Breaking News

ರಾಷ್ಟ್ರೀಯ

ಪೋಸ್ಟ್‌ ಇಂಡಿಯಾ ಧ್ವಜಕ್ಕೆ ಜಿಎಸ್ಟಿ, ವಿತರಣಾ ಶುಲ್ಕವಿಲ್ಲ

ಹೊಸದಿಲ್ಲಿ: ಭಾರತದ ಸ್ವಾತ್ರಂತ್ಯೋತ್ಸವದ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಹರ್‌ ಘರ್‌ ತಿರಂಗಾ ಅಭಿಯಾನ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಪೋಸ್ಟ್‌ (ಭಾರತೀಯ ಅಂಚೆ ಇಲಾಖೆ) ಹೊಸ ಆಫ‌ರ್‌ ನೀಡಿದೆ. ಇಂಡಿಯಾ ಪೋಸ್ಟ್‌ ಮೂಲಕ ತ್ರಿವರ್ಣ ಧ್ವಜವನ್ನು ಮಾರಾಟ ಮಾಡಲು ಇಲಾಖೆ ಮುಂದಾಗಿದೆ. ಜಿಎಸ್‌ಟಿ ಶುಲ್ಕವಿಲ್ಲದೆ ಈ ಧ್ವಜವನ್ನು ಖರೀದಿಸಬಹುದಾಗಿದೆ. ಅಲ್ಲದೆ, ತಮ್ಮ ವೆಬ್‌ಸೈಟ್‌ನಲ್ಲಿ ಖರೀದಿಸಲಾಗುವ ಈ ಧ್ವಜವನ್ನು ಯಾವುದೇ ವಿತರಣಾ ಶುಲ್ಕ ಇಲ್ಲದೇ (ಡಿಲಿವರಿ ಚಾರ್ಜಸ್‌) ಗ್ರಾಹಕರ ವಿಳಾಸಕ್ಕೆ ತಲುಪಿಸಲಾಗುವುದು …

Read More »

(ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎಂಜಿಎನ್‌ಆರ್‌ಇಜಿಎಸ್‌)ಗೆ ಹೆಚ್ಚುವರಿಯಾಗಿ 15 ಸಾವಿರ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಖಾತೆಯಿಂದ ಹೆಚ್ಚುವರಿಯಾಗಿ ಶೇ.20 ಮೊತ್ತ ನೀಡಬೇಕು ಎಂದು ಕೋರಿಕೆ ಸಲ್ಲಿಕೆಯಾಗಿದ್ದು, ಅದಕ್ಕೆ ಸಮ್ಮತಿ ನೀಡುವ ಸಾಧ್ಯತೆಗಳು ಅಧಿಕವಾಗಿವೆ.   ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ ಸೇರಿದಂತೆ ಹಲವು ಸರ್ಕಾರಗಳಿಂದಲೂ ಕೂಡ ಹೆಚ್ಚುವರಿ ಮೊತ್ತ ನೀಡುವ ಬಗ್ಗೆ ಒತ್ತಡಗಳು ಹೆಚ್ಚುತ್ತಿವೆ. ರಾಜ್ಯಗಳು 5,517.87 …

Read More »

ಶಿರಡಿ ಸಾಯಿಬಾಬಾಗೆ ಭಕ್ತ 100 ಗ್ರಾಂ ತೂಕದ ಬಂಗಾರದ ಕೊಳಲು ಸಮರ್ಪಿಸಿದ್ದಾರೆ.

