Breaking News

ರಾಷ್ಟ್ರೀಯ

ಮುಡಾ ಹಗರಣ ಕೇಸ್: ಸಿಎಂ ಪತ್ನಿ ಹಾಗೂ ಸಚಿವ ಭೈರತಿ ಸುರೇಶ್​ಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು, (ಫೆಬ್ರವರಿ 10): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​​ಗೆ ಇಡಿ ಸಮನ್ಸ್​ಗೆ​ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದೆ.  ಇಡಿ ನೀಡಿರುವ ಸಮನ್ಸ್​ ರದ್ದುಕೋರಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,  ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. ಹೀಗಾಗಿ ಫೆ.20ರ ರವರೆಗೆ ಇಡಿ ಸಮನ್ಸ್ ಗೆ ತಡೆಯಾಜ್ಞೆ ವಿಸ್ತರಣೆಯಾಗಿದೆ. ಇದರಿಂದ ಸಿಎಂ …

Read More »

ಕಲಬುರಗಿ ಯಲ್ಲಿ ಮತ್ತೊಂದು ಅಕ್ರಮ: ನಕಲಿ ಅಂಕಪಟ್ಟಿ ಮಾಫಿಯಾ

ಕಲಬುರಗಿ, ಫೆಬ್ರವರಿ 10: ಸದಾ ಪರೀಕ್ಷಾ ಅಕ್ರಮಗಳಿಂದ ಸುದ್ದಿಯಲ್ಲಿರುವ ಕಲಬುರಗಿಯಲ್ಲಿ ಇದೀಗ ಮತ್ತೊಂದು ಅಕ್ರಮ‌ದ ಆರೋಪ ಕೇಳಿ ಬಂದಿದೆ. ಎಸ್ಎಸ್ಎಲ್‌ಸಿ‌ ಅಂಕಪಟ್ಟಿಯನ್ನು ಪೋರ್ಜರಿ (fake marks cards) ಮಾಡಿ ಸರ್ಕಾರಿ ಹುದ್ದೆ ಪಡೆದಿದ್ದು ಬಟಾಬಯಲಾಗಿದೆ. ಆ ಮೂಲಕ ನಕಲಿ ಅಂಕಪಟ್ಟಿ ಮಾಫಿಯಾ ಹುಟ್ಟಿಕೊಂಡಿದೆಯಾ ಎನ್ನೋ ಆತಂಕ ಶುರುವಾಗಿದೆ. ಕಲಬುರಗಿ ಅಂದರೆ ಸಾಕು ಪರೀಕ್ಷಾ ಅಕ್ರಮಗಳ ತವರು ಎನ್ನೋ ಕುಖ್ಯಾತಿ ಪಡೆದಿತ್ತು. ಇದೀಗ ಅದೇ ಸಾಲಿಗೆ ಮಗದೊಂದು ಅಕ್ರಮ ಸೆರ್ಪಡೆಯಾಗಿರುವ ಆರೋಪ ಕೇಳಿ ಬಂದಿದೆ. ಅದೆನೆಪ್ಪಾ …

Read More »

ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್​​ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್​​ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ ಚಾಮರಾಜನಗರದ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಪಟ್ಟ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ತಡರಾತ್ರಿ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್​​ಡಿಪಿಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್​ನ್ನು …

Read More »

ದಾವಣಗೆರೆಯಲ್ಲಿ ಎರಡು ಹಂದಿಗಳಿವೆ:ಯತ್ನಾಳ್

ದಾವಣಗೆರೆ: “ನಮಗೆ ಎಷ್ಟು ಅಪಮಾನ ಆಗಿದೆ ಎಂದರೆ ಬೇರೆಯಾರಾದರೂ ಆಗಿದ್ದರೆ ನೇಣು ಹಾಕಿಕೊಳ್ಳಬೇಕಿತ್ತು. ನಾವು ಹಾಕಿಕೊಂಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಭಾನುವಾರ ಮಾತನಾಡಿದ ಅವರು, “ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಗೃಹ ಪ್ರವೇಶವಿದೆ. ಹೀಗಾಗಿ ದೆಹಲಿಗೆ ತೆರಳುತ್ತಿದ್ದೇವೆ “ಎಂದರು. ಮುಂದುವರೆದ ಯತ್ನಾಳ್​​, “ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿ ನಮ್ಮ ವಿರುದ್ಧದ ವರದಿಗಳು ಬರುತ್ತಿದೆ. ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು ಸಿಗುತ್ತಾರೋ, …

Read More »

ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯

ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯ ಬೆಳಗಾವಿಅಂತರಾಷ್ಟ್ರೀಯ ವ್ಯಕ್ತಿಗತ ಮಾನವ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಡಮಾಡುವ ರಾಷ್ಟ್ರೀಯ ರತ್ನ ಅವಾಡ್೯ನ್ನು ಯಲ್ಲಪ್ಪ ಲಕ್ಷ್ಮಣ ಕೋಲ್ಕಾರ್ ಅವರಿಗೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಇತ್ತೀಚೆಗೆ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಸೇವೆ ಮಾಡುತ್ತಿರುವ ಯಲ್ಲಪ್ಪ ಕೋಲ್ಕಾರ್ ಅವರು ಸರಕಾರಿ ಸೇವೆಯ ಜೊತೆಗೆ ಸಾಮಾಜಿಕ ಕಾರ್ಯವನ್ನು ಗುರುತಿಸಿ ರಾಷ್ಟ್ರೀಯ ಅವಾರ್ಡ್ ಪ್ರಶಸ್ತಿ ‌ನೀಡಲಾಗಿದೆ.

