Breaking News

ರಾಷ್ಟ್ರೀಯ

BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್

ಬೆಳಗಾವಿ: ಬಿಜೆಪಿ (BJP), ಆರ್‍ಎಸ್‍ಎಸ್‍ (RSS) ನವರು ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದ್ದು, ಹಿಂದುಳಿದವರಿಗೆ ಮೀಸಲಾತಿ ರದ್ದುಪಡಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ (B.K Hariprasad) ಹೇಳಿದರು ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ರಾಷ್ಟ್ರವನ್ನು ಸ್ಥಾಪನೆ ಮಾಡಿದವರಿಗೂ ಅಪಮಾನ ಮಾಡುವಂತ ಘಟನೆ ನಡೀತಿದೆ. ಸ್ವಾತಂತ್ರ್ಯ ಹೋರಾಟ ಕೇವಲ ಒಂದು …

Read More »

ಬೆಳಗಾವಿಯಲ್ಲಿಯೂ ಬೇರೆ ದೇಶದ ನೋಟುಗಳು, ಶಸ್ತ್ರಾಸ್ತ್ರಗಳು ಸಿಗುತ್ತವೆ: ಅಭಯ್ ಪಾಟೀಲ್

ಬೆಳಗಾವಿ: ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಹಾಗೂ ಶಸ್ತ್ರಾಸ್ತ್ರಗಳು ಸಿಗುತ್ತವೆ ಎಂದು ಶಾಸಕ ಅಭಯ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿಯಲ್ಲಿ ಪತ್ತೆಯಾದ ಪಾಕಿಸ್ತಾನ ನೋಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಪಾಟೀಲ್, ನಾನು ಸೀರಿಯಸ್ ಆಗಿ ಹೇಳುತ್ತಿದ್ದೇನೆ. ಬೆಳಗಾವಿಯಲ್ಲಿರುವ ಕೆಲವು ಪ್ರದೇಶಗಳನ್ನು ಪರಿಶೀಲಿಸಿದರೆ ಇಲ್ಲಿಯೂ ನಿಮಗೆ ಬೇರೆ ದೇಶದ ನೋಟುಗಳು ಸಿಗುತ್ತವೆ. ಶಸ್ತ್ರಾಸ್ತ್ರಗಳು ಕೂಡ ಸಿಗುತ್ತವೆ ಎಂದು ಗಂಭೀರ ಆರೋಪ ಮಾಡಿದರು.ಬೆಳಗಾವಿಯಲ್ಲಿರುವ ಪೊಲೀಸ್ ಡಿಪಾರ್ಟ್‍ಮೆಂಟ್ …

Read More »

ಕಿಸಾನ್ ಸಮ್ಮಾನ್: ರೈತರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರು ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಮೇ 22 ರವರೆಗೆ ರೈತರು ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.   ಇದುವರೆಗೆ ಕಿಸಾನ್ ಸಮ್ಮಾನ್ ಪೋರ್ಟಲ್ ಮೂಲಕ ನಡೆಸಲಾಗುತ್ತಿದ್ದ ಇ -ಕೆವೈಸಿ ಪ್ರಕ್ರಿಯೆ ಸ್ಥಗಿತಗೊಂಡಿದೆ. ರೈತರು ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ತೆರಳಿ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇ-ಕೆವೈಸಿ ಮಾಡಿಸದ ರೈತರ ಖಾತೆಗೆ ಕಿಸಾನ್ ಸಮ್ಮಾನ್ …

Read More »

ಬಿಜೆಪಿಯಲ್ಲಿ ಮುಖ್ಯಮಂತ್ರಿಯೂ ಟಿಕೆಟ್ ಕಳೆದುಕೊಳ್ಳುವ ಅಪಾಯ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಕಾರ್ಯನಿರ್ವಹಣೆ, ಸುಧಾರಣೆ, ಬದಲಾವಣೆಗಳ ಮಾನದಂಡದ ಆಧಾರದಲ್ಲಿ ಹಾಲಿ ಸಚಿವರ ಟಿಕೆಟ್‌ ಅನ್ನು ಬಿಜೆಪಿ ತೀರ್ಮಾನಿಸಲಿದೆಯಂತೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಈ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಸಚಿವರ ಜೊತೆಯಲ್ಲಿ ಮುಖ್ಯಮಂತ್ರಿಗಳೂ ಟಿಕೆಟ್ ಕಳೆದುಕೊಳ್ಳುವ ಅಪಾಯ ಇದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ ರಾಜ್ಯದಲ್ಲಿ ಮುಂದಿನ ವಿಧಾನಸಭಾ …

