ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ …
Read More »ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ
ಬೆಳಗಾವಿ: ‘ಜಿಲ್ಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ರಾಷ್ಟೀಯ ಹಸಿರು ನ್ಯಾಯಮಂಡಳಿಯ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸುಭಾಷ ಬಿ.ಅಡಿ ಸೂಚಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ‘ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಅಂಗಡಿ, ಮಳಿಗೆಗಳು ಹಾಗೂ ಮಾಲ್‌ಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚಿಸಬೇಕು. ಮಾರುವುದು ಕಂಡುಬಂದಲ್ಲಿ, ವ್ಯಾಪಾರಸ್ಥರಿಗೆ ದಂಡ ವಿಧಿಸಬೇಕು’ …
Read More »ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ, ಹೊಸ ದರ ಇಂದಿನಿಂದ ಜಾರಿ
ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ (Domestic LPG cylinder) ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ. ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು …
Read More »ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ ಮೇಲೆ ಇಡಿ ದಾಳಿ; ಬರೋಬ್ಬರಿ 19.31 ಕೋಟಿ ರೂ. ನಗದು ಪತ್ತೆ
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿ ಸುಮಾರು 19.31 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ. ಜಾರ್ಖಂಡ್, ಬಿಹಾರ, ದೆಹಲಿ ಹಾಗೂ ಇತರ ನಗರಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ, ಒಟ್ಟು 19.31 ಕೋಟಿ …
Read More »ಜಾಗ ಮಾರಾಟ ಹಿನ್ನೆಲೆ ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಇಬ್ಬರ ಬಂಧನ
ಮಂಗಳೂರು : ವೃದ್ಧರೋರ್ವರ ಜಾಗ ಮಾರಾಟಕ್ಕೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿಸಿ 60 ಲ.ರೂ.ಗೂ ಅಧಿಕ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಉಡುಪಿಯ ಅಶೋಕ ಕುಮಾರ್(47) ಮತ್ತು ರೇಷ್ಮಾ ವಾಸುದೇವ್ ನಾಯಕ್ (36) ಎಂಬವರನ್ನು ಬಂಧಿಸಿದ್ದಾರೆ. ಬೆಂಗಳೂರು ಮೂಲದ, ಪ್ರಸ್ತುತ ಬಜಪೆ ಬಳಿ ವಾಸವಿರುವ ಕ್ರಿಸ್ಟಿನ್ ಎಡ್ವಿನ್ ಜೋಸೆಫ್ ಗೋನ್ಸಾಲ್ವಿಸ್(84) ವಂಚನೆಗೊಳಗಾದವರು. ಅವರು ಉಡುಪಿ ಜಿಲ್ಲೆಯ ಮೂಡುತೋನ್ಸೆ ಗ್ರಾಮದಲ್ಲಿ 77 ಸೆಂಟ್ಸ್ ಜಾಗ ಹೊಂದಿದ್ದು ಅದನ್ನು ಮಾರಾಟ …
Read More »ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’
ಬೆಳಗಾವಿ: ‘ನಾನು ಯಾರಿಗೂ ಐದು ಪೈಸೆಯನ್ನೂ ಕೊಡದೆ, ಚಹಾ ಕೂಡ ಕುಡಿಸದೆ ಮುಖ್ಯಮಂತ್ರಿಯಾಗಿದ್ದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿ, ಶಾಸಕರು ಆಯ್ಕೆ ಮಾಡಿದ್ದರು. ಹೈಕಮಾಂಡ್ ಒಪ್ಪಿತ್ತು. ಐದು ವರ್ಷ ಯಾರಿಗೂ ಹಣ ಕೊಡದೆ ಮುಖ್ಯಮಂತ್ರಿ ಸ್ಥಾನವನ್ನು ನಿರ್ವಹಿಸಿದೆ’ ಎಂದು ಪ್ರತಿಕ್ರಿಯಿಸಿದರು. ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ‘ದೆಹಲಿಯಿಂದ ನನ್ನ ಬಳಿಗೆ ಬಂದಿದ್ದ ಕೆಲವರು, …
Read More »ನಲಿವು-ನೋವುಣಿಸಿದ ಏಪ್ರಿಲ್ ಮಳೆ: ವಾಡಿಕೆಗಿಂತ ಹೆಚ್ಚಿನ ವರ್ಷಧಾರೆ
