ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ, ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಮುಂದಿನ ಆರು ತಿಂಗಳಲ್ಲಿ ಪತನವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಹಗರಣಗಳು ಒಂದಾದ ಮೇಲೊಂದರಂತೆ ಬಯಲಾಗುತ್ತಿದ್ದು, ಮಾಧ್ಯಮಗಳಲ್ಲಿ ಪ್ರತಿದಿನವೂ ಸರ್ಕಾರದ ಹಗರಣಗಳು …
Read More »ಬಾರದ ʼಗೃಹಲಕ್ಷ್ಮಿʼ ಹಣ, ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ!
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೇಲೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಅದರಂತೆ ಒಂದೊಂದೇ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿತ್ತು. ಆದರೆ ಈ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆವರೆಗೆ ಉತ್ತಮವಾಗಿಯೇ ಜಾರಿಯಾಗಿದ್ದವು. ಲಕ್ಷಾಂತರ ಜನ ಮಹಿಳೆಯರು ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಗೃಹಜ್ಯೋತಿಯಡಿ ಉಚಿತ ವಿದ್ಯುತ್, ಅನ್ನಭಾಗ್ಯ ಹಾಗೂ ಮನೆ ಯಜಮಾನಿಗೆ …
Read More »ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈಧ್ಯಕೀಯ, ಇಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2024-25ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. 2025ರ ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ಶೈಕ್ಷಣಿಕ …
Read More »ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿವೈ ಗ್ರಾಮ ಪಂಚಾಯ್ತಿಗೆ ಶುಕ್ರವಾರ ಜರುಗಿದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಗದೀಶ ಮಾಯಪ್ಪ ಡೊಳ್ಳಿ ಹಾಗೂ ಉಪಾಧ್ಯಕ್ಷೆಯಾಗಿ ಕಾಳವ್ವ ಗೌಡನವರ ಅವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಗೋಕಾಕ ನೀರಾವರ ಇಲಾಖೆಯ ಎಂಜಿನಿಯರ್ ನವೀನಕುಮಾರ ಕಾರ್ಯ ನಿರ್ವಹಿಸಿದರು. ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮದ ಗಣ್ಯರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಸನ್ಮಾನಿಸಿದರು. ಗ್ರಾಮ ಪಂಚಾಯ್ತಿ ಪಿಡಿಒ ಉದಯಕುಮಾರ ಬೆಳ್ಳುಂಡಗಿ, ಗಣ್ಯರಾದ ಅಜ್ಜಪ್ಪ ಗಿರಡ್ಡಿ, ಗೋಪಾಲ …
Read More »ಜಮೀನಿಗೆ ಅಧಿಕಾರಿಗಳ ಭೇಟಿ
ಸತ್ತಿಗೇರಿ: ಸ್ಥಳೀಯ ರೈತರ ಜಮೀನುಗಳಿಗೆ ಸಹಾಯಕ ಕೃಷಿ ನಿರ್ದೇಶಕ ಶಿವಪ್ರಕಾಶ ಪಾಟೀಲ ಭೇಟಿ ನೀಡಿ ವಿವಿಧ ಬೆಳೆಗಳನ್ನು ವೀಕ್ಷಿಸಿದವರು. ‘ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾದ ಕಾರಣ ಹೆಸರು, ಗೋವಿನ ಜೋಳ, ಹತ್ತಿ ಬೆಳೆಗಳು ಉತ್ತಮ ಸ್ಥಿತಿಯಲ್ಲಿವೆ. ಅಲ್ಲಲ್ಲಿ ರೋಗ ಮತ್ತು ಕೀಟ ಬಾಧೆ ಕ್ಷೇತ್ರಗಳಿಗೆ ಭೇಟಿ ನೀಡಿ ಹತೋಟಿ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು. ರೈತರು ಆದಷ್ಟು ಅಂತರ ಬೆಳೆ ಮತ್ತು ಮಿಶ್ರ ಬೆಳೆ ಮೊರೆ …
Read More »ಕುರಿ, ಮೇಕೆಗಳಿಗೆ ಜಂತುನಾಶಕ ಔಷಧ ವಿತರಣೆ
ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಕುರಿಗಾರರು ನೆಲೆಸಿದ ಸ್ಥಳಗಳಿಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾವಿ ಹಾಗೂ ಮುಖ್ಯ ಪಶುವೈಧ್ಯಾಧಿಕಾರಿ ಡಾ.ಶ್ರೀಕಾಂತ ಗಾಂವಿ ಅವರು ಕುರಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಔಷಧಗಳನ್ನು ವಿತರಿಸಿದರು. ಪಶು ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿತರಿಸುವ ಔಷಧೋಪಚಾರಗಳನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರಸ್ತುತ ದಿನಗಳಲ್ಲಿ ಕುರಿ ಮತ್ತು ಆಡುಗಳಿಗೆ ಹಲವಾರು ರೀತಿಯ ಕಾಯಿಲೆಗಳು, ಕಾಲುಬೆನಿ ಮತ್ತು ಸಾಂಕ್ರಮಿಕ ರೋಗಗಳು ಹರಡದಂತೆ ಎಚ್ಚರವಹಿಸಬೇಕು. ಹೆಚ್ಚಿನ …
Read More »ಹೊರೆಯಾದರೂ ಗ್ಯಾರಂಟಿ ನಿಲ್ಲದು: ಶಾಸಕ ವಿಶ್ವಾಸ್ ವೈದ್ಯ
ಸವದತ್ತಿ: ಸರ್ಕಾರಕ್ಕೆ ಹೊರೆಯಾದರೂ ಜನೋಪಯೋಗಿ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ತಾಲ್ಲೂಕಿನ 89 ಸಾವಿರ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪೈಕಿ ಈಗಾಗಲೇ 84,174 ಅರ್ಜಿ ಸಲ್ಲಿಕೆಯಾಗಿವೆ. ಅದರಲ್ಲಿ ಶೇ 90 ಕುಟುಂಬದ ಯಜಮಾನಿ ಖಾತೆಗೆ ಹಣ ಜಮೆಯಾಗುತ್ತಿದೆ. ಕೆಲ ತಾಂತ್ರಿಕ ಸಮಸ್ಯೆಗಳಿಂದ ಇನ್ನು ಕೆಲವಷ್ಟು …
Read More »ರಾಜ್ಯದಲ್ಲಿ ವಾಡಿಕೆಗಿಂತ ಶೇ.50ರಷ್ಟು ಅಧಿಕ ಮಳೆ
ಜು.20-ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಜುಲೈ ಒಂದರಿಂದ ಇದುವರೆಗೆ ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಹವಾಮಾನ ಮುನ್ಸೂನೆಗಳಿವೆ. ಕರಾವಳಿ ಜಿಲ್ಲೆಗಳಿಗೆ ಇಂದೂ ಕೂಡ ರೆಡ್ ಅಲರ್ಟ್ ನೀಡಲಾಗಿದ್ದು, ನಾಳೆಯಿಂದ ಮೂರು ದಿನಗಳ ಆರೆಂಜ್ ಅಲರ್ಟ್‍ನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯ ನೈಸರ್ಗಿಕ …
Read More »ದುಬಾರಿ ಆಗುತ್ತಾ ಸಿನಿಮಾ ಟಿಕೆಟ್?
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ (Sandalwood) ಗರಬಡಿದಂತೆ ಆಗಿದ್ದು ಜನರು ಥಿಯೇಟರ್ಗೆ (Theater) ಬರದ ಕಾರಣ ಹಲವು ಸಿನಿಮಾಗಳು ಬಾಕ್ಸ್ ಆಫೀಸ್ (Box Office) ಕಲೆಕ್ಷನ್ ಇಲ್ಲದೆ ಮಕಾಡೆ ಮಲಗುತ್ತಿವೆ. ದೊಡ್ಡ ದೊಡ್ಡ ನಟರು ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಿಲ್ಲ, ಇನ್ನು ದರ್ಶನ್ (Darshan) ಕೊಲೆ ಆರೋಪದಲ್ಲಿ ಜೈಲು ಸೇರಿದ್ದು ಇಂತಾ ಸಮಯದಲ್ಲಿ ಜನರನ್ನು ಥಿಯೇಟರ್ಗೆ ಕರೆತರುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಈ ನಡುವೆ ರಾಜ್ಯ ಸರ್ಕಾರ ಸಿನಿಮಾ ಟಿಕೆಟ್ (Movie …
Read More »ವಿಟಿಯು: 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ (ವಿಟಿಯು) ಗುರುವಾರ ನಡೆದ 24ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಹಾಗೂ 52,615 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಚಿಕ್ಕಬಳ್ಳಾಪುರದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸದ್ಗುರು ಮಧುಸೂದನ್ ಸಾಯಿ, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಹರಿ ಕೆ.ಮರಾರ್ ಅವರಿಗೆ ‘ಡಾಕ್ಟರ್ ಆಫ್ ಸೈನ್ಸ್’ ಪ್ರದಾನ ಮಾಡಿದರು.ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಎಂ.ಎಸ್.ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನ …
Read More »