ಬೆಳಗಾವಿ: ಕಳೆದ ಮೂರು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿ ಸೇರಿ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರಂತರ ಮಳೆಗೆ ಕುಂದಾನಗರಿ ಜನರ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದ್ದು, 17ಸೇತುವೆಗಳು ಮುಳುಗಡೆಯಾಗಿದ್ದಲ್ಲದೇ 36 ಮನೆಗಳ ನೆಲಸಮವಾಗಿವೆ. ಪಶ್ಚಿಮಘಟ್ಟ ಪ್ರದೇಶ ಸೇರಿ ಬೆಳಗಾವಿ ಜಿಲ್ಲೆ ಸೇರಿ ಜಿಲ್ಲಾದ್ಯಂತ ಶನಿವಾರ ಸಂಜೆಯಿಂದಲೇ ಸುರಿಯುತ್ತಿರುವ ಮಳೆಗೆ ಘಟಪ್ರಭಾ, ಮಲಪ್ರಭಾ ಹಾಗೂ ಹಿರಣ್ಯಕೇಶಿ ನದಿಗಳಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ. ಘಟಪ್ರಬಾ ನದಿಯಲ್ಲಿ ಭಾನುವಾರ ಸಂಜೆಯ ವೇಳೆಗೆ …
Read More »ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*
ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …
Read More »ಸೈಮಾ 2022: ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಯಾರ ಪಾಲು? ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
ನಿನ್ನೆ ( ಸೆಪ್ಟೆಂಬರ್ 10 ) ಈ ಬಾರಿಯ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ಮೊದಲ ದಿನದ ಕಾರ್ಯಕ್ರಮ ಜರುಗಿತು. ದಕ್ಷಿಣ ಭಾರತ ಚಿತ್ರರಂಗದ ನಾಲ್ಕೂ ಭಾಷೆಯ ಚಿತ್ರಗಳಿಗೆ ಪ್ರತ್ಯೇಕವಾಗಿ ಈ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಟ್ಟು 19 ವಿಭಾಗಗಳಲ್ಲಿ ಈ ಬಾರಿ ಕಲಾವಿದರ ನಾಮಿನೇಷನ್ ನಡೆದಿತ್ತು ಹಾಗೂ ಸೈಮಾ ವೆಬ್ ತಾಣದಲ್ಲಿ ಸಿನಿ ರಸಿಕರಿಗೆ ಬೆಸ್ಟ್ ಯಾರು ಎಂದು ವೋಟ್ ಮಾಡುವ …
Read More »ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಪ್ರದೀಪ ರಜಪೂತಗೆ ಎಸ್ ಡಿ ಎಮ್ ಸಿ ವತಿಯಿಂದ ಸತ್ಕಾರ
ಕೊಟಬಾಗಿ:ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ದಾಸರಟ್ಟಿ ಈ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಇವರ ಪ್ರತಿಭೆ ಯನ್ನು ಗುರುತಿಸಿ 2022-23 ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕ ಪ್ರದೀಪ ರಜಪೂತ ರವರಿಗೆ ಶಾಲೆಯ ಎಸ್ ಡಿ ಎಮ್ ಸಿ ಸಿಬ್ಬಂದಿ ವರ್ಗದವರು,ಶಿಕ್ಷಕ ಬಳಗ, ಹಾಗೂ ಊರಿನ ಗ್ರಾಮಸ್ಥರು ಸತ್ಕಾರ ಸಮಾರಂಭ ಕಾರ್ಯಕ್ರಮ ಶಾಲೆಯಲ್ಲಿ ಆಯೋಜಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ …
Read More »ಮಾಲಿನ್ಯ ಪ್ರಮಾಣಪತ್ರ ಇಲ್ಲವೆಂದು ಎಲೆಕ್ಟ್ರಿಕ್ ಸ್ಕೂಟರ್‌ಗೆ ದಂಡ ಹಾಕಿದ ಪೊಲೀಸ್!
