Breaking News

ರಾಷ್ಟ್ರೀಯ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ

ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು.   *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ

ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …

Read More »

ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್

ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …

Read More »

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್

ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.

Read More »

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.

Read More »

777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಸ್ವಭಾವತಃ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ. ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು. ತಮ್ಮ ಪ್ರೀತಿಯ ನಾಯಿ ತೀರಿಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ …

Read More »

ಲಾಡ್ಜ್ ನ‌ಲ್ಲಿ ಕತ್ತು ಹಿಸುಕಿ ಪ್ರೇಯಸಿಯನ್ನು ಕೊಂದು ಪರಾರಿಯಾದ ಪ್ರಿಯಕರ

ಬೆಂಗಳೂರು: ಪ್ರೇಯಸಿಯನ್ನು ಪ್ರಿಯಕರನೇ ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಡಿಶಾ ಮೂಲದ ದೀಪ ಪದಮ್‌(32) ಕೊಲೆ ಯಾದ ಮಹಿಳೆ. ಕೃತ್ಯ ಎಸಗಿದ ಆರೋಪಿ ಅನ್ಮಲ್‌ ರತನ್‌ ಕಂದರ್‌ಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.   ಆರೋಪಿ ಅನ್ಮಲ್‌ ರತನ್‌ ಕಂದರ್‌ ಕೆಲ ವರ್ಷಗಳ ಹಿಂದೆ ದೀಪಾಲಿ ಎಂಬಾಕೆಯನ್ನು ಒಡಿಶಾದಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಆರೋಪಿ ಬಾಟಾ ಶೋರೂಮ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ದಂಪತಿ ಬೆಂಗಳೂರಿನ …

Read More »

ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವ ಮೈಕ್ರೋಸಾಫ್ಟ್‌

ಸಾಫ್ಟ್‌ವೇರ್‌ ದಿಗ್ಗಜ ಮೈಕ್ರೋಸಾಫ್ಟ್‌ ಕಂಪನಿಯು ತನ್ನ ಪ್ರಸಿದ್ಧ ವೆಬ್‌ ಬ್ರೌಸರ್‌ ಇಂಟರ್ನೆಟ್ ಎಕ್ಸ್‌ಪ್ಲೋರರ್ (IE) ಗೆ ನಿವೃತ್ತಿ ಘೋಷಿಸಿದೆ. ಈ ಹಿಂದೆ ಕಳೆದ ವರ್ಷವೇ ಈ ಕುರಿತು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ ಇಂಟರ್‌ನೆಟ್‌ ಎಕ್ಸ್‌ ಪ್ಲೋರರ್‌ಅನ್ನು ಜೂನ್‌15 ರಿಂದ ಸಂಪೂರ್ಣವಾಗಿ ನಿವೃತ್ತಗೊಳಿಸುತ್ತಿರುವುದಾಗಿ ಹೇಳಿದೆ. ಇದರ ಬದಲಾಗಿ ಕ್ರೋಮಿಯಂ-ಆಧಾರಿತ ಎಡ್ಜ್ ಅನ್ನು ವಿಂಡೋಸ್ ಪಿಸಿಗಳಿಗೆ ಪ್ರಾಥಮಿಕ ಬ್ರೌಸರ್‌ ಆಗಿ ಮಾರ್ಪಡಿಸಲಾಗುತ್ತದೆ. ಪ್ರಸ್ತುತ ಜನರೇಷನ್ನಿನ ವಿಂಡೋಸ್‌ ಎಡ್ಜ್‌ ಬ್ರೌಸರ್‌ “ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ಗಿಂತ ವೇಗವಾದ, …

Read More »

ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, …

Read More »