Breaking News

ರಾಷ್ಟ್ರೀಯ

ಮೋದಿ ಬಂದ್ರೂ ಮಣಿದಿಲ್ಲ, ಸವದಿ ಏನ್‌ ಮಾಡ್ತಾನ್‌?

ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿವೆ. “ಉದಯವಾಣಿ’ ಕಳೆದ ಏ.20ರಂದು “ಎಂ.ಬಿ.ಪಾಟೀಲ ವಿರುದ್ಧ ಲಕ್ಷ್ಮಣ ಸವದಿ ಸ್ಪರ್ಧೆ?’ ಎಂಬ ತಲೆಬರಹದಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ ಇದೀಗ ಸಾಕಷ್ಟು ಸದ್ದು ಮಾಡಿದೆ. “ಬಬಲೇಶ್ವರ ಕ್ಷೇತ್ರದಲ್ಲಿ ಮೋದಿ ಬಂದ್ರೂ ಏನೂ ಮಾಡಿಕೊಳ್ಳಲಾಗಿಲ್ಲ, ಮಣಿಸಲಾಗಿಲ್ಲ. ಇನ್ನ ಸವದಿ ಬಂದೇನ್‌ ಮಾಡ್ತಾನ್‌’ ಎಂದು ಬಬಲೇಶ್ವರ ಹಾಲಿ ಶಾಸಕರೂ ಆಗಿರುವ ಮಾಜಿ ಮಂತ್ರಿ, ಕೆಪಿಸಿಸಿ ಪ್ರಚಾರ …

Read More »

ಇಂದು ಚಂದ್ರ ದರ್ಶನವಾಗದ ಕಾರಣ ನಾಳೆ ಬದಲು ನಾಡಿದ್ದು ಮಂಗಳವಾರ ರಂಜಾನ್

ಬೆಂಗಳೂರು: ಇಂದು ಚಂದ್ರದರ್ಶನ ವಾಗದ ಹಿನ್ನೆಲೆಯಲ್ಲಿ ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಂದ್ರದರ್ಶನವಾಗದ ಕಾರಣ ಮಂಗಳವಾರ ರಂಜಾನ್ ಆಚರಿಸಲಾಗುವುದು ಎನ್ನಲಾಗಿದೆ.   ಮೇ 3 ರಂದು ರಂಜಾನ್ ನಿಗದಿಯಾಗಿತ್ತು. ರಾಜ್ಯದಲ್ಲಿ ಮೇ 2 ರಂದು ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ. ಆದರೆ, ಚಂದ್ರದರ್ಶನವಾಗದ ಕಾರಣ ಸೋಮವಾರದ ಬದಲು ಮಂಗಳವಾರ ರಂಜಾನ್ …

Read More »

ಕಾರ್ಮಿಕ ದಿನದಂದೇ KSRTC ನೌಕರರಿಗೆ ಸಿಕ್ತು ಸಿಹಿ ಸುದ್ದಿ: 7200 ನೌಕರರ ಶಿಸ್ತು ಪ್ರಕರಣ ಮನ್ನಾ

ಬೆಂಗಳೂರು: ಇಂದು ಮೇ.1ರ ಕಾರ್ಮಿಕ ದಿನಾಚರಣೆ. ಈ ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನೌಕರರಿಗೆ ( KSRTC Employees ) ನಿಗಮವು ಭರ್ಜರಿ ಗಿಫ್ಟ್ ನೀಡಿದೆ. ಅದೇ.. ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ‌ ಮಾಡಲಾಗಿದೆ. ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ …

Read More »

PSI ನೇಮಕಾತಿ ಹಗರಣ: ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ದಿವ್ಯಾ ಹಾಗರಗಿ!

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ದಿವ್ಯಾ ಹಾಗರಗಿ ಸಿಐಡಿ ಅಧಿಕಾರಿಗಳ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಆರೋಪಿ ದಿವ್ಯಾ ಹಾಗರಗಿ ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಒಡತಿ. ಇದೇ ಶಾಲೆಯಲ್ಲಿ ಅಕ್ರಮ ನಡೆದಿರುವ ಆರೋಪವಿದೆ. ಪರೀಕ್ಷೆ ಅಕ್ರಮದಲ್ಲಿ ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಒಪ್ಪಿಕೊಂಡಿದ್ದಾರೆಂದು ತಿಳಿದುಬಂದಿದೆ. ಎರಡು ಟೀಮ್​​ಗಳಿಂದಲು ದೊಡ್ಡ ಮೊತ್ತದ ಹಣ ಪಡೆದಿರುವ ಬಗ್ಗೆ ದಿವ್ಯಾ ಬಾಯಿಬಿಟ್ಟಿದ್ದಾರೆ. ಆ …

