Breaking News

ರಾಷ್ಟ್ರೀಯ

ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ನವದೆಹಲಿ : “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿ ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಿದ್ದಾರೆ. …

Read More »

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ

ಬಂಡೀಪುರ ರಾತ್ರಿ ಸಂಚಾರ: ಸರ್ವಸಮ್ಮತ ನಿರ್ಧಾರ- ಈಶ್ವರ ಖಂಡ್ರೆ ನವದೆಹಲಿ : ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ …

Read More »

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು…

ಸರ್ವರಲ್ಲೂ ಒಳ್ಳೆಯ ವಿಚಾರಗಳನ್ನು ಕಲಿತು ಜ್ಞಾನಿಗಳಾಗಬೇಕು… ಮರಾಠಿಯ ಮಾತು ಎಂಬ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಆರ್.ಸಿ.ಯು ಕುಲಗುರು ಸಿ.ಎಂ. ತ್ಯಾಗರಾಜ್ ಎಲ್ಲ ಕ್ಷೇತ್ರಗಳಲ್ಲೂ ಉತ್ಸಾಹದಿಂದ ಭಾಗವಹಿಸಿ ಎಲ್ಲವನ್ನು ಕಲಿತುಕೊಂಡು ಜ್ಞಾನಿಗಳಾಗಬೇಕು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಗುರುಗಳಾದ ಪ್ರಾಧ್ಯಾಪಕ ಸಿ.ಎಂ. ತ್ಯಾಗರಾಜ್ ಅವರು ಹೇಳಿದರು. ಬೆಳಗಾವಿ ಶಹಾಪೂರದ ಶ್ರೀ ಸರಸ್ವತಿ ವಾಚನಾಲಯದ ವತಿಯಿಂದ ರಾಜ್ಯ ಮರಾಠಿ ವಿಕಾಸ್ ಸಂಸ್ಥೆ ಅನುವಾದ ಯೋಜನೆಯಡಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ …

Read More »

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ

ಉ.ಕ ಭಾಗಕ್ಕೂ ವಿಮಾನಯಾನ ಸೌಲಭ್ಯ ಹೆಚ್ಚಿಸಲು ಸಚಿವ ಸತೀಶ್‌ ಜಾರಕಿಹೊಳಿ ಮನವಿ ನವದೆಹಲಿ: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮ್ ಮೋಹನ್ ನಾಯ್ಡು ಅವರನ್ನು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಭೇಟಿಯಾಗಿ ಬಹು ದಶಕಗಳಿಂದಲೂ ಅಭಿವೃದ್ಧಿಯಲ್ಲಿ ಹಿಂದಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಬೆಂಗಳೂರಿನ …

Read More »

ಪತ್ನಿ ಕೊಂದು ಸೂಟ್​​ಕೇಸ್‌ನಲ್ಲಿ ತುಂಬಿಟ್ಟ ಪತಿ

ಬೆಂಗಳೂರು: ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಹತ್ಯೆ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ತುಂಡರಿಸಿ ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿರುವ ಭಯಾನಕ‌ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಹುಳಿಮಾವು ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು …

Read More »

100 ರೈತರಿಗೆ ಉಚಿತ ರೊಬೊಟಿಕ್ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಬೆಂಗಳೂರಿನ ʻಕಾವೇರಿ ಹಾಸ್ಪಿಟಲ್ಸ್‌ʼ ಕರ್ನಾಟಕದ 100 ರೈತರಿಗೆ ಉಚಿತ ರೊಬೊಟಿಕ್‌ ಮೊಣಕಾಲು ಕೀಲು ಕಸಿ ಶಸ್ತ್ರಚಿಕಿತ್ಸೆ ಒದಗಿಸುವ ಗುರಿಯೊಂದಿಗೆ ತನ್ನ ಮಹತ್ವಾಕಾಂಕ್ಷೆಯ ಉಪಕ್ರಮ ‘ಕಾವೇರಿ ಸಂಕಲ್ಪ’ ಪ್ರಾರಂಭಿಸುವುದಾಗಿ ಗುರುವಾರ ಪ್ರಕಟಿಸಿದೆ. ಕಾವೇರಿ ಹಾಸ್ಪಿಟಲ್ಸ್‌ನ ಬೆಂಗಳೂರು ವಲಯದ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ವಿಜಯಭಾಸ್ಕರನ್ ಹಾಗೂ ಹಾಸ್ಪಿಟಲ್ಸ್‌ ಎಲೆಕ್ಟ್ರಾನಿಕ್ ಸಿಟಿ ಮತ್ತು ಮಾರತ್ತಹಳ್ಳಿ ಘಟಕಗಳ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉಪಕ್ರಮಕ್ಕೆ ಔಪಚಾರಿಕ ಚಾಲನೆ ನೀಡಿದರು. ನಂತರ ಮಾತನಾಡಿದ ಸಚಿವರು, “ಖಾಸಗಿ …

Read More »

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ

ಬೆಂಗಳೂರು, (ಮಾರ್ಚ್​ 27): ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು(ಮಾರ್ಚ್ 27) ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು (Nandini Milk) ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್​ ನೀಡಿದೆ. ಹೀಗಾಗಿ ನಂದಿನಿ ಹಾಲು ಮತ್ತು ಮೊಸರು ಪ್ರತಿ ಲೀಟರ್​​ಗೆ ಬರೋಬ್ಬರಿ 4 ರೂಪಾಯಿ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂದೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಹೌದು…ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ …

