Breaking News

ರಾಷ್ಟ್ರೀಯ

ಪಂಜಾಬ್ ವಿರುದ್ಧ ಸೇಡು ತೀರಿಸಿಕೊಳ್ಳಲು ಮೈದಾನಕ್ಕೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್

ಇಂಡಿಯನ್​ ಪ್ರೀಮಿಯರ್​ ಲೀಗ್​ ಟೂರ್ನಿಯ 64ನೇ ಪಂದ್ಯದಲ್ಲಿಂದು ಪಂಜಾಬ್​ ಕಿಂಗ್ಸ್​​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಮುಖಾಮುಖಿಯಾಗಿವೆ. ಟಾಸ್ ಗೆದ್ದಿರುವ ಕನ್ನಡಿಗ ಮಯಾಂಕ್ ಅಗರ್ವಾಲ್, ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈನ ಡಿ.ವೈ.ಪಾಟೀಲ್​ ಮೈದಾನದಲ್ಲಿ ಪಂದ್ಯ ನಡೆಯುತ್ತಿದ್ದು, ಎರಡೂ ತಂಡಗಳು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿವೆ. ಈ ಟೂರ್ನಿಯಲ್ಲಾದ ಮೊದಲ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್​ ಪಡೆಯನ್ನ​ 9 ವಿಕೆಟ್​ಗಳಿಂದ ಮಣಿಸಿತ್ತು. ಇದೀಗ ಪಂಜಾಬ್​ ಕಿಂಗ್ಸ್​​ ಸೇಡು ತೀರಿಸಿಕೊಳ್ಳೋ ಲೆಕ್ಕಾಚಾರದಲ್ಲಿದೆ.

Read More »

ಹಿಂದು ಯುವಕ-ಮುಸ್ಲಿಂ ಯುವತಿಯ ಲವ್ ಸ್ಟೋರಿ: ಮದುವೆಯಾದ ಬಳಿಕ ನಡೀತು ಭಾರೀ ಹೈಡ್ರಾಮಾ!

ಕೊಪ್ಪಳ: ಒಂದು ವರ್ಷದಿಂದ ಪ್ರೀತಿಸುತ್ತಿದ್ದ ಅಂತರ್ಧಮೀಯ ಜೋಡಿ, 5 ದಿನದ ಹಿಂದೆ ಮನೆ ಬಿಟ್ಟು ಹೋಗಿ ಮದುವೆ ಆಗಿದೆ. ಇದೀಗ ನವ ದಂಪತಿ ರಕ್ಷಣೆ ಕೋರಿ ಪೊಲೀಸ್ ಠಾಣೆಗೆ ಬಂದಿದ್ದು, ಎರಡೂ ಗುಂಪಿನ ಮುಖಂಡರು ಠಾಣೆಗೆ ದೌಡಾಯಿಸಿದ್ದಾರೆ. ನಿನ್ನೆ ಸಂಜೆಯಿಂದಲೂ ಹೈಡ್ರಾಮ ಶುರುವಾಗಿದ್ದು, ಮದುವೆ ಪ್ರಹಸನ ಇಂದು ಮುಂದುವರಿಯಿತು.   ಕನಕಗಿರಿ ಪಟ್ಟಣದ 21 ವರ್ಷದ ದಿಲ್ ಶಾದ್ ಬೆಗಂ‌ ಮತ್ತು 22 ವರ್ಷದ ಕನಕರೆಡ್ಡಿ ಪ್ರೇಮ ವಿವಾಹ ಪ್ರಕರಣ ನಿನ್ನೆಯಿಂದ …

Read More »

35 ವಯೋಮಾನದವರಿಗೆ ಆದ್ಯತೆ.. 75 ದಾಟಿದವರಿಗೆ ಕೋಕ್ : ಇದು ಕಾಂಗ್ರೆಸ್ ನ ತೀರ್ಮಾನ

ಉದಯಪುರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು, ಪಕ್ಷ ಸಂಘಟನೆ ಮಾಡುವ ಉದ್ದೇಶದಿಂದ ರಾಜಸ್ಥಾನದಲ್ಲಿ ಕಾಂಗ್ರೆಸ್ ಚಿಂತನಾ ಶಿಬಿರ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದಿಂದ ಸಿದ್ದರಾಮಯ್ಯ, ಡಿಕೆಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಇನ್ನು ಗುಲಾಬ್ ನಬಿ, ಹಿರಿಯ ನಾಯಕ ಪಿ ಚಿದಂಬರಂ, ಪ್ರಿಯಾಂಕ ಗಾಂಧಿ ವಾದ್ರಾ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ದೇಶದ ವಿವಿದೆಡೆಯ ನಾಯಕರು ಒಟ್ಟಿಗೆ ಸೇರಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಚಿಂಥನ ಮಂಥನ …

Read More »

ಕಾಮುಕ ಪ್ರಿಯಕರನಿಗಾಗಿ ಅಪ್ರಾಪ್ತ ಮಗಳನ್ನೇ ಮಂಚಕ್ಕೆ ಕಳಿಸಿದ ಪಾಪಿ ತಾಯಿ: ಮಗುವನ್ನು ಹೆತ್ತ ಬಾಲಕಿ!

