ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆ ಮುಂದೆ ಮೌನ ಪ್ರತಿಭಟನೆ ನಡೆಸಲು ಮುಂದಾದ ಚನ್ನಪಟ್ಟಣ ಮೂಲದ ಕಾಂಗ್ರೆಸ್ ಮುಖಂಡೆ ನವ್ಯಶ್ರೀ ರಾವ್ಗೆ ಅವಕಾಶ ಸಿಕ್ಕಿಲ್ಲ. ಈ ಕುರಿತು ಸುದ್ದಿಗಾರರೊಂದಿಗೆ ನವ್ಯಶ್ರೀ ಅಸಮಾಧಾನ ಹೊರಹಾಕಿದ್ದಾರೆ. ‘ಶುಕ್ರವಾರ ಸಂಜೆ ದೆಹಲಿಗೆ ಬಂದ್ವಿ. ಶನಿವಾರ ಅಮಿತ್ ಶಾ ಅವರ ಮನೆ ಮುಂದೆ ಪ್ರತಿಭಟನೆ ನಡೆಸಬೇಕು ಎಂದು ಹೋದ್ವಿ. ಅಮಿತ್ ಶಾ ಅವರು ಮನೆಯಲ್ಲಿದ್ದರೂ ನಮಗೆ ಅವಕಾಶ ಸಿಗಲಿಲ್ಲ. ಆ.15 ರಂದು …
Read More »ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ
ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …
Read More »ಪ್ರಮುಖ ನಗರಗಳಲ್ಲಿ 5G ಸೇವೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದ ಅಂಬಾನಿ
ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಈಗಾಗಲೇ 5G ತರಂಗಾಂತರ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ. ಮುಖೇಶ್ ಅಂಬಾನಿ ಒಡೆತನದ ಜಿಯೋ ಸಂಸ್ಥೆ 7,864 ಕೋಟಿ ರೂಪಾಯಿ ವ್ಯಯಿಸಿ ಹೆಚ್ಚಿನ ಸ್ಪೆಕ್ಟ್ರಮ್ ಖರೀದಿಸಿದೆ. ಇದರ ಬೆನ್ನಲ್ಲೇ ಇಂದು ಅಂಬಾನಿ ಮಹತ್ವದ ಘೋಷಣೆ ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ನ 45ನೇ ವಾರ್ಷಿಕ ಸಭೆಯ ಉದ್ದೇಶಿಸಿ ಮಾತನಾಡಿರುವ ಮುಖೇಶ್ ಅಂಬಾನಿ, ಗ್ರಾಹಕರಿಗೆ ದೀಪಾವಳಿ ಗಿಫ್ಟ್ ನೀಡಿದ್ದಾರೆ. ವಿಶ್ವದ ಅತ್ಯಂತ ವೇಗದ 5ಜಿ ರೋಲ್ಔಟ್ಗೆ ಸಿದ್ಧಗೊಂಡಿದೆ. ದೀಪಾವಳಿ ಹೊತ್ತಿಗೆ ದೆಹಲಿ, ಮುಂಬೈ, ಚೆನ್ನೈ …
Read More »ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್ ಹೇಗಿತ್ತು?: ವಿಡಿಯೋ
Hardik Pandya: ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ ಮಿಂಚಿದರೆ, ಬ್ಯಾಟಿಂಗ್ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು. ರವೀಂದ್ರ ಜಡೇಜಾ ಹಾಗೂ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು. What a win for our #TeamIndia in this nail biting match against arch rivals!! Congratulations for a flying start in Asia cup. #INDvsPAK …
Read More »ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …
Read More »ಬೆಳಗಾವಿಯ 12 ಪೌರಕಾರ್ಮಿಕರಿಗೆ ಮನೆ ವಿತರಿಸಿದ್ದೇವೆ: ಎಂ.ಶಿವಣ್ಣ ಕೋಟೆ
ಖಾಯಂ ಪೌರಕಾರ್ಮಿಕರಿಗೆ ಎಲ್ಲಾ ರೀತಿಯ ಸೌಲಭ್ಯಗಳು ಸಿಗುತ್ತಿವೆ. ಆದರೆ ನೇರಪಾವತಿ ಅವರಿಗೆ ಜಾಗ, ಮನೆಗಳು ಸಿಗುತ್ತಿಲ್ಲ. ಹೀಗಾಗಿ ಅವರಿಗೂ ಎಲ್ಲೆಲ್ಲಿ ಅವಕಾಶ ಇದೆ, ಅಲ್ಲಿ ಸೌಲಭ್ಯಗಳನ್ನು ನೀಡುವ ಕೆಲಸ ಮಾಡಲಾಗುವುದು ಎಂದು ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ತಿಳಿಸಿದರು. ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ ಕೋಟೆ ನಿನ್ನೆ ಮಧ್ಯಾಹ್ನ 4 ಗಂಟೆ ಸುಮಾರಿಗೆ ಸುವರ್ಣವಿಧಾನಸೌಧಲ್ಲಿ ಬೆಳಗಾವಿ ಜಿಲ್ಲೆಯಲ್ಲಿ …
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ. ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …
Read More »ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ
ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …
Read More »ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ
ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು. ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …
Read More »
Laxmi News 24×7