ಬೆಂಗಳೂರು, ಏಪ್ರಿಲ್ 19 : ದೇಶದಲ್ಲಿ ಮತ್ತೆ ಕೊರೊನಾ ನಾಲ್ಕನೇ ಭೀತಿ ಶುರುವಾಗಿದ್ದು, ಈಗಾಗಲೇ ದೆಹಲಿ, ಉತ್ತರ ಪ್ರದೇಶ, ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲೂ ಕೊರೊನಾ ನಾಲ್ಕನೇ ಅಲೆ ಬರಬಹುದು ಎಂಬ ಭೀತಿ ಇರುವುದರಿಂದ ಪೋಷಕರು ಮಕ್ಕಳನ್ನ ಶಾಲೆಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಖಾಸಗಿ ಶಾಲೆಗಳಿಗೆ ಭಾರಿ ಹೊಡೆತ ಬಿದ್ದಿದ್ದು, ಮುಂಬರುವ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನ ದಾಖಲಿಸಿಕೊಳ್ಳಲು ಖಾಸಗಿ ಶಾಲೆಗಳು ಹೆಣಗಾಡುತ್ತಿವೆ. ಸಾರ್ವಜನಿಕ ಶಿಕ್ಷಣ …
Read More »ವೇಗವೂ ಇಲ್ಲ, ಸಮಯಪಾಲನೆಯೂ ಇಲ್ಲ…
ಭಾರತೀಯ ರೈಲ್ವೆಯು 15 ನಿಮಿಷಗಳ ಸಮಯ ಪಾಲನೆ ಮಾನದಂಡವನ್ನು ಹೊಂದಿದೆ. ಅಂದರೆ ರೈಲು ತನ್ನ ಗಮ್ಯ ಸ್ಥಳವನ್ನು ನಿಗದಿತ ಸಮಯಕ್ಕಿಂತ 15 ನಿಮಿಷ ವಿಳಂಬವಾಗಿ ತಲುಪಿದರೂ ಅದು ಸರಿಯಾದ ಸಮಯಕ್ಕೆ ಆಗಮಿಸಿದೆ ಎಂದು ಪರಿಗಣಿಸಲಾಗುತ್ತದೆ. ಹೀಗಿದ್ದರೂ ಕೇವಲ ಶೇ.69.23ರಷ್ಟು ರೈಲುಗಳು ಸಮಯಕ್ಕೆ ಸರಿಯಾಗಿ ತಮ್ಮ ಗಮ್ಯವನ್ನು ತಲುಪಿವೆ ಮತ್ತು ಈ ಪ್ರವೃತ್ತಿಯು ಕುಸಿಯುತ್ತಲೇ ಇದೆ. 2008-09ರಲ್ಲಿ ಸರಾಸರಿ ಸುಮಾರು ಶೇ.69ರಷ್ಟು ಎಕ್ಸ್‌ಪ್ರೆಸ್ ರೈಲುಗಳು ಸಮಯ ಪಾಲನೆಯನ್ನು ಹೊಂದಿದ್ದು,2013-14ರಲ್ಲಿ ಅದು ಶೇ.83ಕ್ಕೆ …
Read More »ಸಂತ್ರಸ್ತರಿಗೆ ಕೆಎಸ್ಆರ್ಟಿಸಿ ಸಂಸ್ಥೆ ಪರಿಹಾರ ನೀಡಿ, ಸೀಜ್ ಆಗಿದ್ದ ಬಸ್ ಮರಳಿ ವಶಕ್ಕೆ ಪಡೆದುಕೊಂಡಿದೆ.
ಸಾಂಗ್ಲಿ (ಮಹಾರಾಷ್ಟ್ರ): 2015ರಲ್ಲಿ ಮಹಾರಾಷ್ಟ್ರದಲ್ಲಿ ನಡೆದಿದ್ದ ಬಸ್ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಜಪ್ತಿ ಮಾಡಿ, ಸಾವನ್ನಪ್ಪಿದ್ದ ಕುಟುಂಬಸ್ಥರಿಗೆ ಬಸ್ ಹಸ್ತಾಂತರ ಮಾಡಲಾಗಿತ್ತು. ಆದ್ರೆ ಸಂತ್ರಸ್ತರಿಗೆ ಇಂದು ಕೆಎಸ್ಆರ್ಟಿಸಿ ಪರಿಹಾರ ನೀಡಿ ಮರಳಿ ಬಸ್ ಪಡೆದುಕೊಂಡಿದೆ. ಪ್ರಕರಣದ ವಿವರ: 2015ರಲ್ಲಿ ಮೀರಜ್ನಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದು ಭಾನುದಾಸ್ ಬೋಸಲೆ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ತಮಗೆ ಪರಿಹಾರ ನೀಡುವಂತೆ ಬೋಸಲೆ ಕುಟುಂಬ ಸಾಂಗ್ಲಿ ನ್ಯಾಯಾಲಯದಲ್ಲಿ ದಾವೆ …
Read More »ಈ ಬಾರಿ ದ್ವಿತೀಯ ಪಿಯು ಪರೀಕ್ಷೆ ಸುಲಭ.
