Breaking News

ರಾಷ್ಟ್ರೀಯ

ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಿರಲಿದೆ: ಅಮಿತ್ ಶಾ

ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಭಾರತೀಯ ಜನತಾ ಪಕ್ಷದ ಯುಗವಾಗಿರಲಿದೆ. ಅಲ್ಲದೆ ಭಾರತವು ಈ ಸಮಯದಲ್ಲಿ ವಿಶ್ವಗುರುವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಹೈದರಾಬಾದ್ ನಲ್ಲಿ ನಡೆಯುತ್ತಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕುಟುಂಬದ ರಾಜಕೀಯ, ಜಾತಿವಾದ ಮತ್ತು ತುಷ್ಟೀಕರಣದ ರಾಜಕೀಯಗಳು “ಮಹಾನ್ ಪಾಪಗಳು” ಮತ್ತು ವರ್ಷಗಳಿಂದ ದೇಶವು ಅನುಭವಿಸುತ್ತಿರುವ ನೋವುಗಳ ಹಿಂದಿನ ಕಾರಣ ಎಂದು ಶಾ ಹೇಳಿದರು. …

Read More »

ರಜೆಯೂ ಇಲ್ಲ, ಭತ್ಯೆಯೂ ಸಿಗ್ತಿಲ್ಲ!; ಪೊಲೀಸ್ ಕಾನ್​ಸ್ಟೇಬಲ್​ಗಳಿಗೆ ಗೋಳು, ಠಾಣಾಧಿಕಾರಿಗೆ ಇಕ್ಕಟ್ಟು..

ಬೆಂಗಳೂರು :ವರಿಷ್ಠಾಧಿಕಾರಿಗಳ ಆದೇಶ ಒಂದೆಡೆ…, ಹಿರಿಯ ಅಧಿಕಾರಿಗಳ ಒತ್ತಡ ಇನ್ನೊಂದೆಡೆ. ಆದರೆ, ನಲುಗುತ್ತಿರುವವರು ಮಾತ್ರ ಕಾನ್​ಸ್ಟೇಬಲ್​ಗಳು…. ಆರಕ್ಷಕರಿಗೆ ದಿನದ ಹದಿಮೂರು ತಾಸು ಕೆಲಸ ಮಾಡಿದರೂ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ರಜೆಯೂ ಇಲ್ಲ; ಕೆಲಸ ಮಾಡಿದರೆ ಭತ್ಯೆಯೂ ದೊರೆಯದ ಅತಂತ್ರ ಸ್ಥಿತಿ ಅವರದ್ದಾಗಿದೆ. ಹೀಗಾಗಿ ಕಡ್ಡಾಯವಾಗಿ ವಾರದ ರಜೆ ಹಾಗೂ ರಜೆ ಬದಲಿಗೆ ಭತ್ಯೆ ಕೊಡುವ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ‘ಕಳ್ಳಾಟ’ ಆಡುತ್ತಿರುವ ಆರೋಪ ಕೇಳಿಬಂದಿದೆ. ಕಡ್ಡಾಯವಾಗಿ ವಾರದ ರಜೆ ಕೊಡಬೇಕು …

Read More »

`PSI’ ನೇಮಕಾತಿ ಹಗರಣ : ನಂ.1 ಆರೋಪಿ ಜಾಗೃತ್ ಅರೆಸ್ಟ್

ಬೆಂಗಳೂರು : ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧ ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ ನನ್ನು ಸಿಐಡಿ ಅಧಿಕಾರಿಗಳು ಕೊನೆಗೂ ಬಂಧಿಸಿದ್ದಾರೆ. ಎಸ್. ಜಾಗೃತ್ ಪಿಎಸ್ ಐ ಪರೀಕ್ಷೆಯಲ್ಲಿ 4 ನೇ ರ್ಯಾಂಕ್ ಬಂದಿದ್ದನ್ನು. ಎಸ್. ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ ಐಆರ್ ಹಾಕಿರುವುದನ್ನು ರದ್ದುಪಡಿಸಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಜಾಗೃತ್ ಒಬ್ಬನಾಗಿದ್ದ. ಬಳಿಕ ಪ್ರಕರಣದ …

Read More »

ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಹಿತ ಸ್ಥಳದಲ್ಲೇ ಇಬ್ಬರ ಸಾವು, ನಾಲ್ವರಿಗೆ ಗಂಭೀರ ಗಾಯ

