ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನೀಲ್ ಸಂಕ್ ಮತ್ತು ಶಿಕ್ಷಕರು ಪ್ರತಿನಿಧಿಯಾಗಿರುವ ಪ್ರಕಾಶ್ ಹುಕ್ಕೇರಿ ಗೆಲ್ಲುವ ವಿಶ್ವಾಸವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ವ್ಯಕ್ತಪಡಿಸಿದರು. ಬೆಳಗಾವಿ ನಗರದ ಮರಾಠಾ ಸಭಾಂಗಣದಲ್ಲಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದೊಂದು ಅತ್ಯಂತ ಸೂಕ್ಷ್ಮ, ಬುದ್ಧಿವಂತರ ಚುನಾವಣೆಯಾಗಿದೆ. ಸ್ವತಂತ್ರ ಸಿಕ್ಕ ನಂತರ ಶಿಕ್ಷಣ ಕ್ಷೇತ್ರದಲ್ಲಿ ಮುಂದುವರೆಯಲು, ಅಭಿವೃದ್ಧಿ ಕಾಣಲು ಕಾಂಗ್ರೆಸ್ ಸರ್ಕಾರ ರೂಪಿಸಿದ ಶಿಕ್ಷಣ ನೀತಿಗೆ ಕಾರಣವಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು …
Read More »ಬೆಳಗಾವಿಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆ ವಶಕ್ಕೆ
ಬೆಳಗಾವಿ: ಜಿಲ್ಲೆಯ ಮಿಡಕನಟ್ಟಿಯಲ್ಲಿ 2.58 ಲಕ್ಷ ಮೌಲ್ಯದ ಗಾಂಜಾ ಬೆಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಮಿಡಕನಟ್ಟಿ ಗ್ರಾಮದ ಗದ್ದೆಯಲ್ಲಿ ಗಾಂಜಾ ಬೆಳೆಯಲಾಗಿತ್ತು. ಈ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಬೆಳೆಯನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಗಾಂಜಾ ಬೆಳೆದಿದ್ದ ಪರಪ್ಪ ಸವಸುದ್ದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಡಿಸಿಆರ್‍ಬಿ, ಸಿಇಎನ್ ಹಾಗೂ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಇದೇ ವೇಳೆ 2 ಲಕ್ಷ 58 ಸಾವಿರ …
Read More »ಡಜನ್ ಆಕಾಂಕ್ಷಿಗಳಲ್ಲಿ ಟಿಕೆಟ್ ಯಾರಿಗೆ – ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್
ಬೆಂಗಳೂರು: ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಬಹುತೇಕ ಅಂತಿಮಗೊಳ್ಳುವ ನಿರೀಕ್ಷೆ ಇದೆ. ಈ ಸಂಬಂಧ ನವದೆಹಲಿಯಲ್ಲಿ ಗುರವಾರ ಬಿಜೆಪಿ ವರಿಷ್ಠರ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. ಕರ್ನಾಟಕದ 4 ಸ್ಥಾನಗಳ ಪೈಕಿ 2 ಸ್ಥಾನಗಳನ್ನು ಬಿಜೆಪಿ ಸುಲಭವಾಗಿ ಗೆಲ್ಲಬಹುದಾಗಿದ್ದು, ಕಣಕ್ಕಿಳಿಯುವ ಇಬ್ಬರು ಅಭ್ಯರ್ಥಿಗಳ ಆಯ್ಕೆ ನಡೆಯಬೇಕಿದೆ. ಹಾಲಿ ಸದಸ್ಯೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಡಜನ್ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯ ಬಿಜೆಪಿ ಕೋರ್ ಕಮಿಟಿ ವರಿಷ್ಠರಿಗೆ ರವಾನಿಸಿದೆ. …
Read More »ವಿಜಯೇಂದ್ರಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ: ಬಿಎಸ್ ವೈ ವಿಶ್ವಾಸ
ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ತಪ್ಪಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ವಿಲ್ಲ, ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ .ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದರು. ಮುಂದಿನ ಚುನಾವಣೆ ವಿಜಯೇಂದ್ರ ಸ್ಪರ್ಧೆ …
Read More »ಬೆಳಗಾವಿಯಲ್ಲಿ ಮಾವು ಮೇಳ ಮೇ 26ರಿಂದ
ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ತಲುಪಿಸುವ ಉದ್ದೇಶದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್‌ನಲ್ಲಿ ಮೇ 26ರಿಂದ ಮೇ 29ರವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ‘ಜಿಲ್ಲೆಯ ಮಾವು ಬೆಳೆಗಾರರು ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಉತ್ಪನ್ನವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಯೋಗ್ಯ ಬೆಲೆಗೆ ಮಾರಬಹುದು. ವಿಷೇಶವಾಗಿ ಈ ಬಾರಿ ಬೆಳಗಾವಿ, ಧಾರವಾಡ ಹಾಗೂ ರತ್ನಗಿರಿ ರೈತರಿಂದ …
