ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ …
Read More »ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್
ಅಹಮದಾಬಾದ್ : ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್‌ನಲ್ಲಿ 80% ಖಾಸಗಿ ಉದ್ಯೋಗಗಳು ಗುಜರಾತ್‌ನ ಜನರಿಗೆ ಮೀಸಲಾಗಿರುತ್ತವೆ ಎಂದು ಆಪ್ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ಟೌನ್‌ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್‌ನ ಯುವ ಸಮುದಾಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಕಮಲ’ದ ಸುತ್ತ ಸಾಕಷ್ಟು ‘ಕೆಸರು’ ಬಿದ್ದಿದೆ. ಆ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ, ಅದನ್ನು “ಪೊರಕೆ ” ಯಿಂದ ಸ್ವಚ್ಛಗೊಳಿಸಬೇಕಾಗುತ್ತದೆ …
Read More »ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ*
*ಗೋಕಾಕ :* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ …
Read More »ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. 25 ಕೋಟಿ ರೂ. ಲಾಟರಿ ಗೆದ್ದಿದ್ದರೂ ಕಂಗಾಲಾಗಿ ಹೋಗಿರುವ ಆಟೋ ಚಾಲಕ!
ತಿರುವನಂತಪುರಂ: ಕಳೆದ ವಾರ ಲಕ್ಕಿ ಡ್ರಾ ಮೂಲಕ 25 ಕೋಟಿ ಬಹುಮಾನ ಗೆದ್ದಿದ್ದ, ಆಟೋ ಚಾಲಕ ಕಂಗಾಲಾಗಿ ಹೋಗಿದ್ದಾನೆ. ಆರ್ಥಿಕ ತೊಂದರೆಯಿಂದ ಬಳಲುತ್ತಿದ್ದ ಆಟೋ ಚಾಲಕ ಅನೂಪ್, ಮಲೇಷ್ಯಾಕ್ಕೆ ತೆರಳಿ ದುಡಿಯಲು ದಾರಿ ಕಂಡು ಕೊಂಡಿದ್ದ. ಇನ್ನೇನು ಮಲೇಷ್ಯಾಗೆ ತೆರಳಬೇಕು ಅನ್ನುವಷ್ಟರಲ್ಲಿ ಲಾಟರಿ ಗೆದ್ದಿರುವುದು ತಿಳಿದಿದೆ. ಲಾಟರಿಯಲ್ಲಿ ಕೋಟಿ ಬಹುಮಾನ ಬಂದಿದೆ. ಇನ್ನು ಮುಂದೆ ನೆಮ್ಮದಿಯ ಬದುಕನ್ನು ಕಾಣಬಹುದು ಎಂದು ನಿರ್ಧರಿಸಿದ್ದರು. ಆದರೆ ಆಗಿದ್ದೇ ಬೇರೆ. ಬಹುಮಾನ ಬಂದಿರುವುದು ಗೊತ್ತಾಗುತ್ತಿದ್ದಂತೆ …
Read More »ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್
ಬೆಂಗಳೂರು : ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರಿ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ …
Read More »ಮುರುಘಾ ಶರಣರಿಗೆ ಆಂಜಿಯೋಗ್ರಾಂ ಪರೀಕ್ಷೆ: ಆರೋಗ್ಯ ಸ್ಥಿರ
ಶಿವಮೊಗ್ಗ: ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರಿಗೆ ಕೊರೋನರಿ ಆಂಜಿಯೋಗ್ರಾಂ ಪರೀಕ್ಷೆ ನಡೆಸಲಾಗಿದೆ. ವಿರೂಪಾಕ್ಷಪ್ಪ ತಿಳಿಸಿದರು. ಪ್ರೌಢಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಶರಣರನ್ನು ನ್ಯಾಯಾಲಯದ ಆದೇಶದಂತೆ ಹೃದಯ ತಪಾಸಣೆಗಾಗಿ ಬುಧವಾರ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಕರೆತಂದು ಇಲ್ಲಿನ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಶಿವಮೂರ್ತಿ ಶರಣರಿಗೆ ಆಸ್ಪತ್ರೆಯಲ್ಲಿ ನೀಡಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ ಡಾ.ವಿರೂಪಾಕ್ಷಪ್ಪ, ‘ಶರಣರ ಆರೋಗ್ಯದ …
