ದೀಪಾವಳಿಯ ಸಮಯದಲ್ಲೇ ಪಾರ್ಶ್ವ ಸೂರ್ಯಗ್ರಹಣವನ್ನು ಕಂಡ ಜಗತ್ತು ಈಗ ಮತ್ತೊಂದು ಗ್ರಹಣಕ್ಕೆ ಸಜ್ಜಾಗುತ್ತಿದೆ. ನ.8ರಂದು ಖಗ್ರಾಸ ಚಂದ್ರಗ್ರಹಣ ಉಂಟಾಗಲಿದ್ದು, ಕೋಲ್ಕತ್ತಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಗ್ರಹಣ ಗೋಚರಿಸಲಿದೆ. ಅಲ್ಲದೇ ಪಾಕಿಸ್ತಾನ, ಅಫ್ಘಾನಿಸ್ತಾನ, ರಷ್ಯಾ, ಅಮೆರಿಕ, ಆಸ್ಟ್ರೇಲಿಯಾ, ಉತ್ತರ ಅಟ್ಲಾಂಟಿಕ್ ಸಮುದ್ರ, ಪೆಸಿಫಿಕ್ ಸಮುದ್ರ ಪ್ರದೇಶದಿಂದಲೂ ಈ ಖಗೋಳ ವಿಸ್ಮಯವನ್ನು ವೀಕ್ಷಿಸಬಹುದು ಎಂದು ಖಗೋಳವಿಜ್ಞಾನಿಗಳು ತಿಳಿಸಿದ್ದಾರೆ. ನ.8ರಂದು ಮಧ್ಯಾಹ್ನ 2.39ಕ್ಕೆ ಭಾಗಶಃ ಚಂದ್ರಗ್ರಹಣ ಆರಂಭವಾಗಲಿದ್ದು, 3.46ರ ವೇಳೆಗೆ ಅದು …
Read More »ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಚಾಲನೆ : ಸಿದ್ಧತಾ ಸಭೆ ನಡೆಸಿದ ಸರ್ಕಾರ
ಬೆಂಗಳೂರು: ಹಾವೇರಿ ಜಿಲ್ಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಲಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಈಗ ಅಧಿಕೃತ ಚಾಲನೆ ಲಭಿಸಿದ್ದು ಹಾವೇರಿ ಜಿಲ್ಲೆ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಶನಿವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಮ್ಮೇಳನ ನಡೆಯುವ ಸ್ಥಳ ಪರಿಶೀಲನರ ಹಾಗೂ ಪೂರ್ವಭಾವಿ ಸಭೆ ನಡೆಸಿದ ಉಭಯ ಸಚಿವರು, ಹಿಂದಿನ ಎಲ್ಲ ಸಮ್ಮೇಳನಕ್ಕಿಂತಲೂ ಯಶಸ್ವಿಯಾಗಿ …
Read More »ಎನ್‌ಇಪಿಯಿಂದ ಕಲಿಕಾ ಸಾಮರ್ಥ್ಯ ಹೆಚ್ಚಳ: ಸಿಎಂ ಬೊಮ್ಮಾಯಿ
ಬೆಂಗಳೂರು: ನೂತನ ಶಿಕ್ಷಣ ನೀತಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ “ಶಿಕ್ಷಣದಲ್ಲಿ ನಾಯಕತ್ವಕ್ಕಾಗಿ ಅಂತಾರಾಷ್ಟ್ರೀಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಉನ್ನತ ಶಿಕ್ಷಣದಿಂದ ನೂತನ ಶಿಕ್ಷಣ ನೀತಿ ಜಾರಿಗೆ ತರಲಾಗಿದ್ದು, ಈ ವರ್ಷ ಮಾಂಟೆಸರಿಯಿಂದ ಪ್ರಾರಂಭಿಸಲಾಗುತ್ತಿದೆ. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕ. ರಾಜ್ಯದ ಮಕ್ಕಳು ಎಲ್ಲಾ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯವನ್ನು ಬೆಳೆಸಿಕೊಂಡು ಜ್ಞಾನವಂತರಾಗಬೇಕು …
Read More »ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕು: ಡಿಕೆ ಶಿವಕುಮಾರ್
ಶಿವಮೊಗ್ಗ: ಆಪರೇಷನ್ ಕಮಲದ ವಿರುದ್ಧ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಕ್ರಮ ತೆಗೆದುಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಇದಕ್ಕೊಂದು ಕೊನೆ ಕಾಣಿಸಬೇಕು. ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳೇ ಸೋಮೋಟೊ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹುಟ್ಟಿರುವುದೇ ಭ್ರಷ್ಟಾಚಾರದಿಂದ, ಆಪರೇಷನ್ ಲೋಟಸ್ ನಿಂದ. ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆದಿದೆ, ರೆಡ್ ಹ್ಯಾಂಡ್ ಆಗಿ ಕೋಟಿ ಕೋಟಿ …
Read More »ಮುದ್ದೇಬಿಹಾಳ: ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ರೈತರಿಂದ ದಾಂಧಲೆ, ಕಲ್ಲೆಸೆತ