Read More »ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್‍ನಿಂದ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿ
ಬೆಳಗಾವಿ: ನ್ಯೂಯಾರ್ಕ್‍ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್‍ನಿಂದ ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಭಾರತೀಯ …
Read More »ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯ
ಬೆಂಗಳೂರು: ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು ನಿರ್ಧರಿಸುತ್ತಿರುವುದು ಕರ್ನಾಟಕದ ದೌರ್ಭಾಗ್ಯವೆಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಈ ಬಗ್ಗೆ ಸೋಮವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಶಿಕ್ಷಣ ತಜ್ಞರು ಇರಬೇಕಾದ ಜಾಗದಲ್ಲಿ ಕೊಳಕು ಮಂಡಲ ಹಾವಿನಂತಹ ಕೊಳಕು ವಿಷಕಾರಿ ವ್ಯಕ್ತಿಯನ್ನು ಕೂರಿಸಿದ್ದು ಸರ್ಕಾರದ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದೆ. ಶುದ್ಧ ಬೀದಿ ಪೋಕರಿಯೊಬ್ಬ ಇಡೀ ನಾಡಿನ ಮಕ್ಕಳು ಏನು ಕಲಿಯಬೇಕೆಂದು …
Read More »ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ
ದಾವೋಸ್ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಿವಿಧ ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ದಾವೋಸ್‍ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಇಂದು ಎಬಿಇನ್ ಬೇವ್ ಸಂಸ್ಥೆಯ ನಿಯಂತ್ರಣ ಮತ್ತು ಸಾರ್ವಜನಿಕ ನೀತಿ ಜಾಗತಿಕ ಉಪಾಧ್ಯಕ್ಷ ಆಂಡ್ರೆಸ್ ಪೆನಾತೆ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆಗೆ ಸಂಬಂಧಿಸಿದಂತೆ ಚರ್ಚಿಸಿದರು. ರಾಜ್ಯ ಸರ್ಕಾರ ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ನೀಡುತ್ತಿರುವ ವಿಶೇಷ ಸವಲತ್ತುಗಳು ಹಾಗೂ ರಿಯಾಯಿತಿಗಳ …
Read More »ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಕಾಂಗ್ರೆಸ್ ಮುಖಂಡರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ. ತನಿಖೆ ನಂತರ ಎಲ್ಲವೂ ಹೊರಬರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು. ‘ಪಿಎಸ್‌ಐ ಹಗರಣ ಕುರಿತು ಸಿಐಡಿ ವಿಶೇಷ ತನಿಖೆ ನಡೆಸುತ್ತಿದೆ. ಈಗಾಗಲೇ ಕಲಬುರಗಿಯಲ್ಲಿ ₹ 1 ಕೋಟಿ, ಬೆಂಗಳೂರಿನಲ್ಲಿ ₹ 2.19 ಕೋಟಿ ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಕೋನಗಳಿಂದಲೂ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ನೀಡಲಾಗುವುದು. …
Read More »ಸಿಲಿಕಾನ್ ಸಿಟಿ’ಯನ್ನು ‘ಸ್ವಿಮ್ಮಿಂಗ್ ಪೂಲ್’ ಮಾಡಿದ ಹೆಗ್ಗಳಿಕೆ ‘ಬಿಜೆಪಿ ಸರ್ಕಾರ’ದ್ದು:H.D.K.
ಬೆಂಗಳೂರು: ಸಿಲಿಕಾನ್ ಸಿಟಿಯನ್ನು ( Silicon City ) ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ( BJP Government ) ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ( HD Kumaraswamy ) ವಾಗ್ದಾಳಿ ನಡೆಸಿದ್ದಾರೆ. …
Read More »