ಮಂಗಳೂರು: ‘ಮಳೆಯಿಂದ ಪೂರ್ತಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ’ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು. ಉಳ್ಳಾಲ ತಾಲ್ಲೂಕಿನ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿಗೆ ಹೋದ ಕೂಡಲೇ ಶೇ 50ರಷ್ಟು ಪರಿಹಾರ ಮೊತ್ತ ಬಿಡುಗಡೆಗೆ ಆದೇಶ ನೀಡುತ್ತೇನೆ. ಕಡಿಮೆ ಪ್ರಮಾಣದ ಹಾನಿ ಆಗಿರುವವರಿಗೆ ಹಾನಿಯ ಪ್ರಮಾಣದ ಆಧಾರದಲ್ಲಿ …
Read More »ಎಸಿಬಿಗೆ ಮತ್ತೆ ಬೆಂಡೆತ್ತಿದ ನ್ಯಾ.ಸಂದೇಶ್: ಪೂರ್ಣ ಮಾಹಿತಿ ಒದಗಿಸದ್ದಕ್ಕೆ ಅತೃಪ್ತಿ
ಬೆಂಗಳೂರು, ಜು.7. ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣದಲ್ಲಿ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕಾರ್ಯನಿರ್ವಹಣೆ ಬಗ್ಗೆ ಮತ್ತೆ ಕಿಡಿಕಾರಿದೆ. ಅಲ್ಲದೆ, ನ್ಯಾಯಾಲಯದ ಹಿಂದಿನ ಆದೇಶದಂತೆ ಸರ್ಚ್ ವಾರೆಂಟ್ ಜಾರಿ ಮತ್ತು ಸಲ್ಲಿಕೆಯಾಗಿರುವ ಬಿ ರಿಪೋರ್ಟ್ ಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡದ್ದಕ್ಕೆ ಅತೃಪ್ತಿ ವ್ಯಕ್ತಪಡಿಸಿದೆ. ಎಸಿಬಿ ಪ್ರಕರಣದ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಷ್ಟು …
Read More »ನಾನು ಯಾವತ್ತು ಯಾವುದರ ಹಿಂದೆಯೂ ಹೋದವನಲ್ಲ: ಡಾ.ಡಿ. ವೀರೇಂದ್ರ ಹೆಗ್ಗಡೆ
ಮಂಗಳೂರು: ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿದೇರ್ಶನ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ದೇವರು ಒಂದು ಅವಕಾಶ ಕೊಟ್ಟಿದ್ದಾನೆ. ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ನಮ್ಮ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಹುಶಃ ಇದು ವಿಸ್ತಾರವಾಗಿ ಇಡೀ ದೇಶಕ್ಕೆ ತಲುಪುವ ಸಾಧ್ಯತೆ ಇದೆ ಎಂದರು. ಕಸ್ಟಮರ್ಸ್ ಸರ್ವಿಸ್ ಸೆಂಟರ್ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಂತಹ ಏಜೆನ್ಸಿ ಇದೆ. ಈಗಾಗಲೇ ನಾವು 6 ಸಾವಿರ …
Read More »ಇಂದು ಪಂಜಾಬ್ ಸಿಎಂ ಮದುವೆ: ವಧು ಗುರುಪ್ರೀತ್ ಕೌರ್ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ
ಚಂಡೀಗಢ: ಇಂದು ಪಂಜಾಬ್ ಜನರ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …
Read More »ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸದ ಸರ್ಕಾರ: ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಬಿಜೆಪಿ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ‘ಒಂದೆಡೆ ರಾಜ್ಯಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು …
Read More »ಕೇಂದ್ರ ಸರ್ಕಾರದಿಂದ ಬಡಜನತೆಗೆ ಬಿಗ್ ಶಾಕ್: ‘ಗರೀಬ್ ಕಲ್ಯಾಣ್’ ಅನ್ನ ಯೋಜನೆಗೆ ಬ್ರೇಕ್.!?
ನವದೆಹಲಿ:ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಸೌಲಭ್ಯವನ್ನುವನ್ನು ಕೊರೊನಾ ಅವಧಿಯಲ್ಲಿ, ದೇಶದ ಬಡ ಕುಟುಂಬಗಳಿಗೆ ನೀಡಲಾಗುತಿತ್ತು. ಈ ಇದನ್ನು ಸೆಪ್ಟೆಂಬರ್ ನಂತರ ನಿಲ್ಲಿಸಬಹುದು ಎನ್ನಲಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿನ ವೆಚ್ಚಗಳ ಇಲಾಖೆ ಈ ಯೋಜನೆಯನ್ನು ಸೆಪ್ಟೆಂಬರ್ ನಂತರ ವಿಸ್ತರಿಸಬಾರದು ಎಂದು ಸರ್ಕಾರಕ್ಕೆ ಸಲಹೆ ನೀಡಿದೆ ಎನ್ನಲಾಗಿದೆ. ‘ಈ ಯೋಜನೆಯು ದೇಶದ ಮೇಲೆ ಆರ್ಥಿಕ ಹೊರೆಯನ್ನು ತುಂಬಾ ಹೆಚ್ಚಿಸುತ್ತಿದೆ. ಇದು ದೇಶದ ಆರ್ಥಿಕ …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …
Read More »ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ
ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …
Read More »ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!
ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.! ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.
Read More »ಮಹಾರಾಷ್ಟ್ರ ವ್ಯವಸ್ಥೆ ಬಗ್ಗೆ ತೀವ್ರ ಬೇಸರಗೊಂಡು ಐಎಎಸ್ ಹುದ್ದೆ ತ್ಯಜಿಸಿದ ಅಧಿಕಾರಿ!
ಪುಣೆ: ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ(ಎಂಇಡಿಡಿ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2008ರ ಬ್ಯಾಚ್‌ನ ಐಎಎಸ್ ಅಧಿಕಾರಿ ದೌಲತ್ ದೇಸಾಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದು, ವ್ಯವಸ್ಥೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. MEDDಗೆ ವರ್ಗಾವಣೆಯಾಗುವ ಮೊದಲು ಅವರು ಕೊಲ್ಲಾಪುರದ ಕಲೆಕ್ಟರ್ ಆಗಿದ್ದರು ಮತ್ತು ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯನ್ನು ಕಾಡಿದ್ದ 2019 ರ ಪ್ರವಾಹ ಸ್ಥಿತಿಯನ್ನು ನಿಭಾಯಿಸಿದ್ದರು. …
Read More »