ಬೆಳಗಾವಿ: ಜಿಲ್ಲೆಯಲ್ಲಿ ಏಪ್ರಿಲ್‌ನಲ್ಲಿ ವಾಡಿಕೆಗಿಂತ ಸರಾಸರಿ ಶೇ 155ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ನೋವು-ನಲಿವು ಎರಡನ್ನೂ ನೀಡಿದೆ. ಬೇಸಿಗೆಯ ಸಂದರ್ಭದಲ್ಲಿ ತಂಪನ್ನೆರೆಯುವ ಜೊತೆಗೆ ನಷ್ಟವನ್ನೂ ಉಂಟು ಮಾಡಿದೆ. ಗಡಿ ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ 25.5 ಮಿ.ಮೀ. ಮಳೆಯಾಗಬೇಕಿತ್ತು. ವಾಸ್ತವವಾಗಿ 64.9 ಮಿ.ಮೀ. ಮಳೆ ಸುರಿದಿದೆ. ಕೆಲವು ದಿನಗಳು ನಿತ್ಯ ಸಂಜೆ ಗುಡುಗು-ಸಿಡಿಸಲು ಸಹಿತ ವರುಣನ ಕೃಪೆಯಾಯಿತು. ಅಲ್ಲಲ್ಲಿ ಜೋರಾಗಿಯೇ ‘ಅಡ್ಡ ಮಳೆ’ಯಾಯಿತು. ಇದರಿಂದಾಗಿ ಬೇಸಿಗೆಯಲ್ಲೂ ಹಲವು ದಿನಗಳು ತಂಪಿನ ವಾತಾವರಣ …
Read More »ವೈದ್ಯನೊಬ್ಬ ಪೋಸ್ಟ್ ಮಾರ್ಟಂ ಮಾಡಬೇಕಾದರೆ 16000 ರೂ. ನೀಡುವಂತೆ ಲಂಚಕ್ಕೆ ಬೇಡಿಕೆ
ನೆಲ್ಲೂರು(ಆಂಧ್ರಪ್ರದೇಶ): ಆತ್ಮಹತ್ಯೆ ಮಾಡಿಕೊಂಡ ಪತಿ ಶವವನ್ನು ಪೋಸ್ಟ್‌ಮಾರ್ಟಂ ಮಾಡಲು ಮಹಿಳೆಯೊಬ್ಬರು ಹರಸಾಹಸ ಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯನೊಬ್ಬ ಲಂಚ ಕೇಳಿರುವ ಅಮಾನವೀಯ ಘಟನೆಯೊಂದು ನೆಲ್ಲೂರು ಜಿಲ್ಲೆಯ ಉದಯಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಲಂಚಕ್ಕೆ ಬೇಡಿಕೆ ಇಟ್ಟ ವೈದ್ಯನ ಹೆಸರು ಸಂದಾನಿ ಬಾಷಾ. ಮರಣೋತ್ತರ ಪರೀಕ್ಷೆ ಮಾಡಲು ಲಂಚ ಕೇಳಿದ ವೈದ್ಯದೂರವಾಣಿ ಮೂಲಕ ಮಾತನಾಡಿರುವ ವೈದ್ಯ ಹಣ ನೀಡಿದರೆ ಮಾತ್ರ ಗಂಡನ ದೇಹವನ್ನು ಪೋಸ್ಟ್‌ಮಾರ್ಟಂ ಮಾಡುವುದಾಗಿ ಹೇಳಿದ್ದಾರೆ. ಇದರಿಂದ ದಿಗ್ಭ್ರಮೆಗೊಂಡ ಮಹಿಳೆ …
Read More »ಪಿಎಸ್ಐ ನೇಮಕಾತಿ ಹಗರಣ: ಡಿವೈಎಸ್ಪಿ, ಇನ್ಸ್ಪೆಕ್ಟರ್ ಸಿಐಡಿ ಬಲೆಗೆ
ಬೆಂಗಳೂರು/ ಕಲಬುರಗಿ: ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ 545 ಹುದ್ದೆ ನೇಮಕಾತಿಯಲ್ಲಿ ಅಕ್ರಮ ಎಸಗಿರುವ ಪ್ರಕರಣದಲ್ಲಿ ಶಾಮೀಲಾಗಿರುವ ಡಿವೈಎಸ್ಪಿ, ಇನ್ಸ್ಪೆಕ್ಟರ್ನನ್ನು ಸಿಐಡಿ ಕೊನೆಗೂ ಬಂಧಿಸಿದೆ. ಈ ಇಬ್ಬರಿಗೂ ಕೋಳ ತೊಡಿಸುವ ಮೂಲಕ ಬಂಧಿತರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆ ಲಿಂಗಸೂಗುರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಮತ್ತು ಬೆರಳಚ್ಚು ವಿಭಾಗದ ಇನ್ಸ್ಪೆಕ್ಟರ್ ಆನಂದ ಮೇತ್ರೆನನ್ನು ಕಲಬುರಗಿಯಲ್ಲಿ ವಿಚಾರಣೆಗಾಗಿ ಕರೆದು ಬಂಧಿಸಲಾಗಿದೆ. ಅದೇ ರೀತಿ ಮೈಸೂರು ರಸ್ತೆ ಕುಂಬಳಗೋಡು ಠಾಣೆ ಕಾನ್ಸ್ಟೇಬಲ್ ಸೋಮನಾಥ್ ಮತ್ತು …
Read More »ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ, ಆಗ ಪ್ರಯತ್ನ ಈಗ ಅನಿವಾರ್ಯತೆ
ನಿಜ ಹೇಳಬೇಕೆಂದರೆ, ಹೊಸಬನ ತರಹ ಫೀಲ್ ಆಗುತ್ತಿದೆ …’ ಶರಣ್ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡೂವರೆ ವರ್ಷಗಳಾಗಿವೆ. 2019ರ ಅಕ್ಟೋಬರ್ನಲ್ಲಿ ಅವರ ‘ಅಧ್ಯಕ್ಷ ಇನ್ ಅಮೆರಿಕಾ’ ಬಿಡುಗಡೆಯಾಗಿತ್ತು. ಇಂದು ‘ಅವತಾರ ಪುರುಷ 1′ ಬಿಡುಗಡೆಯಾಗುತ್ತಿದೆ. ಈ ಎರಡೂವರೆ ವರ್ಷಗಳಲ್ಲಿ ಸಾಕಷ್ಟು ಬದಲಾಗಿದೆ. ಜನರ ಅಭಿರುಚಿ, ಮನಸ್ಥಿತಿ, ಚಿತ್ರಗಳ ಶೈಲಿ ಎಲ್ಲವೂ ಬೇರೆಯಾಗಿದೆ. ಹೀಗಿರುವಾಗ, ‘ಅವತಾರ ಪುರುಷ’ ಬಗ್ಗೆ ಏನನ್ನುತ್ತೀರಿ? ಎಂದರೆ, ಸರಿಯಾದ ಸಮಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ ಎಂಬ ಉತ್ತರ ಅವರಿಂದ ಬರುತ್ತದೆ. …
Read More »