ಜುಲೈ 11ರಂದು ವಿಶ್ವ ಜನಸಂಖ್ಯಾ ದಿನವನ್ನು ಇಡೀ ವಿಶ್ವದಾಧ್ಯಂತ ಆಚರಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿಯಲ್ಲಿಯೂ ಕೂಡ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿಯ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಕಚೇರಿ ಸಹಯೋಗದಲ್ಲಿ ಬಿಮ್ಸ ಉಪನ್ಯಾಸ ಕೊಠಡಿಯಲ್ಲಿ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ ಉನ್ನತಿಯ ಹೊಸ ಅಧ್ಯಾಯ …
Read More »ಮಹಿಳಾಮಣಿಗಳೇ, ಮೋದಿ ಸರ್ಕಾರ ಉಚಿತವಾಗಿ ‘ಹೊಲಿಗೆ ಯಂತ್ರ’ ವಿತರಿಸ್ತಿದೆ ; ಅರ್ಜಿ ಪ್ರಕ್ರಿಯೆ ಆರಂಭ, ಇಂದೇ ಅಪ್ಲೈ ಮಾಡಿ
ದೇಶದ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮತ್ತು ಸ್ವಾವಲಂಬಿಗಳಾಗಲು ಸರ್ಕಾರ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಯೋಜನೆ (Free Silai Machine Scheme). ಸರ್ಕಾರ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನ ಉಚಿತವಾಗಿ ನೀಡುತ್ತದೆ. ಈ ಯೋಜನೆಯ ಸಹಾಯದಿಂದ ಮಹಿಳೆಯರು ತಮ್ಮ ಆರ್ಥಿಕ ಅಗತ್ಯಗಳನ್ನ ಪೂರೈಸಿಕೊಳ್ಳಲು ಬೇರೆಯವರ ಮೇಲೆ ಅವಲಂಬಿತರಾಗದಂತೆ ನೋಡಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಅವ್ರು ತಮ್ಮ ಪ್ರತಿಯೊಂದು ಅಗತ್ಯವನ್ನ ತಾವಾಗಿಯೇ ಪೂರೈಸಿಕೊಳ್ಳಲು ಸಮರ್ಥರಾಗಿರಬೇಕು ಮತ್ತು ಅಧಿಕಾರ ಹೊಂದಿರಬೇಕು. …
Read More »Bakrid 2022: ‘ಬಕ್ರೀದ್’ನ ಸಂದೇಶ
ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್ ಅದ್‌ಹಾ’. ಭಾರತದಲ್ಲಿ ಈ ಹಬ್ಬ ‘ಬಕ್ರೀದ್’ ಎಂದೇ ಪ್ರಸಿದ್ಧಿ ಪಡೆದುಕೊಂಡಿದೆ. ದೇಶದಾದ್ಯಂತ ಮುಸ್ಲಿಮರು ಇಂದು (ಜುಲೈ 10) ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ‘ರಂಜಾನ್’ ತಿಂಗಳ ಉಪವಾಸದ ಬಳಿಕ ‘ಈದುಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್ಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. ನಾಲ್ಕು ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ …
Read More »ಶ್ರೀಲಂಕಾ ಅಧ್ಯಕ್ಷರ ಬಂಗಲೆಗೆ ಮುತ್ತಿಗೆ ಹಿಂಸಾಚಾರಕ್ಕೆ ತಿರುಗಿದ ರಾವಣ ರಾಷ್ಟ್ರ
