ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …
Read More »ಸೋನಿಯಾ-ರಾಹುಲ್‌ಗೆ ಸಮನ್ಸ್; ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …
Read More »ಬೆಳಗಾವಿ: ಹುಕ್ಕೇರಿ ಹಿರೇಮಠದಲ್ಲಿ ಉಚಿತ ಯೋಗ ಶಿಬಿರ
ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ ಶುಕ್ರವಾರದಿಂದ ಐದು ದಿನಗಳ ಕಾಲ ನಡೆಯಲಿದೆ. ಜೂ.17 ರಿಂದ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು …
Read More »ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್ ದೊರಕಿದ್ದು, ಇನ್ನೂ …
Read More »ಬಾವಿಗೆ ಬೀಳುತ್ತಿದ್ದ ಸಾರಿಗೆ ಬಸ್ ಜಸ್ಟ್ ಮಿಸ್
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಬಸ್ ಇನ್ನೇನು ಆಳ ಬಾವಿಗೆ ಬೀಳಬೇಕು ಅನ್ನುಷ್ಟರಲ್ಲಿ ಆಪದ್ಬಾಂಧವನಾಗಿ ಬಂದ ಬೇವಿನ ಮರ, 70 ಜನರ ಪ್ರಾಣ ಉಳಿಸಿದೆ. ಇಂಡಿಯಿಂದ ವಿಜಯಪುರಕ್ಕೆ ಗುರುವಾರ ಇಂಡಿ ಡಿಪೋದ ಸಾರಿಗೆ ಬಸ್ ಪ್ರಯಾಣಿಕರನ್ನು ಕರೆದೊಯ್ಯುತ್ತಿತ್ತು. ನಾಗಠಾಣ ಮತ್ತು ಅಲಿಯಾಬಾದ್ ನಡುವಿನ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಬದಿಯ ತಗ್ಗು ಪದೇಶಕ್ಕೆ ನುಗ್ಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ. ಮರದ ಮುಂದೆಯೇ ಆಳ ಬಾವಿ ಇದೆ. ಬೇವಿನ ಮರ …
Read More »ರಾಹುಲ್ ಪರ ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ನಟಿ ರಮ್ಯಾ:
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತ ಸಂಸದ ರಾಹುಲ್ ಗಾಂಧಿಯವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ, ನಟಿ, ಮಾಜಿ ಸಂಸದೆ ರಮ್ಯಾ ಮತ್ತೆ ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಹುಲ್ ಗಾಂಧಿಯವರ ವಿರುದ್ಧ ವಿನಾಕಾರಣ ಸುಳ್ಳು ಆಪಾದನೆ ಹೊರಿಸಲಾಗಿದೆ …
Read More »ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ …
Read More »ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ- ನಲಪಾಡ್
ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್, ರಾಹುಲ್ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …
Read More »ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ
ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ. ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …
Read More »ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ
ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …
Read More »