ಇದೇ ಮೊದಲ ಬಾರಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವನ್ನಾಗಿ ಆಚರಿಸಲಾಗುತ್ತಿರುವುದರಿಂದ ಪ್ರತಿ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಒಟ್ಟು 15 ಉಪ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯ ಅಧ್ಯಕ್ಷರು ಮಾತ್ರವಲ್ಲದೆ ಎಲ್ಲ ತಾಲ್ಲೂಕುಗಳ ತಹಶೀಲ್ದಾರರನ್ನು ಕೂಡ ಉತ್ಸವದ ಕೆಲಸಕ್ಕೆ ನಿಯೋಜಿಸಲಾಗಿದೆ. ಎಲ್ಲ ಉಪ ಸಮಿತಿಯ ಅಧ್ಯಕ್ಷರು ಮುಂದಿನ ಐದು ದಿನಗಳ ಕಾಲ ಕಿತ್ತೂರಿನಲ್ಲಿಯೇ ಉಪಸ್ಥಿತರಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರಿನಲ್ಲಿ …
Read More »ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ
ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …
Read More »487 ಹುದ್ದೆಗಳ ನೇಮಕಾತಿಗೆ ಮುಂದಾದ ಕೆಎಂಎಫ್
ಕರ್ನಾಟಕ ಹಾಲು ಒಕ್ಕೂಟದಲ್ಲಿ (Karnataka Milk Federation) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 19 ಆಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, …
Read More »ತೋಟದ ರಸ್ತೆಯಲ್ಲಿ ಯಮಸ್ವರೂಪಿ ತಗ್ಗಗುಂಡಿಗಳು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಶಿಂಧೆ ತೋಟದ ರಸ್ತೆಗಳು ಹದಗೆಟ್ಟು ಹೋಗಿವೆ.ರಸ್ತೆಗಳು ಹದಗೆಟ್ಟ ಪರಿಣಾಮ ಗ್ರಾಮದ ಶಿಂಧೆ ತೋಟದ ಸುಮಾರು 30 ಮನೆಗಳು ಸಂಪರ್ಕ ಕಡಿತವಾಗಿವೆ. ಮಳೆಗಾಲ ಪ್ರಾರಂಭವಾದರೆ ಸಾಕು ಶಿಂಧೆ ತೋಟದ ಜನರ ಪರಿಸ್ಥಿತಿ ಹೇಳತೀರದಾಗಿದೆ. 2 ಅಡಿಯಷ್ಟು ದೊಡ್ದ ದೊಡ್ಡ ಗುಂಡಿಗಳು,ಆ ಗುಂಡಿಗಳಲ್ಲಿ ನೀರು ಸಂಗ್ರಹ. ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಇದರಿಂದಾಗಿ ದಿನಪ್ರತಿ ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಜಾರಿ …
Read More »ವಿರೋಧ ಮಧ್ಯೆಯೂ ಬೆಳಗಾವಿಯಲ್ಲಿ ಗಣೇಶ ಮಂದಿರ ಮುಂಭಾಗದ ಶೆಡ್ ತೆರವು
ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು. : ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. …
Read More »KSRTC: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ₹50 ಲಕ್ಷ ಪ್ರೀಮಿಯಂ ರಹಿತ ಅಪಘಾತ ವಿಮೆ
