Breaking News

ರಾಷ್ಟ್ರೀಯ

ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಚಂದ್ರು ಕೊಲೆಯಾದ ಯುವಕ. ಜೆಜೆ ನಗರದ ಹಳೇ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಯುವಕ ಚಂದ್ರುನನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.  ನಡೆದಿದ್ದೇನು? ಅಂಜಪ್ಪ ಗಾರ್ಡನ್‍ನಲ್ಲಿ ಚಂದ್ರ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದನು. ಈ ವೇಳೆ ಜೆಜೆ ನಗರದಲ್ಲಿ ಚಿಕನ್ ತರಲು …

Read More »

ಬಿಎ, ಬಿಕಾಂಗೂ ಎಂಟ್ರೆನ್ಸ್ ಎಕ್ಸಾಂ: ಪಿಯು ಅಂಕವಿನ್ನು ಲೆಕ್ಕಕ್ಕಿಲ್ಲ; ಪದವಿ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷೆ

ಉನ್ನತ ಶಿಕ್ಷಣಕ್ಕೆ ತಳಹದಿ ಹಾಗೂ ವೃತ್ತಿಪರ ಕೋರ್ಸ್​ಗಳಿಗೆ ದಿಕ್ಸೂಚಿಯಾಗಬೇಕಾದ ಪಿಯುಸಿ ವ್ಯಾಸಂಗ ಸದ್ದಿಲ್ಲದಂತೆ ಮಹತ್ವ ಕಳೆದುಕೊಳ್ಳುವಂತಹ ವಾತಾವರಣ ಗೋಚರಿಸಿದೆ. ಪದವಿ ಪ್ರವೇಶಕ್ಕೂ ಇನ್ಮುಂದೆ ರಾಷ್ಟ್ರೀಯ ಪ್ರವೇಶ ಪರೀಕ್ಷೆ ವ್ಯವಸ್ಥೆ ಜಾರಿಯಾಗುತ್ತಿದೆ. ಇದರಿಂದ ಡಿಗ್ರಿ ಪ್ರವೇಶಾತಿ ವೇಳೆ ಪಿಯುಸಿ ಅಂಕಗಳ ಮಹತ್ವ ಇಲ್ಲವಾಗಲಿದೆ. ಹೀಗಾಗಿ, ಪ್ರವೇಶ ಪರೀಕ್ಷೆಗಳ ಭರಾಟೆಯಲ್ಲಿ ಪಿಯುಸಿ ಮೌಲ್ಯ ಕಳೆದು ಹೋಗುತ್ತಿದೆಯೇ? ಎರಡು ವರ್ಷಗಳ ಕೋರ್ಸ್ ನಿಷ್ಪ›ಯೋಜಕವೇ? ಎಂಬ ಚರ್ಚೆ ಶೈಕ್ಷಣಿಕ ವಲಯದಲ್ಲಿ ಶುರುವಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಕಡ್ಡಾಯವಾಗಿರುವ …

Read More »

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್, FC ಶುಲ್ಕ 16 ಪಟ್ಟು ಹೆಚ್ಚಳ

ಬೆಂಗಳೂರು: ಹಳೆ ವಾಹನ ಮಾಲೀಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 15 ವರ್ಷ ಮೇಲ್ಪಟ್ಟ ಸಾರ್ವಜನಿಕ ಪ್ರಯಾಣಿಕ ವಾಹನಗಳ ಫಿಟ್ ನೆಸ್ ಸರ್ಟಿಫಿಕೆಟ್ ಪರಿಷ್ಕೃತ ಶುಲ್ಕವನ್ನು 16 ಪಟ್ಟು ಏರಿಕೆ ಮಾಡಲಾಗಿದೆ. ಖಾಸಗಿ ವಾಹನಗಳ ಆರ್.ಸಿ. ನವೀಕರಣ ಶುಲ್ಕ ಕೂಡ ಹೆಚ್ಚಳ ಮಾಡಲಾಗಿದೆ. ಟ್ರಾನ್ಸ್ಪೋರ್ಟ್ ವಾಹನಗಳಿಗೆ 8 ವರ್ಷಗಳವರೆಗೆ ಪ್ರತಿ ಎರಡು ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಮಾಡಿಸಬೇಕಿದೆ. 8 ವರ್ಷಗಳ ನಂತರ ವರ್ಷಕ್ಕೆ ಒಂದು ಸಲ ಫಿಟ್ನೆಸ್ ಸರ್ಟಿಫಿಕೇಟ್ ಕಡ್ಡಾಯವಾಗಿದೆ. …

Read More »

ಇಂದೂ ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ 15 ದಿನದಲ್ಲಿ 9.20 ರೂ. ಹೆಚ್ಚಳ

