Breaking News

ರಾಷ್ಟ್ರೀಯ

ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ

ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು. ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ …

Read More »

ರಾಜ್ಯ ಸರ್ಕಾರದಿಂದ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು : ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ

ಬೆಂಗಳೂರು: ಈವರೆಗೆ ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದ್ರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government ) ಬ್ರೇಕ್ ಹಾಕಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ …

Read More »

ಧಾರವಾಡ ಪ್ರವೇಶಕ್ಕೆ ಅನುಮತಿ ಸಿಗದಿದ್ದರೆ ಹೊರಗಿದ್ದೇ ಚುನಾವಣೆ ಕಣಕ್ಕಿಳಿಯುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ..

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ‌. ಧಾರವಾಡ ಪ್ರವೇಶಕ್ಕೆ ‌ಅನುಮತಿ ಸಿಗದಿದ್ದರೂ ಹೊರಗಿದ್ದೇ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವುದಿಲ್ಲ ಎಂದು ಮಾಜಿ ಸಚಿವ ವಿನಯ್​ ಕುಲಕರ್ಣಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಬರುವಷ್ಟರಲ್ಲೇ, ನನಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವ ವಿಶ್ವಾಸವಿದೆ‌. ಒಂದು ವೇಳೆ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಹೊರಗಿದ್ದೆ ಚುನಾವಣೆ ಕಣಕ್ಕಿಳಿಯುವೆ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವುದಿಲ್ಲ ಎಂದರು. ಪಂಚಮಸಾಲಿ ಮೀಸಲು …

Read More »

ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್​

ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್​, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ. ಕಳೆದ ವಾರ ಬಿಡುಗಡೆಯಾದ ಜಗ್ಗೇಶ್​ ಅವರ ತೋತಾಪುರಿ ಸಿನಿಮಾದ ಸಕ್ಸಸ್​ ಮೀಟ್​ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್​, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು.   ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್​ ಮಾಡುತ್ತಿದೆ. ರಜನಿಕಾಂತ್​ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್​ ಮಾಡಿಕೊಟ್ಟಿದ್ದಾರೆ. ಆದರೆ …

Read More »

SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ …

Read More »

ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಗೆ ಬರದಿದ್ದರೆ ಅವರ ಕಾರ್ಖಾನೆಗೇ ಹೋಗಿ ಸಭೆ ಮಾಡುತ್ತೇವೆ: ನಿತೇಶ್ ಪಾಟೀಲ

ಬೆಳಗಾವಿ ಜಿಲ್ಲೆಯಲ್ಲಿ ೨೯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯವರನ್ನು ಸಭೆಗೆ ಕರೆದಿದ್ದೇವೆ ಆದರೆ ಈ ಕುರಿತಂತೆ ಆದೇಶ ಮಾಡಿಲ್ಲ. ಕೆಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಾರಣಾಂತರದಿAದ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಹೇಳಿದರು. ನಗರದಲ್ಲಿ ಇಂದು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘನೆಯ ಮುಖಂಡರ ಜತೆಗೆ ಕರೆಯಲಾದ ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …

Read More »

ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಾನಿ

ಗಾಂಧಿನಗರ : ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ರೋಡ್ ವಕ್ತಾರರ ಪ್ರಕಾರ, ಗೈರತ್‌ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 11.20ರ ಸುಮಾರಿಗೆ ಈ ಘಟನೆ ನಡೆದಿದೆ. ಎಮ್ಮೆಗಳ ಹಿಂಡು ಢಿಕ್ಕಿಯಾದ ನಂತರ, ಇಂಜಿನ್ ನ ಮುಂಭಾಗಕ್ಕೆ ಹಾನಿಯಾಗಿದೆ. “ಮೂರರಿಂದ ನಾಲ್ಕು ಎಮ್ಮೆಗಳು ಮುಂಬಯಿ -ಗಾಂಧಿನಗರದ ವಂದೇ ಭಾರತ್ ದಾರಿಯಲ್ಲಿ ಇದ್ದಕ್ಕಿದ್ದಂತೆ …

Read More »

ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …

Read More »

ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಸಂಪೂರ್ಣ ಬೆಂಬಲ ಘೋಷಿಸಿದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಗಳ ನೇತೃತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಗಳೊಂದಿಗೆ ಮಂಗಳವಾರ ರಾತ್ರಿ …

Read More »

ಶುಕ್ರವಾರ ರಾಜ್ಯ ಬಿಜೆಪಿ ಕಾರ್ಯಕಾರಿಣಿ: ಸಿಎಂ ರಾಜ್ಯ ಪ್ರವಾಸಕ್ಕೆ ನಿಗದಿಯಾಗುವುದೇ ಮುಹೂರ್ತ?

ಬೆಂಗಳೂರು : ದಸರಾ ಮುಕ್ತಾಯದ ಬೆನ್ನಲ್ಲೇ ಸಾಲು ಸಾಲು ರಾಜಕೀಯ ಚಟುವಟಿಕೆಗಳು ಗರಿಗೆದರುವುದಕ್ಕೆ ರಾಜ್ಯ ಬಿಜೆಪಿಯಲ್ಲಿ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕಾರಿಣಿಯಲ್ಲಿ ದಿನಾಂಕ ನಿಗದಿಯಾಗಲಿದೆ.   ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಗುರುವಾರ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಲಿದ್ದು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಸಿಎಂ ಬಸವರಾಜ್ ಬೊಮ್ಮಾಯಿ, ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಮುಂಚೂಣಿ ನಾಯಕರು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ …

Read More »