ಶ್ರೀಲಂಕಾ ಕಳೆದ 4 ತಿಂಗಳುಗಳಿಂದ ಆರ್ಥಿಕ ಬಿಕ್ಕಟ್ಟನ್ನ ಎದುರಿಸುತ್ತಿದೆ, ಆಹಾರಕ್ಕಾಗಿ ಜನ ತತ್ತರಗೊಂಡಿದ್ದಾರೆ. ಜನ ಸಾಮಾನ್ಯ ವಸತಿಗಾಗಿ ಸಾವಿರಾರು ರೂಗಳನ್ನ ತೆತ್ತಲು ಅವರ ಬಳಿ ಹಣ ಇಲ್ಲದೆ ನೆರೆ ದೇಶಗಳಿಗೆ ನಡೆದು ಆ ದೇಶಗಳ ಪೋಲಿಸರ ಅತಿಥಿಗಳಾಗಿದ್ದಾರೆ , ನೆರೆ ದೇಶಗಳು ಸಾವಿರಾರು ಕೋಟಿ ಹಣ ಸಹಾಯ ಮಾಡಿದರು ಶ್ರೀಲಂಕಾ ಇನ್ನೂ ಸರಿದಾರಿ ತರುವಲ್ಲಿ ಏಡವಿದ್ದಾರು ಎಲ್ಲಿ ಎಂದು ಈಗ ಜನ ಪ್ರಶ್ನೆ ಮಾಡಿಕೊಳ್ಳುತ್ತಿದ್ದಾರೆ , ಮುಖ್ಯವಾಗಿ ರಾಜಕಾರಣಿಗಳ ಏಡಬಿಡಂಗಿತನ …
Read More »ಭಾರಿ ಮಳೆ ಹಿನ್ನೆಲೆ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಕಲಬುರಗಿ: ಕಳೆದ ನಾಲ್ಕು ದಿನಗಳಿಂದ ಎಡಬಿಡದೆ ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಗೆ ಶಿಥಿಲಗೊಂಡಿದ್ದ ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡ ಘಟನೆ ಚಿತ್ತಾಪೂರ ಪಟ್ಟಣದಲ್ಲಿ ನಡೆದಿದೆ. ಆರೀಫಾ ಬೇಗಂ (60) ಮೃತ ವೃದ್ಧೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ …
Read More »2-3 ದಿನ ಭಾರಿ ಮಳೆ; ಮುನ್ಸೂಚನೆ ನೀಡಿದ ಸಿಎಂ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಮಳೆ ಹಾನಿ ಕುರಿತಾಗಿ ನಿನ್ನೆ ಅಧಿಕಾರಿಗಳ ಜತೆ ಸಭೆ ನಡೆಸಿ ಮುಂಜಾಗೃತಾ ಕ್ರಮ ಹಾಗೂ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇಂದು ಸ್ವಲ್ಪ ಪ್ರಮಾಣದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಇನ್ನೂ 2-3 ದಿನಗಳ ಕಾಲ ಹಲವೆಡೆ ಮಳೆಯಾಗಲಿದೆ. ಅದಕ್ಕೆ ಅನುಗುಣವಾಗಿ …
Read More »ಕರ್ನಾಟಕ ಸರ್ಕಾರದಿಂದ ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗೆ ಸಹಾಯವಾಣಿ
ಬೆಂಗಳೂರು: ಶುಕ್ರವಾರ ಸಂಜೆ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟ ಉಂಟಾಗಿದ್ದು, ತೀರ್ಥಯಾತ್ರೆಗೆ ತೆರಳಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಅಮರನಾಥ ಯಾತ್ರೆಗೆ ತೆರಳಿರುವ ಕರ್ನಾಟಕದ ಯಾತ್ರಾರ್ಥಿಗಳು ಸಿಲುಕಿದ್ದು, ಅವರ ಸಹಾಯಕ್ಕೆ ಸರ್ಕಾರ ಸಹಾಯವಾಣಿ ಆರಂಭಿಸಿದೆ. ಕರ್ನಾಟಕದ ಯಾವುದೇ ವ್ಯಕ್ತಿಯು ಸಿಕ್ಕಿಬಿದ್ದಲ್ಲಿ ದಯವಿಟ್ಟು ಕೆಳಗಿನ ಸಂಖ್ಯೆಗೆ ಕರೆ ಮಾಡಿ ಸಂಪರ್ಕ ಮಾಡಿ. 080-1070, 22340676, ಇಮೇಲ್: incomedmkar@gmail.com ಮೇಘಸ್ಫೋಟದಿಂದ ಉಂಟಾದ ಭಾರೀ ಪ್ರಮಾಣದ ಪ್ರವಾಹ …