ತಿರುವನಂತಪುರ: ಎಲೆಕ್ಟ್ರಿಕ್ ವಾಹನ ಒಂದಕ್ಕೆ ವಾಯು ಮಾಲಿನ್ಯ ಪ್ರಮಾಣಪತ್ರ (ಪಿಯುಸಿ) ಕೊಟ್ಟಿಲ್ಲ ಎಂದು ಟ್ರಾಫಿಕ್ ಪೊಲೀಸರು ದಂಡ ಹಾಕಿರುವ ವಿಲಕ್ಷಣ ಘಟನೆ ಕೇರಳದಲ್ಲಿ ನಡೆದಿದೆ. ಅಸಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ ಪಿಯುಸಿ ಪ್ರಮಾಣಪತ್ರ ಅಗತ್ಯ ಇಲ್ಲ. ಆದರೆ, ಕೇರಳದ ಮಣಪ್ಪುರಂ ಜಿಲ್ಲೆಯ ನೀಲಾಂಚರಿಯಲ್ಲಿ ಯುವಕನೊಬ್ಬ ‘ಏಥರ್’ ಕಂಪನಿಯ ತನ್ನ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಸ್ಥಳೀಯ ಟ್ರಾಫಿಕ್ ಪೊಲೀಸರು ತಡೆದು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಬಳಿಕ ₹250 …
Read More »ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್
ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್‌ಗೆ ಸವಾಲ್ ಹಾಕಿದರು. …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ. ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಒಂದು ಲಡ್ಡುವಿನ ಬೆಲೆ 24.60 ಲಕ್ಷ ರೂ! ಹರಾಜಿನಲ್ಲಿ ದಾಖಲೆ ಬರೆದ ಬಾಲಾಪುರದ ಗಣಪ
ಹೈದರಾಬಾದ್: ಗಣೇಶನ ಹಬ್ಬದ ಲಡ್ಡು ಎಂದಾಕ್ಷಣ ನೆನಪಾಗುವುದು ಹೈದರಾಬಾದ್ನ ಬಾಲಾಪುರ. ಏಕೆಂದರೆ ಪ್ರತಿ ವರ್ಷವೂ ಗಣೇಶನಿಗೆ ಇಟ್ಟ ಲಡ್ಡು ದಾಖಲೆ ಪ್ರಮಾಣದಲ್ಲಿ ಇಲ್ಲಿ ಹರಾಜಾಗುತ್ತದೆ. ಒಂಬತ್ತು ದಿನಗಳವರೆಗೆ ಬಾಲಾಪುರದ ಗಣೇಶೋತ್ಸವ ನಡೆಯುತ್ತದೆ. 9ನೇ ದಿನ ಗಣೇಶ ಲಡ್ಡುವಿನ ಹರಾಜು ನಡೆಯುತ್ತದೆ. ಕಳೆದ ವರ್ಷ 18 ಲಕ್ಷ 90 ಸಾವಿರ ರೂಪಾಯಿಗಳಿಗೆ ಲಡ್ಡು ಮಾರಾಟವಾಗಿತ್ತು. ಆದರೆ ಈ ಬಾರಿ ಹಿಂದಿನ ಎಲ್ಲಾ ದಾಖಲೆಗಳನ್ನೂ ಮುರಿದು ಲಡ್ಡು ಅತಿ ಹೆಚ್ಚಿನ ಬೆಲೆಗೆ ಮಾರಾಟವಾಗಿದೆ. ಬಾಲಾಪುರ …
Read More »ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ: ಸಂಜಯ ಪಾಟೀಲ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಡಬ್ಬಿ ಹಂಚುವ ಕೆಲಸ ಶುರುವಾಗಿದೆ. ಆ ಡಬ್ಬಿ ಖಾಲಿ ಇದೆಯೋ..? ತುಂಬಿದೆಯೋ..? ಗೊತ್ತಿಲ್ಲ ಎಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಾಸಕ ಸಂಜಯ್ ಪಾಟೀಲ್ ನಾನು ಬಿಜೆಪಿ ಜಿಲ್ಲಾಧ್ಯಕ್ಷನಾಗಿ ಪಕ್ಷದ ಸಂಘಟನೆ ಮಾಡುತ್ತಿದ್ದೇನೆ. ನಾನು 10 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮುಂದೆಯೂ ಶಾಸಕನಾಗಬೇಕು ಎಂಬ ಆಸೆಯಿದೆ. ಆ ಪ್ರಕಾರ …
Read More »ರಾಣಿ ಎಲಿಝಬೆತ್ ನಿಧನ
ಲಂಡನ್: ಬ್ರಿಟನ್ ರಾಣಿ ಎಲಿಝಬೆತ್ || ಗುರುವಾರ ನಿಧರಾಗಿದ್ದಾರೆ. 96 ವರ್ಷದ ಎಲಿಝಬೆತ್ ಅವರ ಆರೋಗ್ಯದಲ್ಲಿ ಏರುಪೇರಾದ ಬಳಿಕ ವೈದ್ಯರ ನಿಗಾದಲ್ಲಿ ಅವರನ್ನು ಇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳದಿದ್ದಾರೆ ಎಂದು ಬಂಕಿಂಗ್‌ಹ್ಯಾಮ್ ಅರಮನೆ ಹೇಳಿಕೆ ಬಿಡುಗಡೆ ಮಾಡಿದೆ. “ಇಂದು ಬೆಳಗ್ಗೆ ಹೆಚ್ಚಿನ ಪರೀಕ್ಷೆಯ ಬಳಿಕ, ರಾಣಿಯ ವೈದ್ಯರು ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಅವರು ವೈದ್ಯಕೀಯ ನಿಗಾದಲ್ಲಿ ಉಳಿಯಲು ಶಿಫಾರಸು ಮಾಡಿದ್ದರು. ನಂತರ …
Read More »
Laxmi News 24×7