Breaking News

ರಾಷ್ಟ್ರೀಯ

ಕಾರು ನಿಲ್ಲಿಸಿ ಹೋಗುತ್ತಿದ್ದೀರಾ, ಎಚ್ಚರ!; ಒಂದೇ ದಿನ ಒಂದೇ ಥರದ ಎರಡು ಪ್ರಕರಣ.

ವಿಜಯಪುರ: ರಾಜ್ಯದಲ್ಲೀಗ ಕಾರು ನಿಲ್ಲಿಸಿ ಹೋಗುವುದಕ್ಕೂ ಭಯ ಎನಿಸುವಂಥ ವಾತಾವರಣ ಉಂಟಾದಂತಿದೆ. ಅದರಲ್ಲೂ ಒಂದೇ ದಿನ ಒಂದೇ ಥರದ ಎರಡು ಪ್ರಕರಣಗಳು ನಡೆದಿರುವುದು ಕಾರುಗಳ ಮಾಲೀಕರಲ್ಲಿ ಆತಂಕ ಉಂಟುಮಾಡಿದ್ದು, ಎಚ್ಚರ ವಹಿಸಬೇಕಾದ ಸೂಚನೆಯನ್ನೂ ಪರೋಕ್ಷವಾಗಿ ನೀಡಿದೆ.   ಬೆಳಗಾವಿಯ ಗೋಕಾಕ್​ನ ಸಬ್​ ಜೈಲ್ ಮುಂದೆ ನಿಲ್ಲಿಸಿದ್ದ ಇನ್ನೋವಾ ಕಾರಿನ ಗಾಜು ಒಡೆದ ಕಳ್ಳರು, ಮುತ್ತುನಂದಿ ಎಂಬವರ 10 ಲಕ್ಷ ರೂ. ದೋಚಿಕೊಂಡು ಹೋದ ಬೆನ್ನಿಗೆ ರಾಜ್ಯದಲ್ಲಿ ಅಂಥದ್ದೇ ಮತ್ತೊಂದು ಪ್ರಕರಣ ನಡೆದಿದೆ. …

Read More »

ಎಲ್ಲರ ಚಿತ್ತ ಬಿಎಸ್‌ವೈ-ಅರುಣ್ ಸಿಂಗ್ ಭೇಟಿಯತ್ತ!

ಬೆಳಗಾವಿ : ಗಡಿ ಜಿಲ್ಲೆ ಬೆಳಗಾವಿಯ ಬಿಜೆಪಿ ನಾಯಕರ ಮಧ್ಯೆದ ಸಂಘರ್ಷ ತಾರಕಕ್ಕೇರುತ್ತಿದೆ‌. ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿದೆ. ಕಮಲ ನಾಯಕರ ಈ ಕಲಹ ಬಿಜೆಪಿ ಹೈಕಮಾಂಡ್‌ಗೆ ತಲೆನೋವಾಗಿದೆ‌. ಕತ್ತಿ-ಸವದಿ ಹಾಗೂ ಜಾರಕಿಹೊಳಿ‌ ಬ್ರದರ್ಸ್ ಮಧ್ಯೆದ ವೈಮನಸ್ಸು ದಿನ ಕಳೆದಂತೆ ಬಿಗಡಾಯಿಸುತ್ತಿದೆ. ಭಿನ್ನಮತ ಶಮನಕ್ಕೆ ಸ್ವತಃ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಾಳೆಯಿಂದ ಎರಡು ದಿನಗಳ ಕಾಲ ಬೆಳಗಾವಿಯಲ್ಲೇ ಠಿಕಾಣಿ …

Read More »

ಬಿಜೆಪಿ ಸರ್ಕಾರವೆಂದರೆ ಅದು ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ಅಂದರೆ ಅದು ಸುಳ್ಳಿನ ಕಾರ್ಖಾನೆ. ಅಧಿಕಾರಕ್ಕೆ ಬಂದಾಗಿನಿಂದ ಬರೀ ಸುಳ್ಳುಗಳನ್ನು ಹೇಳುತ್ತಲೇ ಇದ್ದಾರೆ. ಸ್ವಾತಂತ್ರ್ಯ ಭಾರತದ ನಂತರ ಹಲವಾರು ಪ್ರಧಾನಿಗಳು ಬಂದರೂ, ಮೋದಿಯಷ್ಟು ಸುಳ್ಳು ಹೇಳುವವರು ಯಾರೂ ಬರಲಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಫ್ರೀಡಂ ಪಾರ್ಕ್ ನಲ್ಲಿ ಬೆಲೆ ಏರಿಕೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಯದ್ವಾತದ್ವ …

Read More »

ರಾಮನವಮಿ, ಮಾಂಸಾಹಾರದ ವಿಚಾರವಾಗಿ ಜೆಎನ್‌ಯುನಲ್ಲಿ ಗುಂಪು ಘರ್ಷಣೆ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕಾವೇರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಎಬಿವಿಪಿ ಸದಸ್ಯರು ಹಾಸ್ಟೆಲ್‌ನಲ್ಲಿ ಮಾಂಸಾಹಾರ ಸೇವಿಸದಂತೆ ವಿದ್ಯಾರ್ಥಿಗಳನ್ನು ತಡೆದು ಹಿಂಸಾತ್ಮಕ ವಾತಾ ವರಣ ಸೃಷ್ಟಿಸಿದ್ದಾರೆ ಎಂದು ವಿ.ವಿ.ಯವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಆರೋಪಿಸಿದೆ. ಆದರೆ ಎಬಿವಿಪಿ ಈ ಆರೋಪವನ್ನು ನಿರಾಕರಿಸಿದೆ. ರಾಮನವಮಿ ನಿಮಿತ್ತ ಹಾಸ್ಟೆಲ್‌ನಲ್ಲಿ ಏರ್ಪಡಿಸಿದ್ದ ಪೂಜೆಗೆ ಎಡ ಪಂಥೀಯರು ಅಡ್ಡಿಪಡಿಸಿದ್ದಾರೆ ಎಂದು ಆಪಾದಿಸಿದೆ. ‘ಎರಡೂ ಗುಂಪಿನವರು ಪರಸ್ಪರ ಕಲ್ಲು …

