Breaking News

ರಾಷ್ಟ್ರೀಯ

ಶೀಘ್ರವೇ ದೇಶದಲ್ಲಿ ‘CAA ಜಾರಿ – ಗೃಹ ಸಚಿವ ಅಮಿತ್‌ ಶಾ ಘೋಷಣೆ |

ಕೋವಿಡ್ -19 ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಹೇಳಿದ್ದಾರೆ. ಅವರು ಇದೇ ವೇಳೇ ಅವರು ‘ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು. ಇನ್ನೂಟಿಎಂಸಿ ಸಿಎಎ ಬಗ್ಗೆ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ …

Read More »

ಮೇ 10ರೊಳಗೆ ಸಂಪುಟ ಪುನಾರಚನೆ: ಅಶೋಕ್, ಸುಧಾಕರ್, ಎಂಟಿಬಿ, ಸೋಮಣ್ಣಗೆ ಕೊಕ್? ಪ್ರೀತಮ್, ಯತ್ನಾಳ್, ವಿಜಯೇಂದ್ರ ಗೆ ಲಕ್?

ಬೆಂಗಳೂರು: ಬಸವರಾಜ ಬೊಮ್ಮಾಯಿ ಸರ್ಕಾರದ ಸಂಪುಟ ಪುನಾರಚನೆ ಇನ್ನು ಒಂದೆರಡು ದಿನಗಳಲ್ಲಿ ನಡೆಯಲಿದೆ. ಹೀಗಾಗಿ ಮೇ 11 ರಂದು ಗುರುವಾರ ಸಂಪುಟ ಸಭೆ ನಿಗದಿಯಾಗಿದೆ. ಸಂಪುಟ ಪುನಾರಚನೆ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದರು. ಸಿಎಂ ಬೊಮ್ಮಾಯಿ ಅವರ ಜೊತೆ ಯಾರ್ಯಾರನ್ನು ಕೈ ಬಿಡಬೇಕು ಮತ್ತು ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ ಎಂದು ವರದಿಯಾಗಿದೆ. ಸಂಪುಟ ಪುನಾರಚನೆ ನಿರ್ಧಾರದೊಂದಿಗೆ ಅಮಿತ್ …

Read More »

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ!

ನೆಲಮಂಗಲ: ಮದ್ವೆಯಾಗಿ ಇಬ್ಬರು ಮಕ್ಕಳಿದ್ದರೂ ಈತನಿಗೆ ನಾದಿನಿ ಮೇಲಿತ್ತು ಮೋಹ. ಇದಕ್ಕೆ ಅಡ್ಡಿಯಾದ ಪತ್ನಿಯನ್ನೇ ಕೊಂದ ಗಂಡ ಸುಳ್ಳು ಕಥೆ ಕಟ್ಟಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಇಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಗ್ರಾಮದ ಭುವನೇಶ್ವರಿ ಬಡಾವಣೆಯಲ್ಲಿ ನಡೆದಿದೆ.   ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಆಲೂರು ಗ್ರಾಮದ ಶ್ವೇತಾ (30) ಮೃತ ದುರ್ದೈವಿ. ಹಿರಿಯೂರು ತಾಲೂಕಿನ ಕುರುಬರಹಳ್ಳಿ ಚೌಡೇಶ್​ (35) ಆರೋಪಿ. 9 ವರ್ಷಗಳ ಹಿಂದೆ ಶ್ವೇತಾ …

Read More »

ಮೂರಂಕಿಗಿಂತ ಕೆಳಗಿಳಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ಹೊಸದಿಲ್ಲಿ: ಮೊಟ್ಟಮೊದಲ ಬಾರಿಗೆ ರಾಜ್ಯಸಭೆಯಲ್ಲಿ 100 ಸ್ಥಾನಗಳನ್ನು ದಾಟಿದ ಒಂದು ತಿಂಗಳ ಬಳಿಕ ಮೇಲ್ಮನೆಯಲ್ಲಿ ಮತ್ತೆ ಬಿಜೆಪಿ ಸದಸ್ಯ ಬಲ 95ಕ್ಕೆ ಕುಸಿದಿದೆ. ಮೇಲ್ಮನೆಗೆ ನಾಮನಿರ್ದೇಶನಗೊಂಡಿದ್ದ ಐದು ಮಂದಿ ಸದಸ್ಯರು ಕಳೆದ ಹತ್ತು ದಿನಗಳಲ್ಲಿ ನಿವೃತ್ತರಾಗಿರುವುದು ಇದಕ್ಕೆ ಕಾರಣ.   ಆದರೆ ಈ ವರ್ಗದಲ್ಲಿ ಒಟ್ಟು ಏಳು ಮಂದಿಯನ್ನು ನಾಮಕರಣ ಮಾಡಲು ಸರ್ಕಾರಕ್ಕೆ ಅವಕಾಶ ಇರುವ ಹಿನ್ನೆಲೆಯಲ್ಲಿ ಸದ್ಯದಲ್ಲೇ ಆಡಳಿತಾರೂಢ ಪಕ್ಷದ ಸದಸ್ಯಬಲ ಮೂರಂಕಿ ತಲುಪಲಿದೆ. ಆದರೆ ಹೊಸ ಸದಸ್ಯರು …