Read More »

ಆಜಾನ್ ವಿರುದ್ಧ ಆರತಿ, ಹನುಮಾನ್ ಚಾಲೀಸಾ ಪಠಿಸಲು ಹಿಂದೂಪರ ಸಂಘಟನೆಗಳ ನಿರ್ಧಾರ

ಬೆಂಗಳೂರು: ಆಜಾನ್ ವಿಚಾರದಲ್ಲಿ ಹಿಂದೂಪರ ಸಂಘಟನೆಗಳು ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯಗೊಂಡಿದೆ. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ದೇವಾಲಯಗಳಲ್ಲಿ ಆರತಿ, ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಿವೆ ಈ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಮತ್ತು ಆಂದೋಲ ಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂಪರ ಸಂಘಟನೆಗಳು ಆಜಾನ್ ಕೂಗುವುದನ್ನು ನಿಷೇಧಿಸಲು ಮೇ 1 ರವರೆಗೂ ಗಡುವು ನೀಡಿದ್ದವು. ಮೇ 1ರ ಒಳಗೆ ಮಸೀದಿಯ …

Read More »

ಜೆಡಿಎಸ್ ಶಾಸಕ ಸಾರಾ ಮಹೇಶ್ ಮೇಲೆ ಎಫ್ ಐಆರ್ ದಾಖಲು ಆರೋಪ : ರಾತ್ರೋರಾತ್ರಿ ಠಾಣೆ ಎದುರು ಧರಣಿ

ಮೈಸೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಮೇಲೆ ಎಫ್ ಐಆರ್ ದಾಖಲಾಗಿದೆ ಎನ್ನಲಾಗಿದ್ದು, ಈ ಹಿನ್ನೆಲೆಯ ಸ್ವತಃ ಶಾಸಕ ಸಾ.ರಾ.ಮಹೇಶ್ ಅವರೇ ಠಾಣೆಗೆ ಆಗಮಿಸಿ ತಮ್ಮನ್ನು ಬಂಧಿಸುವಂತೆ ಪ್ರತಿಭಟಿಸುತ್ತಿರುವ ಘಟನೆ ನಡೆಯುತ್ತಿದೆ.   ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವವರು ನೀಡಿದ ದೂರಿನ ಮೇರೆಗೆ ಶಾಸಕ ಸಾ.ರಾ.ಮಹೇಶ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಾ.ರಾ.ಮಹೇಶ್ ಸ್ವತಃ ಠಾಣೆಗೆ ಆಗಮಿಸಿದ್ದು, ವಿಧಾನಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡರ …

Read More »

ಮೇ.2ರಂದು ‘ರಂಜಾನ್ ಆಚರಣೆ’ಗೆ ನಿರ್ಧಾರ: ರಾಜ್ಯ ಸರ್ಕಾರದಿಂದ ‘ಸಾರ್ವತ್ರಿಕ ರಜೆ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಂಜಾನ್ ರಜೆಯನ್ನು ದಿನಾಂಕ 03-05-2022ರಂದು ನಿಗದಿ ಪಡಿಸಿ ಘೋಷಣೆ ಮಾಡಿತ್ತು. ಆದ್ರೇ.. ಮೂನ್ ಕಮಿಟಿ ತೀರ್ಮಾನದಿಂದಾಗಿ ಇದೀಗ ದಿನಾಂಕ 02-05-2022ರಂದು ಬದಲಾವಣೆ ಮಾಡಿ ಮರು ನಿಗದಿಪಡಿಸಿ, ಸಾರ್ವತ್ರಿಕ ರಜೆಯಾಗಿ ಘೋಷಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ದಿನಾಂಕ 03-05-2022ರಂದು ಖುತುಬ್ ಎ ರಂಜಾನ್ ಹಬ್ಬದ ಪ್ರಯುಕ್ತ ಸಾರ್ವತ್ರಿಕ ರಜೆ …

Read More »

