ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 ವರ್ಷದ ಹಿಂದಿನ ಚಿತ್ರದ ಬಗ್ಗೆ ಈಗೇಕೆ ಪೀಠಿಕೆ ಎಂದಿರಾ? ಈ ಚಿತ್ರದ ನಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಹೃತಿಕ್ ರೋಷನ್‌ಗೆ ನಾಯಕಿಯಾಗಿ ನಟಿಸಿ ಜನರ ಮನಗೆದ್ದಿದ್ದ ಖ್ಯಾತ ನಟಿ ಅಮೀಶಾ ಪಟೇಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. …
Read More »ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಡೈಲಾಗ್ ಮರುಸೃಷ್ಟಿಸಿದ ಹೂ ವ್ಯಾಪಾರಿ…!
ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್ ಸಿನಿಮಾ ಬಿಡುಗಡೆಯಾಗಿ ಸುಮಾರು ನಾಲ್ಕು ತಿಂಗಳಾಗಿದೆ. ಇನ್ನೂ ಚಿತ್ರದ ಸಂಭಾಷಣೆಗಳು, ಹಾಡುಗಳ ಬಗ್ಗೆ ಕ್ರೇಜ್ ಕಡಿಮೆಯಾಗಿಲ್ಲ. ಇದೀಗ ಅಲ್ಲು ಅವರ ಕಾಶ್ಮೀರದ ಅಭಿಮಾನಿಯೊಬ್ಬರ ಚಿತ್ರದ ಪ್ರಮುಖ ಡೈಲಾಗ್ ಅನ್ನು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.ಕಾಶ್ಮೀರದಿಂದ ಆಗಾಗ್ಗೆ ಫೋಟೋಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುವ ಟ್ವಿಟ್ಟರ್ ಬಳಕೆದಾರರಾದ ನಮ್ರತಾ, ಇದೀಗ ಹೂವು ಮಾರಾಟಗಾರನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ …
Read More »ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೇಟ್-ಇನ್-ಇಂಡಿಯಾ ಮತ್ತು ಮೇಕ್-ಇನ್-ಇಂಡಿಯಾ ಒಟ್ಟಿಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಅಪಾಯಕಾರಿ ನಿರುದ್ಯೋಗದ ಬಿಕ್ಕಟ್ಟನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “”ಭಾರತದಿಂದ …
Read More »ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು …
Read More »ಗೆಳೆಯನ ಪತ್ನಿ ಜೊತೆ ಅನೈತಿಕ ಸಂಬಂಧ; ಪಾರ್ಟಿ ಮಾಡಿ ತಲೆ ಮೇಲೆ ಕಲ್ಲೆತ್ತಿ ಹಾಕಿ ಬರ್ಬರ ಕೊಲೆ
ಆರೋಪಿ ತಿರುಪತಿ ಪತ್ನಿ ಜೊತೆ ಮೃತ ತಿರುಪತಿ ಅನೈತಿಕ ಸಂಬಂಧ ಹೊಂದಿದ್ದ. ಪತ್ನಿ ಜೊತೆಗಿನ ಅನೈತಿಕ ಸಂಬಂಧ ಬಿಡುವಂತೆ ಆರೋಪಿ ತಿರುಪತಿ ಬೇಡಿಕೊಂಡಿದ್ದ. ಇಡೀ ಊರಿಗೆ ವಿಷಯ ಗೊತ್ತಾಗುತ್ತಿದೆ ತನ್ನ ಪತ್ನಿ ಸಹವಾಸ ಬಿಡುವಂತೆ ಮನವಿ ಮಾಡಿದ್ದ.ರಾಯಚೂರು: ಗೆಳೆಯನ ಪತ್ನಿ ಮೇಲೆ ಕಣ್ಣು ಹಾಕಿದ ವ್ಯಕ್ತಿ ಅನಾಥ ಹೆಣವಾದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಬಣಕಲ್ನಲ್ಲಿ ನಡೆದಿದೆ. ಗೆಳೆಯ ಕೈಕಾಲು ಬಿದ್ದರೂ ಅನೈತಿಕ ಸಂಬಂಧ ಬಿಡದ ಹಿನ್ನೆಲೆ ಕೊನೆಗೆ …
Read More »ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ
ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.
Read More »ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆ; 10 ಶ್ವಾನಗಳಿಗೆ ವಿಷವುಣಿಸಿ ಕೊಂದ ದುರುಳರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ. ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …
Read More »PSI ನೇಮಕಾತಿ ಅಕ್ರಮ; ಬ್ಲೂಟೂತ್ ಮೂಲಕ ಪರೀಕ್ಷಾರ್ಥಿಗಳಿಗೆ ಉತ್ತರ; ಅಕ್ರಮದ ಮತ್ತೊಂದು ವಿಡಿಯೋ ಸಾಕ್ಷ್ಯ ಬಟಾಬಯಲು
ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್‌ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್‌ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ …
Read More »ಪ್ರಿಯಕರನ ಜತೆ ಸೇರಿ ಪತಿಯ ಕೊಂದ ಪತ್ನಿ
ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್ (29) ಕೊಲೆಯಾದ ವ್ಯಕ್ತಿ. ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು …
Read More »ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರಿಗೆ ಸರ್ಕಾರದಿಂದ ಎಚ್ಚರಿಕೆ: ಮಾಹಿತಿ ಸಂಗ್ರಹಿಸಲು ಆದೇಶ
ರಾಜ್ಯದಿಂದ ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರೋ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ರಾಜ್ಯದ ಹಲವಾರು ಕಡೆ ಅನರ್ಹರು ಬೇಡ ಜಂಗಮ ಸುಳ್ಳು ಜಾತಿ ಪ್ರಮಾಣಪತ್ರಗಳನ್ನು ಪಡೆದಿರೋ ಬಗ್ಗೆ ದಿನಾಂಕ 20-04-2022ರಂದು ನಡೆದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಪಂಗಡಗಳ ಕಲ್ಯಾಮ ಸಮಿತಿ ಸಭೆಯಲ್ಲಿ ಚರ್ಚೆಯಾಗಿರುತ್ತದೆ. ಅಲ್ಲದೇ ಬೇಡ …
Read More »