Read More »

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ. ರೆಪೋ ದರ ಶೇಕಡ 0.4 ರಷ್ಟು, ಸಿ.ಆರ್.ಆರ್. ದರ ಶೇಕಡ 0.5 ರಷ್ಟು ಹೆಚ್ಚಳವಾಗಿದೆ. ಇದರಿಂದ ಇಎಂಐ ತುಟ್ಟಿಯಾಗಲಿದೆ. ಆರ್ಬಿಐ ಕೈಗೊಂಡ ಈ ಕ್ರಮದಿಂದ ವಾಹನ, ಗೃಹ ಮತ್ತು ಇತರೆ ಸಾಲಗಳ ಮೇಲಿನ ಬಡ್ಡಿ ದರಗಳು ಏರಿಕೆಯಾಗಲಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ …

Read More »

ಒತ್ತುವರಿದಾರರಿಗೇ ಭೂಮಿ ಹಂಚಿಕೆಗೆ ಸರ್ಕಾರದ ನಿರ್ಧಾರ; ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ಪರಿಹಾರ

ಬೆಂಗಳೂರು: ಅರಣ್ಯ ಇಲಾಖೆ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ. ಈ ಭೂಮಿಯಲ್ಲಿ ಅಗತ್ಯವಿರುವಷ್ಟು ಸರ್ಕಾರದ ಬಳಿ ಉಳಿಸಿಕೊಂಡು ಉಳಿದ ಭೂಮಿಯನ್ನು ಒತ್ತುವರಿದಾರರಿಗೆ ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕಂದಾಯ ಇಲಾಖೆಗೆ ಸುಮಾರು 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶ ಹಸ್ತಾಂತರವಾಗುತ್ತದೆ. ಇದನ್ನು ಸಾರ್ವಜನಿಕ ಉದ್ದೇಶದ ಬಳಕೆಗೆ ಮೀಸಲಿಡಲು ಆದ್ಯತೆ …

Read More »

ಆಸ್ಪತ್ರೆ ಸಿಬ್ಬಂದಿಗಳ ನಿರ್ಲ್ಯಕ್ಷ: ನವಜಾತ ಶಿಶುವಿನ ಮೊಣಕಾಲು, ಕೈಕಾಲುಗಳನ್ನು ಕಚ್ಚಿ ಗಾಯಗೊಳಿಸಿದ ಇಲಿಗಳು.

ಜಾರ್ಖಂಡ್‌: ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿರುವ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ನಿರ್ಲಕ್ಷ್ಯದ ಆಘಾತಕಾರಿ ಪ್ರಕರಣದಲ್ಲಿ ಇಲಿಗಳು ನವಜಾತ ಶಿಶುವಿನ ಮೊಣಕಾಲು ಮತ್ತು ಕೈಕಾಲುಗಳನ್ನು ಕಚ್ಚಿದ ಘಟನೆ ಗಿರಿದಿಹ್‌ನಲ್ಲಿರುವ ಜಾರ್ಖಂಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹೊರಗುತ್ತಿಗೆ ಕಾರ್ಮಿಕರ ಸೇವೆಯನ್ನು ವಜಾಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.   ಈ ಘಟನೆಯು ಮೇ 2 ರಂದು ಗಿರಿದಿಹ್ ಸದರ್ ಆಸ್ಪತ್ರೆಯಲ್ಲಿ …

Read More »

ಕಾಗೋಡು ತಿಮ್ಮಪ್ಪ ಪುತ್ರಿಗೆ ಕೊಲೆ ಬೆದರಿಕೆ

ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು.  ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …

Read More »

ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್

ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್‌ ಕಂಡಂತೆ ಹೆದರುತ್ತಾರೆ’ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗಂಗಾ ನದಿಯಲ್ಲಿ ಕೋವಿಡ್ ಮೃತದೇಹಗಳು ತೇಲಿದಾಗ, ಚೀನಾ ನಮ್ಮ ದೇಶದ 20 ಮಂದಿ ಯೋಧರನ್ನು ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್’ ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಬರಿಯಾಗಿರಬಹುದು’ ಎಂದು …

Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ಓರ್ವ ಸಾವು, ಇನ್ನೊಬ್ಬನಿಗೆ ಗಾಯ

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಲದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹುಕ್ಕೇರಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿ ನಡೆದಿದೆ. ಒರಿಸ್ಸಾ ಮೂಲದ ವ್ಯಕ್ತಿಗಳಿಬ್ಬರು ಬೈಕ್ ಮೇಲೆ ಬೆಳಗಾವಿ ಕಡೆಯಿಂದ ಮಹಾರಾಷ್ಟ್ರ ಕಡೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಓರಿಸ್ಸಾ ರಾಜ್ಯದ ಬದ್ರಕ ಜಿಲ್ಲೆಯ ದೊಳಾಪಡ ಗ್ರಾಮದ ಬೇನುದರ ನಾಯಕ …

Read More »