Read More »

ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ

ಮೈಸೂರು : ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10 ರಿಂದ 3 ದಿನಗಳವರೆಗೆ 13ನೇ ಕುಂಭಮೇಳ ಜರುಗಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆ.12 ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9 ರಿಂದ …

Read More »

ಸಿಗರೇಟ್ ಪಡೆದು ಅಂಗಡಿ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯ ಬಂಧನ

ಬೆಂಗಳೂರು: ಅಂಗಡಿಯೊಂದರಲ್ಲಿ ಸಿಗರೇಟ್​ ಪಡೆದು ಹಣ ನೀಡದೇ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿದ್ದ ಆರೋಪಿಯನ್ನು ಆಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜೇಂದ್ರನಗರದ ನಿವಾಸಿ ಗೌತಮ್‌ (25) ಬಂಧಿತ. ಫೆಬ್ರವರಿ 4ರಂದು ಕೋರಮಂಗಲದ ರಾಜೇಂದ್ರ ನಗರದ 80 ಅಡಿ ರಸ್ತೆಯ ಸಭಾನಾ ಸ್ಟೋರ್‌ ಎಂಬ ಅಂಗಡಿಯ ಸಿಬ್ಬಂದಿ ನಿಸಾರ್‌ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 4ರಂದು ರಾತ್ರಿ 10.15ರ ಸುಮಾರಿಗೆ ಅಂಗಡಿಗೆ ತೆರಳಿದ್ದ ಆರೋಪಿ, …

Read More »

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್​ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ.

ಬೆಂಗಳೂರು, ಫೆಬ್ರವರಿ 08: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್​ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ. ಆ ಮೂಲಕ ತೊಗರಿ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರದಿಂದ ಗುಡ್‌ನ್ಯೂಸ್‌ ನೀಡಲಾಗಿದೆ. ಪ್ರೋತ್ಸಾಹಧನ ನೀಡುವುದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ.2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್‌ಗೆ 450 ರೂ ಪ್ರೋತ್ಸಾಹಧನ ನೀಡುವುದಾಗಿ …

Read More »

ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ಪಂದ್ಯ ವೀಕ್ಷಿಸಿದ ಡಿ.ಕೆ. ಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL)ನ ಕರ್ನಾಟಕ ಬುಲ್ಡೋಜರ್ಸ್ ಹಾಗೂ ತೆಲುಗು ವಾರಿಯರ್ಸ್ ನಡುವಣ ಟಿ20 ಪಂದ್ಯದ ಟಾಸ್ ಹಾಕಿ, ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಕಿಚ್ಚ ಸುದೀಪ್ ಅವರು ಶಿವಕುಮಾರ್ ಅವರಿಗೆ ತಂಡದ ಆಟಗಾರರನ್ನು ಪರಿಚಯಿಸಿದರು. ಈ ಸಂದರ್ಭದಲ್ಲಿ ನಟ ಹಾಗೂ ತಂಡದ ಆಟಗಾರ ಗೋಲ್ಡನ್ ಸ್ಟಾರ್ ಗಣೇಶ್, ತಂಡದ ಮಾಲೀಕರಾದ …

Read More »

ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್ ಮೀಟಿಂಗ್….

ರಾಜ್ಯದಲ್ಲಿ ಇತ್ತೀಚೆಗೆ ನಡೆದ ದರೋಡೆ ಸೇರಿ ಕಳ್ಳತನ ಪ್ರಕರಣಗಳು ಹೆಚ್ಚಳವಾದ ಹಿನ್ನಲೆಯಲ್ಲಿ ಧಾರವಾಡ ಶಹರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡ್ ಶಾಫ್ ಓನರ್ಸ್‌ಗಳ ಸಭೆಯನ್ನು ಪೊಲೀಸ ‌ಇಲಾಖೆ ನಡೆಸಿ ನಡೆಸಲಾಯಿತು. ಈ ವೇಳೆ ಶಾಪ್ ಓನರ್ಸಗಳಿಗೆ ಪೊಲೀಸ ಅಧಿಕಾರಿಗಳು ಹಲವು ಸೂಚನೆಗಳನ್ನು ನೀಡಿ, ಎಚ್ಚರಿಕೆಯಿಂದಿರಲು ತಿಳಿಸಿದರು. ನಗರದ ಗಾಂಧಿಚೌಕ್ ದತ್ತಾತ್ರೇಯ ಮಂದಿರದ ಸಭಾಭವನಲ್ಲಿ ಧಾರವಾಡ ಎಸಿಪಿ ಪ್ರಶಾಂತ. ಸಿದ್ಧನಗೌಡರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಈ ವೇಳೆ ಗೋಲ್ಡ್ ಶಾಫ್ ಓನರ್ಸ್ …

Read More »