ಚೆನ್ನೈ: ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರುವುದಿಲ್ಲ ಎನ್ನುವ ನಾಣ್ಣುಡಿ ಇದೆ. ಆದರೆ ಇಲ್ಲೊಂದು ಭಯಾನಕ ಹಾಗೂ ಮಾನವ ಕುಲವೇ ತಲೆತಗ್ಗಿಸುವ ಘಟನೆಯೊಂದು ವರದಿಯಾಗಿದೆ. ಹೆತ್ತಾಕೆಯೇ ತನ್ನ ಮಗಳನ್ನು ಪ್ರಿಯಕರನಿಗೆ ಒಪ್ಪಿಸಿ, ಅತ್ಯಾಚಾರ ಮಾಡಲು ಅವಕಾಶ ಕೊಟ್ಟಿದ್ದಾಳೆ! ಇದೀಗ ಆ ಬಾಲಕಿ ತಾಯಿಯ ಪ್ರಿಯಕರನಿಂದ ಗರ್ಭ ಧರಿಸಿ ಮಗು ಹೆತ್ತಿದ್ದಾಳೆ! ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ. ಚೆನ್ನೈನ ಒಟ್ಟೇರಿ ಪ್ರದೇಶದ 40 ವರ್ಷದ ಮಹಿಳೆ ವಿಕೃತಿ ಮೆರೆದವಳು. ಈಕೆ …

Read More »

ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್​ಬುಕ್​ನಿಂದ. ಅಂಥ ಫೇಸ್​ಬುಕ್​ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್​ ಝುಕರ್​ಬರ್ಗ್​ ಜನ್ಮದಿನಕ್ಕೆ ಫೇಸ್​ಬುಕ್​ ಬಳಕೆದಾರರು ಜನ್ಮದಿನದ ಶುಭಾಶಯ

ಬೆಂಗಳೂರು: ಅದೆಷ್ಟೋ ಜನರ ಜನ್ಮದಿನ ಯಾವಾಗ ಎಂದು ಸಾಮಾನ್ಯವಾಗಿ ತಿಳಿಯುವುದೇ ಫೇಸ್​ಬುಕ್​ನಿಂದ. ಅಂಥ ಫೇಸ್​ಬುಕ್​ ಎಂಬ ವೇದಿಕೆಯನ್ನು ಒದಗಿಸಿದ ಮಾರ್ಕ್​ ಝುಕರ್​ಬರ್ಗ್​ ಜನ್ಮದಿನಕ್ಕೆ ಫೇಸ್​ಬುಕ್​ ಬಳಕೆದಾರರು ಜನ್ಮದಿನದ ಶುಭಾಶಯಗಳನ್ನೇ ಹರಿಸಿದ್ದಾರೆ.   1984ರ ಮೇ 14ರಂದು ಜನಿಸಿದ ಮಾರ್ಕ್​ ಝುಕರ್​ಬರ್ಗ್​ ಫೇಸ್​ಬುಕ್​ ಆರಂಭಿಸಿದ್ದು, ಜಗತ್ತಿನಾದ್ಯಂತರ ಜನರಿಗೆ ಅಭಿವ್ಯಕ್ತಿಗೆ ಅವಕಾಶ ಮಾಡಿಕೊಟ್ಟಿದ್ದಲ್ಲದೆ, ಜನರನ್ನು ಬೆಸೆಯುವ ಸಾಧನವನ್ನೂ ಆಗಿಸಿದ್ದಾರೆ. ಅಂಥ ಝುಕರ್​ಬರ್ಗ್​ಗೆ 17 ಲಕ್ಷಕ್ಕೂ ಅಧಿಕ ಮಂದಿ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. ಜನ್ಮದಿನಕ್ಕೆ ಹೇಳುವಂಥ …

Read More »

ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್‌, ಪರಿಷತ್‌ಗೆ ವಿಜಯೇಂದ್ರ ಆಯ್ಕೆಗೆ ಸಮ್ಮತಿ

ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್‌ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.   ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ …

Read More »