ಬೆಂಗಳೂರು: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ₹50 ಲಕ್ಷದ ತನಕ ಅಪಘಾತ ವಿಮಾ ಸೌಲಭ್ಯ ದೊರಕಿಸುವ ಯೋಜನೆಯನ್ನು ನಿಗಮ ಜಾರಿಗೆ ತಂದಿದೆ. ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಜತೆ ಒಡಂಬಡಿಕೆಯನ್ನು ಕೆಎಸ್‌ಆರ್‌ಟಿಸಿ ಬುಧವಾರ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಎಸ್‌ಬಿಐ ಉಪ ಪ್ರಧಾನ ವ್ಯವಸ್ಥಾಪಕ ಪಂಕಜ್ ತಪ್ಲಿಯಾಲ್ ಒಪ್ಪಂದಕ್ಕೆ ಸಹಿ ಹಾಕಿದರು. ಅಪಘಾತದಲ್ಲಿ ಸಿಬ್ಬಂದಿ ಮೃತಪಟ್ಟರೆ ಅವಲಂಬಿತರಿಗೆ ಈವರೆಗೆ ಪರಿಹಾರ ಸಿಗುತ್ತಿರಲಿಲ್ಲ. ಹೊಸ …
Read More »‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಈಗಾಗಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ದಿನೇದಿನೆ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದಾಗ್ಯೂ ಇಬ್ಬರು ಸ್ಟಾರ್ ಕಲಾವಿದರು ಮೌನವಹಿಸಿರುವುದು ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿದೆ. ಕಾಂತಾರ ಚಿತ್ರದ ಕುರಿತು ಸ್ಯಾಂಡಲ್ವುಡ್ ಜತೆಗೆ ದಕ್ಷಿಣ ಭಾರತದ ಇತರ ಚಿತ್ರರಂಗಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೆ ಬಾಲಿವುಡ್ನಲ್ಲಿ ಇದುವರೆಗೂ ಯಾವುದೇ ಕನ್ನಡ ಸಿನಿಮಾ ಮಾಡದ …
Read More »ರೀವೆಂಜ್ ಗಾಗಿ ಹುಬ್ಬಳ್ಳಿಯಲ್ಲಿ ಬಿತ್ತು ಮತ್ತೊಂದು ಹೆಣ
ಆಸ್ಪತ್ರೆಯ ಶವಾಗಾರದ ಮುಂದೆ ನಿಂತು ಅಗಲಿದ ಗೆಳೆಯನ ಅಂತಿಮ ದರ್ಶನಕ್ಕೆ ಬಂದಿರೋ ಗೆಳೆಯರು,ಈ ಕೊಲೆ ಮಾಡಿದ್ದು ಕೇವಲ ಮೂರು ಜನರು ಮಾತ್ರವಲ್ಲ ಇನ್ನು ಕೆಲವರು ಇದ್ದಾರೆ ಎಂದು ಆರೋಪ ಮಾಡುತ್ತಿರೋ ಸಂಬದಿಕರು,ಶವಾಗಾರದ ಮುಂದೆ ಗೆಳೆಯರ ನಡುವೆ ಗುಸು ಗುಸು ಮಾತುಗಳು, ಈ ಎಲ್ಲ ದ್ರಶ್ಯಗಳಿಗೆ ಸಾಕ್ಷಿಯಾಗಿದ್ದು ಆ ಯುವಕನ ಸಾವು,ಅಷ್ಟಕ್ಕೂ ಇದೇನು ಕೊಲೆಯ ಕಹಾನಿ ಅಂತೀರಾ ಈ ಸ್ಟೋರಿಯನ್ನು ಒಮ್ಮೆ ನೋಡಿ… ಹೀಗೆ ಫೋಟೋ ದಲ್ಲಿ ಕಾಣುತ್ತಿರೋ ಈತನ ಹೆಸರು …
Read More »ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್‌ಐಆರ್‌ಗಳನ್ನು 24 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ …
Read More »ಹಾಲಿ ಶಾಸಕರಲ್ಲಿ ಗೆಲ್ಲೋರ್‍ಯಾರು? ಸೋಲೋರ್‍ಯಾರು? 40 ಶಾಸಕರ ಮರು ಆಯ್ಕೆ ಸುಲಭವಲ್ಲ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಂತರಿಕ ಸಮೀಕ್ಷೆ ಮಾಡಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹಾಲಿ ಶಾಸಕರ ಪೈಕಿ ಮತ್ತೆ ಗೆಲ್ಲೋರೆಷ್ಟು-ಸೋಲೋರೆಷ್ಟು ಎಂಬ ಆತಂಕ ಶುರುವಾಗಿದೆ. ಮೂರೂ ಪಕ್ಷಗಳು ಆಂತರಿಕವಾಗಿ ನಡೆಸಿರುವ ಸಮೀಕ್ಷೆಯಲ್ಲಿ ಈಗಿರುವ ಹಾಲಿ ಶಾಸಕರ ಪೈಕಿ ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಜೆಡಿಎಸ್‌ನ 5 ಶಾಸಕರ ಗೆಲುವು ಕಷ್ಟ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಆ ಕ್ಷೇತ್ರಗಳಲ್ಲಿ ಗೆಲುವಿಗೆ …
Read More »