ಪೆಟ್ರೋಲ್, ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. 15 ದಿನಗಳಲ್ಲಿ 13 ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ ಗೆ 9.20 ರೂ.ನಷ್ಟು ಏರಿಕೆ ಕಂಡಿದೆ. ದೆಹಲಿಯಲ್ಲಿ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಏರಿಕೆಯಾಗಿದ್ದು, ಕಳೆದ ಎರಡು ವಾರಗಳಲ್ಲಿ ಲೀಟರ್‌ ಗೆ 9.20 ರೂ. ಹೆಚ್ಚಳವಾಗಿದೆ.   ದೆಹಲಿಯಲ್ಲಿ ಪೆಟ್ರೋಲ್ ದರ ಈ ಹಿಂದೆ 103.81 ರೂ.ನಿಂದ 104.61 ರೂ., ಹಾಗೂ ಡೀಸೆಲ್ ದರ.95.07 …

Read More »

ಅನುಮತಿ ಇಲ್ಲದೇ ಸಾರ್ವಜನಿಕರ‌ ಮೊಬೈಲ್‌ ಕಸಿದುಕೊಳ್ಳಬೇಡಿ.. ಕಮಿಷನರ್ ಪಂತ್‌​ ಟ್ವೀಟ್​

ಬೆಂಗಳೂರು : ತಪಾಸಣೆ‌ ನಡೆಸುವಾಗ ಪೊಲೀಸರು ಅನುಮತಿಯಿಲ್ಲದೇ ಸಾರ್ವಜನಿಕರ‌‌ ಮೊಬೈಲ್​​ಗಳನ್ನು ಬಲವಂತವಾಗಿ ಕಸಿದುಕೊಂಡು ಪರಿಶೀಲಿಸುವುದು ಸರಿಯಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಟ್ವೀಟ್‌ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಪಾಸಣೆ ನಡೆಸುವಾಗ ಸುಖಾಸುಮ್ಮನೆ‌ ಸಾರ್ವಜನರಿಂದ ಪೊಲೀಸರು ಮೊಬೈಲ್ ಕಸಿದುಕೊಂಡು, ವೈಯಕ್ತಿಕ ವಿಚಾರಗಳ ಬಗ್ಗೆ ಪ್ರಶ್ನಿಸುತ್ತಿರುವ ದೂರುಗಳು ಕೇಳಿ ಬಂದಿದ್ದವು.‌ ಇದಕ್ಕೆ‌‌ ಪೂರಕ ಎಂಬಂತೆ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ನಿಖಿಲ್ ಎಂಬುವರು ಘಟನೆಯೊಂದರ ಬಗ್ಗೆ ಟ್ವೀಟ್​ ಮಾಡಿದ್ದರು. ಕೆಲದಿನಗಳ ಹಿಂದೆ …

Read More »

ಕೇಂದ್ರ ಸರ್ಕಾರ ರೂ. 3,600 ಕೋಟಿಯನ್ನು ಹಣವನ್ನು ರೈತರಿಂದ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದೆ.

ಯುಗಾದಿ ಸಿಹಿ – ಕಹಿಗಳ ಹಬ್ಬ, ಆದರೆ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆಯನ್ನು ಚೀಲವೊಂದಕ್ಕೆ ರೂ. 150 ಏರಿಕೆ ಮಾಡುವ ಮೂಲಕ ನಾಡಿನ ರೈತರಿಗೆ ಬರೀ ಕಹಿಯನ್ನು ನೀಡಿದೆ. ದೇಶದ ರೈತರು ವರ್ಷದಲ್ಲಿ 1 ಕೋಟಿ 20 ಲಕ್ಷ ಟನ್ ರಸಗೊಬ್ಬರ ಬಳಕೆ ಮಾಡುತ್ತಾರೆ. ಕೇಂದ್ರ ಸರ್ಕಾರ ರೂ. 3,600 ಕೋಟಿಯನ್ನು ಹಣವನ್ನು ರೈತರಿಂದ ಹೆಚ್ಚುವರಿಯಾಗಿ ಸುಲಿಗೆ ಮಾಡುತ್ತಿದೆ. ಇದನ್ನು ಹಗಲು ದರೋಡೆ ಎಂದರೆ ತಪ್ಪೇನು? ಪ್ರಧಾನಿ ನರೇಂದ್ರ ಮೋದಿ …

Read More »

ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ

ಅಥಣಿ(ಬೆಳಗಾವಿ): ತಾಲೂಕಿನಾದ್ಯಂತ ಇಂದು ಸಂಜೆ ಅಕಾಲಿಕ ಮಳೆ ಸುರಿದ ಪರಿಣಾಮ ದ್ರಾಕ್ಷಿ ಬೆಳೆಗಾರರಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ತಾಲೂಕಿನ ಅಡಹಳ್ಳಿ, ಕೋಹಳ್ಳಿ, ಐಗಳಿ, ಕೋತನಟ್ಟಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿಪರೀತ ಗಾಳಿ ಸಮೇತ ಮಳೆಯಾಗಿದ್ದು, ಒಣದ್ರಾಕ್ಷಿ ನೀರಿನಲ್ಲಿ ನೆನೆದು ಭಾರಿ ಹಾನಿ ಸಂಭವಿಸಿದೆ. ನವೆಂಬರ್- ಅಕ್ಟೋಬರ್ ತಿಂಗಳಿನಲ್ಲಿ ದ್ರಾಕ್ಷಿ ಬೆಳೆಗಾರರಿಗೆ ಅಕಾಲಿಕ ಮಳೆಯಿಂದ ಭಾರಿ ನಷ್ಟ ಸಂಭವಿಸಿತ್ತು. ಇದೀಗ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಅದರಲ್ಲಿ ಅಳಿದು ಉಳಿದ ದ್ರಾಕ್ಷಿಯನ್ನು …

Read More »

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ

ಬೆಳಗಾವಿ: ಮಾರಕಾಸ್ತ್ರಗಳಿಂದ ಹಲ್ಲೆಗೈದು ಯುವಕನನ್ನು ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ನಾಗೇಶ್ ಪಾಟೀಲ್ (30) ಮೃತ ಯುವಕ. ಹಳೆಯ ವೈಷಮ್ಯದ ಕಾರಣಕ್ಕೆ ಕೃತ್ಯ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತಡರಾತ್ರಿ ಯುವಕನ ಮನೆಗೆ ನುಗ್ಗಿರುವ ದುಷ್ಕರ್ಮಿಗಳ ತಂಡ ಹಲ್ಲೆ ಮಾಡಿದ್ದಾರೆ. ಬಳಿಕ ಯುವಕನನ್ನು ಎಳೆದೊಯ್ದು ಮಾರಕಾಸ್ತ್ರಗಳಿಂದ ಹತ್ಯೆಗೈಯಲಾಗಿದೆ. ಶವವನ್ನು ಮನೆಯ ಬಳಿ ಎಸೆದು ಹಂತಕರು ಪರಾರಿಯಾಗಿದ್ದಾರೆ. ಬೆಳಗಾವಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, …

Read More »

ಜೈನ್ ಮಂದಿರ ಜೀರ್ಣೋದ್ಧಾರ ವಿಚಾರಕ್ಕೆ ಗಲಾಟೆ

ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದಲ್ಲಿ ಪುರಾತನ ಕಾಲದ ಜೈನ ಮಂದಿರ. ಜೈನ ಮಂದಿರದ ಜೀರ್ಣೋದ್ಧಾರ ವಿಚಾರಕ್ಕೆ ಜೈನ ಸಮುದಾಯದ ಎರಡು ಪಂಗಡಗಳ ಮಧ್ಯೆ ಗಲಾಟೆ ಉಂಟಾಗಿದೆ. ಜೈನ ಮಂದಿರದಲ್ಲಿರುವ ಜಿನಬಿಂಬ ಉತ್ತಾಪನೆ ಮಾಡುವ ವೇಳೆ ಎರಡು ಪಂಗಡಗಳ ಸದಸ್ಯರ ಮಧ್ಯೆ ಘರ್ಷಣೆ ನಡೆದಿದ್ದು, ಮಂದಿರದಲ್ಲಿದ್ದ ಮೂರ್ತಿ ಆವರಣಕ್ಕೆ ಬಂದಿದೆ. ಮಚ್ಛೆ ಗ್ರಾಮದ 1008 ಭಗವಾನ್ ಮಹಾವೀರ ದಿಗಂಬರ ಜೈನ ಮಂದಿರ ಜೀರ್ಣೊದ್ಧಾರ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ‌. ತೀರ್ಪಿನಂತೆ …

Read More »

ಇ-ಶ್ರಮ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿಗಲಿದೆ ಹಲವು ಸೌಲಭ್ಯ

ನವದೆಹಲಿ: ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು ಸರ್ಕಾರ ಮತ್ತೊಮ್ಮೆ ಕಳುಹಿಸಲಿದೆ. ಕಂತಿನ ಹೊರತಾಗಿ ಫಲಾನುಭವಿಗಳು ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ.   ಈ ಯೋಜನೆಯ ಪ್ರಕಾರ, ಅನೇಕ ಪ್ರಯೋಜನಗಳನ್ನು ಜನರಿಗೆ ನೀಡಲಾಗುತ್ತಿದೆ. ಕೆಲ ಯೋಜನೆಗಳಲ್ಲಿ ಉದ್ಯೋಗ, ವಿಮೆಯಂತಹ ಸೌಲಭ್ಯಗಳನ್ನು ನೀಡಿದರೆ ಮತ್ತೊಂದೆಡೆ ಕೆಲವು ಯೋಜನೆಗಳಲ್ಲಿ ಜನರಿಗೆ ಆರ್ಥಿಕ ನೆರವು ನೀಡಲಾಗುತ್ತದೆ. …

Read More »