ಖಾನಾಪುರ: ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಗರಾಳಿ ಬಳಿ ಕಾರು-ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸಹಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.       ಧಾರವಾಡ ಜಿಲ್ಲೆಯ ಅಳ್ನಾವರ ಪಟ್ಟಣದ ಕಾರು ಚಾಲಕ ಸಾಗರ ಬಿಡಕರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಇನ್ನೊಬ್ಬ ಬಾಲಕನಾಗಿದ್ದು ಹೆಸರು ತಿಳಿದುಬರಬೇಕಿದೆ. ಅಳ್ನಾವರದ ಗಿರೀಶ್ ನಾಂದೋಲ್ಕರ್, ವೀರಣ್ಣ ಕೋಟಾರಶೆಟ್ಟಿ, ರೇಮಾಕಾಂತ ಪಾಲ್ಕರ್, ವಿಠ್ಠಲ ಕಾಕಡೆ ಅವರಿಗೆ ಗಂಭೀರ ಗಾಯಗಳಾಗಿವೆ.   …

Read More »

ಸಾಧನೆ ಶ್ರಮಿಕರ ಸ್ವತ್ತು ರಾಜ್ಯ ಕ್ರೈಡಲ್ ಎಮ್.ಡಿ. ಮಹಾಂತೇಶ ಹಿರೇಮಠ ಅಭಿಮತ

ವೈಜ್ಞಾನಿಕ ಕೊಡುಗೆಗಳಿಂದ ಜಗತ್ತು ಅಂಗೈಯಲ್ಲಿ ಹಿಡಿಯಲು ಸಾಧ್ಯವಾಗಿದೆ. ಇಂಥಹ ವಿಶೇಷತೆಗಳನ್ನು ಕೊಡಲು ಶ್ರಮ ಅತ್ಯಗತ್ಯ. ಸಾಧನೆಗಳು ಶ್ರಮಿಕರ ಸ್ವತ್ತಾಗಿದೆ ಎಂದು ರಾಜ್ಯ ಕ್ರೈಡಲ್ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಹಿರೇಮಠ ಹೇಳಿದರು. ಅವರು ಶನಿವಾರ ಬೆಂಗಳೂರಿನ ಭೂಸೇನಾ ನಿಗಮದ ಕೇಂದ್ರ ಕಚೇರಿಯಲ್ಲಿ ಅಕ್ಕತಂಗೇರಹಾಳ ಗ್ರಾಮದ ಐ.ಐ.ಎಸ್.ಸ್ಸಿ. ಪಿ.ಎಚ್.ಡಿ ಸಾಧಕ , ಚೇತನ ಉರಬಿನಹಟ್ಟಿ ಅವರಿಂದ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದರು. ಜಗತ್ತಿನ ಹೆಸರಾಂತ ತಾಂತ್ರಿಕ ಸಂಸ್ಥೆಗಳಲ್ಲಿ ಅಗ್ರಮಾನ್ಯ ಹೆಸರು ಭಾರತೀಯ ವಿಜ್ಞಾನ ಸಂಸ್ಥೆಗಿದೆ. …

Read More »

ಜೈಲಿನಿಂದ ಬಿಡುಗಡೆಯಾಗುತ್ತಲೇ ʼಶಾಕಿಂಗ್‌ʼ ಸಂಗತಿ ಹೇಳಿದ ನಟಿ ಚಿತಾಳೆ

ಎನ್ ಸಿ ಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಅವಹೇಳನಾಕಾರಿ ಪದ್ಯ ಬರೆದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇಟಕಿ ಚಿತಾಳೆ, ಪೊಲೀಸ್ ಕಸ್ಟಡಿಯಲ್ಲಿದ್ದ ಸಂದರ್ಭದಲ್ಲಿ ತನಗೆ ಕಿರುಕುಳ ಮತ್ತು ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮನೆಯಲ್ಲಿದ್ದಾಗ ನನ್ನನ್ನು ಕಾನೂನುಬಾಹಿರವಾಗಿ ವಶಕ್ಕೆ ತೆಗೆದುಕೊಂಡ ಪೊಲೀಸರು ಯಾವುದೇ ಬಂಧನ ವಾರಂಟ್ ಮತ್ತು ನೊಟೀಸ್ ನೀಡದೇ ನನ್ನನ್ನು ಜೈಲಿಗೆ ಹಾಕಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂಬುದು ನನಗೆ ಗೊತ್ತಿದೆ. ನಾನು ಸತ್ಯವನ್ನೇ …

