Breaking News

ರಾಷ್ಟ್ರೀಯ

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ಜೊತೆಗೆ ಇನ್ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ

ಬೆಂಗಳೂರು : ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರದ ಜೊತೆಗೆ ಇನ್ಮುಂದೆ ಎಲ್ ಪಿ ಜಿ ಸಿಲಿಂಡರ್, ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯಗಳು ದೊರೆಯಲಿವೆ. ಕೇಂದ್ರ ಮತ್ತು ಸರ್ಕಾರದ ಅನೇಕ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದ್ದು, ನ್ಯಾಯಬೆಲೆ ಅಂಗಡಿಗಳು ಇನ್ಮುಂದೆ ಸಾಮಾನ್ಯ ಸೇವಾ ಕೇಂದ್ರಗಳಾಗಿ ಕಾರ್ಯನಿರ್ವಹಿಸಲಿವೆ. ಈ ಮೂಲಕ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ, ಗೋಧಿ ಜೊತೆಗೆ ಎಲ್ ಪಿಜಿ …

Read More »

ರಾಜ್ಯ & ಕೇಂದ್ರ ರಾಜಕೀಯದಲ್ಲಿ ಬದಲಾವಣೆ ಇಲ್ಲ: ಭವಿಷ್ಯ ನುಡಿದ ಗೊಂಬೆಗಳು!

ಧಾರವಾಡ: ಈ ವರ್ಷ ರಾಜ್ಯ ಮತ್ತು ಕೇಂದ್ರ ರಾಜಕೀಯದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಮಣ್ಣಿನ ಗೊಂಬೆಗಳು ಭವಿಷ್ಯ(Doll Prediction) ನುಡಿದಿವೆ. ಧಾರವಾಡ ಜಿಲ್ಲೆಯ ಹನುಮನಕೊಪ್ಪ ಗ್ರಾಮದ ಗೊಂಬೆಗಳು ಪ್ರತಿವರ್ಷ ಯುಗಾದಿ ಹಬ್ಬದಂದು ಭವಿಷ್ಯ ನುಡಿಯುತ್ತವೆ. ಅದೇ ರೀತಿ ಈಗ ರಾಜಕೀಯ ಭವಿಷ್ಯವನ್ನು ತಿಳಿಸಿವೆ. ಹನುಮನಕೊಪ್ಪ(Hanumanakoppa)ದ ಮಣ್ಣಿನ ಗೊಂಬೆಗಳು ರಾಜಕೀಯ ಭವಿಷ್ಯವನ್ನು ನಿಖರವಾಗಿ‌ ಹೇಳುತ್ತವೆ. ಪ್ರತಿ‌ ಯುಗಾದಿಗೆ ಇಲ್ಲಿ ಗೊಂಬೆ ಭವಿಷ್ಯ ನಡೆಯುತ್ತದೆ. ಕಳೆದ ವರ್ಷ ಬೊಂಬೆಗಳು ಸಿಎಂ ಬದಲಾವಣೆ ಮುನ್ಸೂಚಣೆ ನೀಡಿದ್ದವು. …

Read More »

ಮುಸ್ಲಿಂ ಮಾಂಸ ಮಾರಾಟಗಾರನ ಮೇಲೆ ಹಲ್ಲೆ: 5 ಬಜರಂಗದಳ ಕಾರ್ಯಕರ್ತರ ಬಂಧನ,

ಬೆಂಗಳೂರು: ಹಲಾಲ್ ಕಟ್ ಮಾಂಸ ಮಾರಾಟ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ದಾಳಿ ನಡೆಸಿದ ಐದು ಮಂದಿ ಬಜರಂಗದಳ ಕಾರ್ಯಕರ್ತರನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಈ ಮಧ್ಯೆ ಇಂದು ಯುಗಾದಿ ಹೊಸತೊಡಕಿನ ದಿನ ರಾಜ್ಯಾದ್ಯಂತ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರ ಹಲಾಲ್ ಕಟ್ ಮಾಂಸ ನಿಷೇಧಿಸಿ ಅಭಿಯಾನ ತೀವ್ರವಾಗಿದೆ.   ರಾಜ್ಯದ ಜನತೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರದೆ ಶಾಂತಿಯಿಂದ ಸಂತೋಷವಾಗಿ ಯುಗಾದಿ ಹೊಸತೊಡಕನ್ನು ಆಚರಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಕಾಣಿಸಿಕೊಂಡಿದ್ದು ಉಲ್ಕೆಯಲ್ಲ, ಉಪಗ್ರಹದ ಅವಶೇಷ

