ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ
ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ ಅಭಿಪ್ರಾಯಪಟ್ಟರು. ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು. ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ …
Read More »ಬೊಮ್ಮಾಯಿ ಆರ್ ಎಸ್‌ಎಸ್ ಕೈಗೊಂಬೆ: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಬಿಜೆಪಿಗೆ ಕಾಮಾಲೆ ರೋಗ ಬಂದಿದೆ. ಸುಳ್ಳು ಹೇಳುವುದು, ಸುಳ್ಳು ಹಬ್ಬಿಸುವುದು ಇವರೇ. ಬೊಮ್ಮಾಯಿ ಆರ್ ಎಸ್‌ಎಸ್ ಕೈಗೊಂಬೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಪೋಟೋ ಹಾಕಿದ್ದಾರೆ. ಫೋಟೋ ಹಾಕಲಿ ಬೇಡ ಎನ್ನುವುದಿಲ್ಲ. ಆದರೆ, ಸಾವರ್ಕರ್ ಫೋಟೋ ಹಾಕಿ ಟಿಪ್ಪು ಪೋಟೋ ತೆಗೆದಿದ್ದಾರೆ. ಹೀಗೆ ಮಾಡಿದರೆ ಗಲಭೆ ಆಗುವುದಿಲ್ಲವೆ ಎಂದು ಪ್ರಶ್ನಿಸಿದರು. ಈಶ್ವರಪ್ಪ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಲೇ …
Read More »ಬೆಳಗಾವಿಯ ಇಬ್ಬರು ಸೇರಿ ರಾಜ್ಯದ 7 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ
ನವದೆಹಲಿ: ರಾಜ್ಯದ 7 ಜನ ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ದರ್ಜೆ ನೀಡಿ ಕೇಂದ್ರ ಸರಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಸಚಿನ್ ಘೋರ್ಪಡೆ, ವಿಕ್ರಂ ಅಮಟೆ, ಸಂಜೀತ್ ವಿ.ಜೆ., ರಾಮ ಲಕ್ಷ್ಮಣಸಾ ಅರಸಿದ್ದಿ, ಬಾಬಾಸಾಬ ನೇಮಗೌಡ, ಗೋಪಾಲ ಎಂ. ಬ್ಯಾಕೋಡ್ ಹಾಗೂ ಮಹಾನಿಂಗ ನಂದಗಾವಿ ಅವರು ಸರಕಾರದ ಆದೇಶದನ್ವಯ ಐಪಿಎಸ್ ಕರ್ನಾಟಕ ಕೆಡರ್ ಅಧಿಕಾರಿಗಳಾಗಿ ಮೇಲ್ದರ್ಜೆಗೇರಿದವರು. ಈ ಎಲ್ಲ ಅಧಿಕಾರಿಗಳು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ನಾನಾ ಹುದ್ದೆಗಳನ್ನು ಖಾಲಿ …
Read More »ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಮುಖಂಡ
ಮುಂಬೈ: ಶಿವಸೇನಾ ಮುಖಂಡರೊಬ್ಬರು ಖಾಸಗಿ ಅಡುಗೆ ವ್ಯವಸ್ಥಾಪಕನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಮಹಾರಾಷ್ಟ್ರದ ತಮ್ಮ ಕ್ಷೇತ್ರವಾದ ಹಿಂಗೋಲಿಯಲ್ಲಿ ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಮಧ್ಯಾಹ್ನದ ಊಟ ಬಡಿಸಿದ ಕಾರಣಕ್ಕೆ ಶಿವಸೇನೆಯ ಬಂಡಾಯ ಶಾಸಕ ಸಂತೋಷ್ ಬಂಗಾರ್ ಅವರು ಅಡುಗೆ ವ್ಯವಸ್ಥಾಪಕನನ್ನು ನಿಂದಿಸಿ ಅವರಿಗೆ ಎಲ್ಲರ ಸಮ್ಮುಖದಲ್ಲೇ ಕಪಾಳಮೋಕ್ಷ ಮಾಡಿದರು. ಘಟನೆಯ ವಿಡಿಯೋ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗಮನಾರ್ಹವೆಂದರೆ, ಬಂಗಾರ್ ಅವರು ಈ ಘಟನೆಗೆ ಕೆಲವೇ ನಿಮಿಷ ಮೊದಲು ವಿಧಾನಸಭೆಯಲ್ಲಿ ಮುಖ್ಯಮಂತ್ರಿ …
Read More »ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!
ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ಮನವಿ ಮಾಡಲಾಗಿತ್ತು. ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್ ಮಾಡಿದ್ದಾರೆ. …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿ. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ರ್ಯಾಲಿ.
ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್‍ಎಸ್‍ಎಫ್‍ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು …
Read More »ಹೂಡಿಕೆ ನೆಪದಲ್ಲಿ ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ,ಕೊಲೆ ಬೆದರಿಕೆ
ಬೆಂಗಳೂರು: ಪರಿಚಯಸ್ಥನಿಂದಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಈ ಸಂಬಂಧ 32 ವರ್ಷದ ಸಂತ್ರಸ್ತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಮಿಳುನಾಡು ಮೂಲದ ರಮೇಶ್ (53) ತಲೆ ಮರೆಸಿಕೊಂಡಿದ್ದಾನೆ. ಬೆಂಗಳೂರು ಮೂಲದ ಸಂತ್ರಸ್ತೆ ಚಿಕ್ಕವಯಸ್ಸಿನಲ್ಲಿ ತಮಿಳುನಾಡಿನಲ್ಲಿ ಪೋಷಕರ ಜತೆ ವಾಸವಾಗಿದ್ದಾಗ ಆರೋಪಿ ರಮೇಶ್ ಪರಿಚಯವಾಗಿದ್ದ. ಮಹಿಳೆಗೆ ತಂದೆ ಸಮಾನನಾಗಿದ್ದ ಆರೋಪಿಯು ತಮಿಳುನಾಡಿನಲ್ಲಿ ನೆಲೆಸಿದ್ದ. ಸಂತ್ರಸ್ತೆ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿ ನೂತನವಾಗಿ ಓಟಿಟಿ …
Read More »ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ
ಪುಣೆ: ಮಹಾರಾಷ್ಟ್ರ ಮತ್ತು ಕರ್ನಾಟಕದ ಸಂಬಂಧ ಬಹಳ ವರ್ಷಗಳದ್ದು. ನಮ್ಮ ಸಾಮರಸ್ಯ ಬೆಳೆಯಬೇಕು. ಮನಸ್ಸು ಒಂದಾದರೆ ಎಲ್ಲ ಸಾಧನೆ ಮಾಡಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪುಣೆಯಲ್ಲಿ ಬಂಟರ ಕನ್ನಡ ಸಂಘ ಆಯೋಜಿಸಿದ್ದ ಕನ್ನಡ ಭವನದ ನಾಲ್ಕನೇ ವಾರ್ಷಿಕೋತ್ಸವವ ಹಾಗೂ ಕಲ್ಪವೃಕ್ಷ ಶಕುಂತಲಾ ಜಗನ್ನಾಥ ಬಿ ಶೆಟ್ಟಿ ಅವರ ಸಮಾಜ ಕಲ್ಯಾಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಲ್ಲಿ ಕನ್ನಡಿಗರು ಹೆಮ್ಮೆ ಪಡುವ ಸಾಧನೆ ಮಾಡಿದ್ದಾರೆ. …
Read More »ವಿವಾದದ ಹೇಳಿಕೆಯೇ ʼಲಾಲ್ ಸಿಂಗ್ ಚಡ್ಡಾʼ ಕ್ಕೆ ಮುಳುವಾಯಿತೇ? : ಟ್ರೋಲ್ ಆದ್ರು ಬೇಬೋ
ಮುಂಬಯಿ: ಮಿಸ್ಟರ್ ಪರ್ಫೆಕ್ಟ್ ಆಮಿರ್ ಖಾನ್ ನಟನೆಯ ಬಹು ನಿರೀಕ್ಷಿತ ʼಲಾಲ್ ಸಿಂಗ್ ಚಡ್ಡಾʼ ಸಿನಿಮಾ ರಿಲೀಸ್ ಆಗಿ ದೊಡ್ಡ ಮಟ್ಟದ ಸದ್ದು ಮಾಡುತ್ತದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಸಿನಿಮಾದ ಮೊದಲ ದಿನದ ಗಳಿಕೆಯಿಂದ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿಲ್ಲ ಎನ್ನುವುದು ಸಾಬೀತಾಗಿದೆ. 1994 ರಲ್ಲಿ ಬಂದ ʼಫಾರೆಸ್ಟ್ ಗಂಪ್ʼ ರಿಮೇಕ್ ಚಿತ್ರವಾಗಿರುವ ʼಲಾಲ್ ಸಿಂಗ್ ಚಡ್ಡಾʼದಲ್ಲಿ ಬಹು ಸಮಯದ ಬಳಿಕ ಆಮಿರ್ ಖಾನ್ ಹಾಗೂ ಕರೀನಾ …
Read More »