Read More »

ಸರ್ಕಾರಿ ಮತ್ತು  ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯ

ಶಿವಮೊಗ್ಗ: ಸರ್ಕಾರಿ (KSRTC) ಮತ್ತು  ಖಾಸಗಿ ಬಸ್ ( Privet Bus ) ನಡುವೆ ಅಪಘಾತ ( Accident ) ಸಂಭವಿಸಿ  50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ( Injured ) ಘಟನೆ ಶಿವಮೊಗ್ಗ ( Shivamogga ) ತಾಲೂಕಿನ ತೋಟದಕೆರೆ ಬಳಿ ನಡೆದಿದೆ. ಗಾಯಾಳುಗಳನ್ನು ಮೆಗ್ಗಾನ್ (Meggan Hospital) ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಬಸ್ ಚಾಲಕ ಶ್ರೀಧರ್‌ ಸ್ಥಿತಿ ಗಂಭೀರವಿದೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಖಾಸಗಿ ಬಸ್ ಕೆಕೆಬಿ ಶಿವಮೊಗ್ಗದಿಂದ ಶೃಂಗೇರಿ ಹೊರಟಿತ್ತು. …

Read More »

2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?

ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್‌ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …

Read More »

ಪಕ್ಷ ಸಂಘಟನೆಗೆ ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಘಟಫ್ರಭ: ಸಾಮಾಜಿಕ ಜಾಲತಾಣ ಸದ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಪಕ್ಷವನ್ನು ತಳ ಮಟ್ಟದಲ್ಲಿ ಸಂಘಟಿಸಲು ಆದ್ಯತೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ಪಟ್ಟಣದ ಡಾ. ಎನ್.ಎಸ್.‌ ಹರ್ಡೇಕರ್‌ ತರಬೇತಿ ಕೇಂದ್ರದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ನವ ಸಂಕಲ್ಪ ಚಿಂತನಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳು ದೇಶ-ವಿದೇಶಗಳಲ್ಲಿನ ಬೆಳೆವಣಿಗೆಗಳನ್ನು ಸೆಂಕೆಂಡ್‌ಗಳಲ್ಲಿ ಜನಸಾಮಾನ್ಯರಿಗೆ ತಲುಪಿಸಿ ಅವರ ನಡುವೆ ಸಂವಹನ ಸಾಮರ್ಥ್ಯ‌ವನ್ನು …

Read More »

ಮಗನಿಗೆ MBBS ಸೀಟು ಕೊಡಿಸಲು ವೈದ್ಯ ತಂದೆಯ ಪರದಾಟ; ವಂಚಕರು ಪೀಕಿದ್ದು ₹1.16 ಕೋಟಿ!

ಬೆಂಗಳೂರು: ಖಾಸಗಿ ಕಾಲೇಜಿನಲ್ಲಿ ಮಗನಿಗೆ ಎಂಬಿಬಿಎಸ್ ಸೀಟು ಕೊಡಿಸುವುದಾಗಿ ಹೇಳಿ ವೈದ್ಯನನ್ನು ನಂಬಿಸಿ 1.16 ಕೋಟಿ ರೂ ಪಡೆದು ವಂಚಿಸಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 24 ಲಕ್ಷ ರೂ. ನಗದು, 25 ಗ್ರಾಂ ಚಿನ್ನಾಭರಣ ಹಾಗೂ ನಕಲಿ ವಾಕಿಟಾಕಿಗಳನ್ನು ಜಪ್ತಿ ಮಾಡಲಾಗಿದೆ. ಕಲಬುರಗಿಯ ಆಳಂದ ಮೂಲದ ವೈದ್ಯ ಶಂಕರ್ ಬಾಬುರಾವ್ ನೀಡಿದ ದೂರಿನ ಮೇರೆಗೆ ವಂಚಕರಾದ ನಾಗರಾಜ್, ಮಲ್ಲಿಕಾರ್ಜುನ್, ಮಧು, ಬಸವರಾಜ್ ಹಾಗೂ ಹಮೀದ್​ ಎಂಬುವವರು ಪೊಲೀಸರ …

Read More »