ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಮುಕ್ತನಾಗಿ ಹೊರಬರುವವರೆಗೂ ಸಂಪುಟದಿಂದ ಹೊರಗಿರುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದು, ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಸುದ್ದಿಗಾರರಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ಇದು ಸಂಜೆ ಸಚಿವ ಕೆ.ಎಸ್ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು, ಆ ವೇಳೆ ರಾಜೀನಾಮೆ ಕೊಡುತ್ತೇನೆ …
Read More »17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿರುವ ಸಿ.ಎಂ.ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ
ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ …
Read More »ಸಿದ್ದರಾಮಯ್ಯ – ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ
ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿವಾಸದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದು, ಈ ವೇಳೆ ಪೊಲೀಸರು ಮಾರ್ಗಮಧ್ಯದಲ್ಲೇ ಮೆರವಣಿಗೆ ತಡೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. …
Read More »ಸಿಬಿಐ ತನಿಖೆಯಾಗಲಿ. ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ
ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. …
Read More »ಪಕ್ಷದ ಚಟುವಟಿಕೆಯಿಂದ ದೂರವಿದ್ದ ಜಮೀರ್.. ಖಾಸಗಿ ಹೋಟೆಲ್ ನಲ್ಲಿ ಸುರ್ಜೆವಾಲಾ ಭೇಟಿ, ಚರ್ಚೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಚಟುವಟಿಕೆಯಿಂದ ದೂರವೇ ಉಳಿದಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು ಬುಧವಾರ ರಾತ್ರಿ ದಿಢೀರ್ ಆಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್ನಲ್ಲಿ ಮುಂದುವರೆದ ಜಮೀರ್ ಅಹ್ಮದ್ ಖಾನ್ ಅಸಮಾಧಾನ ಈ ಭೇಟಿ ಮೂಲಕ ಇನ್ನೊಂದು ಹಂತವನ್ನು ತಲುಪಿದೆ ಎಂಬ ಮಾಹಿತಿ ಇದ್ದು, ತಮ್ಮ ಬೇಸರ, ಅಸಮಾಧಾನ ಹಾಗೂ ಕೋಪವನ್ನು ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ ಎಂಬ ಮಾಹಿತಿ ಇದೆ. …
Read More »ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ.
ಬಡವರು, ದಲಿತರಿಗೆ ಬಲ ಕೊಡಬೇಕೆಂಬ ಅಂಬೇಡ್ಕರರ ಕನಸನ್ನು ನನಸು ಮಾಡಲು ಜನಧನ, ಆಯುಷ್ಮಾನ್ ಭಾರತ, ಸ್ಟಾರ್ಟಪ್, ಮುದ್ರಾ ಇತ್ಯಾದಿ ಯೋಜನೆಗಳನ್ನು ರೂಪಿಸಲಾಗಿದೆ. ಮುದ್ರಾ ಯೋಜನೆಯಡಿಯಲ್ಲಿ ಸಾಲ ಪಡೆದವರಲ್ಲಿ ಶೇಕಡ 50 ಜನ ದಲಿತರು ಮತ್ತು ಹಿಂದುಳಿದವರೇ ಇದ್ದಾರೆ. ಕರ್ನಾಟಕದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ವರ್ಗ ಅಸಮಾನತೆ, ಜಾತಿ ಅಸಮಾನತೆ ಹಾಗೂ ಲಿಂಗ ಅಸಮಾನತೆಯನ್ನು ಜೀವಿತದುದ್ದಕ್ಕೂ ವಿರೋಧಿಸಿದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶ ಮತ್ತು ಸಿದ್ಧಾಂತಗಳು ಭಾರತದ …
Read More »ʼಕೆಪಿಸಿಸಿʼಯಿಂದ ಮೃತ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ʼ11 ಲಕ್ಷ ಪರಿಹಾರʼ :ಡಿ.ಕೆ. ಶಿ.