ಮಹಾರಾಷ್ಟ್ರ): ಮಹಾರಾಷ್ಟ್ರದ ಅಹ್ಮದ್​​ ನಗರ ಜಿಲ್ಲೆಯಲ್ಲಿರುವ ಪ್ರಸಿದ್ಧ ಶಿರಡಿ ಸಾಯಿಬಾಬಾಗೆ ದೆಹಲಿ ಮೂಲದ ಭಕ್ತರೊಬ್ಬರು ಚಿನ್ನದ ಕೊಳಲು ಅರ್ಪಿಸಿ ತಮ್ಮ ಭಕ್ತಿಯನ್ನು ಮರೆದಿದ್ದಾರೆ. ಅಂದಾಜು 100 ಗ್ರಾಂ ತೂಕದ ಈ ಬಂಗಾರದ ಕೊಳಲು 4.85 ಲಕ್ಷ ರೂ. ಬೆಲೆ ಬಾಳುತ್ತದೆ. ದೆಹಲಿಯ ರಿಷಬ್ ಲೋಹಿಯಾ ಎಂಬುವವರೇ ಶಿರಡಿ ಸಾಯಿಬಾಬಾಗೆ ಚಿನ್ನದ ಕೊಳಲು ಅರ್ಪಿಸಿರುವ ಭಕ್ತರು. ತಮ್ಮ ಕುಟುಂಬದ ಸಮೇತ ಶಿರಡಿಗೆ ಬಂದು ಇದನ್ನು ದೇವರಿಗೆ ಸಮರ್ಪಿಸಿದ್ದಾರೆ. ಸಾಯಿ ಬಾಬಾ ನಮಗೆ ಶ್ರೀಕೃಷ್ಣನ …

Read More »

ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಅಕ್ರಮ: ಗೋಕಾಕ್ ಮೂಲದ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಭಾನುವಾರ ಗೋಕಾಕದ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ನಕಲಿಗಾಗಿ ಸ್ಮಾರ್ಟ್ ವಾಚ್ ಉಪಯೋಗಿಸಲೆತ್ನಿಸಿದ ಆರೋಪದಲ್ಲಿಅಭ್ಯರ್ಥಿಯೋರ್ವನನ್ನುಗೋಕಾಕ ಶಹರ ಠಾಣೆ ಪೊಲೀಸರು ಬಂಧಿಸಿ ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗೋಕಾಕ್ ತಾಲೂಕಿನ ಮೂಡಲಗಿ ಗ್ರಾಮದ ಸಿದ್ದಪ್ಪ ಮದಿಹಳ್ಳಿ(20) ಬಂಧಿತ ಆರೋಪಿ. ಕಳೆದ ಭಾನುವಾರ ಗೋಕಾಕ ನಗರದ ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ನಡೆದ ಪರೀಕ್ಷೆಯಲ್ಲಿ ಬಂಧಿತ ಆರೋಪಿ ಸ್ಮಾರ್ಟ್ ವಾಚ್ ನಲ್ಲಿ ಪ್ರಶ್ನೆ ಪತ್ರಿಕೆಯ ಫೋಟೋ …

Read More »

ಈ 4 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯದಂತೆ ವಿದ್ಯಾರ್ಥಿಗಳಿಗೆ VTU ಸೂಚನೆ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದ ಜೊತೆಗೆ ಸಿಇಟಿ ಫಲಿತಾಂಶವೂ ಈಗಾಗಲೇ ಪ್ರಕಟಗೊಂಡಿದೆ. ಹೀಗಾಗಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣ ಕೋರ್ಸ್ ಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರ ಮಧ್ಯೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆಯೊಂದನ್ನು ನೀಡಿದೆ.   ಅಗತ್ಯ ಮೂಲ ಸೌಕರ್ಯ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಇಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಈ ಕಾಲೇಜಿನಲ್ಲಿ ಪ್ರವೇಶ ಪಡೆಯದಂತೆ ಸೂಚನೆ ನೀಡಲಾಗಿದೆ. ಅಲ್ಲದೆ ಈ ಕಾಲೇಜುಗಳಲ್ಲಿ ಸೀಟು ಹಂಚಿಕೆ …

Read More »