ಕರ್ನಾಟಕ ಸೇರಿದಂತೆ ಈ 15 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ಶುಕ್ರವಾರ ಈಶಾನ್ಯ ಮತ್ತು ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) ಹೆಚ್ಚಿನ ಭಾಗಗಳಲ್ಲಿ ಗುಡುಗು ಮತ್ತು ಸಿಡಿಲು ಸಹಿತ ಬಿರುಗಾಳಿ ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. . ಏತನ್ಮಧ್ಯೆ, ದೇಶದ ಮಧ್ಯ, ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿಗಾಳಿ ಪರಿಸ್ಥಿತಿಗಳಿಗೆ ಸಾಕ್ಷಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. IMD ಬುಲೆಟಿನ್ ಪ್ರಕಾರ, …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕ..

ನಾಸಿಕ್​​(ಮಹಾರಾಷ್ಟ್ರ): ಬೆಕ್ಕಿನ ಮರಿ ಎಂದುಕೊಂಡು ಚಿರತೆ ಮರಿವೊಂದನ್ನ ಬಾಲಕನೊಬ್ಬ ಮನೆಗೆ ಕರೆತಂದಿರುವ ಘಟನೆ ಮಹಾರಾಷ್ಟ್ರದ ನಾಸಿಕ್​​ನಲ್ಲಿ ನಡೆದಿದೆ. ಇದರಿಂದ ಕುಟುಂಬಸ್ಥರು ಕೆಲ ಕಾಲ ದಿಢೀರ್​ ಶಾಕ್​​​ಗೊಳಗಾಗಿದ್ದಾರೆ. ಬೆಕ್ಕಿನ ಮರಿ ಎಂದು ಚಿರತೆ ಮರಿ ಮನೆಗೆ ಹೊತ್ತು ತಂದ ಬಾಲಕನಾಸಿಕ್​​ನ ಮಾಲೆಗಾಂವ್​​ನ ರೈತ ಠಾಕ್ರೆ ಕುಟುಂಬವಾಗಿದ್ದು, ಇವರು ವಾಸ ಮಾಡುವ ಮನೆಯ ಸ್ವಲ್ಪ ದೂರದಲ್ಲಿ ಚಿರತೆವೊಂದು ಮರಿಗೆ ಜನ್ಮ ನೀಡಿದೆ. ಆಟವಾಡುತ್ತ ಅಲ್ಲಿಗೆ ತೆರಳಿರುವ ಬಾಲಕ ಅದು ಬೆಕ್ಕಿನ ಮರಿ ಎಂದುಕೊಂಡು ಮನೆಗೆ …

Read More »

ಶಿವಣ್ಣ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿ

ವರನಟ, ಕನ್ನಡ ಸಿನಿ ಪ್ರಿಯರ ಆರಾಧ್ಯದೈವ ಡಾ.ರಾಜ್‌ಕುಮಾರ್‌ ಕುಟುಂಬದಿಂದ ಮತ್ತೊಬ್ಬ ಸದಸ್ಯರು ಸಿನಿಮಾ ಕ್ಷೇತ್ರಕ್ಕೆ ಭರ್ಜರಿ ಎಂಟ್ರಿ‌ ಕೊಟ್ಟಿದ್ದಾರೆ.ನಟ ಡಾ.ಶಿವರಾಜ್‌ಕುಮಾರ್‌ ಅವರ ಪುತ್ರಿ ನಿವೇದಿತಾ ರಾಜ್‌ಕುಮಾರ್ ಸಿನಿಮಾ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದು, ಹೊಸ ಪ್ರತಿಭೆಗಳಿಗೆ ಸಾಥ್‌ ಕೊಟ್ಟಿದ್ದಾರೆ.   ಕನ್ನಡದಲ್ಲಿ ಕಮರ್ಷಿಯಲ್‌ ಸಿನಿಮಾಗಳ ನಡುವೆ ಮೌಲ್ಯಾಧಾರಿತ ಚಿತ್ರಗಳು ಕೂಡ ಸದ್ದು ಮಾಡುತ್ತಿವೆ. ಇದರ ಜೊತೆಗೆ ಕಮರ್ಷಿಯಲ್‌ ಕಥೆ ಹೇಳುವಂಥ ವೆಬ್‌ ಸೀರಿಸ್‌ಗಳಿಗೆ ಯಾವುದೇ ಕೊರತೆ ಇಲ್ಲ ಅನ್ನೋದನ್ನ ತೋರಿಸೋದಕ್ಕೆ ಎಂಟ್ರಿಕೊಡುತ್ತಿದೆ ‘ಹನಿಮೂನ್’ …

Read More »