Breaking News

ರಾಷ್ಟ್ರೀಯ

ಖಾನಾಪೂರಕ್ಕೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಸೇತುವೆ ಮುಳುಗಡೆ- ಜನರಿಗೆ ಸಂಕಷ್ಟ-

ಬೆಳಗಾವಿ: ಕಳೆದ 20 ದಿನಗಳಿಂದ ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿಗೆ ಸಂಪರ್ಕ ಕಲ್ಪಿಸುವ ಸಾತ್ನಾಳಿ-ಮಾಚಾಳಿ ಗ್ರಾಮದ ಸೇತುವೆ ಮುಳುಗಡೆ ಆಗಿದೆ. ವೈದ್ಯಕೀಯ ಸೌಲಭ್ಯ ಪಡೆಯಲು ಸಮಸ್ಯೆ ಆಗ್ತಿದೆ. ಹೀಗಾಗಿ, ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಮೊಬೈಲ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆ ಮೈದುಂಬಿ ಹರಿಯುತ್ತಿರುವ ಪಾಂಡ್ರಿ ನದಿಯ ನೀರಿನ ಒಳಹರಿವು ಹೆಚ್ಚಾಗಿದ್ದು, ಸೇತುವೆ ಮೇಲೆ ನಾಲ್ಕು ಅಡಿ …

Read More »

ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ

ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ.   ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …

Read More »

LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್‌ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್‌ನಲ್ಲಿ ಸೇನಾ ಟ್ರೋಪ್‌ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …

Read More »

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …

Read More »

ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ

ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …

Read More »

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …

Read More »

ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.

ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ.   ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …

Read More »

ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು,

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್‌ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು.   ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು.   ಜೆಡಿಎಸ್ ಜಿಲ್ಲಾ …

Read More »

ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್, ಅಬ್ದುಲ್ ಕಲಾಂ ಫೋಟೋ.

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮಥುರಾದಲ್ಲಿ ವ್ಯಕ್ತಿಯೊಬ್ಬ ತಳ್ಳಿಕೊಂಡು ಹೋಗುತ್ತಿರುವ ಕಸದ ಬಂಡಿಯಲ್ಲಿ ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಎಪಿಜೆ ಅಬ್ದುಲ್ ಕಲಾಂ ಅವರ ಫೋಟೋಗಳು ಕಂಡುಬಂದಿವೆ. ಈ ದೃಶ್ಯವನ್ನು ಅಲ್ಲಿನ ಜನರು ವಿಡಿಯೋ ಮಾಡಿದ್ದು, ವ್ಯಕ್ತಿಯ ಮೇಲೆ ಆಕ್ರೋಶಗೊಂಡಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಎಸೆದ ವಸ್ತುಗಳ ಕಸದ ರಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಪಿಜೆ ಅಬ್ದುಲ್ …

Read More »

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ

ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ಮತದಾನ ನಡೆಯಲಿದ್ದು, ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂಡಿದೆ. ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜತೆಗೆ ವಿಶೇಷ ಅನುಮತಿ ಪಡೆದಿರುವ ಇಬ್ಬರು ಸಂಸದರು ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ಮಾಡಲಿದ್ದಾರೆ.   ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್‌ ಕುಮಾರ್‌ ಘೋಷ್‌ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ …

Read More »