Read More »

Hijab ಧರಿಸಿ​ ಬಂದ್ರೆ ದ್ವಿತೀಯ ಪಿಯು ಪರೀಕ್ಷೆ ನೋ ಎಂಟ್ರಿ

ಏಪ್ರಿಲ್ 22 ರಿಂದ 18ರವರೆಗೆ ನಡೆಯಲಿರುವ ದ್ವಿತೀಯ ಪಿಯೂಸಿ ಪರೀಕ್ಷೆಗೆ (2nd PU Exam) ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಈಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ (Hijab Ban) ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ ಎಂದು ಖಚಿತಪಡಿಸಿದೆ. ಈಮೂಲಕ SSLC ಪರೀಕ್ಷೆ ಮಾದರಿಯಲ್ಲೇ ದ್ವಿತೀಯ ಪಿಯು …

Read More »

ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಚಿವ ಹೆಬ್ಬಾರ್

ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಆಗುವಂತೆ ಕೇಂದ್ರದ ಸಹಕಾರ ಕೋರಿರುವ ಸಚಿವ ಶಿವರಾಂ ಹೆಬ್ಬಾರ್, ಇಎಸ್‌ಐ ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ, ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ತೆರೆಯಲು ಅನುಮತಿ, ಕಾರ್ಮಿಕ ಕಲ್ಯಾಣ ಮಂಡಳಿಗೆ ಸೆಸ್‌ ರಿಯಾಯಿತಿ ಸೇರಿದಂತೆ ಹಲವು ಅಂಶಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದರು. ಇದಕ್ಕೆ ಕೇಂದ್ರದ ಸಚಿವರುಗಳಿಂದ ಸಕಾರಾತ್ಮಕ ಸ್ಪಂದನೆ ಕೂಡ ಸಿಕ್ಕಿದೆ. ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಸಿಂಗ್‌ ಯಾದವ್‌ ಅವರನ್ನು ಭೇಟಿ ಮಾಡಿ ಮಾತುಕತೆ …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ಮೊಟ್ಟೆ ದರದಲ್ಲಿ ಭಾರಿ ಇಳಿಕೆ

ಬೇಸಿಗೆಯಿಂದಾಗಿ ಮೊಟ್ಟೆ ದರದಲ್ಲಿ ಭಾರಿ ಇಳಿಕೆಯಾಗಿದೆ. ಈ ಹಿಂದೆ 5.30-6.30 ರೂ. ತಲುಪಿದ್ದ ಮೊಟ್ಟೆ ಬೆಲೆ ಈಗ 3.70-4.50 ರೂ. ತಲುಪಿದೆ. ಹೌದು ಬೆಂಗಳೂರು, ಮೈಸೂರಿನಲ್ಲಿ ಮೊಟ್ಟೆ ಬೆಲೆ 4.30 ರೂ.ನಷ್ಟಿದ್ದರೆ ಹೈದರಾಬಾದ್ ನಲ್ಲಿ 3.70 ರೂ. ನಷ್ಟಿದೆ. ಹೊಸಪೇಟೆಯಲ್ಲಿ 3.90 ರೂ.ನಷ್ಟಿದೆ.   ಇದು ಸಗಟು ಬೆಲೆಯಾಗಿದ್ದು ಚಿಲ್ಲರೆ ಬೆಲೆಯಲ್ಲಿ 20-30 ಪೈಸೆಯಷ್ಟು ಹೆಚ್ಚಳವಾಗಲಿದೆ. ಬೇಸಿಗೆಯಲ್ಲಿ ಮೊಟ್ಟೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಬೆಲೆ ಕೂಡ ಕುಸಿತಕಂಡಿದೆ.

Read More »

ರಾಯಚೂರು: ಬಾವಿಗೆ ಬಿದ್ದು ಯುವಕ ಸಾವು

ರಾಯಚೂರು: ಸಮೀಪದ ಯರಮರಸ್ ನಲ್ಲಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಡಿ.ಪಾಂಡು ( 27) ಎಂದು ಗುರುತಿಸಲಾಗಿದೆ. ಬಾವಿಯಲ್ಲಿದ್ದ ಜಲಚರಗಳಿಗೆ ಆಹಾರ ನೀಡುವ ಹವ್ಯಾಸ ಹೊಂದಿದ್ದ ಪಾಂಡು ಶನಿವಾರ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈಜು ಬಾರದ ಕಾರಣ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ರವಿವಾರ ಬೆಳಗ್ಗೆ ಶವ ಮೇಲೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ …

Read More »

ಹಿಂದೂ-ಮುಸ್ಲೀಂ ಸೇರಿ ಕೇಸರಿ ಶಾಲು ಧರಿಸಿ, ಪಾನಕ-ಪಲಾರ ಹಂಚಿ ರಾಮನವಮಿ ಆಚರಣೆ :

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.

Read More »