ಕರೊನಾ ಕಾರಣಕ್ಕೆ ಕಳೆದ ವರ್ಷ ಪರೀಕ್ಷೆ ಇಲ್ಲದೆಯೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿತ್ತು. ಈ ವರ್ಷ ಪರೀಕ್ಷೆ ನಡೆಸುತ್ತಿದ್ದರೂ ಉತ್ತೀರ್ಣರಾಗುವುದು ಅಷ್ಟೇನು ಕಷ್ಟವಲ್ಲ. ಏಕೆಂದರೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸುಲಭ ಮಾದರಿಯಲ್ಲಿ ಪೂರ್ವಶಿಕ್ಷಣ ಇಲಾಖೆ ಪ್ರಶ್ನೆಗಳನ್ನು ರೂಪಿಸುತ್ತಿದೆ. ಕೋವಿಡ್ನಿಂದಾಗಿ ಈ ಬಾರಿ ಕಡಿಮೆ ಶೈಕ್ಷಣಿಕ ದಿನಗಳು ಲಭ್ಯವಾದ ಹಿನ್ನೆಲೆಯಲ್ಲಿ ಹಾಗೂ ಕಳೆದ ವರ್ಷ ಪಿಯು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಿರುವ ಹಿನ್ನೆಲೆಯಲ್ಲಿ ಈ ಬಾರಿ ಸುಲಭ ವಿಧಾನದಲ್ಲಿ ಪಾಸ್ ಆಗುವ …
Read More »ಕದ್ದವಾಚು ಕೈಗೆ ಕಟ್ಟಿ ನಿರ್ಲಜ್ಜವಾಗಿ ಮೆರೆದ ಸುಳ್ಳುಶೂರನಿಗೆ ಜೆಡಿಎಸ್ ಜ್ವರ; HDK
ಬೆಂಗಳೂರು: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು ಏಕವಚನದಲ್ಲಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಹುಬ್ಲೋ ವಾಚ್ ಪ್ರಸಂಗ ಮತ್ತೆ ಪ್ರಸ್ತಾಪಿಸಿದ್ದಾರೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ …
Read More »ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋ ರೂ.ಗಳ ಟೆಂಡರ್ಗಳಿಗೆ, ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ : ಆಲಂ ಪಾಷಾ ಆರೋಪ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲರದ್ದು ವ್ಯವಸ್ಥಿತ ಕೊಲೆ. ಒಂದು ಲಕ್ಷ ಕೋಟಿ ರೂ. ಟೆಂಡರ್ ಗಳಲ್ಲಿ ಅವ್ಯವಹಾರ ನಡೆದಿದೆ. ಉಡುಪಿಯಲ್ಲಿ ಏ.12ರಂದು ಸಂಭವಿಸಿದ ಗುತ್ತಿಗೆದಾರ ಸಂತೋಷ್ ಅವರ ನಿಗೂಢ ಸಾವು ಭ್ರಷ್ಟಾಚಾರಿ ವ್ಯವಸ್ಥೆ ಮಾಡಿಸಿದ ವ್ಯವಸ್ಥಿತ ಕೊಲೆಯಾಗಿದೆ ಎಂದು ಉದ್ಯಮಿ ಆಲಂ ಪಾಷಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಸಾವಿಗೆ ಮೂಲ ಕಾರಣವಾದ ಭ್ರಷ್ಟಾಚಾರದ ಬಗ್ಗೆ ಒಂದಕ್ಷರವನ್ನೂ ಹೇಳದೆ ಉಡುಪಿಯ ಪೊಲೀಸರು 2022ರ ಏಪ್ರಿಲ್ 13ರಂದು ಎಫ್‌ಐಆರ್ ದಾಖಲಿಸಿದ್ದಾರೆ. …
Read More »ಬಿಜೆಪಿಯೊಂದಿಗೆ ಕುಮಾರಸ್ವಾಮಿಯ ಮ್ಯಾಚ್ ಫಿಕ್ಸಿಂಗ್: ಸತೀಶ್ ಜಾರಕಿಹೊಳಿ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ. ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …
Read More »ಗುತ್ತಿಗೆದಾರ ಸಂತೋಷ ಪಾಟೀಲ ಪುತ್ರನ ಶಿಕ್ಷಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ನಮ್ಮ ತಂದೆ ಪ್ರಕಾಶ ಹುಕ್ಕೇರಿ ಅವರು ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತವನ್ನು ಪಾವತಿಸಬೇಕು ಎಂದು ಆಗ್ರಹಿಸಿದರು ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರ ಆಶಯದಂತೆ ವೈಯಕ್ತಿಕವಾಗಿ ಸಂತೋಷ ಪಾಟೀಲನ ಪುತ್ರನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂಪಾಯಿ ಹಣವನ್ನು ನೀಡುತ್ತೇವೆ ಎಂದು …
Read More »ಸ್ವಾಮೀಜಿಗಳ ಬಳಿ ಕಮಿಷನ್ ಕೇಳುವ ನಾಚಿಕೆಗೇಡಿನ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು: ಸ್ವಾಮೀಜಿಗಳ ಬಳಿಯೇ ಲಂಚ ಕೇಳುತ್ತಾರೆಂದರೆ ಎಂಥಹ ನಾಚಿಕೆಗೇಡಿನ ಸರ್ಕಾರವಿದು? ಇದು 40% ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಠಗಳಿಗೆ ಕೊಟ್ಟ ಅನುದಾನ ಪಡೆಯುವುದಕ್ಕೂ ಕಮಿಷನ್ ಕೊಡಬೇಕು ಎಂದು ಸ್ವಾಮೀಜಿಗಳು ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಸ್ವಾಮೀಜಿಗಳ ಬಳಿ ಕಮಿಷನ್ ಕೇಳೋದು ನಾಚಿಕೆಗೇಡಿನತನ. ಸಿಎಂ ಮನೆ ಮುತ್ತಿಗೆ ಹಾಕಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಎಫ್‌ಐಆರ್ ಹಾಕಿದ್ದಾರೆ. ನಾನು ಎ1 ಆದರೂ …
Read More »ಶೇ, 30 ಕಮಿಷನ್ ಆರೋಪ ; ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ: ಸಿಎಂ
ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ …
Read More »