Breaking News

ರಾಷ್ಟ್ರೀಯ

ಮಾನವ ಗುರು’ ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ‘ಹೆಣ್ಣು – ಮಣ್ಣು” ಶಂಕೆ?

ಬೆಂಗಳೂರು: ಮಾನವ ಗುರು ಎಂದೇ ಟಿವಿ ವಾಹಿನಿಗಳಲ್ಲಿ ಹೆಸರು ಮಾಡಿರುವ ಸರಳ ವಾಸ್ತು ಮುಖ್ಯಸ್ಥ ಚಂದ್ರಶೇಖರ್ ಗುರೂಜಿ ಕೊಲೆ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಈಗ ಈ ವಾಸ್ತು ಗುರುವಿನ ಹಿನ್ನೆಲೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.   ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಚಂದ್ರಶೇಖರ್ ಗುರುಜಿ ಸೇನೆ ಸೇರಬೇಕೆಂಬ ಉದ್ದೇಶಕ್ಕೆ ಬೆಳಗಾವಿಗೆ ಬಂದು ಪ್ರಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಸಿವಿಲ್ ಎಂಜಿನಿಯರಿಂಗ್ ಹಿನ್ನೆಲೆಯ ಚಂದ್ರಶೇಖರ ಗುರೂಜಿ ಆ ಬಳಿಕ ಮುಂಬಯಿಗೆ …

Read More »

ಬಕ್ರೀದ್‌ ಸಮೀಪಿಸುತ್ತಿದ್ದಂತೆ ಕುರಿ, ಮೇಕೆ, ಕೋಳಿಗಳ  ವ್ಯಾಪಾರ ಜೋರಾಗಿದೆ

ರಾಯಬಾಗ : ಬಕ್ರೀದ್‌ (ಜುಲೈ 10) ಹಬ್ಬ ಸಮೀಪಿಸುತ್ತಿದ್ದಂತೆಯೇ ಪಟ್ಟಣದ ಮಾರುಕಟ್ಟೆಯಲ್ಲಿ ವ್ಯಾಪಾರ ಜೋರಾಗಿದೆ. ಕುರಿ, ಮೇಕೆ, ಕೋಳಿಗಳ ಸಂತೆಯಲ್ಲಿ ಈಗ ಜನಜಂಗುಳಿ ಉಂಟಾಗಿದೆ. ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ಆದರೆ, ಈಗ ತರಕಾರಿ, ಕಾಳು, ಹಣ್ಣುಗಳ ಮಾರಾಟಕ್ಕಿಂತ ಹೆಚ್ಚು ಸುದ್ದಿಯಲ್ಲಿರುವುದು ಕುರಿ, ಮೇಕೆಗಳು. ಪಟ್ಟಣ ಹೊರವಲಯದ ಬ್ಯಾಕುಡ ರಸ್ತೆಯಲ್ಲಿ ಈ ಕುರಿ- ಮೇಕೆ ಸಂತೆ ಸೇರು ತ್ತಿದೆ. ತಾಲ್ಲೂಕಿನ ವಿವಿಧ ಗ್ರಾಮಗಳ ಜನ ಕುರಿ- ಮೇಕೆ ಮಾರಲು ಬರುತ್ತಾರೆ. …

Read More »

ಹೆಂಡತಿ ಶವ ಸೂಟ್​ಕೇಸ್​ನಲ್ಲಿ ತುಂಬಿ ಕೆರೆಗೆ ಎಸೆದ ಗಂಡ: ಇಬ್ಬರ ಬಂಧನ

ಬೆಂಗಳೂರು: ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನೇನಹಳ್ಳಿ ಕೆರೆಯಲ್ಲಿ ಇದೇ ತಿಂಗಳ 14ರಂದು ಸೂಟ್​ಕೇಸ್‌ನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಮಹಿಳೆ ಮೃತ ದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ದಾಬಸ್‌ಪೇಟೆ ಪೊಲೀಸರು ತನಿಖೆ ನಡೆಸಿದ್ದಾರೆ. ಆಗ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ವಾಸವಿದ್ದ 35 ವರ್ಷದ ಮಹಿಳೆ ಮಂಜುಳ ಮೃತದೇಹ ಎಂದು ತಿಳಿದು ಬಂದಿದೆ. ಹೆಂಡತಿ ಶವವನ್ನು ಸೂಟ್​ಕೇಸ್​ನಲ್ಲಿ ತುಂಬಿ ಕೆರೆಗೆ ಎಸೆದ ಗಂಡ ಕಳೆದ ಎರಡು ವರ್ಷದ ಹಿಂದೆ ಈಕೆಯನ್ನು …