ಮಹಾರಾಷ್ಟ್ರ/ಮಧ್ಯಪ್ರದೇಶ: ಅಮರಾವತಿ, ನಾಗಪುರ ಸೇರಿ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಮತ್ತು ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಶನಿವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಉಲ್ಕಾಪಾತವಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅದು ಉಲ್ಕಾಪಾತವಲ್ಲ, ಉಪಗ್ರಹದ ಅವಶೇಷಗಳು ಎಂದು ತಿಳಿದುಬಂದಿದೆ. ಚಂದ್ರಾಪುರ ಜಿಲ್ಲೆಯ ಸಿಂಧೇವಾಹಿ ತಾಲೂಕಿನ ಲಾಡಬೋರಿ ಗ್ರಾಮದಲ್ಲಿ ಉಪಗ್ರಹದ ಅವಶೇಷಗಳು ಬಿದ್ದಿರುವುದು ಬೆಳಕಿಗೆ ಬಂದಿದೆ. ಖಗೋಳಶಾಸ್ತ್ರಜ್ಞರ ತಂಡವು ಈ ಸ್ಥಳಕ್ಕೆ ತಲುಪಿದ್ದು, ಉಪಗ್ರಹದ ಅವಶೇಷಗಳನ್ನು ಸಂಗ್ರಹಿಸುತ್ತಿದೆ. ಲಾಡ್ಬೋರಿ ಗ್ರಾಮದಲ್ಲಿ ಶನಿವಾರ ರಾತ್ರಿ ವಿಮಾನ ಪತನವಾದಂತ ಸದ್ದು …

Read More »

‘ಜೆಡಿಎಸ್’ ಮತ್ತೊಂದು ವಿಕೆಟ್ ಪತನ: ಶೀಘ್ರವೇ ‘ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ’ ಬಿಜೆಪಿ ಸೇರ್ಪಡೆ

ಬೆಂಗಳೂರು: ಈಗಾಗಲೇ ಹಲವರು ರಾಜ್ಯದ ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ( JDS Party ) ಗುಡ್ ಬೈ ಹೇಳಿ, ವಿವಿಧ ರಾಷ್ಟ್ರೀಯ ಪಕ್ಷಗಳನ್ನು ಸೇರಿದ್ದಾರೆ. ಈ ಬಳಿಕ, ಈಗ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನಗೊಂಡಿದೆ. ಜೆಡಿಎಸ್ ತೊರೆದು, ಶೀಘ್ರವೇ ಬಿಜೆಪಿ ( BJP Party ) ಸೇರ್ಪಡೆಯಾಗೋದಾಗಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ( Basavaraj Horatti ) ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಈ …

Read More »

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ

ಬೆಂಗಳೂರು : ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ರೈಲ್ವೆ ವಿಭಾಗದ ಎಡಿಜಿಪಿ ಆಗಿದ್ದ ಭಾಸ್ಕರ್‌ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಭಾವನಾತ್ಮಕ ಟ್ವೀಟ್ ಮಾಡಿರುವ ಅವರು, ಕಚೇರಿಯಿಂದ ಮನೆಯ ಕಡೆ ಕೊನೆಯ ಟ್ರಿಪ್ ಎಂದು ಬರೆದು, ಸಿಬ್ಬಂದಿ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ. 2021ರ ಸೆಪ್ಟೆಂಬರ್‌ನಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಸರ್ಕಾರವು ಕೂಡಲೇ …

Read More »

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿ ಶ್ರೀ ರಾಮ ಸೇವಾ ಮಂಡಳಿ, ರಾಮನವಮಿ ಉತ್ಸವ ಸಮಿತಿ ಅವರು ಏರ್ಪಡಿಸಿದ್ದ 84ನೇ ಶ್ರೀ ರಾಮನವಮಿ ಸಂಗೀತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ಹನುಮನ …