Read More »ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಿಂದ ಹಿಂದೆ ಸರಿದ ರಾಹುಲ್ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ‘ಒಬ್ಬ ವ್ಯಕ್ತಿ-ಒಂದು ಹುದ್ದೆ’ಯ ‘ಉದಯಪುರ ನಿರ್ಣಯ’ದ ಬದ್ಧತೆಯನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದು, ಜೈಪುರದ ಉನ್ನತ ಹುದ್ದೆಯ ಭವಿಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರ ಹೇಳಿಕೆ ಬಂದಿದೆ. ಈ ವರ್ಷದ ಮೇ ತಿಂಗಳಲ್ಲಿ, ಪಕ್ಷದ ‘ಚಿಂತನ್ ಶಿವೀರ್’ …
Read More »ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿ ಪ್ರತಿಭಟಿಸಿ ಕೆಸರು ನೀರಲ್ಲೇ ಸ್ನಾನ ಮಾಡಿದ ಶಾಸಕಿ
ರಾಂಚಿ: ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ (National Highway) ತುಂಬಿದ ಕೆಸರಲ್ಲಿ (Mud) ಕುಳಿತು ಶಾಸಕಿಯೊಬ್ಬರು (MLA) ಸ್ನಾನ (Bath) ಮಾಡಿ ಪ್ರತಿಭಟಿಸಿರುವ ಘಟನೆ ಜಾರ್ಖಂಡ್‌ನ (Jharkhand) ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಶಾಸಕಿ ಕೊಳಚೆ ನೀರಿನಲ್ಲಿ ಮಿಂದು ತಕ್ಷಣವೇ ರಸ್ತೆಯ ದುರಸ್ತಿ ಮಾಡುವಂತೆ ಒತ್ತಾಯಿಸಿದ್ದಾರೆ. ಮಹಾಗಾಮಾದ ಕಾಂಗ್ರೆಸ್ ಶಾಸಕಿ ದೀಪಿಕಾ ಪಾಂಡೆ ಸಿಂಗ್ ಅವರು ತಮ್ಮ ಮೇಲೆ ಕೆಸರು ನೀರನ್ನು ಸುರಿದುಕೊಂಡು, ಈ ರಸ್ತೆಯ ದುರಸ್ತಿಯನ್ನು ಕೈಗೊಂಡು ದೊಡ್ಡ ಗುಂಡಿಗಳನ್ನು ಮುಚ್ಚಲು ಈಗಿಂದೀಗಲೇ ಮುಂದಾಗದಿದ್ದರೆ, …
Read More »ಮೂಡಲಗಿ, ಕುಲಗೋಡ, ಖಾನಟ್ಟಿ ಹಾಗೂ ಬೆಟಗೇರಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳು ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ*
*ಮೂಡಲಗಿ*: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ …
Read More »ಭಾರತ್ ಜೋಡೋ ಯಾತ್ರಿಗಳ ಸಮಿತಿಗೆ ದೇಶಪಾಂಡೆ ಅಧ್ಯಕ್ಷ
ಬೆಂಗಳೂರು: ರಾಹುಲ್‌ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರಿಗಳ ರಾಜ್ಯ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ನೇಮಿಸಲಾಗಿದೆ. ದೇಶಪಾಂಡೆ ಅವರಿಗೆ ಹೊಣೆಗಾರಿಕೆ ನೀಡದ ಬಗ್ಗೆ ಪಕ್ಷದ ವಲಯದಲ್ಲಿ ಅಸಮಾಧಾನ ಉಂಟಾಗಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಈ ನೇಮಕಾತಿ ಆದೇಶ ಹೊರಬಿದ್ದಿದೆ. ದೇಶಪಾಂಡೆ ಅವರ ನೇತೃತ್ವದಲ್ಲಿ 22 ಮಂದಿ ಶಾಸಕರು, ಮಾಜಿ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳನ್ನು ಸಮಿತಿಗೆ ನೇಮಿಸಲಾಗಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಸಮಿತಿಗಳಲ್ಲಿ …
Read More »