ಬೆಳಗಾವಿ: ಪ್ಲಾಸ್ಟಿಕ್ ಕವರ್ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …
Read More »ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.
ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …
Read More »ಸರ್ಕಾರ ಸಮಯಕ್ಕೆ ಸರಿ ನಿರ್ಧಾರ ಕೈಗೊಳ್ಳುತ್ತಿಲ್ಲ: ಸಚಿವ ನಿತಿನ್ ಗಡ್ಕರಿ
ಮುಂಬೈ: “ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಅದೇ ದೊಡ್ಡ ಸಮಸ್ಯೆ’ -ಹೀಗೆ ಹೇಳಿರುವುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ. ಮುಂಬೈನಲ್ಲಿ ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿತಿನ್ ಗಡ್ಕರಿ ಈ ಮಾತುಗಳನ್ನಾಡಿದ್ದಾರೆ. “ನೀವು ಪವಾಡಗಳನ್ನು ಸೃಷ್ಟಿಸಬಹುದು. ಆ ಸಾಮರ್ಥ್ಯ ಇಲ್ಲಿದೆ. ಮೂಲ ಸೌಕರ್ಯ ಕ್ಷೇತ್ರಕ್ಕೆ ಉಜ್ವಲ ಭವಿಷ್ಯವಿದೆ. ನಾವು ಅತ್ಯುತ್ತಮ ತಂತ್ರಜ್ಞಾನ, ನಾವಿನ್ಯತೆ, ಸಂಶೋಧನೆಯನ್ನು ಅಳವಡಿಸಿಕೊಳ್ಳಬೇಕು. …
Read More »24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ; ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. …
Read More »NDTV ಖರೀದಿಸಿದ ಗೌತಮ್ ಅದಾನಿ
ನವದೆಹಲಿ, ಆಗಸ್ಟ್ 23: ನ್ಯೂ ಡೆಲ್ಲಿ ಟೆಲಿವಿಷನ್(NDTV) ಮಾಧ್ಯಮ ಸಂಸ್ಥೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಉದ್ಯಮಿ ಗೌತಮ್ ಅದಾನಿ ಎಂಟ್ರಿ ಕೊಟ್ಟಿದ್ದಾರೆ. ಸರಿ ಸುಮಾರು 29.18 ರಷ್ಟು ಪಾಲನ್ನು ಅದಾನಿ ಎಂಟರ್ ಪ್ರೈಸಸ್ ಖರೀದಿಸಿದ್ದು, ಈ ಮೂಲಕ NDTV ಅದಾನಿ ಸಂಸ್ಥೆ ಪಾಲಾಗಿದೆ ಎನ್ನಬಹುದು. ಅದಾನಿ ಎಂಟರ್‌ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್‌ನಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಖರೀದಿಸಲಿದೆ ಮತ್ತು …
Read More »ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …
Read More »ಭ್ರಷ್ಟರ ವಿರುದ್ಧ ಸಮರಕ್ಕೆ ಲೋಕಾಯುಕ್ತ ಅಣಿ
ಬೆಂಗಳೂರು : ಸರ್ಕಾರದಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ ವಿರುದ್ಧ ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಅಸ್ತ್ರ ಝಳಪಿಸಲು ಲೋಕಾಯುಕ್ತ ಮತ್ತೆ ಸಜ್ಜಾಗಿದೆ. ದೂರು ಬಂದರೆ ತಕ್ಷಣದಲ್ಲೇ ಪ್ರಕರಣ ದಾಖಲಿಸಲು ಲೋಕಾ ಯುಕ್ತ ಪೊಲೀಸ್ ಘಟಕವು ಸನ್ನದ್ಧವಾಗಿದೆ. ಹೈಕೋರ್ಟ್ ತೀರ್ಪಿನ ಕುರಿತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ಸಂಸ್ಥೆಯ ಪೊಲೀಸ್ ಘಟಕ ಹಾಗೂ ನ್ಯಾಯಾಂಗ ವಿಭಾಗದ ಅಧಿಕಾರಿಗಳ ಜತೆಗೂ ಸರಣಿ ಸಭೆಗಳನ್ನು ನಡೆಸಿದ್ದಾರೆ. ಭ್ರಷ್ಟಾಚಾರ, ಅಧಿಕಾರ …
Read More »22 ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ
ಬೆಳಗಾವಿ – ಚಿರತೆ ಆತಂಕದ ಹಿನ್ನೆಲೆಯಲ್ಲಿ ಬೆಳಗಾವಿಯ 22 ಶಾಲೆಗಳು ಕಳೆದ ಹಲವು ದಿನಗಳಿಂದ ಶೈಕ್ಷಿಣಿಕವಾಗಿ ತೀವ್ರ ಗೊಂದಲದಲ್ಲಿವೆ. ರಜೆ ಕೊಡದಿದ್ದರೆ ಚಿರತೆ ದಾಳಿಯಿಂದ ಮಕ್ಕಳಿಗೆ ತೊಂದರೆಯಾದರೆ ಎನ್ನುವ ಆತಂಕ, ರಜೆ ಕೊಟ್ಟರೆ ಪಾಠವಿಲ್ಲದೆ ಮಕ್ಕಳ ಭವಿಷ್ಯದ ಚಿಂತೆ. ಆರಂಭದಲ್ಲಿ ಒಂದು ವಾರ ರಜೆ ನೀಡಿದ್ದ ಶಿಕ್ಷಣ ಇಲಾಖೆ ನಂತರ ಎಲ್ಲ ಮುನ್ನೆಚ್ಚರಿಕೆ ವಹಿಸಿಕೊಂಡು ಶಾಲೆಗಳನ್ನು ನಡೆಸುವಂತೆ ಸೂಚನೆ ನೀಡಿತ್ತು. ಆದರೆ ಸೋಮವಾರ ಮತ್ತೆ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಹಾಗಾಗಿ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ
ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು
Read More »ಸ್ಪೈ ಕ್ಯಾಮರಾ ಬಳಸಿ ನಗ್ನ ಚಿತ್ರ ಸೆರೆ.. ಯುವತಿಗೆ ಅದೇ ಫೋಟೋ ಕಳಿಸಿ ಬ್ಲಾಕ್ ಮೇಲ್
ಬೆಂಗಳೂರು: ನಗರದಲ್ಲಿ ಸ್ಪೈ ಕ್ಯಾಮರಾ ಬಳಸಿ ಮಹಿಳೆಯರ ನಗ್ನ ಚಿತ್ರ ಸೆರೆ ಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸ್ಪೈ ಕ್ಯಾಮರಾ ಬಳಸಿ ಮಹಿಳೆಯರ ನಗ್ನ ಚಿತ್ರ ಸೆರೆ ಹಿಡಿಯುತ್ತಿದ್ದ ಮಹೇಶ ಬಂಧಿತ ಆರೋಪಿ. ಮೊದಲು ಯುವತಿಗೆ ನಕಲಿ ಇನ್ಸ್ಟಾಗ್ರಾಮ್ ಮೂಲಕ ಮೆಸೇಜ್ ಮಾಡಿದ್ದ ಮಹೇಶ, ತನ್ನ ಜೊತೆ ಚಾಟ್ ಮಾಡು ಇಲ್ಲದಿದ್ದರೆ ನಗ್ನ ವಿಡಿಯೋ ಬಿಡುಗಡೆ ಮಾಡುವುದಾಗಿ ಹೆದರಿಸಿದ್ದ ಎಂದು ಪ್ರಕರಣದ ಕುರಿತು ಈಶಾನ್ಯ …
Read More »
Laxmi News 24×7