Read More »

ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಮುಂಬೈ: ನಟಿ, ರೂಪದರ್ಶಿ ಮಲೈಕಾ ಅರೋರಾ ಶನಿವಾರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಮಧ್ಯಾಹ್ನ ಪುಣೆಯಲ್ಲಿ ನಡೆದ ಫ್ಯಾಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಮಲೈಕಾ ಕಣ್ಣಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.  ಅಪಘಾತದಲ್ಲಿ ಗಾಯಗೊಂಡ ನಟಿಯನ್ನು ಮುಂಬೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ನಟಿಗೆ ಹೆಚ್ಚಿನ ತೊಂದರೆಗಳಾಗಿಲ್ಲ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮಲೈಕಾ ಸಹೋದರಿ ಅಮೃತಾ ಅರೋರಾ ತಿಳಿಸಿದ್ದಾರೆ.ಮಲೈಕಾ ಪುಣೆಯಲ್ಲಿ ನಡೆದ …

Read More »

ಅಂಬಾನಿಯನ್ನು ಹಿಂದಿಕ್ಕಿದ ಅದಾನಿ; ಗೌತಮ್ ಈಗ ಏಷ್ಯಾದ ಅತಿ ಶ್ರೀಮಂತ..

ಮುಂಬೈ: ಅದಾನಿ ಗ್ರೂಪ್​ನ ಚೇರ್ಮನ್ ಗೌತಮ್​ ಅದಾನಿ ಇದೀಗ ಏಷ್ಯಾದ ಅತಿ ಶ್ರೀಮಂತ ವ್ಯಕ್ತಿಯಾಗುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್​ನ ಚೇರ್ಮನ್​ ಮುಖೇಶ್ ಅಂಬಾನಿಯನ್ನು ಹಿಂದಿಕ್ಕಿದ್ದಾರೆ. ಬ್ಲೂಮ್​ಬರ್ಗ್​ ಬಿಲಿಯನೇರ್ಸ್​ ಇಂಡೆಕ್ಸ್​ನ ಹೊಸ ಪಟ್ಟಿ ಪ್ರಕಾರ ಗೌತಮ್ ಅದಾನಿಯ ಒಟ್ಟು ಆಸ್ತಿ 10,000 ಕೋಟಿ (100 ಬಿಲಿಯನ್) ಡಾಲರ್ ಆಗಿದ್ದು, ಈ ಮೂಲಕ ಅವರು ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಟಾಪ್​-10 ಸ್ಥಾನದಲ್ಲಿದ್ದಾರೆ. ಮತ್ತೊಂದೆಡೆ ಮುಖೇಶ್ ಅಂಬಾನಿ 9,900 ಕೋಟಿ (99 ಬಿಲಿಯನ್​) ಡಾಲರ್ …

Read More »

ಪ್ರೀತಿಯ ಹೆಸರಲ್ಲಿ ಮೋಸ ಹೋದ ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನ

ಮೈಸೂರು: ಪ್ರೀತಿಯ ಹೆಸರಲ್ಲಿ ಮೋಸ ಹೋದ ಯುವತಿಯೊಬ್ಬಳು ಪ್ರಿಯಕರನ ಮನೆಯ ಮುಂದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ನಡೆದಿದೆ. ಪ್ರೀತಿಯ ಬಲೆಗೆ ಬಿದ್ದು ತನ್ನ ದೇಹವನ್ನು ಪ್ರಿಯಕರನಿಗೆ ಒಪ್ಪಿಸಿದ ಯುವತಿ ಇಂದು ವಂಚಿತಳಾಗಿ ನ್ಯಾಯಕ್ಕಾಗಿ ಹೋರಾಡುತ್ತಿದ್ದಾಳೆ. ಕಂದೇಗಾಲ ಗ್ರಾಮದ ಪ್ರಭುಸ್ವಾಮಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇಬ್ಬರು ಒಂದೇ ಗ್ರಾಮದವರು. ಪ್ರಿಯಕರ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಆಕೆಯನ್ನು …

Read More »