ಮುದ್ದೇಬಿಹಾಳ: ಪ್ರತಿ ಟನ್ ಕಬ್ಬಿಗೆ ಎಫ್‌ಆರ್ಪಿ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ತಾಲೂಕುಗಳ ಸಾವಿರಾರು ರೈತರು ಯರಗಲ್ಲ-ಮದರಿ ಬಳಿ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ, ಕಲ್ಲೆಸೆದು, ದಾಂಧಲೆ ನಡೆಸಿದ್ದಾರೆ. ಅಪಾರ ಸಂಖ್ಯೆಯಲ್ಲಿದ್ದ ರೊಚ್ಚಿಗೆದ್ದಿದ್ದ ಕಬ್ಬು ಬೆಳೆಗಾರ ರೈತರನ್ನು ತಡೆಯಲು ಬೆರಳೆಣಿಕೆಯಷ್ಟು ಸಂಖ್ಯೆಯಲ್ಲಿದ್ದ ಪೊಲೀಸರು ಹರಸಾಹಸ ಪಟ್ಟರೂ ಪ್ರಯೋಜನ ಆಗಲಿಲ್ಲ. ಪೊಲೀಸರ ಕೋಟೆ ಭೇದಿಸಿ ಕಾರ್ಖಾನೆ ಒಳಗೆ ನುಗ್ಗಿದ ರೈತರು …
Read More »ವಿಶ್ವದ ಎತ್ತರದ ಶಿವ ಮೂರ್ತಿ ಇಂದು ಲೋಕಾರ್ಪಣೆ
ವಿಶ್ವದಲ್ಲೇ ಅತೀ ಎತ್ತರದ ಶಿವನ ಪ್ರತಿಮೆ “ವಿಶ್ವಾಸ ಸ್ವರೂಪಂ’ ಶನಿವಾರ ಲೋಕಾರ್ಪಣೆಗೊಳ್ಳಲಿದೆ.ರಾಜಸ್ಥಾನದ ರಾಜಸ್‌ಮಂಡ್ ಜಿಲ್ಲೆಯ ನಾಥ್‌ದ್ವಾರ ಪಟ್ಟಣದಲ್ಲಿ ಈ ಪ್ರತಿಮೆ ತಲೆಎತ್ತಿದೆ. ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಅವರು ಈ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಸಿಎಂ ಅಶೋಕ್ ಗೆಹೊÉàಟ್, ಸ್ಪೀಕರ್ ಸಿ.ಪಿ. ಜೋಷಿ ಮತ್ತಿತರರು ಭಾಗಿಯಾಗಲಿದ್ದಾರೆ. 9 ದಿನ ಕಾರ್ಯಕ್ರಮ ಉದಯಪುರದಿಂದ 45 ಕಿ.ಮೀ. ದೂರದಲ್ಲಿ ಧ್ಯಾನಸ್ಥನಾಗಿರುವಂತೆ ಶಿವನ ಪ್ರತಿಮೆ ನಿರ್ಮಿಸಲಾಗಿದೆ. ಪ್ರತಿಮೆ ಲೋಕಾರ್ಪಣೆಗೊಂಡ ಬಳಿಕ ಅ. 29ರಿಂದ ನ. 6ರ …
Read More »ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ
ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ. ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ …
Read More »ಕರ್ನಾಟಕವನ್ನು ದೇಶದಲ್ಲೇ ನಂ.1 ಮಾಡ್ತೇವೆ: C.M. ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಬದುಕು ಕಟ್ಟಿಕೊಳ್ಳಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಮೂಲಕ ಭಾರತದಲ್ಲೇ ನಂಬರ್ 1 ರಾಜ್ಯ ಮಾಡುವ ಛಲವನ್ನು ತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಇನ್ನಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು. ಕನ್ನಡನಾಡು ಶ್ರೇಷ್ಠವಾದ ನಾಡು …
Read More »ಮುರುಘಾ ಶ್ರೀ ಜಾಮೀನು ಆಕ್ಷೇಪಣೆಗೆ ವಾರ ಗಡುವು ಚಿತ್ರದುರ್ಗ ಜೈಲಿನಲ್ಲಿ ಮುರುಘಾ ಶ್ರೀ
ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಮ್ಮ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರ ಪರ ವಕಾಲತ್ತಿನ ಕಾನೂನು ಬದ್ಧತೆ ಪ್ರಶ್ನಿಸಿದ್ದಾರೆ. ಶ್ರೀಗಳ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. …
Read More »2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ:H.D.D.
ಬೆಂಗಳೂರು: ‘2023ರಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು. ಪಕ್ಷದ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪರಿಷತ್ ಸಭೆಯಲ್ಲಿ ಅವರು ಮಾತನಾಡಿ, ‘ಕೆಲವರು ಜೆಡಿಎಸ್‌ಗೆ 20 ರಿಂದ 25 ಸೀಟುಗಳು ಬರುತ್ತವೆ ಎಂದು ಹೇಳುತ್ತಿದ್ದಾರೆ. ಅದನ್ನೆಲ್ಲ ನಂಬಬೇಡಿ. ನನ್ನ ಜೊತೆ ನೀವು ಕೈ ಜೋಡಿಸಿ, ಜನರ ಮುಂದೆ ನಮ್ಮ ಯೋಜನೆಗಳ ಬಗ್ಗೆ ತಿಳಿಸಿ’ ಎಂದರು. ‘ನೀವು ಎಷ್ಟು …
Read More »