ಬೆಂಗಳೂರು : ಉಡುಪಿಯಲ್ಲಿ ಅತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಕುಟುಂಬಕ್ಕೆ ಕೆಪಿಸಿಸಿಯಿಂದ 11 ಲಕ್ಷ ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಮೃತ ಸಂತೋಷ್ ಮನೆಗೆ ಭೇಟಿದ ನಂತ್ರ ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ನಾಯಕ, ‘ ಸಾವಿಗೆ ಕಾರಣವೇನು? ಯಾರು ಕಾರಣವೆಂದು ಹೇಳಿದ್ದಾರೆ. ಸಂತೋಷ್ ತಾಯಿ ಮತ್ತು ಪತ್ನಿ ಎಲ್ಲ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮುಂದೆ ಇಂತಹ ಘಟನೆ ನಡೆಯಬಾರದು. ಪ್ರಧಾನಿಗೆ ದೂರು ನೀಡದರೂ ಸಂತೋಷ್‌ಗೆ ನ್ಯಾಯ …
Read More »ಬೆಂಗಳೂರಿನಲ್ಲಿ ಭಾರಿ ಮಳೆ ;
ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದಾಗಿ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದೆ. ನಗರದ ಹಲವು ಭಾಗಗಳಲ್ಲಿ ಸಂಜೆ 4ರ ನಂತರ ಮಳೆ ಶುರುವಾಯಿತು. ಕೆಲವು ರಸ್ತೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಮಲ್ಲೇಶ್ವರ, ಶೇಷಾದ್ರಿಪುರಂ, ಮೆಜೆಸ್ಟಿಕ್, ಆರ್.ಆರ್.ನಗರ, ಅಂಜನಾಪುರ, ಬೇಗೂರು, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ, ಹೊರಮಾವು, ಪ್ಯಾಲೆಸ್ ಗುಟ್ಟಹಳ್ಳಿ, ವಿಧಾನಸೌಧ, ಪುಲಕೇಶಿನಗರ, ನಾಗರಬಾವಿ, ಕೋರಮಂಗಲ, ನಾಯಂಡಹಳ್ಳಿ, ಲಕ್ಕಸಂದ್ರ, ವಿದ್ಯಾಪೀಠ, ಕೆಂಗೇರಿ ಮುಂತಾದ ಕಡೆ ಭಾರಿ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಗೆ ಕಿಸ್ ಕೊಟ್ಟ ಶಿಕ್ಷಕ : ಮುಂದೆನಾಯ್ತು ಗೊತ್ತಾ?
ಹಾವೇರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯ ಕೆನ್ನಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತನೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಿರೆಕೇರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಏ.8ರಂದು ಹಿಂದಿ ವಿಷಯದ ಪರೀಕ್ಷೆ ಬರೆಯಲು ಆಗಮಿಸಿದ್ದ ವಿದ್ಯಾರ್ಥಿನಿಯೊಬ್ಬರಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ ಎಸ್. ಐರಣಿ ಎಂಬಾತ ಹೆಚ್ಚಿನ ಅಂಕ ಕೊಡಿಸುವ ಆಮಿಷವೊಡ್ಡಿ,. ಪರೀಕ್ಷಾ ಕೇಂದ್ರದ ಕಟ್ಟಡದ ಮೇಲೆ ಕರೆದುಕೊಂಡು ಹೋಗಿ, ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟು ಕೆನ್ನೆಗೆ ಮುತ್ತು …
Read More »ಸಂತೋಷ್ ಸಾವು ಪ್ರಕರಣ: ಸಿಎಂ ಬೊಮ್ಮಾಯಿಗೆ ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶನ
ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ನಿಗೂಢ ಸಾವಿನ ಪ್ರಕರಣ(Contractor Santosh Patil death case) ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ(Minister K S Eshwarappa) ಬಂಧನಕ್ಕೆ ಆಗ್ರಹ ಹೆಚ್ಚಾಗಿದ್ದು, ಮಂಗಳೂರಿನಲ್ಲಿ ಇಂದು ಬುಧವಾರ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಬಂಟ್ವಾಳದಲ್ಲಿ ಪಕ್ಷದ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿಯವರು ಮಂಗಳೂರಿನಿಂದ ವಾಹನದಲ್ಲಿ ತೆರಳುತ್ತಿದ್ದ ವೇಳೆ ದಾರಿಯುದ್ದಕ್ಕೂ SDPI ಕಾರ್ಯಕರ್ತರು ವಳಚ್ಚಿಲ್ ಬಳಿ …
Read More »