ಕುಮಟಾದ ಪ್ರತೀಕ್ಷಾಗೆ ಒಂಬತ್ತು ಚಿನ್ನ

ಬೆಂಗಳೂರು: ಉತ್ತರಕನ್ನಡ ಜಿಲ್ಲೆ ಕುಮಟದ ಪ್ರತೀಕ್ಷಾ ಜೆ.ಪೈ, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ 2022ನೇ ಸಾಲಿನ ಘಟಿಕೋತ್ಸವದಲ್ಲಿ ಒಟ್ಟು 9 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಫಿಸಿಯಾಲಜಿ, ಬಯೋಕೆಮಿಸ್ಟ್ರಿ, ಮೈಕ್ರೋಬಯಾಲಜಿ, ಪೆಥಾಲಜಿ, ಫೋರೆನ್ಸಿಕ್‌ ಮೆಡಿಸಿನ್‌, ಕಮ್ಯುನಿಟಿ ಮೆಡಿಸಿನ್‌, ಜನರಲ್‌ ಮೆಡಿಸಿನ್‌, ಜನರಲ್‌ ಸರ್ಜರಿ ಮತ್ತು ಪೀಡಿಯಾಟ್ರಿಕ್ಸ್‌ ವಿಷಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.   ಮೊದಲನೇ, ಎರಡನೇ ಹಾಗೂ ಅಂತಿಮ ವರ್ಷದ ಎಂಬಿಬಿಎಸ್‌ನಲ್ಲಿ ಸಮಗ್ರ ಪ್ರಶಸ್ತಿ ಪಡೆದಿರುವ ಅವರಿಗೆ ಪೆಥಾಲಜಿ …

Read More »

3.58 ಲಕ್ಷ ಬೋಗಸ್ ಪಿಂಚಣಿ ಫಲಾನುಭವಿಗಳ ಪತ್ತೆ: ಸಚಿವ ಅಶೋಕ್

ಬೆಂಗಳೂರು: ನವೋದಯ ಆಯಪ್ ಮೂಲಕ ವಿವಿಧ ಪಿಂಚಣಿ ಯೋಜನೆಗಳಡಿ ಫಲಾನುಭವಿಗಳ ದತ್ತಾಂಶ ಸಂಗ್ರಹ, ಆಧಾರ್ ಸಂಖ್ಯೆಗೆ ಜೋಡಿಸಿದ್ದರಿಂದ ರಾಜ್ಯದಲ್ಲಿ ಈವರೆಗೆ‌ 3.58 ಲಕ್ಷ ಬೋಗಸ್ ಫಲಾನುಭವಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿದ್ದರಿಂದ ರಾಜ್ಯದ ಬೊಕ್ಕಸಕ್ಕೆ 430 ಕೋಟಿ ರೂ. ಉಳಿತಾಯವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.   ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದಲ್ಲಾಳಿಗಳ ಬಳಿ ಮಾಸಾಶನ ಮಂಜೂರು ಆದೇಶಪತ್ರಗಳು, ಒಬ್ಬರಿಗೆ ಎರಡೆರಡು ಪಿಂಚಣಿ, ಸತ್ತವರಿಗೂ ಪಾವತಿಯಾಗಿರುವುದು ಬಯಲಾಗಿದೆ ಎಂದು ತಿಳಿಸಿದರು. …

Read More »

45 ಡಿಗ್ರಿ ದಾಟಿದ ತಾಪಮಾನ: ಕಾರಿನ ಬಾನೆಟ್‌ ಅನ್ನೇ ಒಲೆಯಾಗಿಸಿಕೊಂಡು ರೊಟ್ಟಿ ಮಾಡಿದ ಮಹಿಳೆ

ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನ 45 ಡಿಗ್ರಿಗಳಿಗೆ ತಲುಪಿದೆ. ಬಿಸಿಲಿನ ಬೇಗೆ ಹೆಚ್ಚಾಗಿದ್ದು, ಈಗ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಇಷ್ಟು ಬಿಸಿಲಿನಲ್ಲಿ ಅಡುಗೆಯೇ ತಯಾರಿಸಬಹುದು ಎಂದು ಕೆಲವರು ಗೇಲಿ ಮಾಡುತ್ತಿದ್ದರೆ, ಇನ್ನೂ ಕೆಲವರು ಈ ಬಿಸಿಲನ್ನೇ ಬಳಸಿಕೊಂಡು ಅಡುಗೆ ಮಾಡಿ ಅಚ್ಚರಿಗೊಳಿಸುತ್ತಿದ್ದಾರೆ.   ಇದನ್ನು ಕೇಳಿ ನಿಮಗೆ ನಗು ಬಂದಿರಬಹುದು ಆದರೆ ಇದು ನಿಜ. ಇತ್ತೀಚೆಗೆ, ಒಡಿಶಾದ ಮಹಿಳೆಯೊಬ್ಬರು ಕಾರಿನ ಬಾನೆಟ್ ಮೇಲೆ ಬ್ರೆಡ್, ರೊಟ್ಟಿ ಬೇಯಿಸುತ್ತಿರುವ …

Read More »