Breaking News

ರಾಷ್ಟ್ರೀಯ

ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಬೆಳಗಾವಿಯ ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣೆ

ಅಪ್ಪು ಅಭಿಮಾನಿಗಳ ಬಹುಪ್ರತೀಕ್ಷಿತ ಗಂಧದ ಗುಡಿ ಚಿತ್ರ ರಿಲೀಸ್ ಆಗಿದ್ದು, ಬೆಳಗಾವಿಯ ಥಿಯೇಟರ್‌ಗಳ ಮುಂದೆ ಹಬ್ಬದ ವಾತಾವರಣ ಮನೆ ಮಾಡಿತ್ತು.   ಇಂದು ರಾಜ್ಯಾದ್ಯಂತ ಪವರ್ ಸ್ಟಾರ್ ಅಭಿನಯದ ಗಂಧದ ಗುಡಿ ಚಿತ್ರ ಬಿಡುಗಡೆಗೊಂಡಿದೆ. ಬೆಳಗಾವಿಯಲ್ಲೂ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರ ಬಿಡುಗಡೆ ನಡೆಯಿತು. ಸ್ವರೂಪ-ನರ್ತಕಿ, ಕಾರ್ನಿವಲ್ ಹಾಗೂ ಐನಾಕ್ಸ್ ಈ ಮೂರು ಚಿತ್ರ ಮಂದಿರಗಳಲ್ಲಿ ಚಿತ್ರದ ಮೊದಲ ಶೋ ವಿಕ್ಷೀಸಲು ೧೦:೪೫ ಗಂಟೆಗೆ ಅಭಿಮಾನಿಗಳು ನೂರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದರು. …

Read More »

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಬೆಳಗಾವಿಯ ಕರಾಟೆಪಟು

ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದಿರುವ ಕರಾಟೆ ಪಟು ಕೇತನ ಕಲ್ಲಪ್ಪಾ ಫಾಟಕೆ ಬ್ಲ್ಯಾಕ್ ಬೆಲ್ಟ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಮಂಡೋಳಿ ರಸ್ತೆಯ ಮನೋಪ್ರಭಾ ಮಂಗಲ ಕಾರ್ಯಾಲಯದಲ್ಲಿ ಇದೇ ಅಕ್ಟೋಬರ್ 23ರಂದು ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ 70 ಕರಾಟೆ ಪಟುಗಳು ಭಾಗಿಯಾಗಿದ್ದರು. ಈ ವೇಳೆ ಮುಖ್ಯ ತೀರ್ಪುಗಾರರಾಗಿ ಗಜೇಂದ್ರ ಕಾಕತಿಕರ ಆಗಮಿಸಿದ್ದರು. ಕಳೆದ 9 ವರ್ಷಗಳಿಂದ ಇಲ್ಲಿ ತರಬೇತಿ ಪಡೆದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ …

Read More »

10 ಉಗ್ರರ ಖಾತೆಗಳ ಮಾಹಿತಿಯ ವರದಿ ನೀಡಿ : ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

ಮುಂಬಯಿ : ಈ ತಿಂಗಳ ಆರಂಭದಲ್ಲಿ ಕೇಂದ್ರ ಗೃಹ ಸಚಿವಾಲಯವು ಉಗ್ರರೆಂದು ಗೊತ್ತುಪಡಿಸಿದ 10 ವ್ಯಕ್ತಿಗಳನ್ನು ಹೋಲುವ ಖಾತೆಗಳ ಬಗ್ಗೆ ಸರಕಾರಕ್ಕೆ ವಿವರವಾದ ವರದಿ ನೀಡುವಂತೆ ಬ್ಯಾಂಕ್ ಮತ್ತು ಇತರ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಗುರುವಾರ ತಿಳಿಸಿದೆ.   ಅಕ್ಟೋಬರ್ 4 ರಂದು, ಕೇಂದ್ರ ಗೃಹ ಸಚಿವಾಲಯವು ಹಿಜ್ಬುಲ್ ಮುಜಾಹಿದ್ದೀನ್ , ಲಷ್ಕರ್-ಎ-ತೈಬಾ ಮತ್ತು ಇತರ ನಿಷೇಧಿತ ಸಂಘಟನೆಗಳ ಒಟ್ಟು 10 ಸದಸ್ಯರನ್ನು ಯುಎಪಿಎ ಕಾಯ್ದೆಯ ಅಡಿಯಲ್ಲಿ ಉಗ್ರರೆಂದು ಗೊತ್ತುಪಡಿಸಿದೆ. …

Read More »

ಪಣಜಿ: ಮಾದಕ ವಸ್ತು ಮಾರಾಟ ಪ್ರಕರಣ; ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ

ಪಣಜಿ: ಗೋವಾ ರಾಜ್ಯವು ಜಗತ್ಪ್ರಸಿದ್ಧ ಪ್ರವಾಸಿ ತಾಣವಾಗಿರುವುದರಿಂದ ಪ್ರತಿ ವರ್ಷ ದೇಶೀಯ ಹಾಗೂ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಆದ್ದರಿಂದ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮಾಹಿತಿ ನೀಡಿದರು. ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಎಂಟಿ ನಾರ್ಕೋಟಿಕ್ಸ್ ಸೆಲ್ ಅನ್ನು ಬಲಿಷ್ಠಗೊಳಿಸಲು ಅದರ ಸಿಬ್ಬಂದಿಯನ್ನು ಹೆಚ್ಚಿಸಲು ಸರ್ಕಾರ ಯೋಜಿಸಿದೆ. ಮಾದಕ ದ್ರವ್ಯ ಪ್ರಕರಣಗಳಲ್ಲಿ …