Read More »

ಪಂಚಮಸಾಲಿ‌ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟ : ಮಹಿಳಾ ಘಟಕದಿಂದ ಮತದಾನ ಬಹಿಷ್ಕಾರ

ಗದಗ : ನಿಗದಿತ ಸಮಯದಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಂಚಮಸಾಲಿ ಮಹಿಳಾ ಘಟಕದಿಂದ ಮತದಾನ ಬಹಿಷ್ಕಾರ ಮಾಡಲಿದ್ದೇವೆ. ಮೀಸಲಾತಿ ನೀಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಪಂಚಮಸಾಲಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ವೀಣಾ ಕಾಶಪ್ಪನವರ್ ಹೇಳಿದ್ದಾರೆ. ಇಲ್ಲಿ ಮಾತನಾಡಿದ ಅವರು, ಆಗಸ್ಟ್ 22 ಸರ್ಕಾರಕ್ಕೆ ಅಂತಿಮ ಗಡುವು ನೀಡಲಾಗಿದೆ. ಈ ಗಡುವಿನ ಒಳಗೆ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸಬೇಕು. ಸರ್ಕಾರ ಕಣ್ಣೋರೆಸುವ ತಂತ್ರ ಮಾಡಬಾರದು. ಇನ್ನು …

Read More »

ಜನವರಿ ನಂತರ ಸವದತ್ತಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ: ಸತೀಶ ಜಾರಕಿಹೊಳಿ

ಸವದತ್ತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಲು ಆಗಲ್ಲ. ಜನವರಿ ನಂತರ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಜನವರಿ ನಂತರ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಸವದತ್ತಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಕ್ಲಿಯರ್ ಇದೆ. ಸವದತ್ತಿಯಲ್ಲಿ ಗ್ರೌಂಡ್ ಸಿದ್ಧಪಡಿಸುತ್ತಿದ್ದೇವೆ. ಸ್ಥಳೀಯರು ಮತ್ತು …

Read More »

ಡಾಕ್ಯುಮೆಂಟರಿ ಪೋಸ್ಟರ್‌ನಲ್ಲಿ ಹಿಂದು ದೇವತೆಗೆ ಅಪಮಾನ

ಡಾಕ್ಯುಮೆಂಟರಿ ಚಲನ ಚಿತ್ರದ ಪೋಸ್ಟರ್‌ ಒಂದರಲ್ಲಿ ಹಿಂದು ದೇವತೆಗಳಿಗೆ ಅಪಮಾನವಾಗಿರುವುದಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್ನಲ್ಲಿ ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ.   ಅಗಾ ಖಾನ್ ಮ್ಯೂಸಿಯಂನಲ್ಲಿ ರಿದಮ್ಸ್ ಆಫ್ ಕೆನಡಾದ ಭಾಗವಾಗಿ ತಮ್ಮ ಮುಂಬರುವ ಸಾಕ್ಷ್ಯ ಚಿತ್ರದ ಪೋಸ್ಟರ್‌ ಒಂದನ್ನು ನಿರ್ದೇಶಕಿ ಮಣಿಮೇಕಲೈ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟರ್‌ ನಲ್ಲಿ …

Read More »

ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ

ಬೆಂಗಳೂರು: ‘ಸಿದ್ದರಾಮೋತ್ಸವ’ಕ್ಕೆ ಮೂಲ ಕಾಂಗ್ರೆಸ್ಸಿಗರಿಂದ ಅಸಮಾಧಾನ ಭುಗಿಲೆದ್ದಿದ್ದು, ಸಿದ್ದರಾಮಯ್ಯ ಒಬ್ಬರೇ ನಾಯಕರಲ್ಲ ಇನ್ನೂ ಹಿರಿಯ ನಾಯಕರು ಇದ್ದಾರೆ ಎನ್ನುವ ಅರ್ಥದಲ್ಲಿ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಶಕ್ತಿ ಪ್ರದರ್ಶನದ ರೀತಿಯಲ್ಲಿ ಸಿದ್ದರಾಮಯ್ಯ ಆಚರಣೆ ಮಾಡಿಕೊಳ್ಳುತ್ತಿದ್ದು, ಆಗಸ್ಟ್ 3ರಿಂದ ‘ಸಿದ್ದರಾಮೋತ್ಸವ’ ಕಾರ್ಯಕ್ರಮ ಮಾಡಲು ದೇಶಪಾಂಡೆ ಸಮಿತಿ ನಿರ್ಧಾರ ಮಾಡಿದೆ. ಸುಮಾರು 5 ಲಕ್ಷ ಜನರನ್ನು ಸೇರಿಸಿ ಬೃಹತ್ ಕಾರ್ಯಕ್ರಮ ಮಾಡಲು ಸಮಿತಿ ತೀರ್ಮಾನಿಸಿದೆ. ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ …

Read More »

ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ( Teacher Recruitment 2022 ) ಸಂಬಂಧ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ಫಲಿತಾಂಶವನ್ನು ಜುಲೈ ಅಂತ್ಯದೊಳಗೆ ಪ್ರಕಟಿಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 15 ಸಾವಿರ ಶಿಕ್ಷಕರ ಪರೀಕ್ಷೆಯ ನಂತ್ರ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಎರಡು ಪತ್ರಿಕೆಯ ಮೌಲ್ಯಮಾಪನ ಮುಗಿದಿದ್ದು, ಜುಲೈ ಕೊನೆಯ ವಾರ ಮೌಲ್ಯಮಾಪನ …

Read More »

ಬೆಂಗಳೂರಲ್ಲೇ ಸುಮಾರು 30 ಸಾವಿರಕ್ಕೂ ಹೆಚ್ಚು ಎಕರೆ ಭೂಮಿಯನ್ನು ಭೂಗಳ್ಳರು ಕಬಳಿಸಿದ್ದಾರೆ. : ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: ರಾಜಕಾಲುವೆಗಳ ಮೇಲೆ ನಿರ್ಮಾಣವಾಗಿರುವ ಮಾಲ್‌ಗಳು, ಅರಮನೆಯಂಥ ಬಂಗಲೆಗಳ ಮೇಲೆ ಬುಲ್ಡೋಜರ್‌ಗಳು ಹೋಗುವುದಿಲ್ಲ. ಆದರೆ, ಬಡವರು ಯಾರಾದರೂ ಸಣ್ಣ ಮನೆ, ಗುಡಿಸಲು ಕಟ್ಟಿಕೊಂಡಿದ್ದರೆ ಅವರ ಮನೆಗಳ ಮೇಲೆ ಬುಲ್ಡೋಜರ್‌ಗಳು ನಿರ್ದಯವಾಗಿ ಹರಿಯುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದ ನಾಗೇನಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದ ʼಜನತಾಮಿತ್ರʼ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡವರಿಗೆ, ಮಧ್ಯಮವರ್ಗದ ಜನರಿಗೆ ಕಡಿಮೆ ದರದಲ್ಲಿ ನಿವೇಶನ, ಮನೆ …

Read More »

ಏಕನಾಥ್​ ಶಿಂದೆಗೆ ಇಂದು ‘ಬಹುಮತ’ ಪರೀಕ್ಷೆ;

ಮುಂಬೈ (ಮಹಾರಾಷ್ಟ್ರ): ಉದ್ಧವ್​ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯ ಬೆಂಬಲದಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿರುವ ಏಕನಾಥ್​ ಶಿಂದೆ ಇಂದು ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸುವರು. ನಿನ್ನೆಯಿಂದ ಆರಂಭವಾಗಿರುವ ವಿಶೇಷ ಅಧಿವೇಶನದ ಮೊದಲ ದಿನ ಸ್ಪೀಕರ್​ ಆಯ್ಕೆಯಲ್ಲಿ ಗೆದ್ದಿದ್ದ ಶಿಂದೆ ಇಂದಿನ ಪರೀಕ್ಷೆಯಲ್ಲೂ ಸಲೀಸಾಗಿ ಜಯಿಸಲಿದ್ದಾರೆ. ವಿಶ್ವಾಸಮತವನ್ನು ಗೆಲ್ಲಲು ಬಿಜೆಪಿ ಮತ್ತು ಶಿವಸೇನೆ ಬಂಡಾಯ ಶಾಸಕರು ಸಭೆ ನಡೆಸಿ ರಣತಂತ್ರ ರೂಪಿಸಿದ್ದಾರೆ. ಏಕನಾಥ್​ ಶಿಂದೆ ಸರ್ಕಾರಕ್ಕೆ ಅಗತ್ಯ ಬಹುಮತ ಇರುವ ಕಾರಣ ಇಂದಿನ ವಿಶ್ವಾಸಮತ …

Read More »