Read More »ಮಹಾರಾಷ್ಟ್ರ ರಾಜ್ಯಪಾಲರ ನಡೆ ಪ್ರಶ್ನಿಸಿ ಅರ್ಜಿ; ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ
ಮುಂಬಯಿ: ಶಿವಸೇನೆಯಿಂದ ಬಂಡಾ ಯ ವೆದ್ದು ತನ್ನ ಬೆಂಬಲಿತ ಶಾಸಕ ರೊಂದಿಗೆ ಪಕ್ಷದಿಂದ ಹೊರನಡೆದಿದ್ದ ಏಕ ನಾಥ ಶಿಂಧೆಯವರಿಗೆ ಸರಕಾರ ರಚಿಸು ವಂತೆ ಆಹ್ವಾನ ನೀಡಿದ್ದ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿಯವರ ನಡೆಯನ್ನು ಪ್ರಶ್ನಿಸಿ, ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್‌ನ ರಜಾಕಾಲದ ನ್ಯಾಯ ಪೀಠವು ಉದ್ಧವ್ ಅವರ ಅರ್ಜಿಯನ್ನು ಸ್ವೀಕರಿಸಿದ್ದು ಅರ್ಜಿಯ ವಿಚಾರಣೆಯನ್ನು ಜು. 11ಕ್ಕೆ ನಿಗದಿಗೊಳಿಸಿದೆ. ಅರ್ಜಿಯಲ್ಲಿ ಠಾಕ್ರೆಯವರು, ಜು. 3 ಮತ್ತು …
Read More »ಆಂಧ್ರ ಪ್ರದೇಶ: 400 ಅಡಿ ಕೊಳವೆ ಬಾವಿಯಿಂದ ಬಾಲಕನನ್ನು ರಕ್ಷಿಸಿದ ಧೈರ್ಯಶಾಲಿ ಯುವಕ!
ವಿಜಯವಾಡ: ಆಂಧ್ರ ಪ್ರದೇಶದ ದ್ವಾರಕ ತಿರುಮಲದ ಗುಂಡುಗೊಲುಗುಂಟ ಗ್ರಾಮದಲ್ಲಿ 30 ಅಡಿ ಆಳದ ತೆರೆದ ಕೊಳಬೆ ಬಾವಿಗೆ ಬಿದಿದ್ದ 9 ವರ್ಷದ ಬಾಲಕನೊಬ್ಬನನ್ನು ಧೈರ್ಯಶಾಲಿ ಯುವಕನೊಬ್ಬ ಐದು ಗಂಟೆಗಳ ಸಾಹಸ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಬಾಲಕ ಎಸ್. ಜಸ್ವಂತ್ ತನ್ನ ಮನೆ ಬಳಿ ಆಡುತ್ತಿದ್ದಾಗ ಬುಧವಾರ ರಾತ್ರಿ 7 ಗಂಟೆಯ ನಂತರ ನಾಪತ್ತೆಯಾಗಿದ್ದಾನೆ. ಆತನ ಪೋಷಕರು ಹುಡುಕಾಡಿದರೂ ಆತ ಸಿಕ್ಕಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಸಹಾಯಕಕ್ಕಾಗಿ ಕೂಗುತ್ತಿದ್ದ ಬಾಲಕನ ಧ್ವನಿಯನ್ನು …
Read More »ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಅನುಮೋದನೆ: C.M.ಬೊಮ್ಮಾಯಿ
ಬೆಂಗಳೂರು: ‘ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ₹ 132 ಕೋಟಿ ಮೊತ್ತದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ‘ಸರ್ಕಾರ ಈಗಾಗಲೇ ಸಮವಸ್ತ್ರ ವಿತರಿಸಲು ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ …
Read More »