರಾಷ್ಟ್ರೀಯ

ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿ ಗ್ರಾಮದಲ್ಲಿ R. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ `ಗ್ರಾಮ ವಾಸ್ತವ್ಯ’

ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.   ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ. ಕಂದಾಯ …

Read More »

ಪಿಎಸ್‌ಐ ಹಗರಣ: ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು

ಕಲಬುರಗಿ: ದ ಪ್ರಮುಖ ಆರೋಪಿಗಳಾದ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸೊನ್ನ ಗ್ರಾಮದ ಆರ್‌.ಡಿ. ಪಾಟೀಲ ಹಾಗೂ ಅವರ ಅಣ್ಣ, ಕಾಂಗ್ರೆಸ್ ಮುಖಂಡ ಮಹಾಂತೇಶ ಪಾಟೀಲ ಅವರಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಗುರುವಾರ ಜಾಮೀನು ಮಂಜೂರು ಮಾಡಿದೆ.   ಕೆಲ ದಿನಗಳ ಹಿಂದೆ ವಾದ ವಿವಾದವನ್ನು ಆಲಿಸಿದ್ದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ನ್ಯಾಯಪೀಠವು ಆದೇಶವನ್ನು ಗುರುವಾರಕ್ಕೆ ಕಾಯ್ದಿರಿಸಿತ್ತು. ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ ಪಿಎಸ್‌ಐ ಪರೀಕ್ಷಾ …

Read More »

46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಕ್ಕಳ ವಿದ್ಯಾನಿಧಿ ಬಿಡುಗಡೆ?

ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ …

Read More »

ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ.

ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದಾಗಿದ್ದು, ಆದ್ರೆ ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ವಕೀಲರಿಗೆ ಭದ್ರತೆಯನ್ನು ಒದಗಿಸುವ ಕಾನೂನನ್ನು ರಾಜ್ಯದಲ್ಲಿ ತರುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ಕೈಗೊಂಡ ವಕೀಲರು ಕೆಲ ಕಾಲ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ …

Read More »

ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ

ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಸಮ್ಮಿಶ್ರ ಸರ್ಕಾರ ಇದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು. ಈಗ 10 ಶಾಸಕರು ಸಜ್ಜಾಗಿದ್ದಾರೆ. ಶೀಘ್ರದಲ್ಲಿಯೇ ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದರು. ಒಟ್ಟು 22 ಶಾಸಕರು ರೆಡಿ ಇದ್ದಾರೆ ಅವರಲ್ಲಿ ನಾವು 10 ಜನರನ್ನು …

Read More »

ಇಂದು 100 ಕ್ಕೂ ಹೆಚ್ಚು `ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ:H.D.K.

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.   ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು …

Read More »

ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ. ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ …

Read More »

ಪ್ರತಿಷ್ಠಿತ ಬ್ಯಾಂಕ್​​ನಲ್ಲಿಟ್ಟಿದ್ದ ಚಿನ್ನ ಮಾಯ

ಕಳ್ಳಕಾಕರ ಭಯದಿಂದ ಜನಸಾಮಾನ್ಯರು ತಮ್ಮ ಹಣ ಹಾಗೂ ಚಿನ್ನ ಸುರಕ್ಷಿತವಾಗಿರುತ್ತೆ ಅಂತ ಬ್ಯಾಂಕ್​ನಲ್ಲಿಡುತ್ತಾರೆ. ಆದ್ರೆ ಆ ಬ್ಯಾಂಕ್​ನಲ್ಲಿಟ್ಟ ಹಣವೇ ಮಂಗಮಾಯವಾದ್ರೆ.. ಇಂಥ ಶಾಕಿಂಗ್ ಸುದ್ದಿಯಿಂದ ಕುಟುಂಬವೊಂದು ಕಂಗಾಲಾಗಿದೆ. ಬ್ಯಾಂಕ್ ಅಂದ್ರೆ ಜನಸಾಮಾನ್ಯರ ದುಡ್ಡಿನ ಹಾಗೂ ಚಿನ್ನದ ಸೆಕ್ಯೂರಿಟಿ ಗಾರ್ಡ್. ಕಷ್ಟ ಪಟ್ಟು ದುಡಿದು ಸಂಪಾದಿಸಿದ ಹಣ ಅಥವಾ ಕೊಂಡುಕೊಂಡ ಚಿನ್ನವನ್ನ ಮನೆಯಲ್ಲಿಟ್ರೆ ಯಾವಾಗ ಅದ್ಯಾವ ಖದೀಮರು ಮನೆಗೆ ನುಗ್ಗಿ ಎಸ್ಕೇಪ್ ಮಾಡಿಬಿಡ್ತಾರೋ ಅನ್ನೋ ಭಯಕ್ಕೆ ಜನ ಬ್ಯಾಂಕ್​ಗಳಲ್ಲಿ ಠೇವಣಿ ಇಡ್ತಾರೆ. …

Read More »

ಗೋವಾದಲ್ಲಿ ಕ್ರಿಸ್‍ಮಸ್ ಸಿದ್ಧತೆ ; ಭಾರಿ ಸಂಖ್ಯೆಯ ಪ್ರವಾಸಿಗರ ನಿರೀಕ್ಷೆ

ಪಣಜಿ: ಗೋವಾದಲ್ಲಿ ಕ್ರಿಸ್‍ಮಸ್ ಹಬ್ಬವನ್ನು ಅದ್ದೂರಿಯಿಂದ ಆಚರಿಸಲಾಗುತ್ತದೆ. ಹಬ್ಬಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಚರ್ಚ್ ಗಳಿಗೆ ಬಣ್ಣ ಬಡಿದು ಸಿಂಗರಿಸಲಾಗುತ್ತಿದ್ದು, ಕ್ರೈಸ್ತ ಬಾಂಧವರ ಮನೆಗಳಲ್ಲಿಯೂ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಕ್ರಿಸ್‍ಮಸ್ ಹಬ್ಬದೊಂದಿಗೆ ಹೊಸ ವರ್ಷ ಸಂಭ್ರಮಾಚರಣೆ ಕೂಡ ಆರಂಭಗೊಳ್ಳಲಿರುವುದರಿಂದ ಲಕ್ಷಾಂತರ ಸಮಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯನ್ನು ಗೋವಾದ ಪ್ರವಾಸೋದ್ಯಮ ಇಲಾಖೆ ಹೊಂದಿದೆ. ಮಾರುಕಟ್ಟೆಗಳಲ್ಲಿ ಕ್ರಿಸ್‍ಮಸ್ ಟ್ರಿ, ಸ್ಟಾರ್ ಗಳು, ಜಿಂಗಲ್‍ಬೆಲ್, ಸಾಂತಾಕ್ಲಾಸ್‍ಗಳು ಪ್ರಮುಖ ಆಕರ್ಷಣೆಯಾಗಿದೆ. ಮನೆ ಮನೆಯ ಮುಂದೆ …

Read More »

ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ …

Read More »