Read More »

33 ದ್ವಿಚಕ್ರ ವಾಹನಗಳನ್ನ ಕದ್ದು ಮಾರಿದ ಕಳ್ಳನನ್ನ ಬಂಧಿಸಿರುವ ಪೊಲೀಸರು

ಹಾಸನ : ಒಂದಲ್ಲ, ಎರಡಲ್ಲ, ಮೂರಲ್ಲ ಬರೋಬ್ಬರಿ 33 ದ್ವಿಚಕ್ರವಾಹನಗಳನ್ನು ಕಳ್ಳತನ ಮಾಡಿ ಮಾರಿದ ಖತರ್ನಾಕ್ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಲೂರು ತಾಲೂಕಿನ ವಳಗದ್ದವಳ್ಳಿ ಗ್ರಾಮದ ಗಗನ್ (35) ಬಂಧಿತ ಆರೋಪಿ. ಬಸ್ ಸ್ಟಾಂಡ್, ರೈಲ್ವೇ ಸ್ಟೇಷನ್, ಸಾರ್ವಜನಿಕ ಸ್ಥಳಗಳೇ ಇವನ ಟಾರ್ಗೆಟ್​ ಆಗಿದ್ದವು. ಬೈಕ್ ನಿಲ್ಲಿಸಿ ತುರ್ತು ಕೆಲಸಕ್ಕೆ ಹೋಗುವ ಅಥವಾ ಬಸ್ ನಿಲ್ದಾಣದ ಸಮೀಪ ಅಥವಾ ಇತರೆ ಪಾರ್ಕಿಂಗ್ ಅಲ್ಲದ ಸ್ಥಳದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನಗಳನ್ನು …

Read More »

ತಂದೆಯ ಸಾವಿನ ದಿನವೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಶಬಾನಾಗೆ ಜಿಲ್ಲಾಡಳಿತದಿಂದ ಶಹಭಾಷ್​ಗಿರಿ

ಧಾರವಾಡ: ಮಿಷನ್ ವಿದ್ಯಾಕಾಶಿ ಯೋಜನೆಯ ಯಶಸ್ವಿಗೆ ಶ್ರಮಿಸುತ್ತಿರುವ ಜಿಲ್ಲಾಡಳಿತಕ್ಕೆ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಸಾಥ್ ನೀಡುತ್ತಿದ್ದಾರೆ. ಇದಕ್ಕೆ ಪ್ರೇರಣೆ ಎನ್ನುವಂತೆ ತಂದೆ ತೀರಿಸಿಕೊಂಡ ನೋವಿನ ಮಧ್ಯೆಯೂ ಪರೀಕ್ಷೆ ಬರೆದು ಬಂದು ವಿದ್ಯಾರ್ಥಿನಿ ನವಲಗುಂದ ವಿದ್ಯಾರ್ಥಿನಿಯೊಬ್ಬಳ ನಡೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಜಿಲ್ಲಾಡಳಿತವೇ ಆ ವಿದ್ಯಾರ್ಥಿನಿಯ ಮನೆಗೆ ತೆರಳಿ ಸಾಂತ್ವನದೊಂದಿಗೆ ಆಸರೆಯ ಭರವಸೆ ನೀಡಿದೆ. ಮಾ.21ರ ಮೊದಲ ದಿನದ ಎಸ್​ಎಸ್​ಎಲ್​ಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ 4 ಗಂಟೆಗೂ ಮುನ್ನ ನವಲಗುಂದದ ಶಬಾನಾ ಅವರ ತಂದೆ …

Read More »

ಯತ್ನಾಳ್​ ಉಚ್ಛಾಟನೆ ಬಳಿಕ ಅವರ ಬಣದಲ್ಲಿ ಗುರುತಿಸಿಕೊಂಡಿರುವ ರಮೇಶ್​ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ

ಬೆಳಗಾವಿ: ಬಸನಗೌಡ ಪಾಟೀಲ ಯತ್ನಾಳ್​ ವಿರುದ್ಧ ಕ್ರಮದ ನಿರೀಕ್ಷೆ ಮೊದಲೇ ಇತ್ತು. ವಿರೋಧಿ ಬಣಕ್ಕೂ ಎಚ್ಚರಿಕೆ ನೀಡಲಾಗಿದೆ. ಯತ್ನಾಳ್​ ‌ಮರಳಿ ಬಿಜೆಪಿಗೆ ಸೇರುತ್ತಾರೆಂಬ ವಿಶ್ವಾಸ ನನಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಯತ್ನಾಳ್​ ಉಚ್ಚಾಟನೆ ವಿಚಾರ ಇದು ಮೊದಲೇ ಸುದ್ದಿ ಇತ್ತು. ಹೈಕಮಾಂಡ್ ಉತ್ತರ ನೀಡಿದಾಗಲೇ ವಾಸನೆ ಬಡಿದಿತ್ತು. ರಾಜ್ಯದ ಜನರ ಭಾವನೆ ತಿಳಿದು ಮಾತಾಡಬೇಕು …

Read More »