Read More »

ಐಪಿಎಲ್‌: ಬಿಸಿಸಿಐ ಹೊಸ ನಿಯಮ

ಮುಂಬಯಿ: ಈ ಬಾರಿಯ ಐಪಿಎಲ್‌ನಲ್ಲಿ ಬಿಸಿಸಿಐ ರೂಪಿಸಿರುವ ನಿಯಮವೊಂದು ತಡವಾಗಿ ತಿಳಿದು ಬಂದಿದೆ. ಪ್ರೇಕ್ಷಕರು ಬಾವುಟ ಗಳನ್ನು ಕೋಲಿನಲ್ಲಿ ಸಿಕ್ಕಿಸಿಕೊಂಡು ಸ್ಟೇಡಿಯಂಗೆ ಹೋಗುವಂತಿಲ್ಲ. ಈ ಕೋಲುಗಳನ್ನು ಉಪ ಯೋಗಿಸಿ ಪಂದ್ಯದ ವೇಳೆ ಅಭಿಮಾನಿಗಳು ಹೊಡೆದಾಡಿಕೊಳ್ಳಬಹುದು ಅಥವಾ ಮೈದಾನಕ್ಕೆ ಎಸೆಯಬಹುದು.   ಇದರಿಂದ ಆಟಗಾರರಿಗೆ ಗಂಭೀರ ಗಾಯಗಳೂ ಆಗಬಹುದು. ಆದ್ದ ರಿಂದ ಕೋಲುಗಳನ್ನು ಒಯ್ಯಬೇಡಿ ಎಂದು ಬಿಸಿಸಿಐ ಹೇಳಿದೆ. ಇದರಿಂದ ಪಂದ್ಯದ ವೇಳೆ ಮೈದಾನದಲ್ಲಿ ಬಾವುಟಗಳನ್ನು ಹಾರಾಡಿಸುವ ಅಭಿಮಾನಿಗಳಿಗೆ ನಿರಾಶೆಯುಂಟಾಗಿದೆ. ಕೊರೊನಾ …

Read More »

ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ

ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು. ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯುಥ್ ಕಾಂಗ್ರೆಸ್‍ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಸ್ವಾತಂತ್ರ್ಯ ಹೋರಾಟ ಮಾಡುವಾಗ …

Read More »

ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ.

ಬೆಳಗಾವಿ: ತಮ್ಮ ಪತಿ ಹೇಮಂತ್ ನಿಂಬಾಳ್ಕರ್ ಐಪಿಎಸ್ ಹುದ್ದೆಗೆ (IPS Hemant Nimbalkar) ರಾಜೀನಾಮೆ ನೀಡುವುದಿಲ್ಲ; ಅವರು ರಾಜಕಾರಣಕ್ಕೆ ಬರಲ್ಲ. ಸದ್ಯಕ್ಕೆ ಅವರು ಕಾನೂನು ಪದವಿ ಪಡೆಯುತ್ತಿದ್ದಾರೆ. ಹಾಗಾಗಿ ಅವರೀಗ ಬೆಂಗಳೂರಿನಲ್ಲಿದ್ದು, ಕಾನೂನು ಪದವಿ ಪಡೆಯುತ್ತಿದ್ದಾರೆ. ಈಗ ವಿದ್ಯಾಭ್ಯಾಸಕ್ಕಾಗಿ ಎರಡು ವರ್ಷ ರಜೆ ಪಡೆದಿದ್ದಾರೆ. ಕಾನೂನು ಪದವಿ ಪೂರೈಸಿದ ಬಳಿಕ ಮತ್ತೆ ಐಪಿಎಸ್ ಅಧಿಕಾರಿಯಾಗಿ ಭಾರತೀಯ ಆಡಳಿತ ಸೇವೆ ಮುಂದುವರಿಸಲಿದ್ದಾರೆ. ಯಾವುದೇ ಕಾರಣಕ್ಕೂ ಅವರು ರಾಜಕೀಯಕ್ಕೆ ಬರುವುದಿಲ್ಲ ಎಂದು ಖಾನಾಪುರ ಕಾಂಗ್ರೆಸ್​ …