Read More »

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ. ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು …

Read More »

ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಆಪರೇಷನ್ ಕಮಲ ಆರೋಪ: ಹೈಡ್ರಾಮಾ

ಹೈದರಾಬಾದ್: ತೆಲಂಗಾಣದಲ್ಲಿ ಟಿ.ಆರ್.ಎಸ್. ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಬಿಜೆಪಿ ಖರೀದಿಗೆ ಯತ್ನಿಸಿದೆ ಎಂದು ಆರೋಪಿಸಿ ಸಚಿವರು ಮತ್ತು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ನಾಯಕರು ಬುಧವಾರ ರಾತ್ರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು, ಟಿ.ಆರ್‌.ಎಸ್. ಶಾಸಕರನ್ನು ಖರೀದಿಸಲು ಬಿಜೆಪಿಯ ಯತ್ನಿಸಿದೆ ಎಂದು ದೂರಿದ ಪ್ರತಿಭಟನಾಕಾರರು ವಿಜಯವಾಡ ಹೆದ್ದಾರಿಯ ಹೈದರಾಬಾದ್ ಬಳಿಯ ಚೌಟುಪ್ಪಲ್‌ ನಲ್ಲಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಚಿವರಾದ ಗಂಗೂಲ ಕಮಲಾಕರ್ ಮತ್ತು ಇಂದ್ರಕರನ್ ರೆಡ್ಡಿ …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ. ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. …

Read More »

ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ

ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ …

Read More »

ಇಪ್ಪತ್ತರವರಲ್ಲಿ ಮುಂದಿನ ಐವತ್ತರ ಕನಸು

ಬೆಂಗಳೂರು: ಭವಿಷ್ಯದ ನಾಯಕತ್ವ ಸೃಷ್ಟಿಗಾಗಿ ಬೃಹತ್‌ ಪ್ರಮಾಣದಲ್ಲಿ ಯುವ ಸಮೂಹವನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಮುಂದಾಗಿದೆ. ಇಪ್ಪತ್ತರಿಂದ ಮೂವತ್ತರೊಳಗಿನ ಎಲ್ಲ ಜಾತಿ ಸಮುದಾಯದ ಯುವಜನರನ್ನು ಬೂತ್‌ ಮಟ್ಟ ದಲ್ಲಿ ಪಕ್ಷಕ್ಕೆ ಸೆಳೆದು ಮುಂದಿನ 50 ವರ್ಷದ ರಾಜಕಾರಣಕ್ಕೆ ಅಣಿಗೊಳಿಸುವುದು ಇದರ ಉದ್ದೇಶ.   ಈ ಯುವಜನರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಮುದಾಯ ಆಧಾರಿತ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಅವುಗಳ ಫ‌ಲಾನುಭವಿಗಳ ಅಂಕಿ ಅಂಶಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ …

Read More »

ಬ್ರಿಟಿಷರ ಮಂಡಿಯೂರಿಸಿದ್ದ ರಾಣಿ ಕಿತ್ತೂರು ಚನ್ನಮ್ಮಾಜಿ

1585 ರಿಂದ 1824ರವರೆಗೆ 12 ರಾಜರ ಆಳ್ವಿಕೆಯನ್ನು ನಂತರ ಸಂಸ್ಥಾನದ ಸಂದಿಗ್ಧತೆಯಲ್ಲಿ ರಾಣಿ ಚನ್ನಮ್ಮಾಜಿಯ ಸೂಕ್ತ ನಾಯಕತ್ವ ಕಿತ್ತೂರು ಸಂಸ್ಥಾನ ಇತಿಹಾಸದಲ್ಲಿ ಅಜರಾಮರವಾಗಿ ಉಳಿಸಿತು. ರಾಣಿ ಚನ್ನಮ್ಮಾ ಇವತ್ತಿನ ಬೆಳಗಾವಿ ಜಿಲ್ಲೆಯ ಕಾಕತಿಯ(ಸಾಂಗ್ಲಿ ಸಂಸ್ಥಾನ) ದೂಳಪ್ಪಗೌಢ ದೇಸಾಯಿಯ ಮಗಳಾಗಿ ಜನ್ಮ ತಾಳಿದಳು. ನಂತರ ಕಿತ್ತೂರಿನ ದೊರೆ ಮಲ್ಲಸರ್ಜ ದೇಸಾಯಿಯ ಕೈ ಹಿಡಿದು ಕಿತ್ತೂರಿನ ಸಂಸ್ಥಾನಕ್ಕೆ ರಾಜ ಕಳೆ ತಂದು ಕೊಟ್ಟಳು. 1816ರಲ್ಲಿ ದೊರೆ ಮಲ್ಲಸರ್ಜ ದೇಸಾಯಿ ನಿಧನದ ನಂತರ ಸಂಸ್ಥಾನದಲ್ಲಿ …

Read More »