ಅನುಕಂಪದ ಉದ್ಯೋಗ’ ಹಕ್ಕಲ್ಲ – ‘ಸುಪ್ರೀಂ ಕೋರ್ಟ್’ ಮಹತ್ವದ ಅಭಿಪ್ರಾಯ

ನವದೆಹಲಿ: ಉದ್ಯೋಗಿ ಮರಣ ಹೊಂದಿದ ನಂತ್ರ ಅವರ ಕುಟುಂಬದ ಓರ್ವ ಸದಸ್ಯನಿಗೆ ಅನುಕಂಪದ ಆಧಾರದಲ್ಲಿ ( Compassionate employment ) ನೀಡುವ ಉದ್ಯೋಗ ಸ್ಥಾಪಿತವಾದ ಹಕ್ಕಲ್ಲ. ಈ ರೀತಿಯ ಉದ್ಯೋಗ ಪಡೆದವರಿಂದ ಕರ್ತವ್ಯ ಲೋಪಗಳಾದರೇ, ಅವರಿಗೆ ನೀಡಲಾದ ಹುದ್ದೆಯ ಅರ್ಹತೆಯನ್ನು ಹೊಂದುವಲ್ಲಿ ವಿಫಲವಾದರೇ, ಅಂತಹವರನ್ನು ಕೆಲಸದಿಂದ ತೆಗೆಯ ಬಹುದು ಎಂದು ಸುಪ್ರೀಂ ಕೋರ್ಟ್ ( Supreme Court ) ಮಹತ್ವದ ಅಭಿಪ್ರಾಯ ಪಟ್ಟಿದೆ.   ಈ ಸಂಬಂಧ ಪ್ರಕರಣವೊಂದರ ವಿಚಾರಣೆ …

Read More »

ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.

ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.   ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …

Read More »

ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ

ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.   ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ. ಆಗಸ್ಟ್ 5 …

Read More »

ನಾನು ಹಾಕಿದ್ದು ಬಟ್ಟೆ ಶೂ, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ : ಕತ್ತಿ ಪ್ರತಿಕ್ರಿಯೆ

ಹನೂರು: ಇಂದು ಮೈಸೂರಿನ ವೀರನಹೊಸಹಳ್ಳಿಯಲ್ಲಿ ಶೂ ಹಾಕಿಕೊಂಡು ಗಜಪಡೆಗೆ ಪೂಜೆ ಸಲ್ಲಿಸಿ ಸಾಕಷ್ಟು ಟೀಕೆಗೆ ಗುರಿಯಾದ ಕುರಿತು ಅರಣ್ಯ ಸಚಿವ ಉಮೇಶ್ ಕತ್ತಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹನೂರು ತಾಲೂಕಿನ ಮೇಕೆದಾಟು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಉಮೇಶ್ ಕತ್ತಿ ತಾನು ಹಾಕಿರುವುದು ಬಟ್ಟೆ ಶೂ ಆಗಿದ್ದು, ಮಳೆ ಆಗಿದ್ದರಿಂದ ಶೂ ಬಿಚ್ಚಲಿಲ್ಲ, ಪೂಜೆ ಮಾಡುವ ಮುನ್ನ ಬಿಚ್ಚಿದ್ದೆ ಬಳಿಕ‌ ಆನೆಗಳಿಗೆ ಸ್ವಾಗತ ಕೋರುವಾಗ ಹಾಕಿಕೊಂಡಿದ್ದೆ, …

Read More »

ಈ ಕಲಾವಿದನ ಜೀವನಗಾಥೆ ಕೇಳಿದ್ರೆ ಕಲ್ಲು ಮನಸ್ಸಿನವರ ಕಣ್ಣಲ್ಲಿಯೂ ನೀರು ಬರುತ್ತದೆ

BIG ಬಾಸ್ ಕನ್ನಡ ಒಟಿಟಿಯ ಬಹು ನಿರೀಕ್ಷಿತ ಗ್ರ್ಯಾಂಡ್ ಪ್ರೀಮಿಯರ್ ನಿನ್ನೆ ರಾತ್ರಿ ನಡೆಯಿತು. ಜನಪ್ರಿಯ ರಿಯಾಲಿಟಿ ಶೋನ ಮೊದಲ ಒಟಿಟಿ ಸೀಸನ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕ್ರೇಜ್‌ ಅನ್ನು ಸೃಷ್ಟಿಸಿದೆ. ವಿವಿಧ ವೃತ್ತಿಗಳ 16 ಸೆಲೆಬ್ರಿಟಿ ಸ್ಪರ್ಧಿಗಳು ದೊಡ್ಮೆನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಬರುವ ಹಲವು ಕಂಟೆಸ್ಟಂಟ್‌ಗಳ ಹಿಂದೆ ನೋವಿನ ಕಥೆ ಇರುತ್ತದೆ. ಜೀವನದಲ್ಲಿ ಹತ್ತಾರು ಕಷ್ಟಗಳನ್ನು ಎದುರಿಸಿ, ನೋವನ್ನು ನುಂಗಿ ಬದುಕಿನಲ್ಲಿ ಸಾಧನೆಗೈದಿರುತ್ತಾರೆ. ಅದೇ …

Read More »