Read More »

BJP ಸರ್ಕಾರದಲ್ಲಿ HDK ಅವರೇ ಪ್ರಭಾವಿ? ತಹಸೀಲ್ದಾರ್​ ಎತ್ತಂಗಡಿಗೆ ಕೈ ಹಾಕಿದ CPYಗೆ ಕೆಲವೇ ಗಂಟೆಯಲ್ಲಿ ಶಾಕ್

ಚನ್ನಪಟ್ಟಣ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರೇ ಪ್ರಭಾವಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ಕಾರಣ ಶುಕ್ರವಾರ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ನಡೆದ ಬೆಳವಣಿಗೆ.   ಈ ಹಿಂದಿನಿಂದಲೂ ತಹಸೀಲ್ದಾರ್ ಎಲ್.ನಾಗೇಶ್ ವರ್ಗಾವಣೆ ವಿಚಾರದಲ್ಲಿ ಕ್ಷೇತ್ರದ ಶಾಸಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ನಡುವೆ ಶೀತಲ ಸಮರ ನಡೆಯುತಿತ್ತು. ಶುಕ್ರವಾರ ಸಂಜೆ ತಹಸೀಲ್ದಾರ್ ವರ್ಗಾವಣೆ ಆದೇಶ ಹೊರಬಿದ್ದಿತ್ತು. ತಹಸೀಲ್ದಾರ್ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ &ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಹಾಪ್ ಪಿಚ್ ಕ್ರಿಕೆಟ್ ಟೂರ್ನಮೆಂಟ್

ಗೋಕಾಕ: ಶ್ರೀ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಮಾಜ ಮುಖಿ ಕಾರ್ಯಕ್ರಮ ಗಳಿಗೆ ಚಾಲನೆ ನೀಡುತ್ತಿದ್ದಾರೆ.   ಜಾರಕಿಹೊಳಿ ಅವರು ಅಂದ್ರೆ ಎಂದು ಕೊಡುವ ಕೈ ದೇವರ ಗುಡಿಗಳು, ಜನರ, ಸಂಕಷ್ಟ, ಸಕ್ಕರೆ ಕಾರ್ಖಾನೆ ಸಿಬ್ಬಂದಿಗಳಿಗೆ ಕೊಡುವ ಗೌರವ್ , ಶಾಲಾ ಕಾಲೇಜು ಗಳ ಬಗ್ಗೆ ಕಾಳಜಿ, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ,   ಇದೆ ರೀತಿ ಪಟ್ಟಿ ಗಳನ್ನ ಹೇಳುತ್ತಾ ಹೋದ್ರೆ ಕಮ್ಮಿನ್ನೆ ಅನ್ನಬಹುದು ಆದ್ರೂ ಇವು …

Read More »

ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ಸಾಲದು,:ಬೊಮ್ಮಾಯಿಗೆ ಕಿವಿ ಹಿಂಡಿದ ಹೈಕಮಾಂಡ್

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಗೆಲ್ಲಲು ಹಿಜಬ್, ಹಲಾಲ್ ನಂತಹ ಧಾರ್ಮಿಕ ವಿಚಾರಗಳು ಸಾಲದು ಉತ್ತಮ ಆಡಳಿತ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯೂ ಮುಖ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಹೇಳಿದೆ. ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಬೊಮ್ಮಾಯಿ ಅವರು ಎರಡು ದಿನಗಳ ಕಾಲ ದೆಹಲಿಗೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪಕ್ಷದ ಹಲವು ನಾಯಕರನ್ನು ಭೇಟಿ ಮಾಡಿದ್ದಾರೆ. …

Read More »